ಶುಕ್ರವಾರ, ಜುಲೈ 16, 2021




 ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಪ್ರಗತಿ ಪರಿಶೀಲನಾ ಸಭೆ

ಜಲಧಾರೆ: ನಿರಂತರ ನೀರು ಸಿಗುವಂತಾಗಲಿ

         : ಸಂಸದ ಅಮರೇಶ್ವರ ನಾಯಕ

ಯಾದಗಿರಿ,ಜುಲೈ16,(ಕ.ವಾ): ಜಲಧಾರೆ ಯೋಜನೆಯಡಿಯಲ್ಲಿ ಎಲ್ಲರಿಗೂ ವರ್ಷದ 12 ತಿಂಗಳು ನೀರು ಸಿಗುವಂತಾಗಬೇಕು ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಯಚೂರು ಲೋಕಸಭಾ ಸದ್ಯಸರಾದ ಅಮರೇಶ್ವರ ನಾಯಕ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

    ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳಲೊಂದಾದ ಜಲಧಾರೆ ಯೋಜನೆಯ ಮುಖ್ಯ ಉದ್ದೇಶವೆಂದರೆ ದೇಶದ ಜನರಿಗೆ ನದಿಗಳಿಂದ ನದಿಗಳಿಗೆ ಜೋಡಸಿ ವರ್ಷದ 12 ತಿಂಗಳು ನೀರು ಸಿಗುವಂತಾಗಬೇಕು. ಈಗಾಗಲೇ ಈ ಕಾರ್ಯಕ್ಕೆ  ರಾಯಚೂರು ಜಿಲ್ಲೆಯಲ್ಲಿ ಅನುಮೋದನೆ ದೊರೆತಿದ್ದು, ಈ ಜಿಲ್ಲೆಯಿಂದಲೂ ಪ್ರಸ್ತಾವನೆ ಸಲ್ಲಿಸುವಂತೆ ಅವರು ತಿಳಿಸಿದರು.

    ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಲ್ಲಿ 75ಸಾವಿರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿದ್ದು,ಅದರಲ್ಲಿ 30ಸಾವಿರ ಕಿಟ್‌ಗಳನ್ನು ಕಾರ್ಮಿಕರಿಗೆ ವ್ಯವಸ್ಥಿತವಾಗಿ ತಲುಪಿಸಲಾಗಿದೆ.ಮತ್ತು ಹೆಚ್ಚಿನ ಕಿಟ್‌ಗಳಿಗೆ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.

    ಕೇಂದ್ರ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಿ ಇದರ ಸದುಪಯೋಗಪಡಿಸಿಕೊಳ್ಳಲು ಅಧಿಕಾರಿಗಳು ನೆರವಾಗಬೇಕು. ಅಲ್ಲದೇ ಅಧಿಕಾರಿಗಳು ಮಾಹಿತಿಯನ್ನು ಸಮರ್ಪಕವಾಗಿ ನೀಡಬೇಕು ಎಂದು ಅವರು ಸೂಚಿಸಿದರು.  

  ಶಹಾಪೂರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಮಾತನಾಡಿ,  ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ತ್ವರಿತವಾಗಿ ನೀಡಬೇಕು ಎಂದರು. ಇದಕ್ಕೆ ದ್ವನಿಗೂಡಿಸಿದ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕುಂಟುನೆಪಗಳನ್ನು ಹೇಳದೆ ನೊಂದವರ ಕಷ್ಟಕ್ಕೆ ಸ್ಪಂದಿಸಬೇಕೆAದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಮಾತನಾಡಿ, ಪರಿಹಾರ ನೀಡಲು ಯಾವುದೇ ವಿಳಂಬ ಮಾಡುವುದಿಲ್ಲ ಎಂದು ಸಮಜಾಯಿಸಿ ನೀಡಿದರು.

    ಗ್ರಾ.ಪಂ ವ್ಯಾಪ್ತಿಯಲ್ಲಿನ ಕೆರೆಗಳನ್ನು ಹೂಳೆತ್ತುವ ಕಾರ್ಯವನ್ನು ಆರಂಭಿಸುವAತೆ ಮತ್ತು ದುರಸ್ತಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು ರಿಪೇರಿಗೊಳಿಸಿ ಅನುವು ಮಾಡಿಕೊಂಡಬೇಕೆAದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

        ಜಿ.ಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ ಈ ಬಗ್ಗೆ ಗಮನಹರಿಸಿ 15 ದಿನಗೊಳಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. 

       ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಪ್ರಾಕೃತಿಕ ಅನಾಹುತ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಜನರ ನೆರವಿಗೆ ದಾವಿಸಬೇಕು. ಸಣ್ಣ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ  ನರೇಗಾ ಯೋಜನೆಯಲ್ಲಿ ಒತ್ತು ನೀಡಬೇಕೆಂದು ಹೇಳಿದರು.

    ಸಂಸದ ಅಮರೇಶ್ವರ ನಾಯಕ ಮಾತನಾಡಿ, ಕಾಲುವೆ ಗೇಟ್‌ಗಳ ರಿಪೇರಿ ಸೇರಿದಂತೆ ಇನ್ನಿತರ ಕಾರ್ಯಗಳನ್ನು ಕಾಲುವೆಗಳಿಗೆ ನೀರು ಬಿಡುಗಡೆಗೆ ಮುನ್ನ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಕೃಷಿ ಇಲಾಖೆ, ಆಹಾರ ಇಲಾಖೆ ಸೇರಿದಂತೆ ಉಳಿದ ಇಲಾಖೆಗಳಲ್ಲಿನ ಪ್ರಗತಿಯನ್ನು ಅವರು ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ,ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...