ಉದ್ಯೋಗ ಖಾತ್ರಿ ಯೋಜನೆ: ರೈತ ಬಂಧು ಅಭಿಯಾನ
ಯಾದಗಿರಿ.ಆಗಸ್ಟ್.3(ಕ.ವಾ): ಮಹಾತ್ಮ ಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತ ಬಂಧು ಅಭಿಯಾನ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರವರೆಗೆ 2 ತಿಂಗಳ ಕಾಲ ರೈತರ ಎರೆಹುಳ ಗೊಬ್ಬರ ತಯಾರಿಕೆ ಮತ್ತು ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ25 ಎರೆಹುಳ ತೊಟ್ಟಿಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದೇಶಗಳು: ಆರ್ಥಿಕ ಸ್ಥಿರತೆ,ತ್ಯಾಜ್ಯ ವಸ್ತುಗಳ ಸದ್ಭಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಿ ಸ್ವಚ್ಛ ಪರಿಸರ ಸೃಷ್ಠಿಸಲು ಅನುಕೂಲ,ರೈತರಲ್ಲಿ ಎರೆಹುಳ ಗೊಬ್ಬರ ಉತ್ಪಾದನೆ,ಅದರ ಉಪಯುಕ್ತತತೆ ಹಾಗೂ ಸಾವಯವ ಕೃಷಿ ಉತ್ತೇಜಿಸುವ ಬಗ್ಗೆ ಜಾಗೃತಿ,ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಹಾಗೂ ರೈತರಿಗೆ ಎರೆಹುಳ ಗೊಬ್ಬರದ ಉತ್ಪಾದನೆ ಹಾಗೂ ಉದ್ಯಮಶೀಲತೆ ಅವಕಾಶಗಳ ಬಗ್ಗೆ ಪೂರಕ ಮಾಹಿತಿ ನೀಡಿ ಪ್ರೋತ್ಸಾಹಿಸುವುದು.
ಫಲಾನುಭವಿಗಳ ವರ್ಗ: ವೈಯಕ್ತಿಕ ಫಲಾನುಭವಿಗಳು,ಸ್ವಸಹಾಯ ಗುಂಪು,ರೈತ ಉತ್ಪಾದಕ ಸಂಸ್ಥೆಗಳು,ಸಮುದಾಯ ಘಟಕ ನರೇಗಾ ಯೋಜನೆಯಡಿ ಜಾನುವಾರು ಶೆಡ್ ನಿರ್ಮಿಸಿಕೊಂಡಿರುವ ಹಾಗೂ ಬಯೋಗ್ಯಾಸ ಘಟಕಗಳ ಫಲಾನುಭವಿಗಳಿಗೆ ಕಡ್ಡಾಯವಾಗಿ ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು..
ಅರ್ಹ ಫಲಾನುಭವಿಗಳು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,ಅಲೆಮಾರಿ ಜನಗಳು, ಬುಡಕಟ್ಟು ಜನಾಂಗ,ಬಡತನರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು,ಸ್ರಿö್ತÃ ಪ್ರಧಾನ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆಯ ಫಲಾನುಭವಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮ 2006(2007 ರ2)ರಡಿಯ ಫಲಾನುಭವಿಗಳು
ಅನುಮೋದಿತ ಎರೆಹುಳು ಗೊಬ್ಬರ ತಯಾರಿಕೆ ಮಾದರಿಗಳು: ಎರೆಹುಳು ಗೊಬ್ಬರ ತಯಾರಿಕೆ ತೊಟ್ಟಿ ವಿಧಾನವು ಹೆಚ್ಚು ಬಳಕೆಯಲ್ಲಿರುವುದರಿಂದ,ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2 ಎರೆಹುಳು ಘಟಕದ ತೊಟ್ಟಿಯನ್ನು ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ