ಗುರುವಾರ, ಸೆಪ್ಟೆಂಬರ್ 16, 2021

 ಶಹಾಪುರ: ನಿರಾಶ್ರಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ೨೦೨೧-೨೨ನೇ ಸಾಲಿನ ಡೇ-ನಲ್ಮ್ ಅಭಿಯಾನದ ನಗರ ನಿರ್ಗತಿಕರ ವಸತಿ ರಹಿತ ಉಪ ಘಟಕದಡಿ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರನ್ನು ಎನ್‌ಜಿಓ(ಟಿgo) ಮೂಲಕ ಸಮೀಕ್ಷೆ ಕೈಗೊಳ್ಳಬೇಕಾಗಿದೆ. ಸೆಪ್ಟೆಂಬರ್ ೩೧ರ ಒಳಗಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅರ್ಹತೆ ಹೊಂದಿದ ನೋಂದಾಯಿತ ಸರ್ಕಾರೇತರ ಸಂಸ್ಥೆ/ನಗರ ಪ್ರದೇಶದ ಒಕ್ಕೂಟಗಳು ಸೆಪ್ಟೆಂಬರ್೨೦ ರೊಳಗಾಗಿ ತಮ್ಮ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಶಹಾಪುರ ನಗರಸಭೆ ಪೌರಾಯುಕ್ತರು ಪ್ರಕಟಣೆಗೆ ತಿಳಿಸಿದ್ದಾರೆ.


ಸರ್ಕಾರದ ಸುತ್ತೋಲೆ ಪ್ರಕಾರ ಸಮೀಕ್ಷೆ ಕೈಗೊಳ್ಳುವುದು, ಸರ್ಕಾರ ನಿಗದಿ ಪಡಿಸಿದ ದರದಂತೆ ಸಮೀಕ್ಷೆ ಅನುದಾನ ಬಿಡುಗಡೆ ಮಾಡಲಾಗುತ್ತದೆ, ಸದರಿ ಸಂಸ್ಥೆಯವರು ಈಗಾಗಲೇ ಬೇರೆ ಬೇರೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ವರದಿ ಲಗತ್ತಿಸಬೆಕು ಸಂಸ್ಥೆಯ ಪ್ರಸಕ್ತ ಸಾಲಿನ ನೊಂದಣಿ ಪತ್ರ ಲಗತ್ತಿಸತಕ್ಕದ್ದು.ಈ ಮೇಲಿನ ಎಲ್ಲಾ ಷರತ್ತುಗಳಿಗೆ ಅನುಗುಣವಾಗಿ ಅರ್ಜಿಗಳನ್ನು ಸಲ್ಲಿಸಬಹುದು.

************************************


ಡೆಂಗ್ಯೂ/ಚಿಕ್ಕನಗೂನ್ಯ ಜ್ವರ ತಡೆಯುವ ಸಲುವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಅಳವಡಿಕೆಗೆ ಸೂಚನೆ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿರುವುದರಿAದ ಜಿಲ್ಲೆಯಾದ್ಯಂತ ಡೆಂಗ್ಯೂ/ಚಿಕ್ಕನಗೂನ್ಯ ಜ್ವರ ಬರದಂತೆ ಮುಂಜಾಗ್ರತೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ಪ್ರಕಟಣೆಗೆ ತಿಳಿಸಿದ್ದಾರೆ.


ಡೆಂಗ್ಯೂ ರೋಗವು ಏಡೀಸ್ ಈಜೀಪ್ಪಿ ಎಂಬ ಸೊಳ್ಳೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೂಳ್ಳೆಯು ದಿನದಲ್ಲಿ ಮಾತ್ರ ಕಚ್ಚುತ್ತದೆ. ಈ ಸೂಳ್ಳೆಯು ಸ್ವಚ್ಛವಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿಯನ್ನು ಬೆಳಸುತ್ತದೆ. ೭ ದಿನದಲ್ಲಿ ಮೊಟ್ಟೆಯಿಂದ ಮರಿ ಸೊಳ್ಳೆಯಾಗಿ ಪರಿವರ್ತನೆಗೊಳ್ಳುತ್ತದೆ.ಆದ ಕಾರಣ ಪ್ರತಿ    ೩-೪ದಿನಗಳಿಗೊಮ್ಮೆ  ನೀರನ್ನು ಸಂಗ್ರಹಿಸುವ ತೊಟ್ಟೆ, ಬ್ಯಾರಲ್ ಪಾತ್ರೆಗಳನ್ನು ಸ್ವಚ್ಛವಾಗಿ ತಿಕ್ಕಿ ತೊಳೆದು ಬಿಸಿಲಿನಲ್ಲಿ ಒಣಗಿಸಿ ನೀರನ್ನು ತುಂಬಬೇಕು. ಏರ್‌ಕುಲರ್‌ನಲ್ಲಿ ಸಂಗ್ರಹವಾದ ನೀರು ಮತ್ತು ಹೂವಿನ ಕುಂಡಲಿಗಳಲ್ಲಿ ಸಂಗ್ರಹಿಸಿದ ನೀರನ್ನು ಕೂಡ ಪ್ರತಿ ೩-೪ ದಿನಗಳಿಗೊಮ್ಮೆ ಬದಲಾಯಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. 


ರೋಗದ ಲಕ್ಷಣ: ತೀವ್ರ ತಲೆ ನೋವು, ಕಣ್ಣು ನೋವು, ಕೀಲು ಮತ್ತು ಸ್ನಾಯು ನೋವು, ಹಸಿವಾಗದೇ ಇರುವುದು, ತುರಿಕೆ ಹಾಗೂ ತೀವ್ರ ಜ್ವರ ಬರುತ್ತವೆ.

ಅನುಸರಿಸಬೇಕಾದ ಕ್ರಮಗಳು: ಡೆಂಗ್ಯೂ ರೋಗದ ಕಲ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ಸಂಪರ್ಕಿಸಬೇಕು, ಹೆಚ್ಚಿನ ವಿಶ್ರಾಂತಿಯಲ್ಲಿರಬೇಕು, ನೀರಿನ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಪದಾರ್ಥಗಳನ್ನು ಸೇವಿಸಬೇಕು.

ಡೆಂಗ್ಯೂ ಜ್ವರ ಹರಡದಂತೆ ತಡೆಗಟ್ಟುವ ಕ್ರಮಗಳು: ಸೊಳ್ಳೆಯು ಕಚ್ಚದಂತೆ ಉದ್ದನೆಯ ತೋಳಿನ ಷರ್ಟ ಮತ್ತು ಪ್ಯಾಂಟ್‌ಗಳನ್ನು ಧರಿಸುವುದು ಹಾಗೂ ಸೊಳ್ಳೆ ಬತ್ತಿಯನ್ನು ಉಪಯೋಗಿಸಬೇಕು, ಮಲಗುವಾಗ ಸೊಳ್ಳೆ ಪರದೆಯನ್ನು ಹಾಕಿಕೊಳ್ಳುವುದು, ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ನೈರ್ಮಲ್ಯ ಕಾಪಾಡುವುದು ಹಾಗೂ ನಿರಿನ ಮೂಲಗಳ ಹತ್ತಿರ ಇರುವ ತಿಪ್ಪೆಗುಂಡಿಗಳನ್ನು ಸ್ಥಳಾಂತರಿಸುವುದು, ಟೈರ್ ಹಾಗೂ ತೆಂಗಿನ ಚಿಪ್ಪಿನಲ್ಲಿ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸುವುದು, ನೀರಿನ ಸರಬರಾಜು ಪೈಪ್‌ನಲ್ಲಿ ಸೋರಿಕೆ ಇದ್ದಲ್ಲಿ ತಕ್ಷಣವೇ ದುರಸ್ಥಿ ಅಥವಾ ಬದಲಾಯಿಸಬೇಕು, ಕುಡಿಯುವ ನೀರಿನ ಮೂಲಗಳಿಗೆ ಪ್ರತಿ ದಿನ ಹಾಗೂ ತೆರದ ಬಾವಿಗಳಲ್ಲಿ ವಾರಕೊಮ್ಮೆ ಕ್ಲೋರಿನೇಷನ್ ಮಾಡುವುದು, ಕ್ಲೋರಿನೇಷನ್ ಮಾಡಿದ ನೀರನ್ನೇ ಬಳಸುವುದು, ಜನರಿಗೆ ರೊಗದ ಬಗ್ಗೆ ಅರಿವು ಮೂಡಿಸಲು ಗ್ರಾಮದಲ್ಲಿ ಕರಪತ್ರಗಳನ್ನು ಮುದ್ರಿಸಿ ಹಂಚುವುದು ಹಾಗೂ ಜನಸಂದಣಿ ಪ್ರದೇಶದಲ್ಲಿ ಅಂಟಿಸುವುದರ ಮೂಲಕ ಸ್ವಚ್ಛತೆಯನ್ನು ಕೈಗೊಳ್ಳಲು ಸೂಚಿಸಲಾಗಿದೆ.

*******************************************

ಸಚಿವರ ಪ್ರವಾಸ

ಯಾದಗಿರಿ.ಸೆಪ್ಟೆಂಬರ್.೧೬(ಕರ್ನಾಟಕ ವಾರ್ತೆ): ಪ್ರಾಥಮಿಕ, ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ.ನಾಗೇಶ ರವರು ಸೆಪ್ಟೆಂಬರ್ ೧೬ ರಂದು ಆಗಮಿಸಲಿದ್ದಾರೆ. ಅಂದು ಬೆಳಗ್ಗೆ ೬ ಗಂಟೆಗೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಬೆಳಗ್ಗೆ ೯ ಗಂಟೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸುವರು. ೧೧.೩೦ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವರು.


 




‘ಸ್ವಾತಂತ್ರö್ಯ ಸಮರ ಕರುನಾಡು ಅಮರ” ನಾಟಕ ಪ್ರದರ್ಶನ

ಯಾದಗಿರಿ.ಸೆಪ್ಟೆಂಬರ್.16(ಕರ್ನಾಟಕ ವಾರ್ತೆ): ಭಾರತ ಸ್ವಾತಂತ್ರö್ಯ ಹೋರಾಟದ ಕುರಿತು ರಂಗವಿಜಯ  ತಂಡ ಅಭಿನಯದ “ಸ್ವಾತಂತ್ರö್ಯ ಸಮರ ಕರುನಾಡು ಅಮರ” ನಾಟಕ ಪ್ರರ್ದಶನ ಸೆ.14 ರಂದು ನಗರದ ಹಿಂದಿ ಪ್ರಚಾರ ಸಭಾಂಗಣದಲ್ಲಿ ನಡೆಯಿತು.



ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ನಗರಸಭೆ ಇವರ ಸಂಯುಕ್ತಾರ್ಶರಯದಲ್ಲಿ ನಡೆದ ಕಾರ್ಯಕ್ರಮವನ್ನು ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ ಉದ್ಘಾಟಿಸಿದರು. ದೇಶದ ಸ್ವಾತಂತ್ರö್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇಂತಹ ನಾಟಕ ಪ್ರರ್ದಶನ ಶ್ಲಾಘನೀಯ, ಸ್ವಾತಂತ್ರö್ಯದ ಚರಿತ್ರೆ ಈಗಿನ ತಲೆ ಮಾರಿಗೆ ತಿಳಿಯಲು ಇದು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚನ್ನಬಸವ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ನಗರಸಭೆ ಆಯುಕ್ತ ಬಿ.ಟಿ. ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲ ರೆಡ್ಡಿ, ಎ. ವೇಣುಗೋಪಾಲ, ಅನಿಲ ಗುರೂಜಿ, ನಾಗೇಶ್ ಕುಮಾರ, ವೈಜನಾಥ ಹಿರೇಮಠ, ಪಲ್ಲವಿ ಮಣಿ ಮತ್ತಿತರರು ಉಪಸ್ಥಿತರಿದ್ದರು.

ರಂಗವಿಜಯ ನಾಟಕ ತಂಡದ ನಿರ್ದೇಶಕ ಮಾಲೂರು ವಿಜಿ ಅವರು ನಾಟಕದ ಕುರಿತು ವಿವರ ನೀಡಿದರು. ಬಳಿಕ ಸ್ವಾತಂತ್ರö್ಯ ಸಮರ ಕರುನಾಡ ಅಮರ ನಾಟಕ ಪ್ರದರ್ಶನಗೊಂಡಿತು.



ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಹಾಗೂ ಭಾವೈಕ್ಯತಾ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಯಾದಗಿರಿ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಆವರಣದಲ್ಲಿ ಜರುಗಿಸಲಾಗುತ್ತದೆ. 

ಈ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ನೇರವೇರಿಸಲಿದ್ದಾರೆ. ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ  ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಧಾನಸಭಾ ಸದಸ್ಯ ನರಸಿಂಹ ನಾಯಕ(ರಾಜುಗೌಡ) ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ಈ ಕಾರ್ಯಕ್ರಮದಲ್ಲಿ ರಾಯಚೂರ ಲೋಕಸಭಾ ಸದಸ್ಯರು ರಾಜಾ ಅಮರೇಶ್ವರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಉಮೇಶ ಜಾಧವ್ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಅಗತ್ಯ ವೆಂದು ಪ್ರಕಟಣೆ ತಿಳಿಸಿದೆ. 





ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 10ನೇ ತರಗತಿ ಪ್ರವೇಶ: ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ (ನವೋದಯ), ಬಾಲಚೇಡ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಹಾಪೂರ ಈ ಶಾಲೆಗಳಲ್ಲಿ 10ನೇ ತರಗತಿ ಪ್ರವೇಶಕ್ಕಾಗಿ ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸಸಿರುವ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾದಗಿರಿ ಬಾಲಚೇಡದ ವಸತಿ ಶಾಲೆಯಲ್ಲಿ 40 ವಿದ್ಯಾರ್ಥಿಗಳ ಮತ್ತು ಶಹಾಪೂರದ ವಸತಿ ಶಾಲೆಯಲ್ಲಿ 13 ವಿದ್ಯಾರ್ಥಿಗಳ ಖಾಲಿಯಿರುವ ಸ್ಥಾನಗಳನ್ನು ಉಚಿತವಾಗಿ ಭರ್ತಿ ಮಾಡಿಕೊಳ್ಳವ ಸಲುವಾಗಿ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 22 ರವರೆಗೂ ಅರ್ಜಿಗಳನ್ನು ಸಲ್ಲಿಸಬೇಕು. ಆಂಗ್ಲ ಮಾಧ್ಯಮದಲ್ಲಿ ಅಭ್ಯಾಸ ಮಾಡಿರುವ ಬಾಲಕಿಯರುಯ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ: 08473-253235 ಅಥವಾ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಥಿಚಿಜಚಿgiಡಿi/ಠಿubಟiಛಿ  ವೆಬ್‌ಸೈಟ್‌ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ಕೋರಿದೆ.


ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಗೆ 6 ಮತ್ತು 7ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಯಾದಗಿರಿ ನಗರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ ಮಾದರಿ ಶಾಲೆಗೆ 6ನೇ ತರಗತಿಯಲ್ಲಿ 32 ವಿದ್ಯಾರ್ಥಿಗಳು ಮತ್ತು 7ನೇ ತರಗತಿಯಲ್ಲಿ 19 ವಿದ್ಯಾರ್ಥಿಗಳ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ 

ಆಸಕ್ತ ವಿದ್ಯಾರ್ಥಿಗಳು ಮೌಲಾನಾ ಆಜಾದ ಮಾದರಿ ಶಾಲೆ ವಿಶ್ವರಾಧ್ಯ ನಗರ, ಯಾದಗಿರಿ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 23 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ (ಮಿನಿವಿಧಾನ ಸೌಧ) ಯಾದಗಿರಿ ಕಛೇರಿ ದೂರವಾಣಿ ಸಂಖ್ಯೆ: 08473-253235ಗೆ ಸಂಪರ್ಕಿಸಬಹುದಾಗಿದೆ. 


ಸಂಘ/ಸAಸ್ಥೆಗಳ ನೋದಣಿ ನವೀಕರಣ ಮಾಡಿಕೊಳ್ಳಲು ಸೂಚನೆ

ಯಾದಗಿರಿ.ಸೆಪ್ಟೆಂಬರ್.16(ಕರ್ನಾಟಕ ವಾರ್ತೆ): ಜಿಲ್ಲೆಯ ನೊದಾಯಿಸಲ್ಪಟ್ಟ ಸಂಘಗಳು ಪೈಲಿಂಗ ಅರ್ಜಿ ಸಲ್ಲಿಸದೆ ಇರುವದು ಸರಕಾರದ ಗಮನಕ್ಕೆ ಬಂದಿದ್ದು, ಕಾರ್ಯನಿರತ ಸಂಘಗಳ ಹಿತದೃಷ್ಟಿಯಿಂದ 5 ವರ್ಷಗಳಿಗೆ ಮೇಲ್ಪಟ್ಟು ಪೈಲಿಂಗ ಮಾಡಿಕೊಳ್ಳದೆ ಬಾಕಿ ಇರುವ ಸಂಘ/ ಸಂಸ್ಥೆಗಳು ಪ್ರತಿ ವರ್ಷಕ್ಕೆ ರೂ. 2 ಸಾವಿರ ದಂತೆ ಹೆಚ್ಚುವರಿ ದಂಡ ಪಾವತಿಸಿ ಪೈಲಿಂಗ ಮಾಡಿಕೊಳ್ಳಲಾಗುವುದು. 

ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಸಂಘಗಳ ನೊಂದಾಯಿಸಲ್ಪಟ್ಟ ಸಂಘವು ಪ್ರತಿ ವರ್ಷ ಪೈಲಿಂಗ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. 2021 ಮಾರ್ಚ್ 31 ರ ಅಂತ್ಯಕ್ಕೆ ಇದ್ದಂತೆ ಜಿಲ್ಲೆಯ ಒಟ್ಟು 9217 ಸಂಘವು ನೋದಣಿಯಾಗಿದ್ದು, ಇವುಗಳ ಪೈಕಿ 2021-22ನೇ ಸಾಲಿನಲ್ಲಿ ಕೇವಲ 387 ಸಂಘಗಳು ಮಾತ್ರ ನವೀಕರಣ ಅರ್ಜಿ ಸಲ್ಲಿಸಿರುವುದನ್ನು ಪರೀಶಿಲಿಸಿ ಬಾಕಿ ಉಳಿದ 8830 ಸಂಘಗಳು ನವೀಕರಣಕ್ಕೆ ಅರ್ಜಿ ಸಲ್ಲಸದೆ ಬಾಕಿ ಉಳಿದಿರುತ್ತದೆ.

ಪೈಲಿಂಗ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರ ರೊಳಗೆ ಸಲ್ಲಿಸಬೇಕು.ಇಲ್ಲದಿದ್ದಲ್ಲಿ ಅಂತಹ   ಸಂಘಗಳ ನೊಂದಣಿ ತನ್ನಿಂತಾನೆ ರದ್ದಾಗಿದೆ ಎಂದು ಸಂಬAಧಪಟ್ಟ ಸಂಘ/ಸAಸ್ಥೆಗಳು ಭಾವಿಸತಕ್ಕದ್ದು ಎಂದು ಯಾದಗಿರಿ ಸಹಕಾರ ಸಂಘಗಳ ಉಪ ನಿಂಧಕರು ಹಾಗೂ ಜಿಲ್ಲಾ ಸಂಘಗಳ ನೊಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಇಂದು ವಿಶ್ವಕರ್ಮ ಜಯಂತಿ 

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿಯನ್ನು ಸರಳವಾಗಿ, ಸಾಂಕೇತಿವಾಗಿ ಆಚರಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ. ಕೋವಿಡ್-19ರ ಹಿನ್ನಲೆ ತಮ್ಮ ಕಾರ್ಯಾಲಯ ಹಾಗೂ ಅಧೀನ ಕಚೇರಿಗಳಲ್ಲಿ ಕಡ್ಡಾಯವಾಗಿ, ಕೋವಿಡ್-19ರ ನಿಯಮಗಳನ್ನು ಪಾಲಿಸುವುದರ ಜೊತೆಗೆ ವಿಶ್ವಕರ್ಮ ಜಯಂತಿಯನ್ನು ಆಚರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


ಹಿಂದುಳಿದ ವರ್ಗಗಳ ಹಾಸ್ಟೆಲ್  ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಯಾದಗಿರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ವರ್ಗ ಹಾಗೂ ಇತರೆ ರೂ.1.00 ಲಕ್ಷ ಒಳಗಿನ ವಿದ್ಯಾರ್ಥಿಗಳು ಆನ್‌ಲೈನ್ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ ಮೂಲಕ ಅರ್ಜಿಯನ್ನು ಅಕ್ಟೋಬರ್ 22 ರೊಳಗೆ ಸಲ್ಲಿಸಬೇಕು. ತಾಂತ್ರಿಕ ತೊಂದರೆಗಳಿದ್ದಲ್ಲಿ  bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಇ-ಮೇಲ್ ಮುಖಾಂತರ ಅಥವಾ ಯಾದಗಿರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 9743310896  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ತೃಣಧಾನ್ಯಗಳ ಸಂಸ್ಕರಣಾ ಘಟಕ ಸ್ಥಾಪನೆ ಮತ್ತು ನಿರ್ವಹಣೆಗೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್16(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಕಾಂಕ್ಷಿ ಜಿಲ್ಲೆ ಯಾದಗಿರಿಗೆ ಆಯೋಗದಿಂದ ಕೃಷಿ ಇಲಾಖೆಗೆ ನೀಡಿದ ಯುನೈಟೆಡ್ ಅನುದಾನದಡಿ ಜಿಲ್ಲೆಯಲ್ಲಿ ತೃಣಧಾನ್ಯಗಳ ಸಂಸ್ಕರಣ ಘಟಕ ಸ್ಥಾಪನೆ ಹಾಗೂ ನಿರ್ವಹಣೆಗೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ಎಲ್ಲಾ ದಾಖಲಾತಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬೇಕು. ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ನೇರ ಸಂದರ್ಶನ ಕೈಗೊಂಡು ಅರ್ಹ ವ್ಯಕ್ತಿ/ಸಂಸ್ಥೆಯನ್ನು ಆಯ್ಕೆ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ  ಪ್ರಕಟಣೆ ತಿಳಿಸಿದೆ.


ಶುಕ್ರವಾರ, ಸೆಪ್ಟೆಂಬರ್ 3, 2021

 ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ : ಕೋವಿಡ್ ನಿಯಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

ಯಾದಗಿರಿ; ಸೆಪ್ಟೆಂಬರ್, 03 ( ಕರ್ನಾಟಕ ವಾರ್ತಾ); ಮಹಾಮಾರಿ ಕೊರೋನಾ ಹಬ್ಬುವ ಆತಂಕದಿಂದ ಈ ಬಾರಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಈ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ ಕೋವಿಡ್



ನಿಯಮ ಪಾಲಿಸಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ಸೂಚಿಸಿದರು.


ಗೌರಿ- ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.


ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ - ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡುವಂತಿಲ್ಲ.


ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯಮೆರವಣಿಗೆ,ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.


ಪಾರಂಪರಿಕ ಗೌರಿ- ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸತಕ್ಕದ್ದು.


ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.


ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್- 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.


ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ , ಜಿಲ್ಲಾಡಳಿತ, ಪೋಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.


ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ ಸಮಾರಂಭಗಳನ್ನು ನಿಷೇಧಿಸಿಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ.


ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ , ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ,  ಯಾದಗಿರಿ ಸಿ.ಪಿ.ಐ ಸೋಮಶೇಖರ್ ಕೆಂಚಿರೆಡ್ಡಿ,  ಸಮಾಜದ ಮುಖಂಡರಾದ ಸಿದ್ದಪ್ಪ ಎಸ್ ಹೊಟ್ಟಿ, ಅಯ್ಯಣ್ಣಾ ಹುಂಡೇಕಾರ, ಭವರಿಲಾಲ ಧೋಖಾ, ಲಾಯಕ ಹುಸೇನ್ ಬಾದಲ್, ಅಬ್ದುಲ್ ವಾಹಿದಮಿಯ್ಯ, ಶಿವಾಜಿ ಸೇನಾ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಶೇಗುರಕರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಉಪಸ್ಥಿತರಿದ್ದರು.

ಬುಧವಾರ, ಸೆಪ್ಟೆಂಬರ್ 1, 2021

 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): 2021-22ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ 60% ರಷ್ಟು ಅಂಕ ಪಡೆದು ಉತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯವು 2.00ಲಕ್ಷಗಳನ್ನು ಮೀರಿರಬಾರದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯಾದಗಿರಿ, ಶಹಾಪುರ, ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಕಛೇರಿಗಳಿಂದ ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15ರೊಳಗೆ ಸಂಬAಧಪಟ್ಟ ಕಚೇರಿಗಳಿಗೆ ಸಲ್ಲಿಸಬೇಕು. 

     ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08473-251530, ಸುರಪುರ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08443-258762, ಶಹಾಪುರ ಸಮಾಜ ಕಲ್ಯಾಣ ಇಲಾಖೆ 08479-240245, ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಚೇರಿ ದೂ.ಸಂ 08473-253741 ಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ. 





 ಇಂಟರ್ನ್ಶಿಪ್ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ,ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): ಲಸಿಕೆ ಆಡಳಿತದಲ್ಲಿ ನೆರೆಯ ಕುಟುಂಬಗಳನ್ನು ಬೆಂಬಲಿಸುವ ಮೂಲಕ ಸಮುದಾಯಕ್ಕೆ ವ್ಯಾಕ್ಸಿನ್ ರಾಯಬಾರಿಯಾಗಿ ಕೆಲಸ ನಿರ್ವಹಿಸುವುದಕ್ಕಾಗಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗಗಳ ನಿರ್ಮೂಲನೆ ಅಧಿಕಾರಿಗಳ ಕಚೇರಿ ವತಿಯಿಂದ ಇಂಟರ್ನ್ಶಿಪ್ (ಕಲಿಕೆ) ಹಮ್ಮಿಕೊಂಡಿದ್ದು, ಇಂಟರ್ನ್ಶಿಪ್ ಅರ್ಜಿ ಸಲ್ಲಸವ ಅವಧಿಯನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

       ಅರ್ಜಿಸಲ್ಲಿಸಲು ಆಸಕ್ತರು ಸೇವಾ ಮನೋಭಾವನೆ ಹೊಂದಿರುವ 12 ನೇ ತರಗತಿ ಉತ್ತೀರ್ಣರಾಗಿರುವ ಅಥವಾ  ಅದಕ್ಕಿಂತ ಹೆಚ್ಚಿನ ಶಿಕ್ಷಣ ಹೊಂದಿರುವ, ಕನ್ನಡ ಭಾಷೆ ಬಲ್ಲವರು ಹಾಗೂ ಜಿಲ್ಲೆಯ ನಿವಾಸಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ yadgir.nic.in  ನ ಮೂಲಕ ಸಲ್ಲಿಸಬಹುದಾಗಿದೆ.

    ಈ ಇಂಟರ್ನ್ಶಿಪ್ ಅವಧಿ 6 ವಾರಗಳ ಕಾಲ ದಿನಕ್ಕೆ 2 ರಿಂದ 3ಗಂಟೆಗಳವರೆಗೆ ನಡೆಯಲಿದೆ. ಇಲ್ಲಿ ಇಂಟರ್ನ್ಶಿಪ್ ಪಡೆದವರು ಸರ್ಕಾರಿ ಅಧಿಕಾರಿಗಳ ನಾಯಕತ್ವದಲ್ಲಿ ಕೆಲಸ ಮಾಡಲು ವೃತ್ತಿಪರ ಮಾನ್ಯತೆ, ಅಭಿವೃದ್ಧಿ ಕ್ಷೇತ್ರದ ತಜ್ಞರಿಂದ ಕಲಿಯುವ ಅವಕಾಶ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣಪತ್ರ ಸಹ ಪಡೆಯಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯಕ್ಕೆ  ಸಂಪಕಿಸಬಹುದಾಗಿದೆ ಎಂದು  ಪ್ರಕಟಣೆ ತಿಳಿಸಿದೆ.


                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...