ಶುಕ್ರವಾರ, ಜುಲೈ 9, 2021

 ಮುಕ್ತ ವಿವಿ ಸಿಇಟಿ ತರಬೇತಿ

ಯಾದಗಿರಿ,ಜುಲೈ09(ಕ.ವಾ):- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್‌ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಆಸಕ್ತರು ಹೆಸರು ನೊಂದಾಯಿಸುವAತೆ  ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

ಅಭ್ಯರ್ಥಿಗಳು ಜುಲೈ 17 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2515944 ಗೆ  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಜುಲೈ 16ರಂದು ದಿಶಾ ಸಭೆ

ಯಾದಗಿರಿ,ಜುಲೈ09(ಕ.ವಾ):- ರಾಯಚೂರ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ ಅಧ್ಯಕ್ಷತೆಯಲ್ಲಿ ಜುಲೈ 16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ನಡೆಯಲಿದ್ದು, 2021 ರ ಜೂನ್ ತಿಂಗಳ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್ ವಿಷಯಕ್ಕೆ ಸಂಬAಧಿಸಿದAತೆ ಸಭೆ ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


12 ರಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಯಾದಗಿರಿ,ಜುಲೈ09(ಕ.ವಾ):- ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ನಿಯಮಿತದ ವತಿಯಿಂದ ಜುಲೈ 12 ರಿಂದ 19 ರವರೆಗೆ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದು,್ದ ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಯಾದಗಿರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

 ಜುಲೈ 12 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ üಗುರುಮಠಕಲ್‌ನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನಡೆಯಲಿದ್ದು, ಜುಲೈ 13 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಯಾದಗಿರಿಯ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

 ಜುಲೈ 14 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಶಹಾಪೂರದ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನಡೆಯಲಿದ್ದು, ಜುಲೈ 19 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಸುರಪುರದ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಮತ್ತು ಅಂದು ಮಧ್ಯಾಹ್ನ 2.30 ರಿಂದ 5 ಗಂಟೆಯ ವರೆಗೆ ಹುಣಸಿಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಹಾಜರಾಗಿ ವಿದ್ಯುತ್ ಸಮಸ್ಯೆಗಳಿಗೆ ಸಂಬAಧಿಸಿದ ಕುಂದು ಕೊರೆತೆಗಳನ್ನು ಪರಿಹರಿಸಿಕೊಳ್ಳಲು ಪ್ರಕಟಣೆ ತಿಳಿಸಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...