ಬುಧವಾರ, ಜೂನ್ 30, 2021

 ಮೌಲನಾ ಆಜಾದ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಯಾದಗಿರಿ,ಜೂನ್30(ಕರ್ನಾಟಕ ವಾರ್ತಾ)- ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣ, ಸುರಪುರದ (ರಂಗAಪೇಠ), ಗುರುಮಠಕಲ್, ಯಾದಗಿರಿ ಮತ್ತು ಹುಣಸಗಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಮಾದರಿ (ವಸತಿ ರಹಿತ ಆಂಗ್ಲ ಮಾಧ್ಯಮ) ಶಾಲೆಗಳಿಗೆ ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ  6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

 ಈ ಶಾಲೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ. 75% ರಷ್ಟು ಸ್ಥಾನಗಳನ್ನು (ಮುಸ್ಲಿಂ-77%, ಕ್ರಿಶ್ಚಿಯನ್-14%, ಜೈನ್-6%, ಬೌದ್ಧ-2%, ಸಿಖ್-1%) ಕಲ್ಪಿಸಲಾಗಿರುತ್ತದೆ. ಶೇ. 25% ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿಯೊಂದಿಗೆ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ,ಪುಸಕ್ತ, ಲೇಖನ ಸಾಮಾಗ್ರಿ, ಸಮವಸ್ತç, ಬ್ಯಾಗ್ ಸೇರಿದಂತೆ ಮತ್ತಿತರ ಸೌಲಭ್ಯ ನೀಡಲಾಗುವುದು.

ಪ್ರವೇಶ ಬಯಸುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಆಯಾ ಶಾಲೆಗಳ, ಮುಖ್ಯೋಪಾಧ್ಯಾಯರಲ್ಲಿ ಅಥವಾ ಸಂಬAಧ ಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ / ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಿAದ ಉಚಿತವಾಗಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು, ಭರ್ತಿಮಾಡಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 10ರೊಳಗಾಗಿ ಅರ್ಜಿ ಪಡೆದ ಸ್ಥಳಗಳಲ್ಲಿಯೇ ಸಲ್ಲಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಕೃಷ್ಣಾ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಮುನ್ಸೂಚನೆ

ಯಾದಗಿರಿ,ಜೂನ್30(ಕರ್ನಾಟಕ ವಾರ್ತಾ)- 2021-22ನೇ ಸಾಲಿನ ಮುಂಗಾರು ಹಂಗಾಮಿನ ಪ್ರವಾಹ ನಿಯಂತ್ರಣ ಕಾರ್ಯಕ್ಕೆ ಸನ್ನದ್ಧತೆಯಲ್ಲಿ ಇದ್ದು, ನಾರಾಯಣಪುರ ಜಲಾಶಯಕ್ಕೆ ಬರುವ ನಿರೀಕ್ಷಿತ ಒಳಹರಿವಿನ ಮಾಹಿತಿಯನ್ನು ಕೇಂದ್ರ ಜಲ ಆಯೋಗದ ಮೂಲಕ ಪಡೆಯಲಾಗುತ್ತಿದೆ ಎಂದು ನಾರಾಯಣಾಪೂರ ಆಣೆಕಟ್ಟು ವಿಭಾಗದ  ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಸ್ತುತ ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯಗಳ ಕೃಷ್ಣಾ ನದಿ ಪಾತ್ರದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವದರಿಂದ, ಆಲಮಟ್ಟಿ ಜಲಾಶಯಕ್ಕೆ ಪ್ರವಾಹದ ಒಳಹರಿವು ಜೂನ್ 22ರಂದು ಸಾಯಂಕಾಲ 6 ಗಂಟೆಗೆ 1,30,000ಕ್ಯೂಸೆಕ್ ಇದ್ದು, ಆಲಮಟ್ಟಿ ಜಲಾಶಯವು ಬಹುತೇಕ ಭರ್ತಿಯಾಗಿದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ 40000 ಕ್ಯೂಸೆಕ್ ನೀರು ಬಿಡುತ್ತಿರುವುದರಿಂದಾಗಿ 40000 ಕ್ಯೂಸೆಕ್‌ನಷ್ಟು ಒಳಹರಿವು ಬರುವ ಸಾಧ್ಯತೆಯಿದ್ದು, ಮುಖ್ಯ ಇಂಜಿನಿಯರರ ನಿರ್ದೇಶನದ ಮೇರೆಗೆ ನಾರಾಯಣಪೂರ ಆಣೆಕಟ್ಟೆಯಿಂದ ಕೃಷ್ಣಾನದಿಗೆ ಜುಲೈ 23ರಂದು ಅಪರಾಹ್ನದಿಂದ ಪ್ರವಾಹದ ನೀರನ್ನು ಹರಿಬಿಡುವ ಸಾಧ್ಯತೆ ಇದೆ. ಆದ್ದುದರಿಂದಾಗಿ ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ, ಜಾನುವಾರುಗಳಿಗೆ ಮುಂಜಾಗ್ರತಾ ಕ್ರಮವಾಗಿ ಜಾಗೃತಿಯಿಂದ ಇರಲು ಹಾಗೂ ಸುರಕ್ಷತೆಗಾಗಿ ನದಿ ಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗೃತೆ ವಹಿಸಬೇಕೆಂದು ಪ್ರಕಟಣೆ ತಿಳಿಸಿದೆ.





ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...