ಬುಧವಾರ, ಮಾರ್ಚ್ 3, 2021

 


ಸುರಪುರ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

                                    :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. 

ಯಾದಗಿರಿ, ಮಾ.03 (ಕ.ವಾ):- ಬೇಸಿಗೆ ಕಾಲ ಆರಂಭವಾಗುತ್ತಿದ್ದು, ನಗರದ ಯಾವುದೇ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.




ಜಿಲ್ಲೆಯ ಸುರಪುರ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಪಿ.ಎಮ್.ಸ್ವನಿಧಿ ಯೋಜನೆಯಡಿಯಲ್ಲಿ ಸುಮಾರು 655 ಸಾಲದ ಅರ್ಜಿಗಳು ಬಂದಿದ್ದು, ಈ ಪೈಕಿ ಇನ್ನೂ 27 ಅರ್ಜಿಗಳಿಗೆ ಸಾಲ ದೊರೆತ್ತಿಲ್ಲ. ಈ ಬಗ್ಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ಗಮನಹರಿಸಿ ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.


ನಗರೋತ್ಥಾನ ಯೋಜನೆ ಅಡಿಯಲ್ಲಿ ನಗರದಲ್ಲಿ ಒಟ್ಟು 13 ಕಾಮಗಾರಿಗಳು ಮಂಜೂರಾಗಿದ್ದು, 11 ಕಾಮಗಾರಿಗಳು  ಪೂರ್ಣಗೊಂಡಿವೆ. ಒಂದು ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುತ್ತದೆ ಎಂದು ನಗರಸಭೆಯ ಪೌರಯುಕ್ತರು ಸಭೆಗೆ ಮಾಹಿತಿ ನೀಡಿದರು.


14 ನೇ ಹಣಕಾಸಿನ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳು ಕೂಡಲೇ ಮುಗಿಸಬೇಕು ಹಾಗೂ 15 ನೇ ಹಣಕಾಸಿನಲ್ಲಿ ಪ್ರಾರಂಭಗೊAಡ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಗಳಾಗಿ ಮುಗಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. 

 

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ. ಯೋಜನೆಯಲ್ಲಿ ಬಂದ ಅನುದಾನವನ್ನು ಸರಿಯಾಗಿ ಬಳಕೆ ಮಾಡಿ ಜನ ಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಹಾಗೂ ಸುರಪುರ ನಗರದ ಪ್ರತಿಯೊಂದು ಅಂಗಡಿ - ಮುಂಗಟ್ಟುಗಳಿAದ ತೆರಿಗೆಯನ್ನು ಕಡ್ಡಾಯವಾಗಿ ಶೇಕಡ 100% ರಷ್ಟು ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ  ಗಮನಹಿಸಬೇಕೆಂದು ಹೇಳಿದರು. 

ವಿವಿಧ ವಸತಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಣೆ ಮಾಡಬೇಕು.   


ರಸ್ತೆ ಸೇರಿದಂತೆ ವಿವಿಧ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಗಳು

ಸುರಪುರ ನಗರದಲ್ಲಿ ನಗರೋತ್ಥಾನ ಯೋಜನೆ ಹಾಗೂ ಕೆ.ಕೆ.ಆರ್.ಡಿ.ಬಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಮಂಗಳವಾರ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ವೀಕ್ಷಿಸಿದರು.

ಮಂಡಲ ಬಟ್ಟಿ ಆಟೋ ಸ್ಟಾö್ಯಂಡ್‌ಯಿAದ ಮರಿಗೆಮ್ಮ ದೇವಸ್ಥಾನವರೆಗೆ ಹಾಗೂ ಮರಿಗೆಮ್ಮ ದೇವಸ್ಥಾನದಿಂದ ತಿಮ್ಮಾಪೂರ ಬಸ್ ನಿಲ್ದಾಣದವರಿಗೆ ನಡೆಯುತ್ತಿರುವ ರಸ್ತೆ  ಅಗಲೀಕರಣ ಕಾಮಗಾರಿ , ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಸುಮಾರು 3ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ , ಪೈಪ್‌ಲೈನ್ ವಿಸ್ತೀರ್ಣ ಕಾಮಗಾರಿ ಹಾಗೂ ನಗರೋತ್ಥಾನ 3ನೇ ಹಂತದಡಿ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ತರಾಕಾರಿ ಮಳಿಗೆಗಳನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿಗಳಾಗಿ ಮುಗಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. 


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಪ್ರಭಾರಿ ಯೋಜನೆ ನಿರ್ದೇಶಕರಾದ ಪ್ರಕಾಶ ಜಿ.ರಜಪೂತ್, ಜಿಲ್ಲಾ ನಗರಾಭಿವೃದ್ಧಿ ಕೋಶ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಕ್ಕಪ್ಪ, ಸುರಪುರ ನಗರಸಭೆಯ ಪೌರಯುಕ್ತ ಜೀವನ್ ಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.

 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...