ಸೋಮವಾರ, ಏಪ್ರಿಲ್ 26, 2021

 ಪ.ಜಾ. ಪದವೀಧರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್.26(ಕ.ವಾ)-:  2021-22 ನೇ ಸಾಲಿಗಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಯೋಗಿಕ ತರಬೇತಿಗೆ  ಸಹಾಯಧನ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪಡೆದಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2ಲಕ್ಷ ರೂ. ಮೀರಿರಬಾರದು, ಅರ್ಜಿ ಸಲ್ಲಿಸುವವರು 40 ವರ್ಷ ದೊಳಗಿನವರಾಗಿರಬೇಕು. 


ಅರ್ಜಿಯನ್ನು ವೈಬ್ ಸೈಟ್ ತಿತಿತಿ.sತಿ.ಞಚಿಡಿ.iಟಿಛಿ ನ ಮೂಲಕ ಮೇ 1 ರಿಂದ ಮೇ 30ರೊಳಗೆ ಸಲ್ಲಿಸಬೇಕು, ಅರ್ಜಿ ಮತ್ತು ಅಗತ್ಯ ದಾಖಲಾತಿಗಳನ್ನು ಯಾದಗಿರಿ, ಶಹಾಪೂರ ಹಾಗೂ ಸುರಪೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




 ಕೋವಿಡ್ 19 ಕುರಿತು ತುರ್ತು ಸಭೆ

ಕೊರೊನಾ 2ನೇ ಅಲೆ ತಡೆಯಲು ಸರ್ವರ ಸಹಕಾರ ಅಗತ್ಯ

                                    :ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ

ಯಾದಗಿರಿ,ಏಪ್ರಿಲ್.26(ಕ.ವಾ)-: ದಿನೇ ದಿನೇ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದರೆ ಆರೋಗ್ಯ ಇಲಾಖೆಯೊಂದಿಗೆ ಸರ್ವರ ಸಹಕಾರ ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ತಿಳಿಸಿದರು. 


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗAಣದಲ್ಲಿ ಸೋಮವಾರ ಕೋವಿಡ್ 19ಗೆ ಸಂಬAಧಿಸಿದAತೆ  ಸಂಪರ್ಕ ಪತ್ತೆಹಚ್ಚುವಿಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕೋವಿಡ್ 2ನೇ ಅಲೆ ತಡೆಯಲು 

ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ಪಾಸಿಟಿವ್ ವರದಿ ಬಂದವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕದಲ್ಲಿ  ಇರುವರ ಪತ್ತೆಹಚ್ಚವುದು ಬಹಳ ಮುಖ್ಯವಾಗಿರುತ್ತದೆ ಎಂದವರು ಹೇಳಿದರು. 


ಜಿಲ್ಲಾಧಿಕಾರಿಗಳ ಆದೇಶದನ್ವಯ ಸಂಪರ್ಕ ಪತ್ತೆಹಚ್ಚುವ ನಿಟ್ಟಿನಲ್ಲಿ ಶಿಕ್ಷಕರನ್ನು ನೇಮಿಸಿ ಮತ್ತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ  ಎಂದರು.


ಕೋವಿಡ್ ರೋಗಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಪರೀಕ್ಷೆ ನಂತರ ನಿಮ್ಮ ಸಂಪರ್ಕದಲ್ಲಿರುವರು,ಅವರ ಊರು,ಪ್ರದೇಶ,ಮನೆಯ ಸಮೀಪದ ದೇವಸ್ಥಾನ, ಮಸೀದಿ ಮುಂತಾದವುಗಳ ಲ್ಯಾಂಡ್ ಮಾರ್ಕ್ ಬಗ್ಗೆ, ಅವರು ಕೆಲಸ ಮಾಡುವ ಸ್ಥಳದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. 

ಉತ್ತರ ಪಡೆದ ನಂತರ ಮಾಹಿತಿಯನ್ನು ಛಿoಟಿಣಚಿಛಿಣ ಣಡಿಛಿiಟಿg ಚಿಠಿಠಿ  ನಲ್ಲಿ ಅಪ್‌ಲೋಡ್ ಮಾಡಬೇಕು. ಇದರಿಂದ ಕೋವಿಡ್ 2ನೇ ಅಲೆಯನ್ನು ತಡೆಯಲು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಕಾಮಶೆಟ್ಟಿ ಮಾತನಾಡಿ, ಈಗಾಗಲೇ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವರ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಒಂದು ವೇಳೆ ಇವರಲ್ಲಿ ಪಾಸಿಟಿವ್ ಪ್ರಕರಣಗಳು ಕಂಡುಬAದರೆ ಅವರ ಸಂಪರ್ಕದಲ್ಲಿರುವ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಅಭಾವವಿರುವ ಕಾರಣ ಶಿಕ್ಷಕರನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

ಕೊರೊನಾ ಸೋಂಕಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವರು,ದ್ವಿತೀಯ ಸಂಪರ್ಕದಲ್ಲಿರುವರು ಮತ್ತು ಅವರ ಪ್ರಯಾಣದ ವಿವರವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಡಗೇರಾ ತಹಸೀಲ್ದಾರ್ ಸುರೇಶ ಅಂಕಲಗಿ, ಸುರುಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಾಗರಾಜ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಶಿಕ್ಷಕರು ಸಭೆಯಲ್ಲಿದ್ದರು.

 ಸೋಂಕಿತರ ಪತ್ತೆಗೆ ನೋಡಲ್ ಅಧಿಕಾರಿಗಳ ನೇಮಕ

                                          :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಏ.26. (ಕ.ವಾ)-: ಕೋವಿಡ್ ಎರಡನೇ ಅಲೆ ಹರಡದಂತೆ ತಡೆಯಲು  ಹಾಗೂ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ದಿಂದ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.


ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚು ಪತ್ತೆಯಾಗುತ್ತೀರುವ ಹಿನ್ನೆಲೆಯಲ್ಲಿ ಶಹಾಪುರ ಮತ್ತು ವಡಗೇರಾ ತಾಲೂಕುಗಳಿಗೆ ಶಹಾಪುರು ಕ್ಷೇತ್ರ ಶಿಕ್ಷಣಾಧಿಕಾರಿಯಾದ ರುದ್ರಗೌಡ ಮೊಬೈಲ್ ನಂಬರ್: 9480695216, ಸುರಪುರ ಮತ್ತು ಹುಣಸಗಿ ತಾಲೂಕುಗಳಿಗೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಮಹದೇವರೆಡ್ಡಿ ಮೊಬೈಲ್ ನಂಬರ್: 9480695217, ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಿಗೆ ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಚಂದ್ರಕಾAತ ರೆಡ್ಡಿ  ಮೊಬೈಲ್ ನಂಬರ್ : 9480695218 ಇವರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು,  ನೋಡಲ್ ಅಧಿಕಾರಿಗಳ ಜೊತೆಯಲ್ಲಿ ಶಿಕ್ಷಕರು ಸಹ ಕಾರ್ಯನಿರ್ವಹಿಸುವವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಗುರುವಾರ, ಏಪ್ರಿಲ್ 22, 2021






 ವಿದ್ಯಾರ್ಥಿಗಳು ಅವಕಾಶಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ

 ಶಾಸಕ: ವೆಂಕಟರೆಡ್ಡಿಗೌಡ ಮುದ್ನಾಳ

ಯಾದಗಿರಿ,ಏಪ್ರಿಲ್.೨೨(ಕ.ವಾ):- ಶಿಕ್ಷಣ ಉತ್ತಮವಾಗಿ ಕಲಿತುಕೊಂಡರೆ ನಾವು ಬದಲಾವಣೆ ಕಾಣಲು ಸಾಧ್ಯವಿದೆ ಹೀಗಾಗಿ ವಿದ್ಯಾರ್ಥಿಗಳು ಕೂಡಾ ಅವಕಾಶಗಳನ್ನು ಸಮರ್ಪಕವಾಗಿ ಬಳಕೆ  ಮಾಡಿಕೊಳ್ಳಬೇಕೆಂದು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅವರು ತಿಳಿಸಿದರು. 


ನಗರದಲ್ಲಿ ಏಪ್ರಿಲ್ ೨೦ ರಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಕ್ ಪೂರ್ವ ಬಾಲಕರ ವಸತಿ ನಿಲಯ ಅಡಿಗಲ್ಲು ಕಾರ್ಯಕ್ರಮ, ಮೆಟ್ರಿಕ್ ನಂತರ ವೃತ್ತಿಪರ ಮತ್ತು ಮೆಟ್ರಿಕ್ ನಂತರ ಇಂದಿರಾಗಾAಧಿ ನರ್ಸಿಂಗ್ ಬಾಲಕಿಯರ ವಸತಿ ನಿಲಯ ಕಟ್ಟಡಗಳನ್ನು ಉದ್ಘಾಟಸಿ ಅವರು ಮಾತನಾಡಿದರು.


ಮುಖ್ಯವಾಹಿನಿಗೆ ಬರಲು ಶಿಕ್ಷಣವೊಂದೇ ಸಾಧನೆಯಾಗಿದ್ದು, ನಿರ್ಲಕ್ಷತನ ಮಾಡಿದರೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ, ಇದಕ್ಕೆ ಎಂದಿಗೂ ಅವಕಾಶ ಮಾಡಿಕೊಡಬಾರದು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಅಗತ್ಯವಿರುವ ಕಡೆಗೆ ವಸತಿ ನಿಲಯಗಳನ್ನು ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.


ಜಿಲ್ಲಾ ಕೇಂದ್ರ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಸರಕಾರದಿಂದ ಸೌಲಭ್ಯಗಳನ್ನು ಸಹ ಕಲ್ಪಿಸಲಾಗುತ್ತಿದ್ದು, ಜನರು ಸಹಕಾರ ನೀಡಬೇಕು ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಣೆ ಮಾಡಲಾಗುತ್ತಿದ್ದು, ಉತ್ತಮ ಸೌಲಭ್ಯಗಳನ್ನು ಕಲ್ಪಿಸವುದು ನನ್ನ ಪ್ರಥಮ ಗುರಿಯಾಗಿದೆ ಎಂದರು.

ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ್  ಯಡಿಯಾಪೂರ ಅವರು ಮಾತನಾಡಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿದ ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ ವತಿಯಿಂದ ಧನ್ಯವಾದಗಳನ್ನು ಸಮರ್ಪಿಸಿ ವಿದ್ಯಾರ್ಥಿಗಳು ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುವಂತೆ ಸಲಹೆ ನೀಡಿದರು. 


ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು ಶಿವಲಿಂಗಪ್ಪ ಪುಟಗಿ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಸುನಿತಾ ಚೌವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.




ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮ

ಯಾದಗಿರಿ,ಏಪ್ರಿಲ್.೨೨(ಕ.ವಾ):- ರೈತ ಒಳ್ಳೆಯ ತಳಿ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಮಾಡಿದಾಗ್ಯೂ ಬೆಳೆಗೆ ಅನುಕೂಲಕರÀ ಹವಾಮಾನ ಸಿಗದಿದ್ದರೆ, ಸಮಯಕ್ಕೆ ಸರಿಯಾಗಿ ಮಳೆ ಬಾರದಿದ್ದರೆ ಇಳುವರಿ ಮೇಲೆ ಹೆಚ್ಚಿನ ದುಷ್ಪರಿಣಾಮ ಬಿರುತ್ತದೆ. ಆದ್ದರಿಂದ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಮಾಡಬೇಕೆಂದು ಕೃಷಿ ವಿಜ್ಞಾನ ಕೇಂದ್ರ, ಕವಡಿಮಟ್ಟಿಯ ಕೃಷಿ ಹವಾಮಾನಶಾಸ್ತç ವಿಷಯ ತಜ್ಞರಾದ ಡಾ. ಶಿಲ್ಪಾ ವಿ.ಅವರು ತಿಳಿಸಿದರು.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ ಗ್ರಾಮದಲ್ಲಿ ಹವಾಮಾನ ವೈಪರಿತ್ಯ ಮತ್ತು ಹವಾಮಾನ ಆಧಾರಿತ ಕೃಷಿ ಸಲಹಾ ಸೇವೆಯಲ್ಲಿ ನಿರತವಾದ ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಚೋಗಟಾಪೂರ ಯಾವುದೇ ಪ್ರದೇಶದ ಬೆಳೆ ಉತ್ಪಾದನೆಯ ಯಶಸ್ಸು ಮತ್ತು ವೈಫಲ್ಯವನ್ನು ನಿರ್ಧರಿಸುವಲ್ಲಿ ಆಯಾ ಪ್ರದೇಶದ ಹವಾಮಾನ ಪರಿಸ್ಥಿತಿಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯದ ಭಾರತ ಹವಾಮಾನ ಇಲಾಖೆ ಮತ್ತು ಭಾರತೀಯ ಕೃಷಿ ಸಂಶೊಧನಾ ಮಂಡಳಿಯಿAದ ಜಂಟಿಯಾಗಿ ಬಿಡುಗಡೆಗೊಳಿಸಿದ “ಮೇಘದೂತ” ಮೊಬೈಲ ಆ್ಯಪನ ಬಳಕೆ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು. ಈ ಬಳಗವು (ಆ್ಯಪ) ರೈತರಿಗೆ ಸ್ಥಳೀಯ ಪ್ರಮುಖ ಬೆಳೆಗಳ ಮತ್ತು ಜಾನುವಾರುಗಳಿಗೆ ಹವಾಮಾನ ಆಧಾರಿತ ಕೃಷಿ ಸಲಹೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಜಿಲ್ಲಾವಾರು ಮಾಹಿತಿಯನ್ನು ಒದಗಿಸುತ್ತದೆ. ಈ ಮಾಹಿತಿಯನ್ನು ವಾರಕ್ಕೆ ಎರಡು ಬಾರಿ (ಪ್ರತಿ ಮಂಗಳವಾರ ಮತ್ತು ಶುಕ್ರವಾರ) ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ನವೀಕರಿಸಲಾಗುತ್ತಿದ್ದು, ಈ ಮೇಘದೂತ ಆ್ಯಪನಲ್ಲಿ ರೈತರಿಗೆ ಮುಂದಿನ ೫ ದಿನಗಳ ಹವಾಮಾನ ಮುನ್ಸೂಚನೆ, ಕೃಷಿ ಮತ್ತು ತೋಟಗಾರಿಕೆ ಮಾಹಿತಿಗಷ್ಟೇ ಸೀಮಿತವಾಗದೆ ಹೈನುಗಾರಿಕೆಯ ಮಾಹಿತಿಯನ್ನೂ ಒಳಗೊಂಡಿರುತ್ತದೆಯೆAದು ಹೇಳಿದರು.

ಸಿಡಿಲು ಅಥವಾ ಮಿಂಚಿನ ಮುನ್ಸೂಚನೆಯನ್ನು ತಿಳಿದುಕೊಳ್ಳಲು ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯದ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (Iಟಿಜiಚಿಟಿ Iಟಿsಣiಣuಣe ಖಿಡಿoಠಿiಛಿಚಿಟ ಒeಣeoಡಿoಟogಥಿ) “ದಾಮಿನಿ” ಅನ್ನುವ ಮೊಬೈಲ ಅಪ್ಲಿಕೇಶನನ್ನು ಅಭಿವೃದ್ದಿಪಡಿಸಿದೆ. 

ಗುಡುಗು ಸಹಿತ ಮಿಂಚಿನ ಚಲನೆಯ ಬಗ್ಗೆ ಕನಿಷ್ಠ ೩೦ ರಿಂದ ೪೫ ನಿಮಿಷಗಳ ಮೊದಲು ಎಚ್ಚರಿಕೆ ನೀಡುತ್ತದೆ, ಸದ್ಯಕ್ಕೆ ಎಚ್ಚರಿಕೆಗಳನ್ನು ಹಿಂದಿ ಮತ್ತು ಇಂಗ್ಲೀಷನಲ್ಲಿ ದೊರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ದಾಮಿನಿ ಆ್ಯಪನಲ್ಲಿ ಗುಡುಗು ಮತ್ತು ಸಿಡಿಲಿನ ಕೆಲವು ಸಾಮಾನ್ಯ ಮಾಹಿತಿಯನ್ನೋಳಗೊಂಡಿದ್ದು ಈ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳ ಮಾಹಿತಿಯ ಪಟ್ಟಿ ಲಭ್ಯವಿರುತ್ತದೆ ಎಂದು ತಿಳಿಸಿದರು.

  ಕೃಷಿ ವಿಜ್ಞಾನ ಕೇಂದ್ರ, ಕವಡಿಮಟ್ಟಿಯ ಮುಖ್ಯಸ್ಥರಾದ ಡಾ. ಅಮರೇಶ ವೈ.ಎಸ್. ಅವರು ಮಾತನಡಿ ಹವಾಮಾನದ ವೈಪರಿತ್ಯದಿಂದ ಇತ್ತಿಚ್ಚಿನ ದಿನಗಳಲ್ಲಿ ಮಳೆಯು ಸಮನಾಗಿ ಹಂಚಿಕೆಯಾಗದಿರುವುದರಿAದ ನಾವು ಮೇಲಿಂದ ಮೇಲೆ ಅತೀವೃಷ್ಟಿ ಅಥವಾ ಅನಾವೃಷ್ಟಿ ಸಂದರ್ಭಗಳನ್ನು ಎದುರಿಸುತ್ತಿದ್ದೇವೆ. ರೈತರು ದೃತಿಗೆಡದೆ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಮಾಡಬೇಕೆಂದು ಅಭಿಪ್ರಾಯಪಟ್ಟರು.

 


ಸೋಮವಾರ, ಏಪ್ರಿಲ್ 19, 2021

 


ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್.19(ಕ.ವಾ)-: 2021-22ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರನ್ನು ವೃತ್ತಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಮೇ 05 ರಿಂದ ಜೂನ್ 30ರೊಳಗಾಗಿ ಆನ್‌ಲೈನ್  ಮೂಲಕ ಅರ್ಜಿ ಸಲ್ಲಿಸಬೇಕು,ಜುಲೈ 01ರಿಂದ ಆಗಸ್ಟ್ 14ರವರೆಗೆ ಆಯ್ಕೆ ಪ್ರಕ್ರಿಯೆ ನಡೆಸಿ ಆಯ್ಕೆಯಾದವರಿಗೆ ಸೆಪ್ಟಂಬರ್ 1 ರಿಂದ ವೃತ್ತಿ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ: 08473-253271 ಗೆ ಸಂಪರ್ಕಿಸುವAತೆ ಅವರು ಕೋರಿದ್ದಾರೆ.


ಶನಿವಾರ, ಏಪ್ರಿಲ್ 17, 2021


 ದೇವರ ದಾಸಿಮಯ್ಯ ಜಯಂತಿ ಆಚರಣೆ

ಯಾದಗಿರಿ.ಏ.17 (ಕ.ವಾ):- ಕೋವಿಡ್-19 ಹಿನ್ನೆಲೆಯಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ  ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.  

ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪುರ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಅಧಿಕಾರಿ ಡಾ.ಭಾಗವಾನ್ ಅನ್ವರ್ ನೇಕಾರ ಸಮಾಜದ ಜಿಲ್ಲಾಧ್ಯಕ್ಷರಾದ ಬಸವರಾಜ ಹುನಗುಂದ, ಜಿಲ್ಲಾ ಕಾರ್ಯದರ್ಶಿಯಾದ ಯಲ್ಲಪ್ಪ, ಮಹೇಶ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


 ಖಾಸಗಿ ವಾಹನಗಳು ಹೆಚ್ಚಿನ ದರವನ್ನು ವಸೂಲಿ ಮಾಡಿದರೆ ಸೂಕ್ತ ಕ್ರಮ

: ಆರ್‌ಟಿಓ ಕೆ. ದಾಮೋದರ

ಯಾದಗಿರಿ, ಏಪ್ರಿಲ್.17(ಕ.ವಾ):- ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಯವರು ಅನಿರ್ದಿಷ್ಠಾವಧಿರೆಗೆ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಉಂಟಾಗುವ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದು, ಪ್ರಯಾಣಿಕರಿಂದ ಖಾಸಗಿ ವಾಹನಗಳು ಹೆಚ್ಚಿನ ದರವನ್ನು ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ. ದಾಮೋದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

ಮ್ಯಾಕ್ಸಿ ಕ್ಯಾಬ್, ಕಾಂಟ್ಯಾçಕ್ಟ ಕ್ಯಾರೇಜ್ ಬಸ್, ಶಾಲಾ ಬಸ್ ಮತ್ತು ಪಿಎಸ್‌ವಿ ಬಸ್‌ಗಳು ಪ್ರಯಾಣಿಕರಿಂದ ನಿಗದಿತ ಪ್ರಯಾಣ ದರಕ್ಕಿಂತ ಅತಿ ಹೆಚ್ಚಿನ ದರವನ್ನು ವಸೂಲಿ ಮಾಡುತ್ತಿದ್ದಾರೆಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ, ಯಾವುದಾದರೂ ಪ್ರಯಾಣಿಕ ವಾಹನವು ನಿಗದಿತ ಪ್ರಯಾಣ ದರಕ್ಕಿಂತ ಅತಿ ಹೆಚ್ಚಿನ ಪ್ರಯಾಣ ದರವನ್ನು ವಸೂಲಿ ಮಾಡಿದ್ದನ್ನು ತಮ್ಮ ಗಮನಕ್ಕೆ ತಂದಲ್ಲಿ ವಾಹನ ಸಂಖ್ಯೆಯ ಸಮೇತ ತಾವುಗಳು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಛೇರಿಗೆ ದೂರು ನೀಡಿದಲ್ಲಿ ವಾಹನ ಮಾಲೀಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.


 ಏಪ್ರಿಲ್ 22ರ ವರೆಗೆ ಮಾವು ಫಸಲಿನ ಇ-ಹರಾಜು

ಯಾದಗಿರಿ,ಏಪ್ರಿಲ್17(ಕ.ವಾ):- 2020-21 ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ನಾರಾಯಣಪೂರ ತೋಟಗಾರಿಕೆ ಕ್ಷೇತ್ರದ ಮಾವು ಫಸಲಿನ ಇ-ಹರಾಜು ಮೂಲಕ ವಿಲೇವಾರಿ ಮಾಡಲು ಏಪ್ರಿಲ್ 15 ರ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿದ್ದು, ಏಪ್ರಿಲ್ 22 ರಂದು ಬೆಳಿಗ್ಗೆ 11 ಗಂಟೆಗೆ ಮುಕ್ತಾಯಗೊಳ್ಳುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಾರಾಯಣಪೂರ ತೋಟಗಾರಿಕೆ ಕ್ಷೇತ್ರದ ಮಾವು ಫಸಲಿನ ಠೇವಣಿ ಮೊತ್ತ 9,800 ರೂ ಅಗಿದ್ದು,  ಇ-ಹರಾಜು ಮೊತ್ತವು ಇಲಾಖಾ ಅಂದಾಜು ಮೊತ್ತಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬಿಡ್ಡು ಆಗದಿದ್ದಲ್ಲಿ ಮರು ಇ-ಹರಾಜು ಏಪ್ರಿಲ್ 22 ರ ಸಂಜೆ 5 ಗಂಟೆಗೆ ಪ್ರಾರಂಭವಾಗಿ 26 ರ ಬೆಳಿಗ್ಗೆ 11 ಗಂಟೆಗೆ ಮುಕ್ತಾಯಗೊಳ್ಳುವುದು.


ಬಿಡ್ಡಿನ ಡೆಲ್ಟಾ ಟೈಂ 5 ನಿಮಿಷ ಇರುತ್ತದೆ. ಇ-ಹರಾಜು ನಲ್ಲಿ ಭಾಗವಹಿಸುವವರು ಮೇಲೆ ನಮೂದಿಸಿರುವ ತೋಟಗಾರಿಕೆ ಕ್ಷೇತ್ರಕ್ಕೆ ಇ-ಪೋರ್ಟಲ್ ಖಾತೆಯಲ್ಲಿ ಠೇವಣಿ ಮೊತ್ತವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ತೆಗೆದುಕೊಂಡು ತುಂಬಬೇಕು.

ಹೆಚ್ಚಿನ ಮಾಹಿತಿಗೆ ದೂ.9620578551 ಮತ್ತು 9880139467 ಹಾಗೂ ವೆಬ್‌ಸೈಟ್ ತಿತಿತಿ.eಠಿಡಿoಛಿ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.


ಶುಕ್ರವಾರ, ಏಪ್ರಿಲ್ 16, 2021

 ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್.16(ಕ.ವಾ):- 2020-21ನೇ ಸಾಲಿನಲ್ಲಿ ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಿಂದ ಯಾದಗಿರಿ ಜಿಲ್ಲೆಯ ಪರಿಶಿಷ್ಟ ಜಾತಿಯ ಜನಾಂಗದ ಫಲಾಪೇಕ್ಷಿಗಳಿಗೆ  ಡಿಜಿಟಲ್ ಮಾರ್ಕೆಟಿಂಗ್ (ಆigiಣಚಿಟ ಒಚಿಡಿಞeಣiಟಿg) ಸೈಬರ್ ಸೇಕ್ಯೂರಿ (ಅಥಿbeಡಿ Seಛಿuಡಿiಣಥಿ) ಅಂರ‍್ಡೆöÊ ಟ್ರೇನಿಂಗ್ (ಸ್ಮಾರ್ಟ್ ಫೋನ್ ) ಂಟಿಜoಡಿiಜ ಖಿಡಿಚಿiಟಿig (Smಚಿಡಿಣ Phoಟಿe) ವಿವಿಧ ಕೋರ್ಸ್ಗಳಿಗೆ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

 ಆಸಕ್ತರು ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ ಪ್ರತಿ, ಪಡಿತರ ಚೀಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಇದೇ ಏಪ್ರಿಲ್ 30 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ:ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಭವನ 02ನೇ ಮಹಡಿ ಕೋಠಡಿ ಸಂಖ್ಯೆ ಸಿ-10 ಯಾದಗಿರಿ ಜಿಲ್ಲೆಗೆ ಅರ್ಜಿಯನ್ನು ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ದೂ. 08473-253743ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್16(ಕ.ವಾ):- ಯಾದಗಿರಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ನಿಧಿ ಯೋಜನೆಯಡಿ ಇಲಾಖೆಯಿಂದ ನೂತನ ಜವಳಿ ನೀತಿ ಯೋಜನೆಯಡಿ ಸೀವಿಂಗ್ ಮಷಿನ್ ಆಪರೇಟರ್ ತರಬೇತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳಿಗೆ ಸಹಾಯಧನಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಸೀವಿಂಗ್ ಮಷಿನ್ ಆಪರೇಟರ್ ತರಬೇತಿ ಪಡೆದ ಬಹುತೇಕ ಮಹಿಳೆಯರಿಗೆ ತಮ್ಮ ಸ್ವಗ್ರಾಮ ಅಥವಾ ವಾಸಿಸು ಊರುಗಳಲ್ಲಿ ಇರುವ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಅವಶ್ಯಕತೆ ಇರುತ್ತದೆ. ಒಂದು ಇಂಡಸ್ಟಿçÃಯಲ್ ಹೈ ಸ್ಪೀಡ್ ಸೀವಿಂಗ್ ಮಷಿನ್ ಖರೀದಿಗೆ 30,000 ರೂ. ಶೇಕಡಾ 50% ರಷ್ಟು ಸಹಾಯಧನ ಒದಗಿಸಲಾಗುವದು.

ಹೆಚ್ಚಿನ ಮಾಹಿತಿಗೆ ದೂ. 08473-253387, ಜವಳಿ ತನಿಖಾಧಿಕಾರಿ ಶಶಿಕಾಂತ ಆರ್. ಮೊ.ನಂ. 9066627296, ಸಹಾಯಕ ನಿರ್ದೇಶಕ ಅಜೀತ್ ಜಿ. ನಾಯಕ್ ಮೊ.ನಂ.9845906227 ಗೆ ಸಂಪರ್ಕಿಸುವAತೆ  ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮಾಧ್ಯಮ ಪ್ರವೇಶಿಕೆ ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್16(ಕ.ವಾ):-  ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯಮಟ್ಟದ ಐದು ದಿನಗಳ ಮಾಧ್ಯಮ ಪ್ರವೇಶಿಕೆ ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 20 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg  ನ ನಮೂನೆ ಹಾಗೂ ವಿವರಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬುಧವಾರ, ಏಪ್ರಿಲ್ 14, 2021

 ಅಂಬೇಡ್ಕರ್ ಆದರ್ಶ ಮತ್ತು ಗುಣಗಳನ್ನು ತಪ್ಪದೆ ಪಾಲಿಸಿ

;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಏ.14.(ಕ.ವಾ):- ಅಂಬೇಡ್ಕರ್ ಆದರ್ಶ ಮತ್ತು ಗುಣಗಳನ್ನು ಇಂದಿನ ಪೀಳಿಗೆ ಮೈಗೂಡಿಸಿಕೊಂಡು, ಅಂಬೇಡ್ಕರ್ ಅವರಂತೆ ದುಡಿದು ಈ ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಪ್ರತಿಪಾದಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತ್ಯೋತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅವರ 130 ನೆಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಬೇಡ್ಕರ್ ವ್ಯಕ್ತಿತ್ವವು ಯಾವಾಗಲೂ ಕೆಳವರ್ಗದವರ ಧ್ವನಿಯಾಗಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಪ್ರತಿಯೊಬ್ಬರೂ ಮುಂದೆ ಬರಬೇಕು ಎನ್ನುವ ಉದ್ದೇಶದಿಂದ ಮೀಸಲಾತಿಯನ್ನು ತರುವ ಜೊತೆಗೆ ರೈತರ, ಕಾರ್ಮಿಕರ ಮಹಿಳೆಯರ ಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಕಷ್ಟು ಶ್ರಮಿಸಿದ ಮಹಾನ್ ನಾಯಕರಾಗಿದ್ದರು ಎಂದು ಗುಣಗಾಣ ಮಾಡಿದರು.
ಅಂಬೇಡ್ಕರ್ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ ಎಂದರು.
ಅAಬೇಡ್ಕರ್ ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದರು. ಓದುವುದರಲ್ಲಿ ಅಪಾರ ಆಸಕ್ತಿ, ಚುರುಕು ತನದಿಂದ ಅಧ್ಯಾಪಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅಂಬೇಡ್ಕರ್ ರವರ ಬುದ್ಧಿವಂತಿಕೆ ಮೆಚ್ಚಿಕೊಂಡು ಪ್ರೀತಿ, ವಾತ್ಸಲ್ಯದಿಂದ ನೋಡುತ್ತಿದ್ದ ಬ್ರಾಹ್ಮಣ ಅಧ್ಯಾಪಕರೊಬ್ಬರು ಅಂಬೇಡ್ಕರ್ ಎಂಬ ನಾಮಾಂಕಿತವನ್ನು ಉಡುಗೊರೆಯಾಗಿ ಭೀಮರಾವ್‌ಗೆ ನೀಡಿದ್ದು, ನಾವು ನೋಡಬಹುದಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರವಲ್ಲದೆ, ಅವರಲ್ಲಿನ ಸಾಮಾಜಿಕ ಕಳಕಳಿ, ಉದಾತ್ತ ನಿಲುವಿನಿಂದ ಭಾರತೀಯರೆಲ್ಲರ ಮನದಲ್ಲಿ ನೆಲೆಯಾಗಿದ್ದಾರೆ. ಮಹಿಳೆಯರಿಗೆ ಸಮಾನತೆ-ಸಹಬಾಳ್ವೆ ನೀಡಬೇಕು ಎನ್ನುವ ಕಾರಣಕ್ಕಾಗಿ ಮಹಿಳಾ ಪರ ಹಲವಾರು ಹೋರಾಟಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಾನತೆಯ ತತ್ವವನ್ನು ಅಳವಡಿಸುವ ಮೂಲಕ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸಿದರು ಎಂದು ಹೇಳಿದರು.
ಸರ್ವರಿಗೂ ಸಮಪಾಲು, ಸಮಬಾಳು ತತ್ವವನ್ನು ಸಂವಿಧಾನದಲ್ಲಿ ಅಳವಡಿಸಿ ಶೋಷಿತ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟರು. ಭಾರತೀಯ ರಿಸರ್ವ ಬ್ಯಾಂಕ್ ಸ್ಥಾಪನೆಯಲ್ಲಿ ಅವರ ಪಾತ್ರ ಮುಖ್ಯವಾಗಿತ್ತು ಎಂದರು.
ಸಾಧಕರಿಗೆ ಸನ್ಮಾನ:
ಡಾ.ಬಿ.ಆರ್.ಅಂಬೇಡ್ಕರ್ ಅವರು ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಶ್ಯಾಂಸನ್ ಮ್ಯಾಳಿಕೇರಿ, ಭಾಗಪ್ಪ ಬೆಳ್ಳಿ, ಶಿವಪ್ಪ ಗಿರೆಪ್ನೋರ್, ರಾಮಣ್ಣ ಕಲ್ಲದೇವನಳ್ಳಿ, ಚಂದ್ರ ಚಕ್ರವರ್ತಿ, ಗುರುನಾಥ ತಲಾರಿ ಅವರಿಗೆ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಿಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್.ಚಂಡ್ರಿಕಿ, ನಗರಸಭೆಯ ಅಧ್ಯಕ್ಷ ವಿಲಾಸ ಬಿ.ಪಾಟೀಲ್, ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಡಿವೈಎಸ್ಪಿ ಸಂತೋಷ ಬನ್ನಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ಉಪನ್ಯಾಸಕರಾದ ಬಿ.ಆರ್.ಅಂಚೆಸೂಗುರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಕರಾದ ರಾಮಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ, ಗುರು ಪ್ರಸಾದ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಇದ್ದರು.
ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ:
ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ ಜಯಂತಿ ಪ್ರಯುಕ್ತ ನಗರದ ಬಿಎಸ್‌ಎನ್‌ಎಲ್ ಕಚೇರಿಯ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ನಗರಸಭೆಯ ಪೌರಯುಕ್ತರಾದ ಬಿ.ಟಿ.ನಾಯಕ ಸೇರಿದಂತೆ ವಿವಿಧ ಸಮಾಜದ ಮುಖಂಡರು ಇತರರು ಇದ್ದರು.

 ಬ್ರಿಟೀಷರ ವಿರುದ್ಧ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು

;ಶಿಲ್ಪಾ ಶರ್ಮಾ
ಯಾದಗಿರಿ,ಏ.14.(ಕ.ವಾ):- ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು
ನಗರದ ಚಟಾಣ ಏರಿಯಾದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.
ದೇಶ ಕಟ್ಟಲು ಹಿರಿಯರು ಮಾಡಿದ ಶ್ರಮ ಸಾರ್ಥಕವಾಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶಾಭಿಮಾನ ಹೃದಯಂತರಾಳದಲ್ಲಿ ಮೂಡಬೇಕು’ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳೊAದಿಗೆ ಸೇರಿ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಸ್ವಚ್ಚತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಕಟ್ಟಿ, ನಗರಸಭೆಯ ಪೌರಯುಕ್ತರಾದ ಬಿ.ಟಿ.ನಾಯಕ, ಯಾದಗಿರಿ ತಹಶಿಲ್ದಾರ್ ಚನ್ನಮಲ್ಲಪ್ಪ ಘಂಟಿ, ಉಪನ್ಯಾಸಕ ಗುರು ಪ್ರಸಾದ್ ಸೇರಿದಂತೆ ಇತರರು ಇದ್ದರು.

ಸೋಮವಾರ, ಏಪ್ರಿಲ್ 12, 2021

 ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಯಾದಗಿರಿ,ಏಪ್ರಿಲ್12(ಕ.ವಾ):- ಯಾದಗಿರಿ ಜಿಲ್ಲೆಯ ಸುರಪುರ/ಶಹಾಪುರ/ಯಾದಗಿರಿ/ಗುರುಮಠಕಲ್  ತಾಲ್ಲೂಕಿನಲ್ಲಿ  ಖಾಲಿಯಿದ್ದ  ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ ಅವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿಯ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ/ಸುರಪುರ/ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಖಾಲಿ ಇರುವ 14-ಅಂಗನವಾಡಿ ಕಾರ್ಯಕರ್ತೆಯರು ಮತ್ತು  31-ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು  ಬಂದAತಹ ಅರ್ಜಿಗಳನ್ನು ಪರಿಶೀಲಿಸಿ ನೇಮಕಾತಿಯ ಮಾರ್ಗಸೂಚಿಯಂತೆ ತಾತ್ಕಾಲಿಕ ಆಯ್ಕೆ ಸಿದ್ದಪಡಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಗಂಜ್ ಏರಿಯಾ, ಶಹಾಪೂರ,  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ,  ಹಳೆ ಕೋರ್ಟ್ ಕಟ್ಟಡ, ಜೈಲ್ ಹತ್ತಿರ, ಸುರಪುರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ  ಸ್ತ್ರೀ ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ಯಾದಗಿರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಗುಮಡಲಾ ಕಾಂಪ್ಲೆಕ್ಸ್, ಬಸ್ ಸ್ಟಾಂಡ್ ಹತ್ತಿರ, ಗುರುಮಠಕಲ್ ಕಚೇರಿಗಳಲ್ಲಿ  ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಇದೇ 2021ರ ಏಪ್ರಿಲ್ 22 ರೊಳಗೆ ಕಚೇರಿ ವೇಳೆ ಸಂಜೆ: 5.30 ಗಂಟೆಯೊಳಗೆ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಪನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಏಪ್ರಿಲ್ 12 ರಿಂದ 19ರ ವರೆಗೆ ಮಾವು ಫಸಲಿನ ಇ-ಹರಾಜು

ಯಾದಗಿರಿ,ಏಪ್ರಿಲ್12(ಕ.ವಾ):- 2020-21 ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಹತ್ತಿಕುಣಿ ತೋಟಗಾರಿಕೆ ಕ್ಷೇತ್ರದ ಮಾವು ಫಸಲಿನ ಇ-ಹರಾಜು ಮೂಲಕ ವಿಲೇವಾರಿ ಮಾಡಲು ಏಪ್ರಿಲ್ 12 ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ, ಏಪ್ರಿಲ್ 19 ರಂದು ಬೆಳಿಗ್ಗೆ 11 ಗಂಟೆಗೆ ಮುಕ್ತಾಯಗೊಳ್ಳುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹತ್ತಿಕುಣಿ ತೋಟಗಾರಿಕೆ ಕ್ಷೇತ್ರದ ಮಾವು ಫಸಲಿನ ಠೇವಣಿ ಮೊತ್ತ 8,500 ರೂ ಅಗಿದ್ದು,  ಇ-ಹರಾಜು ಮೊತ್ತವು ಇಲಾಖಾ ಅಂದಾಜು ಮೊತ್ತಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬಿಡ್ಡು ಆಗದಿದ್ದಲ್ಲಿ ಮರು ಇ-ಹರಾಜು ಏಪ್ರಿಲ್ 19 ರ ಸಂಜೆ 5 ಗಂಟೆಗೆ ಪ್ರಾರಂಭವಾಗಿ 22 ರ ಬೆಳಿಗ್ಗೆ 11 ಗಂಟೆಗೆ ಮುಕ್ತಾಯಗೊಳ್ಳುವುದು.

ಬಿಡ್ಡಿನ ಡೆಲ್ಟಾ ಟೈಂ 5 ನಿಮಿಷ ಇರುತ್ತದೆ. ಇ-ಹರಾಜು ನಲ್ಲಿ ಭಾಗವಹಿಸುವವರು ಮೇಲೆ ನಮೂದಿಸಿರುವ ತೋಟಗಾರಿಕೆ ಕ್ಷೇತ್ರಕ್ಕೆ ಇ-ಪೋರ್ಟಲ್ ಖಾತೆಯಲ್ಲಿ ಠೇವಣಿ ಮೊತ್ತವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ತೆಗೆದುಕೊಂಡು ತುಂಬಬೇಕು.

ಹೆಚ್ಚಿನ ಮಾಹಿತಿಗೆ ದೂ.9986516251 ಮತ್ತು  9110484899 ಹಾಗೂ ವೆಬ್‌ಸೈಟ್ ತಿತಿತಿ.eಠಿಡಿoಛಿ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.

 

.


 ಕೋವಿಡ್ ಎರಡನೆ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮವಹಿಸಿ

                                             :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಏ.12.(ಕ.ವಾ):- ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಮಾಡಲು ಜನರು ಸಹಕರಿಸಬೇಕು. ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್.  ಅವರು ಸೂಚಿಸಿದರು.




ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕೋವಿಡ್ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜನರು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆಮಾಡಬೇಕು ಎಂದು ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸಬೇಕು ಹಾಗೂ ಸಾರ್ವಜನಿಕರಿಗೆ ಕೋವಿಡ್ ಬಗ್ಗೆ ಇನ್ನಷ್ಟು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಅವರು ಹೇಳಿದರು.


ಆರ್‌ಟಿಪಿಸಿಆರ್ ವರದಿ ಕಡ್ಡಾಯ:

 ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಇರುವುದರಿಂದ ಗಡಿ ಭಾಗದ ಪ್ರವೇಶ ಹಾಗೂ ನಿರ್ಗಮನ ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ ದಿಂದ ಜಿಲ್ಲೆಗೆ ಬರುವವರು ಪ್ರವೇಶದ ಹಿಂದಿನ 72 ಗಂಟೆಗಳ ಅವಧಿಯಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಜಿಲ್ಲೆಯ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಅಧಿಕಾರಿಗಳು ಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ಸಂಘ, ಸಂಸ್ಥೆಗಳ ಸಹಕಾರ ಅಗತ್ಯ:

ಕೋವಿಡ್ ಪ್ರಕರಣಗಳು ಹೆಚ್ಚಳವಾಗದಂತೆ ತಡೆಯಲು ವಿವಿಧ ಸಂಘ, ಸಂಸ್ಥೆಗಳು ಸಂಯೋಗದಲ್ಲಿ ಕ್ಯಾಂಪ್ ಗಳ ಮಾಡುವ ಮೂಲಕ ಲಸಿಕೆ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ 45 ವರ್ಷಗಳ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಬಹುದು. ಹೀಗಾಗಿ ಜಿಲ್ಲೆಯ ಸಂಘ ಹಾಗೂ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ಅಗತ್ಯ ಸಹಕಾರ ನೀಡಬೇಕುಬೇಕೆಂದು ಅವರು ಹೇಳಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್.ಸಿ.ಎಚ್. ಡಾ.ಸೂರ್ಯಪ್ರಕಾಶ ಕಂದಕೂರು, ಡಾ.ಭಾಗವಾನ್ ಅನ್ವರ್, ಡಾ.ಸಾಜಿದ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.    


 ಸರಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ

                               ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಏ.12.(ಕ.ವಾ):-  ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ ಏ.12 ರಿಂದ ರಾಜ್ಯ ಸರಕಾರಿ ಕಚೇರಿಗಳ ಕೆಲಸದ ಕಾರ್ಯನಿರ್ವಹಣಾ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1:30ರವರೆಗೆ ಬದಲಾವಣೆ ಮಾಡಿ ಸರಕಾರ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.


ರಾಜ್ಯ ಸರಕಾರಿ ನೌಕರರ ಸಂಘದ ಕೋರಿಕೆಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಲಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಬದಲಾದ ಕಚೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟಾಗದAತೆ ನಿರ್ವಹಿಸತಕ್ಕದ್ದು, ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ (ವಿಶೇಷವಾಗಿ ಕೋವಿಡ್-19) ಕಚೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗುರುವಾರ, ಏಪ್ರಿಲ್ 8, 2021


 ದೇವತ್ಕಲ್ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲಿ ಕೆಲಸ ಮಾಡಿ :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಏ.08.(ಕ.ವಾ):- ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಏಪ್ರಿಲ್ 17 ರಂದು ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಹೂಡಲಿರುವ  ಹಿನ್ನೆಲೆಯಲ್ಲಿ ದೇವತ್ಕಲ್ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ  ಅಧಿಕಾರಿಗಳು ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.


ಏಪ್ರಿಲ್ 17 ರ ರಂದು ದೇವತ್ಕಲ್ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ದೇವತ್ಕಲ್ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ಸಮುದಾಯ ಭವನ, ಅಂಗನವಾಡಿ ಕಟ್ಟಡ ಸೇರಿದಂತೆ ಇತರ ಸಮಸ್ಯೆಗಳನ್ನು ಆಲಿಸಬೇಕೆಂದು ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಚಿಸಿದರು.


ಅಂದು ದೇವತ್ಕಲ್ ಗ್ರಾಮ ವಾಸ್ತವ್ಯದಲ್ಲಿ ವಿವಿಧ ಇಲಾಖೆಗಳು ತಮ್ಮ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಿ ಸಾರ್ವಜನಿಕರಲ್ಲಿ ಸರ್ಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿಬೇಕೆಂದು ಜಿಲ್ಲಾಧಿಕಾರಿ ಅವರು ಹೇಳಿದರು.


ಗ್ರಾಮ ವಾಸ್ತವ್ಯದಲ್ಲಿ ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು.


ಆಧಾರ್ ಕಾರ್ಡ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಹೇಳಿದರು.

 

ಕೋವಿಡ್ ಮಾರ್ಗಸೂಚಿನ್ವಯ ಎಲ್ಲ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಮತ್ತು ಜನರಿಗೆ ಮಾಸ್ಕ್, ಸಾನಿಟೈಜರ್ ಬಳಸುವುದು ಹಾಗೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಬೇಕು ಎಂದರು. 


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಸುರಪುರ ತಾಲೂಕಿನ ತಹಶಿಲ್ದಾರ್ ಸುಬ್ಬಣ್ಣ ಜಮಖಂಡಿ, ವಡಗೇರಾ ತಹಶಿಲ್ದಾರ್ ಸುರೇಶ್ ಅಂಕಲಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಚನ್ನಬಸವ, ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ  ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಇದ್ದರು.    




 2022 ರೊಳಗಾಗಿ ಗರ್ಭಿಣಿಯರಲ್ಲಿ ಪೌಷ್ಠಿಕತೆ ಹೆಚ್ಚಿಸಬೇಕು : ಶಂಕರಗೌಡ ಸೋಮನಾಳ

ಯಾದಗಿರಿ ಏಪ್ರಿಲ್;08(ಕ.ವಾ) 2022ರೊಳಗಾಗಿ  6 ವರ್ಷದ ಮಕ್ಕಳು, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ನಿರ್ಧಿಷ್ಠ ಅವಧಿಗೆ ಪೌಷ್ಠಿಕತೆಯನ್ನು  ಸುಧಾರಿಸುವ ನಿಟ್ಟಿನಲಿ ಪೋಷಣ ಅಭಿಯಾನ ಯೋಜನೆಯ ಅನುಷ್ಠಾನ ಗೊಳಿಸುವ  ಕಾರ್ಯ ನಿರ್ವಹಿಸಬೇಕು ಎಂದು ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ ಅಧಿಕಾರಿಗಳಿಗೆ ತಿಳಿಸಿದರು. 

ಗುರುವಾರ ಜಿಲ್ಲಾಡಳಿತ ಭವನದ ಸಹಾಯಕ ಆಯಕ್ತ ಕಚೇರಿಯಲ್ಲಿ ನಡೆದ ಪೋಷಣ್ ಅಭಿಯಾನ ಯೋಜನೆಯ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ  ಯೋಜನೆಯ ಮುಖ್ಯ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತಂದಿದೆ. 

ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ 5 ವರ್ಷದ ಒಳಗಿನ ಎಲ್ಲಾ ಮಕ್ಕಳ ಮನೆ ಮನೆಗೆ ಹೋಗಿ ತೂಕ  ಎತ್ತರ ಮಾಪನ ಮಾಡಿ ಬೆಳವಣಿಗೆ ಪರಿಶೀಲಿಸಿ, ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಮೇಲ್ವಿಚಾರಕಿಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪೋಷಣ ಅಭಿಯಾನ ಸಿಬ್ಬಂದಿಯವರು ಭೇಟಿ ನೀಡಿ ಪೋಷಕರಿಗೆ ಮಾರ್ಗದರ್ಶನ ನೀಡಿ ಆರೋಗ್ಯ ಸೇವೆ ಒದಗಿಸಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು. 

 

ಮುಖ್ಯವಾಗಿ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರನ್ನು ಆರೋಗ್ಯ ಇಲಾಖೆಯ ಸಹಕಾರದಿಂದ ಗುರುತಿಸಿ ಅಂತಹ ಗರ್ಭಿಣಿಯರಿಗೆ ಪೌಷ್ಠಿಕ ಮಟ್ಟ ಹೆಚ್ಚಿಸಿಕೊಳ್ಳುವಲ್ಲಿ ತಿಳುವಳಿಕೆ ನೀಡಿದ್ದಲ್ಲದೆ ಅವರಲ್ಲಿ ಹೆಚ್.ಬಿ. ಪ್ರಮಾಣ 7ರಿಂದ 10ಕ್ಕಿಂತ ಕಡಿಮೆ ಇದ್ದುದರಿಂದ ಆಯ್ದ ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಬೆಳೆದ ಸೊಪ್ಪು ತರಕಾರಿಗಳನ್ನು ನಿಯಮಿತವಾಗಿ ಪೂರೈಸಿ ಸುಧಾರಣೆಯ ಮಹತ್ವವನ್ನು ಗಮನಿಸಲಾಗಿರುತ್ತದೆ ಎಂದರು.

ಕೇAದ್ರ ಸರಕಾರದ ಯೋಜನೆಯಾದ ಪೋಷಣೆ ಮಹಾ 2021ಕ್ಕೆ ನಿಗದಿಪಡಿಸಿದ ಕ್ರಿಯಾ ಯೋಜನೆಯಮತೆ ಪ್ರತಿನಿತ್ಯ ಎಲ್ಲಾ ಅಂಗನವಾಡಿ ಕೇಂದ್ರಗಳ ಮುಖಾಂತರ ನಿಗದಿತ ಕಾರ್ಯಕ್ರಮ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. 

ಪೋಷಣ ಅಭಿಯಾನ ಬಹುನಿರೀಕ್ಷಿತ ಯೋಜನೆಗಳಲ್ಲೊಂದಾದ ಸಮುದಾಯ ಆಧಾರಿತ ಚಟುವಟಿಕೆಗಳ ಮುಖಾಂತರ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ಹೋಗಲಾಡಿಸಲು ಬಾಣಂತಿ ಗರ್ಭಿಣಿ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಯನ್ನು ಮೂಡಿಸುವ ನಿಟ್ಟಿನಲ್ಲಿ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಸಮುದಾಯ ಆಧಾರಿತ ಚಟುವಟಿಕೆಗಳನ್ನು ನಡೆಸಲು ಪ್ರಾರಂಭಿಸಲಾಗಿದೆ ಎಂದರು. 

 ಈ ಸಂದರ್ಭದಲ್ಲಿ ಗುರುಮಟಕಲ್ ತಾ.ಪಂ ಕಾರ್ಯನಿರ್ವಾಹಕಾಧಿಕಾರಿ,ಯಾದಗಿರಿ ತಾಲೂಕ ವೈದ್ಯಾಧಿಕಾರಿಗಳು,ಯಾದಗಿರಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಇತರರಿದ್ದರು






ಫ್ರೂಟ್ಸ್ ಐಡಿ ಪಡೆಯಲು ಮನವಿ

ಯಾದಗಿರಿ ಏಪ್ರಿಲ್-08(ಕ.ವಾ) ರೈತರು ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಅಲೆದಾಡುವದನ್ನು ತಪ್ಪಿಸಲು ಆಯೋಜಿತ ಮತ್ತು ಪರೀಕ್ಷಿತ  ರೈತರ ದತ್ತಾಂಶ ಸಂಗ್ರಹಣೆಗೆ (ಫ್ರೂಟ್ಸ್) ತಂತ್ರಾAಶ ಅಭಿವೃದ್ಧಿಪಡಿಸಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿ ಫ್ರೂಟ್ಸ್ ಐಡಿ ಯನ್ನು ಪಡೆಯಲು ತಮ್ಮ ಆಧಾರ ಗುರುತಿಸಿ ಚೀಟಿ, ಭೂದಾಖಲಾತಿ ಪಹಣಿ ಬ್ಯಾಂಕ್ ಖಾತೆ ಮೀಸಲಾತಿಗೆ ಸಂಬAಧಿಸಿದ ಜಾತಿ ಪ್ರಮಾಣ ಪತ್ರ ಮತ್ತು 2 ಭಾವಚಿತ್ರಗಳೊಂದಿಗೆ ತಮ್ಮ ಸಮೀಪದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ಕಂದಾಯ ಇಲಾಖೆ ನಾಡಕಛೇರಿ, ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ದಾಖಲಾತಿಗಳನ್ನು ಸಲ್ಲಿಸಿ ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿಕೊಳ್ಳಲು ಅವರು ಕೋರಿದ್ದಾರೆ. 

ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ, ಕಂದಾಯ, ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ರೈತರು ಯಾವುದೇ ಸೌಲಭ್ಯಗಳನ್ನು ಪಡೆಯಲು ಫ್ರೂಟ್ಸ್ ಐಡಿ ಸಹಕಾರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.


ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಯಾದಗಿರಿ ಏಪ್ರಿಲ್-08(ಕ.ವಾ)110 ಕೆವಿ ವಿದ್ಯುತ್ ಉಪಕೇಂದ್ರ ಸುರಪುರ ದಲ್ಲಿ 1x10mvಚಿ  ಪವರ್ ಟ್ರಾನ್ಸಫಾರಮರ್ ಅನ್ನು ತೆಗೆದು ಹೊಸ 20 mvಚಿ ಪವರ್ ಟ್ರಾನ್ಸಫಾರಮರ್ ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಪ್ರಯುಕ್ತ ಈ ಕೆಳಕಂಡ ಗ್ರಾಮಗಳಲ್ಲಿ ಇದೇ ಏಪ್ರಿಲ್ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಸುರಪುರ ತಾಲೂಕಿನ ಗ್ರಾಮಗಳಾದ ಸತ್ಯಂಪೇಠ, ದೇವಿಕೇರಿ, ಲಕ್ಷಿö್ಮÃಪುರ, ಬಿಜಸಪೂರ,ರತ್ತಾಳ,ಹಾಲಗೇರಾ, ಶಾಖಾಪೂರ, ಯಮನೂರ,ಕವಡಿಮಟ್ಟಿ, ಹಾವಿನಾಳ,ಆಲ್ದಾಳ,ನಾಗರಾಳ ಹಾಗೂ ದೇವಿನಾಳ ಗ್ರಾಮದಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಜೆಸ್ಕಾಂಗೆ ಸಹಕಾರ ನೀಡುವಂತೆ ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಯಾದಗಿರಿಯ ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮರಣ ಪತ್ರದೊಂದಿಗೆ ಕುಟುಂಬ ಗುರುತಿನ ಸಂಖ್ಯೆ ಜೋಡಣೆ ಕಡ್ಡಾಯ

ಯಾದಗಿರಿ ಏಪ್ರಿಲ್-08(ಕ.ವಾ) ಮರಣ ಪತ್ರದೊಂದಿಗೆ ಕುಟುಂಬ ಗುರುತಿನ ಸಂಖ್ಯೆ ಜೋಡಣೆ  ಕಾರ್ಯವು ಪ್ರಗತಿಯಲ್ಲಿದ್ದು, ಮರಣ ಪ್ರಮಾಣ ಪತ್ರಗಳ ಜೋಡಣೆಗಾಗಿ ಮೃತ ವ್ಯಕ್ತಿಯ ಹೆಸರು ಹೊಂದಿರುವ ಸಂಬAಧಿಕರ ಪಡಿತರ ಚೀಟಿ ಹಾಗೂ ಆಧಾರ ಕಾರ್ಡ ಅತ್ಯವಶ್ಯಕವಾಗಿರುವದರಿಂದ ಕಂದಾಯ ಇಲಾಖೆ/ನಗರ ಸ್ಥಳಿಯ ಸಂಸ್ಥೆಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ಸಂಬAಧಪಟ್ಟ ದಾಖಲೆಗಳನ್ನು ನೀಡುವುದು ಅಥವಾ ಹತ್ತಿರದ ನಾಡ ಕಚೇರಿ/ತಹಸೀಲ್ದಾರ ಕಚೇರಿ/ನಗರ ಸ್ಥಳೀಯ ಸಂಸ್ಥೆಗಳಿಗೆ ನೀಡುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



*******************************


ಗುರುವಾರ, ಏಪ್ರಿಲ್ 1, 2021

 ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಅಭಿವೃದ್ಧಿ ಹೊಂದಲು ಸರ್ಕಾರದ ಯೋಜನೆಗಳು ಪೂರಕ

                                                                  ;ಕೆ.ರವೀಂದ್ರ ಶೆಟ್ಟಿ

ಯಾದಗಿರಿ,ಏ.1 (ಕ.ವಾ):- ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಅಭಿವೃದ್ಧಿ ಹೊಂದಬೇಕೆAದು ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರು ಹೇಳಿದರು. 


ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.  


ರಾಜ್ಯದಲ್ಲಿ ಮೂಲ ಸೌಕರ್ಯಗಳಿಲ್ಲದ, ಯಾವುದೇ ಸ್ಥಾನಮಾನ ಪಡೆಯದ ಸಮುದಾಯಗಳಾಗಿರುವ ಅಲೆಮಾರಿ, ಅರೆ ಅಲೆಮಾರಿಗಳು ಇಂದಿಗೂ ಶೆಡ್ ಹಾಕಿಕೊಂಡು ಬದುಕುತ್ತಿದ್ದಾರೆ. ಅವರೆಲ್ಲರೂ ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕೆAದರು.


ಅಲೆಮಾರಿಗಳ ಅಭಿವೃದ್ಧಿಗಾಗಿ ಇದೇ ಮೊದಲ ಬಾರಿಗೆ ನಿಗಮ ಸ್ಥಾಪಿಸಲಾಗಿದೆ. ಅದರ ಪ್ರಥಮ ಅಧ್ಯಕ್ಷನಾಗಿದ್ದೇನೆ. ಈಗ ಈ ನಿಗಮಕ್ಕೆ 10 ಕೋಟಿ ರೂ. ಮಾತ್ರ ಅನುದಾನವಿದೆ. ಕನಿಷ್ಠ 250 ಕೋಟಿ ರೂ. ನೀಡಬೇಕು ಎಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ಬೇಡಿಕೆ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.


ಗೊಲ್ಲ, ಹೆಳವ, ದೊಂಬಿದಾಸ, ಚೆನ್ನದಾಸ, ಬಯಲು ಪತ್ತಾರ, ಜೋಶಿ, ಬುಡುಬುಡಿಕೆ, ಪಿಚ್ಚಗುಂಟ್ಲ, ಗೋಂದಳಿ, ಬೈರಾಗಿ, ಗಾರುಡಿ ಹೀಗೆ 46 ಸಮುದಾಯಗಳು ಅಲೆಮಾರಿ, ಅಲೆಮಾರಿಗಳಾಗಿವೆ. ರಾಜ್ಯದಲ್ಲಿ ಸುಮಾರು 70 ಲಕ್ಷ ಜನಸಂಖ್ಯೆ ಇದೆ. ಶೇ 95ರಷ್ಟು ಮಂದಿಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ಹಿಂದುಳಿದ ಕಲ್ಯಾಣ ವರ್ಗಗಳ ಇಲಾಖೆ ಹಾಗೂ ಸರ್ಕಾರದ ನೆರವಿನೊಂದಿಗೆ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.


ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯ ಇದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು. ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳು ಕೂಡ ಈ ಸೌಲಭ್ಯ ವಂಚಿತ ಸಮುದಾಯಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.


ಇದೇ ಸಂದರ್ಭದಲ್ಲಿ ಅಲೆಮಾರಿ,ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧಿಕಾರಿ ಜೀವನ್ ಪ್ರಸಾದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ ಸೇರಿದಂತೆ ವಿವಿಧ ಮುಖಂಡರು ಇದ್ದರು. 


 ಎಲ್.ಇ.ಡಿ ವಾಹನಕ್ಕೆ ಚಾಲನೆ

ಯಾದಗಿರಿ, ಮಾ.31 (ಕ.ವಾ):- ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ಎಲ್.ಇ.ಡಿ. ವಾಹನ ಹಾಗೂ ಬೀದಿ ನಾಟಕಗಳ ಮೂಲಕ ನಡೆಯುವ ಪ್ರಚಾರ ಕಾರ್ಯಕ್ಕೆ ಕರ್ನಾಟಕ ಸರಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾದ ಪಿ.ರವಿಕುಮಾರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.



ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಹಾಜರಿದ್ದರು.


 ಕೋವಿಡ್-19 ಇನ್ನಿತರ ವಿಷಯಗಳ ಕುರಿತು  ಪ್ರಗತಿ ಪರಿಶೀಲನಾ ಸಭೆ

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು

: ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್                                                         

ಯಾದಗಿರಿ, ಮಾ.31 (ಕ.ವಾ): ಕೋವಿಡ್ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಸೂಚಿಸಲಾಗಿರುವ ವಿವಿಧ ವರ್ಗದ ಎಲ್ಲಾ ಅರ್ಹರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯದ ಮುಖ್ಯಕಾರ್ಯದರ್ಶಿಗಳಾದ ಪಿ. ರವಿಕುಮಾರ್ ಅವರು ತಿಳಿಸಿದರು.



ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕೋವಿಡ್-19 ಹಾಗೂ ಇನ್ನಿತರ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಈಗಾಗಲೇ ಮೊದಲನೇ ಲಸಿಕೆ ಪಡೆದಿರುವ ಮಂಚೂಣಿ ಕಾರ್ಯಕರ್ತರಾದ ವೈದ್ಯರು, ನರ್ಸ್, ಪೊಲೀಸರು ಮುಂತಾದವರು 2ನೇ ಲಸಿಕೆಯನ್ನೂ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 10,803 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಪ್ರಸಕ್ತ ಪ್ರತಿದಿನ 1,150 ಪ್ರಕರಣಗಳ ಪರೀಕ್ಷೆ ನಡೆಸುತ್ತಿದ್ದು, ಇನ್ಮುಂದೆ 1,500 ಪ್ರಕರಣಗಳ ಪರೀಕ್ಷೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.   

ದಿನವೊಂದಕ್ಕೆ ಸರಾಸರಿ 5 ಸಾವಿರ ಕೋವಿಡ್ ಲಸಿಕೆ ಹಾಕುತ್ತಿರುವುದಕ್ಕೆ  ಮೆಚ್ಚುಗೆಯ ಮಾತನಾಡಿದ  ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲಿ ನೀರಿನ ಸಮಸ್ಯೆ ಇದೆಯೋ ಅಂತಹ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ. ಆರ್ ಅವರು ಮಾತನಾಡಿ, ಸುರುಪುರ ನಗರದ 31 ವಾರ್ಡ್ಗಳ ಪೈಕಿ 18 ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಇದೆ. 240 ಕೋಟಿ ರೂಪಾಯಿ ವೆಚ್ಚದಲ್ಲಿ ಶೆಳ್ಳಗಿ ಗ್ರಾಮದ ಕೃಷ್ಣಾ ನದಿಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದ ಅವರು, ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಅಂತರ್ಜಲ ವೃದ್ಧಿಯಾಗಿದ್ದು, ಈ ವರ್ಷ ಅಷ್ಟೊಂದು ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಹೇಳಿದರು. 

ಇನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಜಿಲ್ಲೆಯಲ್ಲಿ 37 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಗುರುಮಠಕಲ್ ತಾಲ್ಲೂಕಿನ ಯಂಪಾಡ್ ಹಾಗೂ ಸುಭಾಷ್ ನಗರದಲ್ಲಿ ಪ್ರತಿವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. 32 ಗ್ರಾಮಗಳಿಗೆ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಈ ಹಳ್ಳಿಗಳೂ ಸೇರಿವೆ. ಕಾಮಗಾರಿ ಪ್ರಗತಿಯಲ್ಲಿದೆ. ಸದ್ಯ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು. 

ಪಿಎಂ.ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂಪಾಯಿ ಸಾಲ ನೀಡುವ ಯೋಜನೆಯಡಿ ಆನ್‌ಲೈನ್ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಿ ಸಾಲ ಮಂಜೂರಾತಿ ಮಾಡಬೇಕೆಂದು ಅವರು, ಈ ಕುರಿತು ಪುರಸಭೆ, ನಗರಸಭೆ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್ಗಳ ಸಭೆ ಕರೆದು ಸಾಲ ಮಂಜೂರು ಮಾಡಲು ಸೂಚಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.  

ಇನ್ನು ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ಆಯ್ಕೆಯಾಗಿರುವ ಜಿಲ್ಲೆಯ ಒಟ್ಟು 51 ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ನೀಡುವುದು ಬಾಕಿ ಇದ್ದು, ಶೀಘ್ರ ನೀಡಲು ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಸಿಂಧುತ್ವ ಪ್ರಮಾಣಪತ್ರ ನೀಡುವ ಕುರಿತಂತೆ ಇರುವ ನಿಯಮಗಳನ್ನು ಸರಳೀಕರಿಸಬೇಕಾಗಿದೆ ಎಂದು ಪ್ರತಿಪಾದಿಸಿದರು.

ರೈತರ ಜಮೀನಿನ ವಿವರಗಳನ್ನು ಫ್ರೂಟ್ಸ್ ಪೋರ್ಟಲ್‌ನಲ್ಲಿ  ಆಧಾರ್  ನೋಂದಣಿ ಮುಂತಾದವುಗಳನ್ನು ಶೀಘ್ರ ಮುಗಿಸಬೇಕು ಎಂದು ಅವರು  ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 

ಪ್ರಾದೇಶಿಕ ಆಯುಕ್ತರು ಮತ್ತು ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ವಿವಿಧ ಸಾಲಿನಲ್ಲಿ ಕೈಗೊಂಡು ಮುಗಿಸಿರುವ ಕಾಮಗಾರಿಗಳ ವಿವರಗಳನ್ನು ಮಂಡಳಿಯ ಸಾಫ್ಟ್ವೇರ್‌ನಲ್ಲಿ ಅಪ್‌ಡೇಟ್ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳು ಮಾತನಾಡಿ, ಕಾಮಗಾರಿ ನಡೆಸಿ ಮುಕ್ತಾಯ ಗೊಳಿಸಿರುವ ಅನುಷ್ಠಾನ ಏಜೆನ್ಸಿಗಳು ಕಾಮಗಾರಿ ಮುಗಿದ ತಕ್ಷಣ  ಸಾಫ್ಟ್ವೇರ್‌ನಲ್ಲಿ ಅಪ್‌ಡೇಟ್ ಮಾಡಬೇಕು ಎಂದ ಅವರು, ಇತ್ತೀಚಿನ ಸಾಲಿನ ನೂರಾರು ಕಾಮಗಾರಿಗಳನ್ನು ಇನ್ನೂ ಆರಂಭಿಸದಿರುವುದಕ್ಕೆ ವಿವಿಧ ಏಜೆನ್ಸಿಯ ಅಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡರು.

ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವ ಮೂಲಕ ಈ ಜಿಲ್ಲೆಯ ಜನತೆ ಬೆಂಗಳೂರು ಮತ್ತಿತರೆಡೆ ಗುಳೆ ಹೋಗುವುದನ್ನು ತಪ್ಪಿಸಬೇಕು. ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಜನತೆ ಅವರವರ ಊರಿನಲ್ಲೇ ಉಳಿದರೆ ಒಳಿತು ಎಂದು ಸಲಹೆ ನೀಡಿದರು.

ಕಳೆದ ವರ್ಷ ಕೋವಿಡ್ ಸೋಂಕು ಇಡೀ ವರ್ಷ ಕಾಡಿದ್ದರಿಂದ ಅನುದಾನದ ಸಮಸ್ಯೆಯಾಗಿದ್ದು, 2021-22ನೇ ಸಾಲಿನಲ್ಲಿ ಯಾವುದೇ ಅನುದಾನದ ಕೊರತೆಯಾಗುವುದಿಲ್ಲ. 2021-22ನೇ ಸಾಲಿಗೆ ಸಂಬAಧಿಸಿದAತೆ ಎಲ್ಲಾ ಕ್ರಿಯಾ ಯೋಜನೆಗಳನ್ನು ಬೇಗ ಸಿದ್ಧಪಡಿಸಿ ಮಂಜೂರಾತಿಗೆ ಕಳುಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ನಿರ್ದೇಶನ ನೀಡಿದರು.

  ಯಾದಗಿರಿ ಜಿಲ್ಲೆಯಾಗಿ 10 ವರ್ಷ ಪೂರೈಸಿದ್ದರೂ, ಜಿಲ್ಲೆ ಇನ್ನು ಅಭಿವೃದ್ಧಿ ಕಂಡಿಲ್ಲ. ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹೆಚ್ಚಿನವರು ಇದೇ ಜಿಲ್ಲೆಯವರಾಗಿದ್ದಾರೆ. ಸ್ವಂತ ಜಿಲ್ಲೆ ಎಂಬ ಅಭಿಮಾನದಿಂದ ಇಚ್ಛಾಶಕ್ತಿ ಪ್ರದರ್ಶಿಸಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಸೋನಾವಣೆ ಮಾತನಾಡಿ, ದೋರನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ಬಿಟ್ಟರೆ, ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಶಾಂತಿಯುತವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಮುಂತಾದವರು ಇದ್ದರು. 


                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...