ಗುರುವಾರ, ಜುಲೈ 8, 2021

 ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ 

ಯಾದಗಿರಿ:ಜುಲೈ-08(ಕ.ವಾ): ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ  ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗಾಗಿ 1 ದಿನದ ಉದ್ಯಮಶೀಲತಾ ಅಭಿವೃದ್ಧಿ ತಿಳಿವಳಿಕೆ ಶಿಬಿರ ಹಾಗೂ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜುಲೈ/ಆಗಷ್ಟ್ ತಿಂಗಳಲ್ಲಿ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 

   

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. 

    

ಜಿಲ್ಲೆಯ 18 ವರ್ಷದಿಂದ 40 ವರ್ಷ ವಯಸ್ಸಿನ ಹಾಗೂ ಎಸ್.ಎಸ್.ಎಲ್.ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುತ್ತಿದೆ. ಅರ್ಜಿಯನ್ನು ಜುಲೈ 13ರೊಳಗಾಗಿ ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ 1ನೇ ಮಹಡಿ, ಎ ಬ್ಲಾಕ್.ನಂ.ಎ11 ಜಿಲ್ಲಾಡಳಿತ ಭವನ ಯಾದಗಿರಿ-585102 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9901914945/8147307003 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಯಾದಗಿರಿಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



14ರಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೋನ್-ಇನ್ ಕಾರ್ಯಕ್ರಮ

ಯಾದಗಿರಿ:ಜುಲೈ-08(ಕ.ವಾ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಮತ್ತು ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜುಲೈ 14 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

   ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ಯಾವುದಾದರೂ ದೂರು ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ದೂ.ಸಂ:08473-253730 ಕರೆ ಮಾಡಿ ಪರಿಹಾರ ಕಂಡುಕೊಳ್ಳುವAತೆ ಪ್ರಕಟಣೆ ತಿಳಿಸಿದೆ.


ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ:ಜುಲೈ-08(ಕ.ವಾ): ಜಿಲ್ಲೆಯ 04-ಶಿಶು ಅಭಿವೃದ್ಧಿ ಯೋಜನೆಗಳ  ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 07-ಅಂಗನವಾಡಿ ಕಾರ್ಯಕರ್ತೆಯರ   ಹಾಗೂ   30-ಅಂಗನವಾಡಿ   ಸಹಾಯಕಿಯರ  ಗೌರವಸೇವೆ  ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ9 ರಿಂದ ಆರಂಭವಾಗಲಿದ್ದು, ಆಗಷ್ಟ್ 07 ಕೊನೆಯ ದಿನವಾಗಿರುತ್ತದೆ. ಹುದ್ದೆಗಳು ಖಾಲಿ ಇರುವ ವಿವರ ಹಾಗೂ ಅರ್ಜಿ ಸಲ್ಲಿಸಲು ವೆಬ್‌ಸೈಟ್: ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ಭೇಟಿ ನೀಡಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಗಂಜ್ ಏರಿಯಾ, ಶಹಾಪೂರ-585214 ದೂ.ಸಂ : 08479-243254/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ,  ಹಳೆ ಕೋರ್ಟ ಕಟ್ಟಡ, ಜೈಲ್ ಹತ್ತಿರ, ಸುರಪುರ ದೂ.ಸಂ : 08443-256808. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಸ್ತಿçà ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ಯಾದಗಿರಿ ದೂ.ಸಂ : 08473-252265/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ, ಗುಮಡಲ ಕಾಂಪ್ಲೇಕ್ಸ, ಮೂತೂಟ್ ಫೈನಾನ್ಸ್ ಹಿಂದುಗಡೆ, ಗುರುಮಠಕಲ್ ದೂ.ಸಂ : 08473-225035 ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...