ಬುಧವಾರ, ಮಾರ್ಚ್ 17, 2021



 ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರದ ಯೋಜನೆಗಳು ಸಹಕಾರಿ

                                        ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ, ಮಾ17 (ಕ.ವಾ):-  ಮಹಿಳೆಯರ ಅಭಿವೃದ್ಧಿಗಾಗಿಯೇ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಮಾಖ್ಯಾ ಕರ್ನಾಟಕ ಜಿಲ್ಲಾ ಘಟಕ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲವಿದ್ದು, ಅಗತ್ಯ ನೆರವನ್ನು ಕಾಲ Áಲಕ್ಕೆ ನೀಡಲಾಗುವುದುದೆಂದು ಹೇಳಿದರು.

ಸಮಾಜದಲ್ಲಿ ಮಹಿಳೆಯರು ಸಮಾನತೆ ಸಾಧಿಸಲು ವಿದ್ಯಾವಂತರಾಗಬೇಕು. ಮಹಿಳೆಯರು ಶಿಕ್ಷಣ ಶಕ್ತಿಯಿಂದ ಮಾತ್ರ ಸಮಾನತೆ ಸಾಧಿಸಲು ಸಾಧ್ಯ ಎಂದು ಹೇಳಿದರು.

ಅನಾದಿ ಕಾಲದಿಂದಲೂ ಸೂಚಿಸಿರುವಂತೆ ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪಾತ್ರ ಮತ್ತು ಸಾಧನೆ ಅಪಾರವಾಗಿದೆ. ಕ್ಷೇತ್ರವಾರು ಸಮೀಕ್ಷೆ ಪ್ರಕಾರ ಪರಿಗಣಿಸುವುದಾದರೇ ದೇಶ-ವಿದೇಶಗಳಲ್ಲಿ ಮಿಲಿಟರಿ, ಪೈಲಟ್, ಡ್ರೈವರ್ ಹೀಗೆ ಎಲ್ಲಾ ವೃತ್ತಿಗಳಲ್ಲಿ ಮಹಿಳೆಯ ಪ್ರಗತಿ ಸಾಧನೆಯತ್ತಾ ಮುನ್ನುಗ್ಗುತ್ತಾ ಇದ್ದಾರೆ. ಮಹಿಳೆಯರ ಸಾಧನೆ, ಸಂಕಲ್ಪ ಮತ್ತು ಗುರಿ ಎಲ್ಲದಕ್ಕೂ ಮಿಗಿಲಾದದ್ದು’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪ ಶರ್ಮಾ ಅವರು ಮಾತನಾಡಿ, ಜಿಲ್ಲೆಯ ಯಾವುದೇ ಊರಿನಲ್ಲಿ ಹೆಣ್ಣುಮಕ್ಕಳು ಶಾಲೆ ಬಿಟ್ಟಿದ್ದರೆ, ಪುನಃ ಅವರನ್ನು ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದರು.  ಗರ್ಭಿಣಿ ಮಹಿಳೆಯರಿಗೆ ಕಬ್ಬಿಣ ಅಂಶದ ಮಾತ್ರೆಗಳನ್ನು ಸೇವನೆ ಕುರಿತು ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ ಕವಿತಾಳ, ಯುವಜನ  ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಹಳ್ಳಿ, ಮಹಿಳಾ ಸಮಾಖ್ಯಾ ಕಾರ್ಯಕ್ರಮದ ನಿರ್ದೇಶಕಿ ಮಂಜುಳಾ.ವಿ, ಮಹಿಳಾ ಸಮಾಖ್ಯಾ ಕಾರ್ಯಕ್ರಮದ ಕಿರಿಯ ಸಂಪನ್ಮೂಲ ವ್ಯಕ್ತಿ ಕರುಣಾ ಕುಲಕರ್ಣಿ, ವಿಮಲಾಕ್ಷಿ ಆರ್. ಹಿರೇಮಠ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...