ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಯಾದಗಿರಿ,ಏಪ್ರಿಲ್12(ಕ.ವಾ):- ಯಾದಗಿರಿ ಜಿಲ್ಲೆಯ ಸುರಪುರ/ಶಹಾಪುರ/ಯಾದಗಿರಿ/ಗುರುಮಠಕಲ್ ತಾಲ್ಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ ಅವರು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿಯ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರ/ಸುರಪುರ/ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಖಾಲಿ ಇರುವ 14-ಅಂಗನವಾಡಿ ಕಾರ್ಯಕರ್ತೆಯರು ಮತ್ತು 31-ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಬಂದAತಹ ಅರ್ಜಿಗಳನ್ನು ಪರಿಶೀಲಿಸಿ ನೇಮಕಾತಿಯ ಮಾರ್ಗಸೂಚಿಯಂತೆ ತಾತ್ಕಾಲಿಕ ಆಯ್ಕೆ ಸಿದ್ದಪಡಿಸಲಾಗಿದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಗಂಜ್ ಏರಿಯಾ, ಶಹಾಪೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಳೆ ಕೋರ್ಟ್ ಕಟ್ಟಡ, ಜೈಲ್ ಹತ್ತಿರ, ಸುರಪುರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಸ್ತ್ರೀ ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ಯಾದಗಿರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಗುಮಡಲಾ ಕಾಂಪ್ಲೆಕ್ಸ್, ಬಸ್ ಸ್ಟಾಂಡ್ ಹತ್ತಿರ, ಗುರುಮಠಕಲ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ಇದೇ 2021ರ ಏಪ್ರಿಲ್ 22 ರೊಳಗೆ ಕಚೇರಿ ವೇಳೆ ಸಂಜೆ: 5.30 ಗಂಟೆಯೊಳಗೆ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ