ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಯಾದಗಿರಿ,ಮಾ16(ಕ.ವಾ):-ಯುವಜನರ ಮಾನಸಿಕ ಆರೋಗ್ಯದ ಸರ್ವತೋಮುಖ ಬೆಳವಣೆಗೆ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಗುರುಮಠಕಲ್ ಮತ್ತು ಸುರಪೂರ ತಾಲೂಕಿನಲ್ಲಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲಿರುವ ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯುವ ಸ್ಪಂದನ ಯುವಜನ ಮಾನಸಿಕ ಆರೋಗ್ಯ ಪೂರಕ ಸೇವೆಗಳನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶವಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವೀಧರರಾಗಿರಬೇಕು. ಹಾಗೂ 21ರಿಂದ 35 ವರ್ಷದೊಳಗಿನವರಾಗಿರಬೇಕು. ಮತ್ತು ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವುದು, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಕಂಪ್ಯೂಟರ್ ಬಳಕೆ ಜ್ಞಾನವನ್ನು ಹೊಂದಿರುವುರವರಿಗೆ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವ- ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಡಾನ್ ಬಾಸ್ಕೋ ಶಾಲೆ ಎದುರು ಯಾದಗಿರಿ ಇಲ್ಲಿ ದಿನಾಂಕ 23-03-2021ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ_8618549355 ಹಾಗೂ 8867323635 ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಾದಗಿರಿ ಸಂಪರ್ಕಿಸಬಹುದಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ