ಕೋವಿಡ್ ಎರಡನೇ ಅಲೆ ಭೀತಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸೂಚನೆ
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ, ಮಾ.1 (ಕ.ವಾ):- ಮಹಾರಾಷ್ಟ್ರದಲ್ಲಿ ಕೋವಿಡ್-19 ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ದಂದು ಜಿಲ್ಲಾ ಕೋವಿಡ್-19 ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರ ದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಮತ್ತು ಕೋವಿಡ್ 2ನೇ ಅಲೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸೂಚನೆಗಳನ್ನು ನೀಡಿದೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19 ರ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಜಿಲ್ಲೆಯ ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಕೋವಿಡ್-19 ರ ಎರಡನೇಯ ಅಲೆ ಪ್ರಾರಂಭವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ತಿಳಿದು ಬಂದಿರುತ್ತದೆ.
ಜಿಲ್ಲೆಯ ಗಡಿಭಾಗದಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ತೋರಿಸಬೇಕು. ಈ ಬಗ್ಗೆ ಬಸ್ಸುಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು.
ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ನ್ನು ಕಡ್ಡಾಯವಾಗಿ ಬಳಕೆ ಮಾಡಿ ಕೊರೋನಾ ದಿಂದ ಜಾಗೃತಿ ವಹಿಸಿಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್ ಸೋನಾವಣೆ, ಐ.ಎ.ಎಸ್. ಪ್ರೊಬೇಷನರಿ ಆಶ್ವೀಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಸವಸ್ವಾಮಿ ಹಿರೇಮಠ, ಆರ್.ಸಿ.ಹೆಚ್ ಅಧಿಕಾರಿ ಡಾ.ಸೂರ್ಯಪ್ರಕಾಶ್, ಡಿ.ಎಲ್.ಒ ಡಾ. ಭಗವಂತ ಅನವಾರ್, ಡಾ.ಸಾಜೀದ್, ಡಾ.ಅನೀಲ್ ತಾಳಿಕೋಟಿ, ಶಹಾಪುರ ಟಿ.ಹೆಚ್.ಒ ಡಾ.ರಮೇಶ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.
ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಯಾದಗಿರಿ, ಮಾ.1 (ಕ.ವಾ):- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ 45 ರಿಂದ 59 ವರ್ಷದೊಳಗಿನ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಯಲ್ಲಿ 250 ರೂ. ಪಾವತಿಸಿ ಲಸಿಕೆ ಪಡೆಯಬಹುದು ಎಂದು ತಿಳಿಸಿದರು.
ಲಸಿಕೆ ಪಡೆಯಲು ಆಸ್ಪತ್ರೆಗೆ ಬರುವ ವೇಳೆ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಚುನಾವಣಾ ಮತದಾರರ ಗುರುತಿನ ಚೀಟಿ ತರಬೇಕು. ಆನ್‌ಲೈನ್‌ನಲ್ಲಿ ನೋಂದಾಯಿಸುವಾಗ ಕೇಳಲಾದ ಗುರುತಿನ ಚೀಟಿ ತರಬೇಕು. 45 ರಿಂದ 59 ರ ವರ್ಷದೊಳಗಿನ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ವೈದ್ಯರಿಂದ ಆರೋಗ್ಯ ಸಮಸ್ಯೆ ಇರುವ ಕುರಿತು ದೃಢೀಕರಣ ಪತ್ರ ಹಾಜರುಪಡಿಸಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಸವಸ್ವಾಮಿ ಹಿರೇಮಠ, ಆರ್.ಸಿ.ಹೆಚ್ ಅಧಿಕಾರಿ ಡಾ.ಸೂರ್ಯಪ್ರಕಾಶ್, ಆರ್.ಎಮ್.ಒ ಡಾ.ನೀಲಮ್ಮ, ಕೊರೋನಾ ಲಸಿಕೆ ಅಧಿಕಾರಿ ಡಾ.ಪ್ರೇಮ, ಸಿಸ್ಟರ್ ಶಾರದ ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ