ಬುಧವಾರ, ಸೆಪ್ಟೆಂಬರ್ 1, 2021

 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಸೆಪ್ಟೆಂಬರ್ 01, (ಕರ್ನಾಟಕ ವಾರ್ತೆ): 2021-22ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 5ನೇ ತರಗತಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ 60% ರಷ್ಟು ಅಂಕ ಪಡೆದು ಉತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯವು 2.00ಲಕ್ಷಗಳನ್ನು ಮೀರಿರಬಾರದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯಾದಗಿರಿ, ಶಹಾಪುರ, ಸುರಪುರದ ಸಮಾಜ ಕಲ್ಯಾಣ ಇಲಾಖೆಯ ಕಛೇರಿಗಳಿಂದ ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 15ರೊಳಗೆ ಸಂಬAಧಪಟ್ಟ ಕಚೇರಿಗಳಿಗೆ ಸಲ್ಲಿಸಬೇಕು. 

     ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08473-251530, ಸುರಪುರ ಸಮಾಜ ಕಲ್ಯಾಣ ಇಲಾಖೆ ದೂ.ಸಂ: 08443-258762, ಶಹಾಪುರ ಸಮಾಜ ಕಲ್ಯಾಣ ಇಲಾಖೆ 08479-240245, ಯಾದಗಿರಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಚೇರಿ ದೂ.ಸಂ 08473-253741 ಗೆ ಸಂಪರ್ಕಿಸಲು ಪ್ರಕಟಣೆ ಕೋರಿದೆ. 





ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...