ಸೋಮವಾರ, ಏಪ್ರಿಲ್ 26, 2021



 ಕೋವಿಡ್ 19 ಕುರಿತು ತುರ್ತು ಸಭೆ

ಕೊರೊನಾ 2ನೇ ಅಲೆ ತಡೆಯಲು ಸರ್ವರ ಸಹಕಾರ ಅಗತ್ಯ

                                    :ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ

ಯಾದಗಿರಿ,ಏಪ್ರಿಲ್.26(ಕ.ವಾ)-: ದಿನೇ ದಿನೇ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದರೆ ಆರೋಗ್ಯ ಇಲಾಖೆಯೊಂದಿಗೆ ಸರ್ವರ ಸಹಕಾರ ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ತಿಳಿಸಿದರು. 


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗAಣದಲ್ಲಿ ಸೋಮವಾರ ಕೋವಿಡ್ 19ಗೆ ಸಂಬAಧಿಸಿದAತೆ  ಸಂಪರ್ಕ ಪತ್ತೆಹಚ್ಚುವಿಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕೋವಿಡ್ 2ನೇ ಅಲೆ ತಡೆಯಲು 

ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ಪಾಸಿಟಿವ್ ವರದಿ ಬಂದವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕದಲ್ಲಿ  ಇರುವರ ಪತ್ತೆಹಚ್ಚವುದು ಬಹಳ ಮುಖ್ಯವಾಗಿರುತ್ತದೆ ಎಂದವರು ಹೇಳಿದರು. 


ಜಿಲ್ಲಾಧಿಕಾರಿಗಳ ಆದೇಶದನ್ವಯ ಸಂಪರ್ಕ ಪತ್ತೆಹಚ್ಚುವ ನಿಟ್ಟಿನಲ್ಲಿ ಶಿಕ್ಷಕರನ್ನು ನೇಮಿಸಿ ಮತ್ತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ  ಎಂದರು.


ಕೋವಿಡ್ ರೋಗಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಪರೀಕ್ಷೆ ನಂತರ ನಿಮ್ಮ ಸಂಪರ್ಕದಲ್ಲಿರುವರು,ಅವರ ಊರು,ಪ್ರದೇಶ,ಮನೆಯ ಸಮೀಪದ ದೇವಸ್ಥಾನ, ಮಸೀದಿ ಮುಂತಾದವುಗಳ ಲ್ಯಾಂಡ್ ಮಾರ್ಕ್ ಬಗ್ಗೆ, ಅವರು ಕೆಲಸ ಮಾಡುವ ಸ್ಥಳದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. 

ಉತ್ತರ ಪಡೆದ ನಂತರ ಮಾಹಿತಿಯನ್ನು ಛಿoಟಿಣಚಿಛಿಣ ಣಡಿಛಿiಟಿg ಚಿಠಿಠಿ  ನಲ್ಲಿ ಅಪ್‌ಲೋಡ್ ಮಾಡಬೇಕು. ಇದರಿಂದ ಕೋವಿಡ್ 2ನೇ ಅಲೆಯನ್ನು ತಡೆಯಲು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಕಾಮಶೆಟ್ಟಿ ಮಾತನಾಡಿ, ಈಗಾಗಲೇ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವರ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಒಂದು ವೇಳೆ ಇವರಲ್ಲಿ ಪಾಸಿಟಿವ್ ಪ್ರಕರಣಗಳು ಕಂಡುಬAದರೆ ಅವರ ಸಂಪರ್ಕದಲ್ಲಿರುವ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಅಭಾವವಿರುವ ಕಾರಣ ಶಿಕ್ಷಕರನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.

ಕೊರೊನಾ ಸೋಂಕಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವರು,ದ್ವಿತೀಯ ಸಂಪರ್ಕದಲ್ಲಿರುವರು ಮತ್ತು ಅವರ ಪ್ರಯಾಣದ ವಿವರವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಡಗೇರಾ ತಹಸೀಲ್ದಾರ್ ಸುರೇಶ ಅಂಕಲಗಿ, ಸುರುಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಾಗರಾಜ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಶಿಕ್ಷಕರು ಸಭೆಯಲ್ಲಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...