ಗುರುವಾರ, ಜುಲೈ 22, 2021

 ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): 2021-22ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮದ ಅನ್ವಯ ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿAದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

       ಅರ್ಜಿ ಸಲ್ಲಿಸುವ ಸಂಸ್ಥೆಗಳು/ಟ್ರಸ್ಟ್ಗಳು ಇದೇ ಜುಲೈ 26ರ ಸಂಜೆ ಒಳಗಾಗಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ  ವೆಬ್‌ಸೈಟ್ ತಿತಿತಿ.ಠಿue.ಞಚಿಡಿ.ಟಿiಛಿ.iಟಿ ಮೂಲಕ ಪಡೆಯಬಹುದು.


ಜು.26ರಂದು ಲಸಿಕಾ ಅಭಿಯಾನ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): ಯಾದಗಿರಿ ತಾಲೂಕು ಸರಕಾರಿ ಅನುದಾನಿತ ಹಾಗೂ ಖಾಸಗಿ ಐ.ಟಿ.ಐ ಕಾಲೇಜುಗಳ ಸಹಭಾಗಿತ್ವದಲ್ಲಿ ಜುಲೈ 26ರಂದು ಬೆಳಿಗ್ಗೆ 10 ಗಂಟೆಗೆ ಜವಾಹರ ಐ.ಟಿ.ಐ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರೈತರಿಗೆ ಬೆಳೆ ವಿಮೆ ಮಾಡಿಸಲು  ಮನವಿ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆಗಳಾದ ಹೆಸರು (ಮಳೆಯಾಶ್ರಿತ), ತೊಗರಿ (ನೀರಾವರಿ), ಹತ್ತಿ (ಮಳೆಯಾಶ್ರಿತ & ನೀರಾವರಿ), ಉದ್ದು (ಮಳೆಯಾಶ್ರಿತ), ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 31 ಮತ್ತು ತೊಗರಿ (ಮಳೆಯಾಶ್ರಿತ) ಭತ್ತ (ನೀರಾವರಿ) ಬೆಳೆಗಳಿಗೆ ಆಗಸ್ಟ್ 16 ಹಾಗೂ ಭತ್ತ ನೀರಾವರಿ ಬೆಳೆಗೆಳಿಗೆ  ಆಗಸ್ಟ್ 31 ಕೊನೆಯ ದಿನವಾಗಿದೆ.    

         ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದ್ದು, ಬೆಳೆ ವಿಮೆ ಮಾಡಿಸುವಂತೆ ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರಾದ ಶ್ವೇತಾ ತಾಳೆಮರದ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. 

      ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸಂಭವಿಸಿದ ಸಂದರ್ಭದಲ್ಲಿ ಮತ್ತು ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ ಹಾಗೂ ಗುಡುಗು ಮಿಂಚಿನಿAದ ಬೆಳೆಗಳು ನಷ್ಟವಾದಲ್ಲಿ ಬೆಳೆ ವಿಮೆಯು ನೆರವಿಗೆ ಬರಲಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದ್ದಾರೆ. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...