ವಿವಿಧ ಜಯಂತಿಗಳನ್ನು ಸರಳವಾಗಿ ಆಚರಣೆಗೆ ನಿರ್ಧಾರ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ,ಮಾ.26 (ಕ.ವಾ);- ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಶುಕ್ರವಾರ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 05 ರಂದು ಡಾ.ಜಗಜೀವನರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಗಳ ಆಚರಣೆಯ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು, ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಜಯಂತಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುವುದು, ಅಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಿ, ಗೌರವ ಸಲ್ಲಿಸಲಾಗುತ್ತದೆ ಎಂದರು.
ಜಯಂತಿಯಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸವ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಕಟ್ಟಿ ಹಾಗೂ ವಿವಿಧ ಸಮಾಜದ ಮುಖಂಡರಾದ ಖಂಡಪ್ಪ ದಾಸನ್, ಮರೆಪ್ಪ ಚಟ್ರೆ ಕರ್, ಮಲ್ಲಣ್ಣ ದಾಸನಕೇರಿ, ಮಲ್ಲಿಕಾರ್ಜುನ ಈಟಿ, ಲಿಂಗಪ್ಪ ಹತ್ತಿಮನಿ, ಗೋಪಾಲ್ ತಳಗೇರಿ, ಶಾಂತರಾಜು ಮೋಟ್ನಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ