ಗುರುವಾರ, ಮಾರ್ಚ್ 25, 2021

 ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಿ

                                           ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.                                                           

ಯಾದಗಿರಿ,ಮಾ.25 (ಕ.ವಾ);- ಕೌಶಲ್ಯ ಆಧಾರಿತ ತರಬೇತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಯಾದಗಿರಿ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು.


ನಗರದ ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಜಿಲ್ಲಾಡಳಿ, ಯೋಜನೆ ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ, ಯು.ಎನ್.ಡಿ.ಪಿ ಬೆಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಹಾಗೂ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆಗಳ ಸಹಯೋಗದಲ್ಲಿ ಎನ್.ಎ.ಪಿ.ಎಸ್ ಯೋಜನೆಯಡಿ ಶಿಶಿಕ್ಷÄ (ಂಠಿಠಿಡಿeಟಿಣiಛಿeshiಠಿ) ತರಬೇತಿ ಕುರಿತು ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 


ಜಿಲ್ಲೆಯಲ್ಲಿ ಕೈಗಾರಿಕೆ ಪ್ರಧಾನವಾಗಿದೆ, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಬೇಕಾದರೆ ವೃತ್ತಿ ಕೌಶಲಕ್ಕೆ ಪ್ರಥಮ ಆದ್ಯತೆ ನೀಡಬೇಕು. ಅಲ್ಲದೆ ಕೈಗಾರಿಕಾ ಉದ್ಯಮ ಸ್ಥಾಪನೆಯಿಂದ ದೇಶದ ಆರ್ಥಿಕತೆ ಹೆಚ್ಚಳಕ್ಕೆ ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಕೌಶಲ್ಯ ತರಬೇತಿ ಪಡೆಯಬೇಕು ಎಂದರು.


ಇAದಿನ ದಿನಮಾನಗಳಲ್ಲಿ ಉದ್ಯೋಗಾವಕಾಶದ ಕೊರತೆ ಇಲ್ಲ. ಬದಲಾಗಿ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹಾಗೂ ಉದ್ದಿಮೆಗಳಿಗೆ ಪೂರಕವಾದ ವಿದ್ಯಾಭ್ಯಾಸದ ಕೊರತೆ ಕಾಡುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಗತ್ಯ ತರಬೇತಿ ಪಡೆದುಕೊಂಡರೆ ಉದ್ಯೋಗ ಸಿಗುತ್ತದೆ ಎಂದು ಹೇಳಿದರು.


ಜಿಲ್ಲೆಗೆ 80 ಕ್ಕೂ ಹೆಚ್ಚು ಕಂಪನಿಯ ವಿವಿಧ ಉದ್ಯೋಗಿಗಳು ಭಾಗವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ 3000 ಕ್ಕೂ ಹೆಚ್ಚು ಯುವ ಜನರಿಗೆ ಅಪ್ರಂಟಿಸ್‌ಶಿಪ್ ತರಬೇತಿ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಸಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ವಿದ್ಯಾರ್ಥಿ ಸಮೂಹವು ಶಿಕ್ಷಣದ ಜೊತೆಜೊತೆಗೆ ಕೌಶಲ್ಯ ತರಬೇತಿ ಪಡೆದು ತಮ್ಮ ಉನ್ನತ ಮಟ್ಟದ ಗುರಿಯನ್ನು ಸಾಧಿಸಬೇಕೆಂದು ಸಲಹೆ ನೀಡಿದರು.

ಕೈಗಾರಿಕೋದ್ಯಮಗಳಿಗೆ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡುತ್ತಿವೆ. ಅಪ್ರಂಟಿಶಿಪ್ ಕಾಯ್ದೆ-1961ರ ಪ್ರಕಾರ 4 ಮಂದಿಗಿತಲೂ ಹೆಚ್ಚು ಉದ್ಯೋಗಿಗಳಿರುವ ಕಾರ್ಖಾನೆಗಳು ಅಪ್ರೆಂಟಿಸ್ ತರಬೇತಿ ನೀಡಲು ಅರ್ಹತೆ ಪಡೆದಿವೆ, 8 ಮಂದಿಗಿAತಲೂ ಹೆಚ್ಚು ಕೆಲಸ ಮಾಡುವ ಕೈಗಾರಿಕಾ ಸಂಸ್ಥೆಗಳು ಕಡ್ಡಾಯವಾಗಿ ಅಪ್ರಂಟಿಸ್ ತರಬೇತಿ ನೀಡಬೇಕಿದೆ ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ. ಅದರಂತೆ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅಪ್ರೇಂಟಿಸ್ ತರಬೇತಿ ನೀಡಬೇಕು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಲ್ಲೆಯಲ್ಲಿ ವೃತ್ತಿ ಕೌಶಲ್ಯ ತರಬೇತಿಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದ್ದಾರೆ ಎಂದರು.


ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಕೈಗಾರಿಕಾ ತರಬೇತಿ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳಿ, ಕಲಬುರಗಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಸಡ್ಡು, ಎಸ್.ಡಿ.ಜಿ.ಸಿ.ಸಿ, ಯು.ಎನ್.ಡಿ.ಪಿ ಯೋಜನಾ ಮುಖ್ಯಸ್ಥ ಡಾ.ಮುಕುಂದರಾಜ, ರೈಸ್ ಮಿಲ್ ಅಸೋಸಿಯೇಶನ್ ಜಿಲ್ಲಾ ಗೌರವಧ್ಯಕ್ಷರಾದ ಮೌಲಾಲಿ ಅನಪೂರ, ಕಲಿಕಾ ಟಾಟಾ ಟ್ರಸ್ಟ್ ಸಹಾಯಕ ಕಾರ್ಯಕ್ರಮ ಅಧಿಕಾರಿ ಸಾಯಿಬಾಬಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಎನ್.ಮ್ಯಾಗೇರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ವೇತಾ, ಜಿಲ್ಲಾ ಕೌಶಲ್ಯ ಮಿಷನ್ ಅಭಿಯಾನ ವ್ಯವಸ್ಥಾಪಕ ವಿಜಯ ಕುಮಾರ್ ಪಾಟೀಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.      


  

 




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...