ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾಕ್ಕೆ ಚಾಲನೆ
ಯಾದಗಿರಿ,ಜುಲೈ16,(ಕ.ವಾ): “ವಿಪತ್ತಿನಲ್ಲಿಯೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟç ಮತ್ತು ಕುಟುಂಬಕ್ಕೆ ನಾಂದಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ರಾಯಚೂರ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರನಾಯಕ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಕಾಲೇಜು ಹಾಗೂ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಶಹಾಪೂರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್.ಸಿ.ಹೆಚ್.ಒ ಡಾ.ಲಕ್ಷಿö್ಮÃಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನ್ವಾರ್ ಮತ್ತು ವಿವಿಧ ಅಧಿಕಾರಿಗಳು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ