ದೇವರ ದಾಸಿಮಯ್ಯ ಜಯಂತಿ ಆಚರಣೆ
ಯಾದಗಿರಿ.ಏ.17 (ಕ.ವಾ):- ಕೋವಿಡ್-19 ಹಿನ್ನೆಲೆಯಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪುರ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಅಧಿಕಾರಿ ಡಾ.ಭಾಗವಾನ್ ಅನ್ವರ್ ನೇಕಾರ ಸಮಾಜದ ಜಿಲ್ಲಾಧ್ಯಕ್ಷರಾದ ಬಸವರಾಜ ಹುನಗುಂದ, ಜಿಲ್ಲಾ ಕಾರ್ಯದರ್ಶಿಯಾದ ಯಲ್ಲಪ್ಪ, ಮಹೇಶ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ