ಸೋಂಕಿತರ ಪತ್ತೆಗೆ ನೋಡಲ್ ಅಧಿಕಾರಿಗಳ ನೇಮಕ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ.ಏ.26. (ಕ.ವಾ)-: ಕೋವಿಡ್ ಎರಡನೇ ಅಲೆ ಹರಡದಂತೆ ತಡೆಯಲು ಹಾಗೂ ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ದಿಂದ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚು ಪತ್ತೆಯಾಗುತ್ತೀರುವ ಹಿನ್ನೆಲೆಯಲ್ಲಿ ಶಹಾಪುರ ಮತ್ತು ವಡಗೇರಾ ತಾಲೂಕುಗಳಿಗೆ ಶಹಾಪುರು ಕ್ಷೇತ್ರ ಶಿಕ್ಷಣಾಧಿಕಾರಿಯಾದ ರುದ್ರಗೌಡ ಮೊಬೈಲ್ ನಂಬರ್: 9480695216, ಸುರಪುರ ಮತ್ತು ಹುಣಸಗಿ ತಾಲೂಕುಗಳಿಗೆ ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಮಹದೇವರೆಡ್ಡಿ ಮೊಬೈಲ್ ನಂಬರ್: 9480695217, ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳಿಗೆ ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಚಂದ್ರಕಾAತ ರೆಡ್ಡಿ ಮೊಬೈಲ್ ನಂಬರ್ : 9480695218 ಇವರನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ನೋಡಲ್ ಅಧಿಕಾರಿಗಳ ಜೊತೆಯಲ್ಲಿ ಶಿಕ್ಷಕರು ಸಹ ಕಾರ್ಯನಿರ್ವಹಿಸುವವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ