ಗುರುವಾರ, ಏಪ್ರಿಲ್ 1, 2021

 ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಅಭಿವೃದ್ಧಿ ಹೊಂದಲು ಸರ್ಕಾರದ ಯೋಜನೆಗಳು ಪೂರಕ

                                                                  ;ಕೆ.ರವೀಂದ್ರ ಶೆಟ್ಟಿ

ಯಾದಗಿರಿ,ಏ.1 (ಕ.ವಾ):- ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಅಭಿವೃದ್ಧಿ ಹೊಂದಬೇಕೆAದು ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಅವರು ಹೇಳಿದರು. 


ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.  


ರಾಜ್ಯದಲ್ಲಿ ಮೂಲ ಸೌಕರ್ಯಗಳಿಲ್ಲದ, ಯಾವುದೇ ಸ್ಥಾನಮಾನ ಪಡೆಯದ ಸಮುದಾಯಗಳಾಗಿರುವ ಅಲೆಮಾರಿ, ಅರೆ ಅಲೆಮಾರಿಗಳು ಇಂದಿಗೂ ಶೆಡ್ ಹಾಕಿಕೊಂಡು ಬದುಕುತ್ತಿದ್ದಾರೆ. ಅವರೆಲ್ಲರೂ ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕೆAದರು.


ಅಲೆಮಾರಿಗಳ ಅಭಿವೃದ್ಧಿಗಾಗಿ ಇದೇ ಮೊದಲ ಬಾರಿಗೆ ನಿಗಮ ಸ್ಥಾಪಿಸಲಾಗಿದೆ. ಅದರ ಪ್ರಥಮ ಅಧ್ಯಕ್ಷನಾಗಿದ್ದೇನೆ. ಈಗ ಈ ನಿಗಮಕ್ಕೆ 10 ಕೋಟಿ ರೂ. ಮಾತ್ರ ಅನುದಾನವಿದೆ. ಕನಿಷ್ಠ 250 ಕೋಟಿ ರೂ. ನೀಡಬೇಕು ಎಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ಬೇಡಿಕೆ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.


ಗೊಲ್ಲ, ಹೆಳವ, ದೊಂಬಿದಾಸ, ಚೆನ್ನದಾಸ, ಬಯಲು ಪತ್ತಾರ, ಜೋಶಿ, ಬುಡುಬುಡಿಕೆ, ಪಿಚ್ಚಗುಂಟ್ಲ, ಗೋಂದಳಿ, ಬೈರಾಗಿ, ಗಾರುಡಿ ಹೀಗೆ 46 ಸಮುದಾಯಗಳು ಅಲೆಮಾರಿ, ಅಲೆಮಾರಿಗಳಾಗಿವೆ. ರಾಜ್ಯದಲ್ಲಿ ಸುಮಾರು 70 ಲಕ್ಷ ಜನಸಂಖ್ಯೆ ಇದೆ. ಶೇ 95ರಷ್ಟು ಮಂದಿಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ಹಿಂದುಳಿದ ಕಲ್ಯಾಣ ವರ್ಗಗಳ ಇಲಾಖೆ ಹಾಗೂ ಸರ್ಕಾರದ ನೆರವಿನೊಂದಿಗೆ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.


ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯ ಇದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು. ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳು ಕೂಡ ಈ ಸೌಲಭ್ಯ ವಂಚಿತ ಸಮುದಾಯಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.


ಇದೇ ಸಂದರ್ಭದಲ್ಲಿ ಅಲೆಮಾರಿ,ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧಿಕಾರಿ ಜೀವನ್ ಪ್ರಸಾದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ ಸೇರಿದಂತೆ ವಿವಿಧ ಮುಖಂಡರು ಇದ್ದರು. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...