ಕಾನೂನು ಪದವೀಧರರ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ;ಜುಲೈ-5(ಕ.ವಾ): 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದೂಳಿದ ವರ್ಗಗಳ ಕಾನೂನು ಪದವೀಧರರಿಗೆ ಸರ್ಕಾರಿ ವಕೀಲರ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ಪದವಿ ಪಡೆದ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳು 30ವರ್ಷದೊಳಗಿನವಾರಗಿರಬೇಕು ಮತ್ತು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50ಲಕ್ಷರೂ ಮೀರಿರಬಾರದು, ಪ್ರವರ್ಗ-2ಎ, 3ಎ, 3ಬಿ ಅಭ್ಯರ್ಥಿಗಳಿಗೆ 2.50 ಲಕ್ಷ ರೂ ನಿಗದಿಪಡಿಸಲಾಗಿದ್ದು,ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಭರ್ತಿಮಾಡಿ ಜುಲೈ 19ರೊಳಗೆಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ಕಾಲ ತರಬೇತಿಯೊಂದಿಗೆ ಪ್ರತಿ ತಿಂಗಳಿಗೆ 4000ರೂ ತರಬೇತಿ ಭತ್ಯೆ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ: 08473-253742ಗೆ ಸಂಪರ್ಕಿಸಲು ಕೋರಿದೆ.
ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ
ಯಾದಗಿರಿ;ಜುಲೈ-5(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ್ರಯುಕ್ತ ಸರಕಾರ ಘೋಷಿಸಿರುವ ರೂ.2,000/-ಗಳ ಪರಿಹಾರ ಧನ ಪಡೆಯಲು ಜುಲೈ 31 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಯಾದಗಿರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರಗಳು, ಹಮಾಲರು,ಚಿಂದಿ ಆಯುವರು,ಕುಂಬಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ರು, ಕಮ್ಮಾರರು ಮತ್ತು ಗೃಹಕಾರ್ಮಿಕರು ಈ ವರ್ಗದ ಅರ್ಹ ಫಲಾನುಭವಿಗಳು ಪರಿಹಾರ ಧನ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಉದ್ಯೊಗ ದೃಡೀಕರಣ ಪತ್ರದಲ್ಲಿ ಮನೆ ಕಾರ್ಮಿಕರಿಗೆ ಸಂಬAದಿಸಿದAತೆ ಮಾತ್ರ ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಅವರು ಕಾರ್ಯನಿರ್ವಹಿಸುತ್ತಿರುವ ಮಾಲೀಕರಿಂದ ಸಹ ಸಹಿ ಮಾಡಿಸಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಇದಕ್ಕಾಗಿ ಪ್ರತ್ಯೇಕ ನಮೂನೆಯ ಉದ್ಯೋಗ ಪ್ರಮಾಣ ಪತ್ರವನ್ನು ಹೊರಡಿಸಲಾಗಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದನ್ನು ಐಚ್ಚಿಕಗೊಳಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214ಗೆ ಅಥವಾ ಕಾರ್ಮಿಕ ಅಧಿಕಾರಿಯವರ ಕಚೇರಿ ಯಾದಗಿರಿ ದೂರವಾಣಿ: 08473-253727 ಸಂಪರ್ಕಿಸಲು ತಿಳಿಸಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ