ಗುರುವಾರ, ಜುಲೈ 15, 2021

 ಎಸ್.ಎಸ್.ಎಲ್.ಸಿ ಪರೀಕ್ಷೆ : ಜಿಲ್ಲೆಯಲ್ಲಿ 17749 ವಿದ್ಯಾರ್ಥಿಗಳು

ಯಾದಗಿರಿ.ಜುಲೈ.15(ಕ.ವಾ): 2021 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಬರುವ ಜುಲೈ 19 ಹಾಗೂ 22 ರಂದು ನಡೆಯಲಿವೆ. ಕೋವಿಡ್ ಸುರಕ್ಷತಾ ಕ್ರಮಗಳ ಪಾಲನೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಜಿಲ್ಲೆಯಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು 17749 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಪ್ರತಿಯೊಂದು ಪರೀಕ್ಷಾ ಬ್ಲಾಕಿನಲ್ಲಿ 12 ವಿದ್ಯಾರ್ಥಿಗಳನ್ನು ಪರಸ್ಪರ 6 ಅಡಿ ಅಂತರದೊAದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.


122 ಸರ್ಕಾರಿ ಪ್ರೌಢ ಶಾಲೆ, 16 ಸರಕಾರಿ ವಸತಿ ಪ್ರೌಢ ಶಾಲೆ,  17 ಅನುದಾನಿತ ಹಾಗೂ 76 ಖಾಸಗಿ ಪ್ರೌಢ ಶಾಲೆಗಳು ಸೇರಿ ಒಟ್ಟು 231 ಶಾಲೆಗಳಿಂದ 14060 ವಿದ್ಯಾರ್ಥಿಗಳು ಮತ್ತು 812 ಖಾಸಗಿ ಅಭ್ಯರ್ಥಿಗಳು, 2549 ಪುನಾರವರ್ತಿತ ಅಭ್ಯರ್ಥಿಗಳು, 327 ಖಾಸಗಿ ಪುನಾರವರ್ತಿತ ಅಭ್ಯರ್ಥಿಗಳು ಸೇರಿ 17749 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಲಿದ್ದಾರೆ. ನಗರ ಪ್ರದೇಶಗಳಲ್ಲಿ 51 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 41 ಸೇರಿ ಒಟ್ಟು 92 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷಾ ಕಾರ್ಯಕ್ಕೆ 2400 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಹಾಯ ಕೇಂದ್ರ (ಹೆಲ್ಪ್ ಡೆಸ್ಕ್) ಸ್ಥಾಪಿಸಲಾಗುವುದು ಅಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ದೈಹಿಕ ಶಿಕ್ಷಣ ಶಿಕ್ಷಕರು, ಎನ್.ಸಿ.ಸಿ., ಸ್ಕೌಟ್ಸ್, ಗೈಡ್ಸ್ ಸ್ವಯಂ ಸೇವಕರು ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀರ‍್ಗಳೊಂದಿಗೆ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಎಲ್ಲರಿಗೂ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ನೀಡಲಾಗುವುದು.


ಬೆಳಿಗ್ಗೆ 9 ಗಂಟೆಗೆ ಹಾಜರಿರಲು ಸೂಚನೆ:  ಜುಲೈ 19, ಸೋಮವಾರ ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಹಾಗೂ ಸಂಗೀತ ವಿಷಯಗಳ ಪರೀಕ್ಷೆಗಳು,  ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿದೆ ಪರೀಕ್ಷೆಗಳು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1-30 ರ ವರೆಗೆ ನಡೆಯಲಿವೆ ಆದರೆ ಆರೋಗ್ಯ ತಪಾಸಣೆ, ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಬೆಳಿಗ್ಗೆ 8.30 ಗಂಟೆಗೆ ಪರೀಕ್ಷಾ ಕೇಂದ್ರ ತೆರೆಯಲಿದೆ.


ವಲಸೆ ವಿದ್ಯಾರ್ಥಿಗಳು:  ಈ ಬಾರಿ ಜಿಲ್ಲೆಯಲ್ಲಿ 369 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ  ಬೇರೆ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ವಲಸೆ ಬಂದಿರುವ 369 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. 

   

ವಿವಿಧ ರೋಗಗಳ ಲಕ್ಷಣವಿರುವ  ವಿದ್ಯಾರ್ಥಿಗಳಿಗೆ  ಪರೀಕ್ಷೆ ಬರೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಹೆಚ್ಚುವರಿ ಕೊಠಡಿಗಳನ್ನು ಸಿದ್ದಪಡಿಸಲಾಗಿದೆ.ಕೋವಿಡ್ ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಪ್ರತಿ ತಾಲೂಕಿನಲ್ಲಿ ಒಂದು ಪರೀಕ್ಷಾ ಕೇಂದ್ರ ಸಿದ್ದಗೊಳಿಸಲಾಗಿದ್ದು,ಅಂತಹ ವಿದ್ಯಾಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲು ತಾಲೂಕಿಗೊಂದು ಆಂಬ್ಯುಲೆನ್ಸ್  ಸಜ್ಜುಗೊಳಿಸಲಾಗಿದೆ. ತಾಲೂಕಿಗೊಂದು ಜಿಲ್ಲಾ ಜಾಗೃತ ತಂಡ ರಚಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ 2400 ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ 1ನೇ ಡೋಸ್ ನೀಡಲಾಗಿದೆ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...