ಮಂಗಳವಾರ, ಜುಲೈ 20, 2021

 ಜು.28ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ, ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿಗಳಾದ ಮಹಮ್ಮದ್ ನಜೀರ್ ಅವರು ಜು.28ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅವರು ಜುಲೈ 28ರಂದು ಬೆಳಗ್ಗೆ 9 ಗಂಟೆಗೆ ಕಲಬುರ್ಗಿಯಿಂದ ಯಾದಗಿರಿ ನಗರಕ್ಕೆ ಆಗಮಿಸುವರು. ನಂತರ 10 ಗಂಟೆಗೆ ತಹಸೀಲ್ದಾರ್ ಮತ್ತು ಮುಖ್ಯಾಧಿಕಾರಿಗಳೊಂದಿಗೆ ಅಲ್ಪಸಂಖ್ಯಾತರ ಮೊಹಲ್ಲಾಗಳು ಪರಿವೀಕ್ಷಣೆ ಹಾಗೂ  ಜಿಲ್ಲೆಯ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವರು. 

 

  ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವರು. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಸೇರಿದಂತೆ ಇನ್ನಿತರ ವಿಷಯದ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸುವರು. ಸಾಯಂಕಾಲ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ನಂತರ ಸಾಯಂಕಾಲ 6 ಗಂಟೆಗೆ ನಗರದ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ ಜುಲೈ 29ರ ಬೆಳಿಗ್ಗೆ 8 ಗಂಟೆಗೆ ರಾಯಚೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



 ಹತ್ತಿಕುಣಿ ಆಣೆಕಟ್ಟಿನಿಂದ ನದಿಗೆ ನೀರು: ಮುಂಜಾಗ್ರತೆ ವಹಿಸಲು ಸೂಚನೆ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಹತ್ತಿಕುಣಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಹೆಚ್ಚಾಗುತ್ತಿದ್ದು, ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಮೂಲಕ ನದಿಗೆ ಹರಿಬಿಡಲಾಗುವುದು ಎಂದು ನೀರಾವರಿ ನಿಗಮ ನಿಯಮಿತ ಬೆಣ್ಣೆತೋರ ಯೋಜನೆ ವಿಭಾಗದ ನಂ.4 ಹೆಬ್ಬಾಳ, ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

 

ಆದ್ದರಿಂದ ಹತ್ತಿಕುಣಿ ನದಿಯ ಸುತ್ತ ಮುತ್ತಲಿನ ಗ್ರಾಮಗಳಿಗೆ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ನದಿಯಲ್ಲಿ ಈಜುವುದಾಗಲಿ,ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಕಾರಣಗಳಿಗಾಗಿ ನದಿಗೆ ಇಳಿಯಬಾರದು.ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬAಧಪಟ್ಟ ಆಸ್ತಿಗಳಿದ್ದಲ್ಲಿ, ಮುಂಜಾಗ್ರತೆಯಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.







ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ  ಇಲಾಖೆ  ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ  ಜುಲೈ 22ರಂದು ಶಹಾಪೂರ ನಗರಸಭೆ ಸಭಾಂಗಣದಲ್ಲಿ 1 ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತಿದ್ದು, ನಿರಿದ್ಯೋಗವಂತರು ಇದರ ಲಾಭ ಪಡೆದುಕೊಳ್ಳುವಂತೆ  ಅವರು ತಿಳಿಸಿದ್ದಾರೆ.

18 ರಿಂದ 40 ವರ್ಷ ವಯಸ್ಸಿನೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸಿಡಾಕ್- ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ, ಜಿಲ್ಲಾಡಳಿತ ಭವನ ಯಾದಗಿರಿ ಈ ವಿಳಾಸದಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸ: 9901914945/8147307003 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...