ಅಲ್ಪಸಂಖ್ಯಾತರಿAದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಯಾದಗಿರಿ.ಆಗಸ್ಟ್.3(ಕ.ವಾ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ಹಾಗೂ ಡಿ.ಎಡ್ ಓದುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿವೇತನದ ಅರ್ಜಿಗಳನ್ನು ಸಂಬAಧಪಟ್ಟ ಜಿಲ್ಲಾ/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲತತ್ತಿಸಿ, ದ್ವೀಪತ್ರಿಗಳಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ವಾರ್ಷಿಕ ರೂ.25,000 (ಗರಿಷ್ಠ 2 ವರ್ಷಗಳಿಗೆ ಶೈಕ್ಷಣಿಕ) ಅವಧಿಯಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dom.karnataka.gov.in ಅಥವಾ www.dom.karnataka.gov.in/yadagiri/public ನಿಂದ ಪಡೆದು ಕೊಳ್ಳಬಹುದಾಗಿದ್ದು, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಇಲಾಖೆಯ ದೂ.ಸಂ:08473-253235, 9731090143 ಗೆ ಸಂಪರ್ಕಿಸಲು ಕೋರಿದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ