ಗ್ರಂಥಾಲಯಗಳಿಗೆ ಪುಸ್ತಕಗಳ ಆಯ್ಕೆ: ಅರ್ಜಿ ಆಹ್ವಾನ
ಯಾದಗಿರಿ,ಜುಲೈ.02.(ಕ.ವಾ.)-ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿAದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2021ರ ಜುಲೈ 31ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಚೇರಿಗೆ 2021ರ ಜುಲೈ 31ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಯಾವುದೇ ಪುಸ್ತಕಗಳನ್ನು ಆಯ್ಕೆಗೆ ಸ್ವೀಕರಿಸಲಾಗುವುದಿಲ್ಲ.
ಪುಸ್ತಕಗಳು 2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರು ಮುದ್ರಣವಾದಲ್ಲಿ ಹತ್ತು ವರ್ಷಗಳ ಅಂತರ ಇರಬೇಕು. ಈ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ನಿಗದಿತ ಅರ್ಜಿ ನಮೂನೆ, ಹಾಗೂ ನಿಬಂಧನೆ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಿತಿತಿ.ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.
ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
ಯಾದಗಿರಿ ಜು.2.(ಕ.ವಾ)-ನಾಲವಾರ ರೈಲ್ವೆ ನಿಲ್ದಾಣದ ಪ್ಲಾಟಫಾರಂ-2ರಲ್ಲಿ ಜೂನ್ 25ರಂದು ಸುಮಾರು 65 ವರ್ಷದ ಅಪರಿಚಿತ (ಪುರುಷ) ವ್ಯಕ್ತಿಯ ಮೃತ ದೇಹವು ಪತ್ತೆಯಾಗಿದ್ದು, ಈವರೆಗೆ ಮೃತನ ವಾರಸುದಾರರು ಯಾರೂ ಪತ್ತೆಯಾಗಿರುವುದಿಲ್ಲ.
ರಾಯಚೂರು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಮೃತನು, ಉದ್ದನೆಯ ಮೂಗು, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಮತ್ತು 5 ಅಡಿ 4 ಇಂಚು ಎತ್ತರ ಇದ್ದು, ತಲೆಯಲ್ಲಿ ಒಂದೂವರೆ ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಕೂದಲು,ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ.
ಮೃತ ವ್ಯಕ್ತಿಯು ಒಂದು ನೀಲಿ ಮತ್ತು ಬಿಳಿಯ ಗೆರುಗಳ್ಳುಳ ಹಾಫ್ ಟೀ ಶರ್ಟ್, ಒಂದು ನೀಲಿ ಬಣ್ಣದ ಲುಂಗಿ, ಕಾವಿ ಬಣ್ಣದ ಮೂರು ಲುಂಗಿ, ಒಂದು ಮಾಸಿದ ಕೆಂಪು ಮತ್ತು ನೀಲಿ ಮಿಶ್ರಿತ ಹಾಫ್ ಶರ್ಟ್, ಒಂದು ಸ್ಟೀಲ್ ಗ್ಲಾಸ್,ಒಂದು ಕಪ್ಪು ಬಣ್ಣದ ರಗ್ಗು ಹೊಂದಿರುತ್ತಾರೆ.
ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ರಾಯಚೂರು ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಇವರನ್ನು ಅಥವಾ ಠಾಣೆಯ ದೂರವಾಣಿ ಸಂಖ್ಯೆ 08532-231716, ಮೊಬೈಲ್ ಸಂಖ್ಯೆ 948080211ಗೆ ಅಥವಾ ರೇಲ್ವೆ ಪೋಲಿಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ.080-22871291 ಸಂಪರ್ಕಿಸಲು ಕೋರಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ