ಗುರುವಾರ, ಮಾರ್ಚ್ 4, 2021

 ಮಾರ್ಚ್ 6 ರಂದು ನಮ್ಮ ನಡಿಗೆ -ತ್ಯಾಜ್ಯ ಮುಕ್ತ ಕಡೆಗೆ ಕಾರ್ಯಕ್ರಮ

 ಯಾದಗಿರಿ ಮಾ 04.(ಕ.ವಾ):- ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೊಜನೆಯಡಿಯಲ್ಲಿ ನಮ್ಮನಡಿಗೆ –ತ್ಯಾಜ್ಯ ಮುಕ್ತ ಕಡೆಗೆ ಎಂಬ ಜಿಲ್ಲಾ ಮಟ್ಟದ ಕಾರ್ಯಕ್ರರ್ಮವನ್ನು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಯಾದಗಿರಿ, ಗ್ರಾಮ ಪಂಚಾಯತ ಮುದ್ನಾಳ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಮುದ್ನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.

ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚವ್ಹಾಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಶಹಾಪೂರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಕೃಷ್ಣಾ ಕಾಡಾದ ಅಧ್ಯಕ್ಷರಾದ ಶರಣಪ್ಪ ತಳವಾರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಹಾಗೂ ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 





                


ಶಿಷ್ಯವೇತನ ಸೌಲಭ್ಯಕ್ಕೆ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ ಮಾ 04.(ಕ.ವಾ):- 2020-21ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಮಾರ್ಚ್ 20 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು  ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸುವAತೆ ಜಿಲ್ಲಾ ಹಿಂದುಳಿದ ವರ್ಗಗಳ  ಕಲ್ಯಾಣಾಧಿಕಾರಿ ಪ್ರಭುದೊರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾಂಡಾ ರೋಜ್‌ಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ,ಮಾ 4 (ಕ.ವಾ):- ಯಾದಗಿರಿ ಹಾಗೂ ಗುರುಮಿಟಕಲ್ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 14 ತಾಂಡಾಗಳಲ್ಲಿನ ಜನರಿಗೆ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಹಾಗೂ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲು ತಾಂಡಾ ರೋಜ್‌ಗಾರ್ ಮಿತ್ರ ಹುದ್ದೆಯ ಆರು ತಿಂಗಳ ಅವಧಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ತಾಂಡಾ ನಿವಾಸಿ ಆಗಿರುವ ಕನಿಷ್ಟ 10ನೇ ತರಗತಿ ಪಾಸಾಗಿದ್ದು, 45 ವರ್ಷದೊಳಗಿರಬೇಕು, ಕನ್ನಡ ಹಾಗೂ ಲಂಬಾಣಿ ಭಾಷೆ ತಿಳಿದಿರಬೇಕು, ಮಹಿಳೆಯರಿಗೆ, ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡುವುದು, ಮಹಿಳೆಯರು ಲಭ್ಯವಿಲ್ಲದಿದ್ದರೆ ಪುರುಷರನ್ನು ಆಯ್ಕೆಗೆ ಪರಿಗಣಿಸಲಾಗುವುದು. ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರವವರು ತಾಂಡಾಗಳ ಸಂಬAಧಪಟ್ಟ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸೂಕ್ತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ 15 ರೊಳಗೆ ಗ್ರಾಮ ಪಂಚಾಯತಿಗಳಿಗೆ ಸಲ್ಲಿಸಬೇಕು.

 ಈ ಹುದ್ದೆಗೆ ಆಯ್ಕೆಯಾದವರಿಗೆ ತಾಂಡಾ ಅಭಿವೃದ್ಧಿ ನಿಗಮದಿಂದ 3 ಸಾವಿರ ರೂ.ಗಳು ಹಾಗೂ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 3 ಸಾವಿರ ರೂ.ಗಳು ವರೆಗೂ ಮಾಸಿಕ ಪ್ರೋತ್ಸಾಹ ಧನ ನೀಡಲಾಗುವುದು ತಾಲ್ಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


  


     ಕರ್ತವ್ಯಕ್ಕೆ ಹಾಜರಾಗಲು ಶಿಕ್ಷಕಿಗೆ ಸೂಚನೆ

ಯಾದಗಿರಿ,ಮಾ.4 (ಕ.ವಾ):- ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಮದ್ದರಕಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ(ನೃತ್ಯ)ಯೊಬ್ಬರು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ತಿಳಿಸಿದ್ದಾರೆ.  

ಪ್ರೌಢಶಾಲೆಯ ನೃತ್ಯ ಶಿಕ್ಷಕಿ ಶೈಲಾ ಎನ್.ಕೆ  ಇವರು 2019 ರ ಸಪ್ಟೆಂಬರ್ 1 ರಿಂದ ಈ ವರೆಗೆ ಶಾಲಾ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಈಗಾಗಲೇ ಕಚೇರಿಯಿಂದ 3 ನೋಟಿಸ್ ಪತ್ರ ನೀಡಿದರೂ ಸಹ ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಆದ್ದರಿಂದ   ಈ ಪತ್ರಿಕಾ ಪ್ರಕಟಣೆಗೊಂಡ 15 ದಿನದೊಳಗಾಗಿ ಕಚೇರಿಯಿಂದ ಅನುಮತಿ ಪಡೆದು ಕರ್ತವ್ಯಕ್ಕೆ ಹಾಜರಾಗಬೇಕು, ಒಂದು ವೇಳೆ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ (ವರ್ಗೀಕರಣ ನಿಯಂತ್ರಣ ಮತ್ತ ಮೇಲ್ಮನವಿ) 1957 ರ ಪ್ರಕಾರ ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೆಡಿಪಿ ಸಭೆ ಮಾರ್ಚ್ 15ಕ್ಕೆ ಮುಂದೂಡಿಕೆ

ಯಾದಗಿರಿ ಮಾ.04 (ಕ.ವಾ):- ಪಶುಸಂಗೋಪನೆ,ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್ 6ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಬೇಕಿದ್ದ  ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ) ಯನ್ನು  ಕಾರಣಾಂತರಗಳಿAದ ಮಾರ್ಚ್ 15ಕ್ಕೆ ಮುಂದೂಡಲಾಗಿದೆ. 

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ. ಸಭೆಯಲ್ಲಿ 2021ರ ಜನವರಿ ತಿಂಗಳ ಅಂತ್ಯದವರೆಗೆ ಇಲಾಖೆವಾರು ಸಾಧಿಸಿರುವ ಪ್ರಗತಿ ಸೇರಿದಂತೆ ಇನ್ನುಳಿದ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಇದಕ್ಕೆ ಸಂಬAಧಿಸಿದ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...