ಗುರುವಾರ, ಏಪ್ರಿಲ್ 22, 2021






 ವಿದ್ಯಾರ್ಥಿಗಳು ಅವಕಾಶಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ

 ಶಾಸಕ: ವೆಂಕಟರೆಡ್ಡಿಗೌಡ ಮುದ್ನಾಳ

ಯಾದಗಿರಿ,ಏಪ್ರಿಲ್.೨೨(ಕ.ವಾ):- ಶಿಕ್ಷಣ ಉತ್ತಮವಾಗಿ ಕಲಿತುಕೊಂಡರೆ ನಾವು ಬದಲಾವಣೆ ಕಾಣಲು ಸಾಧ್ಯವಿದೆ ಹೀಗಾಗಿ ವಿದ್ಯಾರ್ಥಿಗಳು ಕೂಡಾ ಅವಕಾಶಗಳನ್ನು ಸಮರ್ಪಕವಾಗಿ ಬಳಕೆ  ಮಾಡಿಕೊಳ್ಳಬೇಕೆಂದು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅವರು ತಿಳಿಸಿದರು. 


ನಗರದಲ್ಲಿ ಏಪ್ರಿಲ್ ೨೦ ರಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಕ್ ಪೂರ್ವ ಬಾಲಕರ ವಸತಿ ನಿಲಯ ಅಡಿಗಲ್ಲು ಕಾರ್ಯಕ್ರಮ, ಮೆಟ್ರಿಕ್ ನಂತರ ವೃತ್ತಿಪರ ಮತ್ತು ಮೆಟ್ರಿಕ್ ನಂತರ ಇಂದಿರಾಗಾAಧಿ ನರ್ಸಿಂಗ್ ಬಾಲಕಿಯರ ವಸತಿ ನಿಲಯ ಕಟ್ಟಡಗಳನ್ನು ಉದ್ಘಾಟಸಿ ಅವರು ಮಾತನಾಡಿದರು.


ಮುಖ್ಯವಾಹಿನಿಗೆ ಬರಲು ಶಿಕ್ಷಣವೊಂದೇ ಸಾಧನೆಯಾಗಿದ್ದು, ನಿರ್ಲಕ್ಷತನ ಮಾಡಿದರೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ, ಇದಕ್ಕೆ ಎಂದಿಗೂ ಅವಕಾಶ ಮಾಡಿಕೊಡಬಾರದು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಅಗತ್ಯವಿರುವ ಕಡೆಗೆ ವಸತಿ ನಿಲಯಗಳನ್ನು ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.


ಜಿಲ್ಲಾ ಕೇಂದ್ರ ದಿನದಿಂದ ದಿನಕ್ಕೆ ವ್ಯಾಪಕವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಸರಕಾರದಿಂದ ಸೌಲಭ್ಯಗಳನ್ನು ಸಹ ಕಲ್ಪಿಸಲಾಗುತ್ತಿದ್ದು, ಜನರು ಸಹಕಾರ ನೀಡಬೇಕು ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಣೆ ಮಾಡಲಾಗುತ್ತಿದ್ದು, ಉತ್ತಮ ಸೌಲಭ್ಯಗಳನ್ನು ಕಲ್ಪಿಸವುದು ನನ್ನ ಪ್ರಥಮ ಗುರಿಯಾಗಿದೆ ಎಂದರು.

ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ್  ಯಡಿಯಾಪೂರ ಅವರು ಮಾತನಾಡಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿದ ಕೆ.ಆರ್.ಐ.ಡಿ.ಎಲ್. ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ ವತಿಯಿಂದ ಧನ್ಯವಾದಗಳನ್ನು ಸಮರ್ಪಿಸಿ ವಿದ್ಯಾರ್ಥಿಗಳು ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುವಂತೆ ಸಲಹೆ ನೀಡಿದರು. 


ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರು ಶಿವಲಿಂಗಪ್ಪ ಪುಟಗಿ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಸುನಿತಾ ಚೌವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.




ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮ

ಯಾದಗಿರಿ,ಏಪ್ರಿಲ್.೨೨(ಕ.ವಾ):- ರೈತ ಒಳ್ಳೆಯ ತಳಿ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಮಾಡಿದಾಗ್ಯೂ ಬೆಳೆಗೆ ಅನುಕೂಲಕರÀ ಹವಾಮಾನ ಸಿಗದಿದ್ದರೆ, ಸಮಯಕ್ಕೆ ಸರಿಯಾಗಿ ಮಳೆ ಬಾರದಿದ್ದರೆ ಇಳುವರಿ ಮೇಲೆ ಹೆಚ್ಚಿನ ದುಷ್ಪರಿಣಾಮ ಬಿರುತ್ತದೆ. ಆದ್ದರಿಂದ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಮಾಡಬೇಕೆಂದು ಕೃಷಿ ವಿಜ್ಞಾನ ಕೇಂದ್ರ, ಕವಡಿಮಟ್ಟಿಯ ಕೃಷಿ ಹವಾಮಾನಶಾಸ್ತç ವಿಷಯ ತಜ್ಞರಾದ ಡಾ. ಶಿಲ್ಪಾ ವಿ.ಅವರು ತಿಳಿಸಿದರು.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ ಗ್ರಾಮದಲ್ಲಿ ಹವಾಮಾನ ವೈಪರಿತ್ಯ ಮತ್ತು ಹವಾಮಾನ ಆಧಾರಿತ ಕೃಷಿ ಸಲಹಾ ಸೇವೆಯಲ್ಲಿ ನಿರತವಾದ ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಚೋಗಟಾಪೂರ ಯಾವುದೇ ಪ್ರದೇಶದ ಬೆಳೆ ಉತ್ಪಾದನೆಯ ಯಶಸ್ಸು ಮತ್ತು ವೈಫಲ್ಯವನ್ನು ನಿರ್ಧರಿಸುವಲ್ಲಿ ಆಯಾ ಪ್ರದೇಶದ ಹವಾಮಾನ ಪರಿಸ್ಥಿತಿಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯದ ಭಾರತ ಹವಾಮಾನ ಇಲಾಖೆ ಮತ್ತು ಭಾರತೀಯ ಕೃಷಿ ಸಂಶೊಧನಾ ಮಂಡಳಿಯಿAದ ಜಂಟಿಯಾಗಿ ಬಿಡುಗಡೆಗೊಳಿಸಿದ “ಮೇಘದೂತ” ಮೊಬೈಲ ಆ್ಯಪನ ಬಳಕೆ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು. ಈ ಬಳಗವು (ಆ್ಯಪ) ರೈತರಿಗೆ ಸ್ಥಳೀಯ ಪ್ರಮುಖ ಬೆಳೆಗಳ ಮತ್ತು ಜಾನುವಾರುಗಳಿಗೆ ಹವಾಮಾನ ಆಧಾರಿತ ಕೃಷಿ ಸಲಹೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಜಿಲ್ಲಾವಾರು ಮಾಹಿತಿಯನ್ನು ಒದಗಿಸುತ್ತದೆ. ಈ ಮಾಹಿತಿಯನ್ನು ವಾರಕ್ಕೆ ಎರಡು ಬಾರಿ (ಪ್ರತಿ ಮಂಗಳವಾರ ಮತ್ತು ಶುಕ್ರವಾರ) ಜಿಲ್ಲಾ ಕೃಷಿ ಹವಾಮಾನ ಘಟಕದಿಂದ ನವೀಕರಿಸಲಾಗುತ್ತಿದ್ದು, ಈ ಮೇಘದೂತ ಆ್ಯಪನಲ್ಲಿ ರೈತರಿಗೆ ಮುಂದಿನ ೫ ದಿನಗಳ ಹವಾಮಾನ ಮುನ್ಸೂಚನೆ, ಕೃಷಿ ಮತ್ತು ತೋಟಗಾರಿಕೆ ಮಾಹಿತಿಗಷ್ಟೇ ಸೀಮಿತವಾಗದೆ ಹೈನುಗಾರಿಕೆಯ ಮಾಹಿತಿಯನ್ನೂ ಒಳಗೊಂಡಿರುತ್ತದೆಯೆAದು ಹೇಳಿದರು.

ಸಿಡಿಲು ಅಥವಾ ಮಿಂಚಿನ ಮುನ್ಸೂಚನೆಯನ್ನು ತಿಳಿದುಕೊಳ್ಳಲು ಕೇಂದ್ರ ಸರಕಾರದ ಭೂ ವಿಜ್ಞಾನ ಸಚಿವಾಲಯದ ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (Iಟಿಜiಚಿಟಿ Iಟಿsಣiಣuಣe ಖಿಡಿoಠಿiಛಿಚಿಟ ಒeಣeoಡಿoಟogಥಿ) “ದಾಮಿನಿ” ಅನ್ನುವ ಮೊಬೈಲ ಅಪ್ಲಿಕೇಶನನ್ನು ಅಭಿವೃದ್ದಿಪಡಿಸಿದೆ. 

ಗುಡುಗು ಸಹಿತ ಮಿಂಚಿನ ಚಲನೆಯ ಬಗ್ಗೆ ಕನಿಷ್ಠ ೩೦ ರಿಂದ ೪೫ ನಿಮಿಷಗಳ ಮೊದಲು ಎಚ್ಚರಿಕೆ ನೀಡುತ್ತದೆ, ಸದ್ಯಕ್ಕೆ ಎಚ್ಚರಿಕೆಗಳನ್ನು ಹಿಂದಿ ಮತ್ತು ಇಂಗ್ಲೀಷನಲ್ಲಿ ದೊರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ದಾಮಿನಿ ಆ್ಯಪನಲ್ಲಿ ಗುಡುಗು ಮತ್ತು ಸಿಡಿಲಿನ ಕೆಲವು ಸಾಮಾನ್ಯ ಮಾಹಿತಿಯನ್ನೋಳಗೊಂಡಿದ್ದು ಈ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳ ಮಾಹಿತಿಯ ಪಟ್ಟಿ ಲಭ್ಯವಿರುತ್ತದೆ ಎಂದು ತಿಳಿಸಿದರು.

  ಕೃಷಿ ವಿಜ್ಞಾನ ಕೇಂದ್ರ, ಕವಡಿಮಟ್ಟಿಯ ಮುಖ್ಯಸ್ಥರಾದ ಡಾ. ಅಮರೇಶ ವೈ.ಎಸ್. ಅವರು ಮಾತನಡಿ ಹವಾಮಾನದ ವೈಪರಿತ್ಯದಿಂದ ಇತ್ತಿಚ್ಚಿನ ದಿನಗಳಲ್ಲಿ ಮಳೆಯು ಸಮನಾಗಿ ಹಂಚಿಕೆಯಾಗದಿರುವುದರಿAದ ನಾವು ಮೇಲಿಂದ ಮೇಲೆ ಅತೀವೃಷ್ಟಿ ಅಥವಾ ಅನಾವೃಷ್ಟಿ ಸಂದರ್ಭಗಳನ್ನು ಎದುರಿಸುತ್ತಿದ್ದೇವೆ. ರೈತರು ದೃತಿಗೆಡದೆ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಮಾಡಬೇಕೆಂದು ಅಭಿಪ್ರಾಯಪಟ್ಟರು.

 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...