ಜಿಲ್ಲೆಯಲಿ 35 ಗ್ರಾಮ ಪಂಚಾಯತ್‌ಗಳಲ್ಲಿ ಮರಳು ಬ್ಲಾಕ್
:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್
ಯಾದಗಿರಿ;ಜೂನ್.30(ಕರ್ನಾಟಕ ವಾರ್ತಾ) ಯಾದಗಿರಿ ಜಿಲ್ಲೆಯಲ್ಲಿ 22 ಗ್ರಾಮ ಪಂಚಾಯತ್‌ಗಳಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಲಾಗಿದೆ, ಹೆಚ್ಚುವರಿಯಾಗಿ ಇನ್ನೂ 13 ಗ್ರಾಮ ಪಂಚಾಯತಗಳಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ತಿಳಿಸಿದ್ದಾರೆ.
ಅವರು ಬುಧವಾರ ಗಣಿ ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.ಜಿಲ್ಲೆಯ 22 ಗ್ರಾಮ ಪಂಚಾಯತ್‌ಗಳಲ್ಲಿ ಅಧಿಸೂಚನೆ ಹೊರಡಿಸಲಾಗಿರುವ ಮರಳು ಬ್ಲಾಕ್‌ಗಳಿಗೆ ಕಾರ್ಯಾದೇಶ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. 13ಹೆಚ್ಚುವರಿ ಬ್ಲಾಕ್‌ಗಳಿಗೆ ಮುಂದಿನವಾರ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಹಟ್ಟಿ ಚಿನ್ನದ ಗಣಿ ಸಂಸ್ಥೆಗೆ 6 ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಹೆಚ್ಚುವರಿಯಾಗಿ 5 ಬ್ಲಾಕ್‌ಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಮರಳು ಬ್ಲಾಕ್‌ಗಳಿಗೆ ಅರಣ್ಯ ಇಲಾಖೆಯ, ನಿರಾಕ್ಷೇಪಣೆ ಪತ್ರ ಯಾವುದೇ ಬಾಕಿ ಇಲ್ಲ ಜಿಲ್ಲೆಯಲ್ಲಿ ಮರಳು ಡ್ರೋನ್ ಸರ್ವೇ ನಡೆಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಸರಕಾರದ ವಸತಿ ಯೋಜನೆಗಳಿಗೆ ಆದ್ಯತೆಯಲ್ಲಿ ಮರಳು ಒದಗಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ