ನಾಳೆ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ
ಯಾದಗಿರಿ ಮಾರ್ಚ್25(ಕ.ವಾ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯೋಜನೆಯ ಜಿಲ್ಲಾ ಪಂಚಾಯತ ಮೀಸಲಿಟ್ಟ ಅನುದಾನದಲ್ಲಿ ಅಂಗವಿಕಲರಿಗೆ 31 ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪೂರ ಅವರ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್ 26ರ ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಮಿನಿ ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ