ಕೋವಿಡ್ ಎರಡನೆ ಅಲೆ ನಿಯಂತ್ರಣಕ್ಕೆ ಕಠಿಣ ಕ್ರಮವಹಿಸಿ
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.
ಯಾದಗಿರಿ,ಏ.12.(ಕ.ವಾ):- ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಮಾಡಲು ಜನರು ಸಹಕರಿಸಬೇಕು. ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜನರು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸಬೇಕು ಹಾಗೂ ಸಾರ್ವಜನಿಕರಿಗೆ ಕೋವಿಡ್ ಬಗ್ಗೆ ಇನ್ನಷ್ಟು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಆರ್‌ಟಿಪಿಸಿಆರ್ ವರದಿ ಕಡ್ಡಾಯ:
ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಇರುವುದರಿಂದ ಗಡಿ ಭಾಗದ ಪ್ರವೇಶ ಹಾಗೂ ನಿರ್ಗಮನ ಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ ದಿಂದ ಜಿಲ್ಲೆಗೆ ಬರುವವರು ಪ್ರವೇಶದ ಹಿಂದಿನ 72 ಗಂಟೆಗಳ ಅವಧಿಯಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಜಿಲ್ಲೆಯ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಅಧಿಕಾರಿಗಳು ಕೈಗೊಳ್ಳಬೇಕೆಂದು ಅವರು ಸೂಚಿಸಿದರು.
ಸಂಘ, ಸಂಸ್ಥೆಗಳ ಸಹಕಾರ ಅಗತ್ಯ:
ಕೋವಿಡ್ ಪ್ರಕರಣಗಳು ಹೆಚ್ಚಳವಾಗದಂತೆ ತಡೆಯಲು ವಿವಿಧ ಸಂಘ, ಸಂಸ್ಥೆಗಳು ಸಂಯೋಗದಲ್ಲಿ ಕ್ಯಾಂಪ್ ಗಳ ಮಾಡುವ ಮೂಲಕ ಲಸಿಕೆ ಬಗ್ಗೆ ಜಾಗೃತಿಯನ್ನು ಮೂಡಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ 45 ವರ್ಷಗಳ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಬಹುದು. ಹೀಗಾಗಿ ಜಿಲ್ಲೆಯ ಸಂಘ ಹಾಗೂ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ಅಗತ್ಯ ಸಹಕಾರ ನೀಡಬೇಕುಬೇಕೆಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್.ಸಿ.ಎಚ್. ಡಾ.ಸೂರ್ಯಪ್ರಕಾಶ ಕಂದಕೂರು, ಡಾ.ಭಾಗವಾನ್ ಅನ್ವರ್, ಡಾ.ಸಾಜಿದ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ