ಮಂಗಳವಾರ, ಮಾರ್ಚ್ 16, 2021

 ಕೌಶಲ್ಯ ವಿಕಾಸ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ                                                                                                                 ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.


ಯಾದಗಿರಿ, ಮಾ16 (ಕ.ವಾ):-  ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸೃಜಿಸಲಾಗಿರುವ ಜಿಲ್ಲಾ ಕೌಶಲ್ಯ ಮಿಷನ್‌ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0ನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 



ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0 ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


 

ಅರ್ಹ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರೆಕಿಸಿಕೊಡುವ ನಿಟ್ಟಿನಲ್ಲಿ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕೆಂದರು.


 


ಉದ್ಯೋಗಿಗಳ ಬೇಡಿಕೆಯಂತೆ ತರಬೇತಿ ನೀಡಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ಬಗೆಹರಿಯುವುದರ ಜೊತೆಗೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.


 


ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಮ್ಯಾಗೇರಿ ಮಾತನಾಡಿ, ಜಿಲ್ಲಾ ಕೌಶಲ್ಯ ಮಿಷನ್ ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ (ಪಿಎಂಕೆವಿವೈ) 3.0 ಜಾರಿಯಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯದಕ್ಷತೆ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಅಭ್ಯರ್ಥಿಗಳನ್ನು ಗುರುತಿಸುವಿಕೆ ಮತ್ತು ಸಮಾಲೋಚನೆ ಉಪಸಮಿತಿ, ತರಬೇತಿ ಗುಣಮಟ್ಟ, ಕೈಗಾರಿಕಾ ಸಂಪರ್ಕ ಉಪಸಮಿತಿ, ಸ್ವಯಂ ಉದ್ಯೋಗ, ಗ್ರಾಮ ಪಂಚಾಯತ್ ಸಮನ್ವಯ, ಕೃಷಿ ಉಪ ಸಮಿತಿ, ಸಾಮರ್ಥ್ಯ ವೃದ್ಧಿ ಹಾಗೂ ಮೇಲ್ವಿಚಾರಣೆ ಉಪಸಮಿತಿಗಳಿಗೆ ಕಾರ್ಯಭಾರ ಹಾಗೂ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.


ಜಿಲ್ಲೆಯ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರೆಕಿಸಿಕೊಡುವ ನಿಟ್ಟಿನಲ್ಲಿ ಯೋಜನೆಯ ಅನುಷ್ಠಾನದ ಗುಣಮಟ್ಟ ತರಬೇತಿ, ಮೂಲಸೌಕರ್ಯ, ಅಭ್ಯರ್ಥಿಗಳಿಗೆ ಉದ್ಯೋಗ ನಿಯುಕ್ತಿ ಇತ್ಯಾದಿ ವಿಷಯಗಳ ಕುರಿತು ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಕಾರ್ಯನಿರ್ವಹಿಸಲಿದೆ ಎಂದರು.


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಮಾಣಿಕ ವಿ.ರಘೋಜಿ,  ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಿಕಾಡ್ ಜಂಟಿ ನಿರ್ದೇಶಕ ಜಿ.ಯು. ಹುಡೆದ್ ಸೇರಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ವಿವಿಧ ಕಾಲೇಜು ಪ್ರಾಂಶುಪಾಲರು ಸಭೆಯಲ್ಲಿ ಇದ್ದರು.

 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...