ಸೋಮವಾರ, ಮಾರ್ಚ್ 8, 2021




ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರ                                                

                                             ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.08 (ಕ.ವಾ):- ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರು ಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು. 

ನಗರದ ಬಾಲಾಜಿ ಕಲ್ಯಾಣ ಮಂಟದಲ್ಲಿ ಸೋಮವಾರ ತೋಟಗಾರಿಕೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಹಾಗೂ ಅಂತರ ರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮತನಾಡಿದರು.


ಇಂದಿನ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ ಎಂದರು. 


ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಕುಟುಂಬಗಳ ನಿರ್ವಹಣೆಯನ್ನು ಸಮರ್ಥವಾಗಿ ಮಾಡುವವರಾಗಬೇಕು ಹಾಗೂ ಮಹಿಳೆಯರು ವೃತ್ತಿ- ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಆಗ ಯಾವುದೇ ಉದ್ಯಮ ಆರಂಭಿಸಿದರೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳೆಯರಿಗೆ ಕಿವಿ ಮಾತು ಹೇಳಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು ಹಾಗೂ ಮಹಿಳೆಯರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು.


ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್ ಪಾಟೀಲ್ ಯಡಿಯಾಪೂರ ಅವರು ಮಾತನಾಡಿ, ಕೊರೋನಾ ಸಮಯದಲ್ಲಿ ಜಿಲ್ಲೆಯ ವೈದ್ಯರು, ನರ್ಸ ಹಾಗೂ ಆಶಾ ಕಾರ್ಯಕರ್ತೆಯ, ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಜಿಲ್ಲೆಯ ಜನರು ಮರೆಯುವಂತಿಲ್ಲ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ನಗರದ ಕನಕದಾಸ ವೃತ್ತದಿಂದ ಬಾಲಾಜಿ ಕಲ್ಯಾಣ ಮಂಟಪದವರೆಗೆ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಜಾಥವನ್ನು ನಡೆಸಲಾಯಿತು. 

ಈ ಸಂದರ್ಭದಲ್ಲಿ ಕರಕುಶಲ  ಮತ್ತು ಸಾವಯವ ಸಿರಿಧಾನ್ಯಗಳ ಮೇಳಗಳನ್ನು ಸಹ ಆಯೋಜಿಸಲಾಗಿತ್ತು.


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ:

ರಾಧ ಮುಣ್ಣೂರ, ಶಹಾಪುರ ಅಂಗನವಾಡಿ ಮೇಲ್ವಿಚಾರಕಿ ಮುತ್ತವ್ವ, ಗುರುದೇವಿ ಹಿರೇಮಠ, ಅನಿತಾ, ರೇಣುಕಾ, ದೀಲಿಪ್ ಕುಮಾರ್ ತಂ/ ರವಿ ಕುಮಾರ್, ವಿವೇಕನಂದ ತಂ/ ವಿಜಯಕುಮಾರ್, ಪ್ರೇರಣ ತಂ/ ಶಿವಾನಂದ ಬಸವೇಶ್ವರ, ಪ್ರದೀಪ್ ತಂ/ ರವಿಕುಮಾರ್, ಅಮರನಾಥ ತಂ/ ದುರ್ಗಾಪ್ಪ, ಮನೀಷ್ ತಂ/ ಅಶೋಕ, ಸುವರ್ಣ ತಂ/ ಜುಮ್ಮಣ್ಣ, ಪಲ್ಲವಿ ತಂ/ಶಿವಲಿAಗಪ್ಪ  ಸೇರಿದಂತೆ ಇತರರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.


ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ರೋಟ್ನಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮರದೀಪ್ ಎಮ್, ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಬಾಯಿ ರಾಠೋಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ್ ಕವಿತಾಳ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ದತ್ತಾತ್ರೇಯ ಪಾಟೀಲ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ತಾಳೆಮರದ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...