ಆಪ್‌ನಲ್ಲಿ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ದಾಖಲಿಸಲು ಕೋರಿಕೆ
ಯಾದಗಿರಿ ಮಾರ್ಚ್20(ಕ.ವಾ): 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತ ಆಪ್ ಮೂಲಕ ಅಪಲೋಡ ಮಾಡಲು ಸರ್ಕಾರ ಆದೇಶಿಸಿದೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ಧಪಡಿಸುವಲ್ಲಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ನಮೂದಿಬೇಕು.
ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎನ್.ಡಿ.ಆರ್.ಎಫ್,ನಡಿ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೃಷಿ/ ಕಂದಾಯ/ ತೋಟಗಾರಿಕೆ/ ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಯಾದಗಿರಿಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ