ಬುಧವಾರ, ಅಕ್ಟೋಬರ್ 16, 2024

                                                             ವಾ.ವಿ.ಸ.45

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಅಕ್ಟೋಬರ್ 16, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಅಕ್ಟೋಬರ್ 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

     2024ರ ಅಕ್ಟೋಬರ್ 17ರ ಗುರುವಾರ ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 12 ಗಂಟೆಗೆ ಯಾದಗಿರಿ ಆಗಮಿಸಿ, ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಗುರುವಾರ, ಅಕ್ಟೋಬರ್ 3, 2024

                                                            ವಾ.ವಿ.ಸಂ.09

 ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಅಕ್ಟೋಬರ್ 03, (ಕ.ವಾ) : ಇದೇ 2024ರ ಅಕ್ಟೋಬರ್ 7 ರಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿವತಿಯಿಂದ ನೇರ ಸಂದರ್ಶನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ  ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಭಾಕರ ಅವರು ತಿಳಿಸಿದ್ದಾರೆ. 

     ಎಸ್ ಆರ್ ಜೆ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಕಲಬುರಗಿ, ಟೀಚರ್ಸ ಹುದ್ದೆಗೆ 10 ಹುದ್ದೆ ಖಾಲಿ ಇದ್ದು ಅರ್ಹತೆ ಯಾವುದೇ ಪದವಿ, ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಸೈದಾಪೂರು, ಶಹಾಪೂರು, ಉದ್ಯೋಗ ಸ್ಥಳವಾಗಿದೆ. 21 ರಿಂದ 35 ವರ್ಷ ಒಳಗಿರಬೇಕು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

     ಜಿಯೋ ಇನ್ಫೋಕಾಮ್ ಲಿಮಿಟೆಡ್, ಜಿಯೋ ಪಾಯಿಂಟ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ 08 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಜಿಯೋ ಪಾಯಿಂಟ್ ಮ್ಯಾನೇಜರ್, ಹುದ್ದೆಗೆ 08 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಡಿಪ್ಲೋಮ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜಿಯೋ ಏರ್‌ಫೈಬರ್ ಪ್ರೀಲ್ಯಾನ್ಸರ್ ಹುದ್ದೆಗೆ 25 ಹುದ್ದೆಗಳು ಖಾಲಿ ಇದ್ದು, ಐಟಿಐ, ಡಿಪ್ಲೋಮ ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಸುರಪುರ, ಶಹಾಪೂರು, ಗುರುಮಠಕಲ್, ಹುಣಸಗಿ, ವಡಿಗೇರ, ಯರಗೋಳ ಕಕ್ಕೇರಾ, ಸೈದಾಪೂರು ಗೋಗಿ ಪೇಠ ಉದ್ಯೋಗ ಸ್ಥಳವಾಗಿದೆ. ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. 19 ರಿಂದ 32 ವರ್ಷ ಒಳಗಿರಬೇಕು, ನಿರುದ್ಯೋಗಿ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ವ್ಯಕ್ತಿ ಪರಿಚಯ ರಿಸ್ಯೂಮ್, ಬಯೋಡಾಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ. ಹಾಗೂ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. 

     ನೇರ ಸಂದರ್ಶನ ನಡೆಯುವ ಸ್ಥಳ ಚಿತ್ತಾಪೂರು ರೋಡ್ (ಮಿನಿ ವಿಧಾನ ಸೌಧ) ಜಿಲ್ಲಾಡಳಿತ ಭವನ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬಿ-ಬ್ಲಾಕ್, ರೂ.ನಂ. ಬಿ1, ಬಿ2 2ನೇ ಮಹಡಿ ಯಾದಗಿರಿ.  ದೂ.ಸಂ.08473 253718, ಮೊ.ನಂ.9448566765ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ, ಅಕ್ಟೋಬರ್ 1, 2024

                                                            ವಾ.ವಿ.ಸಂ.01

ಅ.2 ರಂದು ರಾಷ್ಟçಪಿತ ಮಹಾತ್ಮ ಗಾಂಧೀಜಿರವರ 155ನೇ ಜಯಂತಿ ದಿನಾಚರಣೆ

ಯಾದಗಿರಿ : ಅಕ್ಟೋಬರ್ 01, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯೋಗದೊAದಿಗೆ ರಾಷ್ಟçಪಿತ ಮಹಾತ್ಮ ಗಾಂಧೀಜಿರವರ 155ನೇ ಜಯಂತಿ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ 2024-25ನೇ ಸಾಲಿನ

ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ 2024ರ ಅಕ್ಟೋಬರ್ 02 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.    

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು.

     ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಶ್ರೀ ಸುಭಾಷಚಂದ್ರ ಕೌಲಗಿ ಅವರು ಉಪನ್ಯಾಸ ನೀಡಲಿದ್ದಾರೆ. 

     ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವ ಸಮಿತಿ ಹಾಗೂ ಸಂಘ ಸಂಸ್ಥೆಗಳು, ಸಮಸ್ತ ನಾಗರೀಕರು, ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯಾದಗಿರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ಸುಲೈಮಾನ ಡಿ.ನದಾಫ್ ಅವರು ಪ್ರಕಟಣೆ ಕೋರಿದೆ. 

ಮಂಗಳವಾರ, ಸೆಪ್ಟೆಂಬರ್ 24, 2024

                                                              ವಾ.ವಿ.ಸಂ.119

ಸೆ.25 ರಂದು ಅರಕೇರಾ.ಕೆ ಗ್ರಾಮ ಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ 

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್.ಮಧು ಬಂಗಾರಪ್ಪ ಅವರು ಬುಧವಾರ  ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11.30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ.ಕೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 6.30 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.

                                                              ವಾ.ವಿ.ಸಂ.118

ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು : 

ಕುಟುಂಬಸ್ಥರಿಗೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

     ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ.

     ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು. ಸಿಡಿಲು ಬಡಿದು ನೇನು (18), ಚೇನು (22), ಕಿಶನ್ (30) ಮತ್ತು ಸುಮಿ ಬಾಯಿ (30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ನುಡಿದರು. ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸೋಮವಾರ, ಸೆಪ್ಟೆಂಬರ್ 23, 2024

                                                              ವಾ.ವಿ.ಸಂ.108

 ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2024ರ ಅಕ್ಟೋಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯ ವಿಶ್ವನಾಥರೆಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ  ಸಬಲೀಕರಣ ಇಲಾಖೆ ಸಚಿವರಾದ ಶ್ರೀ ಲಕ್ಷಿö್ಮÃ ಹೆಬ್ಬಾಳಕರ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್, ಸರಕಾರದ ಕಾರ್ಯದರ್ಶಿ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಛ್ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಎಲ್ಲಾ ಸಂಘ ಸಂಸ್ಥೆಗಳು, ಹಿರಿಯ ನಾಗರಿಕರ ಹಾಗೂ ಮಾಧ್ಯಮ ಮಿತ್ರರು ಆಗಮಿಸುವಂತೆ, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವೀರನಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ಪ್ರಕಟಣೆ ಕೋರಿದೆ.

ಭಾನುವಾರ, ಸೆಪ್ಟೆಂಬರ್ 22, 2024

                                                              ವಾ.ವಿ.ಸಂ.107

ಸೆ.26 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 2024ರ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು, ಕ್ರೀಡಾಪಟುಗಳು, ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶ್ರೀ ರಾಜು ಬಾವಿಹಳ್ಳಿ ಅವರು ಪ್ರಕಟಣೆ ಕೋರಿದೆ.  

ಶನಿವಾರ, ಸೆಪ್ಟೆಂಬರ್ 21, 2024

                                                              ವಾ.ವಿ.ಸಂ.106

 ಶ್ರೀ ಸಿದ್ದಲಿಂಗಯ್ಯ ಗದ್ದುಗೆ ಹಿರೇಮಠ ಪ್ರವೇಶ ಮಾಡದಂತೆ ನಿರ್ಬಂಧ ಆದೇಶ ಜಾರಿ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಯಾದಗಿರಿ ಜಿಲ್ಲೆಯಲ್ಲಿ 2024ರ ಸೆಪ್ಟೆಂಬರ್ 20 ರಿಂದ 22ರ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಹಿಂದೂಪರ ಭಾಷಣಕಾರ ರವರನ್ನು ಶಹಾಪೂರ ತಾಲ್ಲೂಕಿನಾದ್ಯಂತ ಪ್ರವೇಶ ಮಾಡದಂತೆ ನಿರ್ಬಂಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಹೊರಡಿಸಿದ್ದಾರೆ.

     2024ರ ಸೆಪ್ಟೆಂಬರ್ 20 ರಂದು ರಾತ್ರಿ 12 ಗಂಟೆಯಿAದ 2024ರ ಸೆಪ್ಟೆಂಬರ್ 22ರ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಇವರಿಗೆ ಶಹಾಪೂರ ತಾಲ್ಲೂಕು ಪ್ರವೇಶ ಮಾಡದಂತೆ ಬಿ.ಎನ್.ಎಸ್.ಎಸ್ ಕಾಯ್ದೆ 2023 ಸೆಕ್ಷನ್ 152, 162, 163 ರನ್ವಯ ನಿರ್ಬಂಧ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                                                              ವಾ.ವಿ.ಸಂ.104

ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಭವಿಷ್ಯ ರೂಪಿಸಿ :

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ರೇಖಾ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಕಾರ್ಮಿಕರು ಬಡತನವಿದೆ ಎಂದು ನೊಂದುಕೊಳ್ಳಬಾರದು,  ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೌರವಾನ್ವಿತ ಶ್ರೀಮತಿ ಬಿ.ಎಸ್ ರೇಖಾ ಅವರು ನಿರ್ದೇಶಿಸಿದರು.

     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು, ಯೋಜನೆಗಳು ಹಾಗೂ ಬಡತನ ನಿರ್ಮೂಲನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

     ಕಾರ್ಮಿಕರು ಇಲ್ಲದೇ ಜೀವನವಿಲ್ಲ, ಪ್ರತಿಯೊಂದು ಹಂತದಲ್ಲಿ ಕಾರ್ಮಿಕರ ಅವಶ್ಯಕತೆ ಇರುತ್ತದೆ. ಬಡತನ ಇರುವ ಕಾರಣಕ್ಕೆ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಬದಲು ಕೆಲಸಕ್ಕೆ ಕಳಿಸುವ ಪ್ರಕರಣಗಳನ್ನು ಕಾಣುತ್ತಿದ್ದೇವೆ. ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರೇ ಆಗಬೇಕೆಂದೇನೂ ಇಲ್ಲ. ಸೂಕ್ತ ಶಿಕ್ಷಣ ಕೊಟ್ಟರೆ ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುತ್ತಾರೆ ಎಂದರು.

     ಇದೇ ವೇಳೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡುವ ಕುರಿತು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು ನ್ಯಾಯಾಧೀಶರು ವೀಕ್ಷಣೆ ಮಾಡಿದರು.

      ಈ ಸಂದರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಕೆ.ಮರಿಯಪ್ಪ ಅವರು ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾತನಾಡಿದರು.

    ಯಾದಗಿರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಹರಿ ಆರ್.ದೇಶಪಾಂಡೆ ಅವರು ಉಪಧನ ಪಾವತಿಕಾಯ್ದೆ, ಹೆರಿಗೆ ಸೌಲಭ್ಯಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ ಕುರಿತು ಮಾಹಿತಿ ನೀಡಿದರು.

     ಇನ್ನಿತರೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳ ಕುರಿತು ಉಪನ್ಯಾಸ ನಡೆಯಿತು..

     ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಎಕ್ಸಿಕ್ಯುಟಿವ್ ಆರ್.ಎನ್.ಶಿವರಾಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಕಾರ್ಮಿಕರು ಉಪಸ್ಥಿತರಿದ್ದರ

                                                              ವಾ.ವಿ.ಸಂ.103

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಲವೀಶ್ ಒರಡಿಯಾ ಜಿ.ಪಂ.ಸಿಒ

2024 ಸ್ವಚ್ಛತಯಡಿಗೆ ದಿಟ್ಟ ಹೆಜ್ಜೆ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ವೈಯಕ್ತಿಕ ಸ್ವಚ್ಛತೆಯ ಜೊತೆ ಪರಿಸರ ಸ್ವಚ್ಛತೆ ಕಾಪಾಡುವುದು ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಅವರು ಹೇಳಿದರು.

    ಸ್ವಚ್ಛ ಭಾರತ ಮಿಷನ್ (ಗ್ರಾ) ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸೆಪ್ಟೆಂಬರ್ 17 ರಿಂದ 2024ರ ಅಕ್ಟೋಬರ್ 2 ವರೆಗೆ ಹಮ್ಮಿಕೊಂಡಿರುವ 15 ದಿನಗಳ ವಿಶೇಷ ಆಂದೋಲನಗಳಾದ ಸ್ವಚ್ಛತೆಯೇ ಸೇವೆ-2024, ಸ್ವಚ್ಛತೆÀಯಡಿಗೆ ದಿಟ್ಟ ಹೆಜ್ಜೆ ಹಾಗೂ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 21 ರಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿ ಮಾತನಾಡಿದರು.

     ಪರಿಸರ ಸ್ನೇಹಿ ಚಟುವಟಿಕೆ ಮೈಗೊಡಿಸಿಕೊಳ್ಳಬೇಕು ಮತ್ತು ಪರಿಸರ ಉಳಿಸ ಬೆಳಸಲು ಅವಶ್ಯವಿರುವ ಅಂಶಗಳನ್ನು, ಅಭ್ಯಾಸಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಂದಿನ ಯುವ ಪೀಳಿಗೆಯಲ್ಲಿ, ಮಕ್ಕಳಲ್ಲಿ ಪರಿಸರದ ಕಾಳಜಿ ಹೆಚ್ಚಿಸಬೇಕಿದೆ. ತಾಯಿಯ ಹೆಸರಲ್ಲಿ ಒಂದು ಗಿಡ ಆಂದೋಲನದಲ್ಲಿ ಸಸಿ ನೆಟ್ಟು ಅದರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂಬುವುದು ನಾವು ಮರೆಯಬಾರದು ಕಿವಿ ಮಾತು ಹೇಳಿದರು.

   ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಯೇ ಸೇವೆ ಪಾಕ್ಷಿಕ ಆಂದೋಲನದ ಅಂಗವಾಗಿ ಗ್ರಾಮ ಪಂಚಾಯತಿ, ಅಂಗನವಾಡಿ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಮಾಡುವುದು, ಬ್ಲಾಕ್ ಸ್ಪಾಟ್ ಕ್ಲೀನಿಂಗ್, ಚರಂಡಿ ಸ್ವಚ್ಚಗೊಳಿಸುವುದು ಮುಂತಾದ ಸ್ವಚ್ಛತೆಯ ಚಟುವಟಿಕೆಗಳನ್ನು  ಹಮ್ಮಿಕೊಳ್ಳಲಾಗುತ್ತಿದೆ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಭೋದಿಸುವುದು ಹಾಗೂ ಸ್ವಚ್ಛತೆಯೇ ಸೇವೆ ಆಂದೋಲನದ ಉದ್ದೇಶ ಪ್ರತಿಯೊಬ್ಬರಿಗೂ ತಲುಪಿಸಿ ಅವರ ಸ್ವಭಾವದಲ್ಲಿಯೇ ಸ್ವಚ್ಛತೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಅವರ ಸಂಸ್ಕಾರದಲ್ಲಿ ಸ್ವಚ್ಛತೆ ತರುವ ಉದ್ದೇಶವಾಗಿದೆ ಎಂದರು.

ಗ್ರಾಮದ ಸ್ವಚ್ಛತೆ ಕಾಪಾಡಲು ಕೆಲಸ ಮಾಡುತ್ತಿರುವ ಸಪಾಯಿಮಿತ್ರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿದೆ. ಸ್ವಚ್ಛತೆಯ ಕೆಲಸ ಮಾಡುತ್ತಿರುವುದರಿಂದ ಅವರ ಆರೋಗದ್ಯ ಕಾಳಜಿ ಮುಖ್ಯ

     ಈ ಸಂದರ್ಭದಲ್ಲಿ ಉಪಕಾರ್ಯದರ್ಶಿಗಳಾದ ವಿಜಯ ಕುಮಾರ ಮಡ್ಡೆ, ಯೋಜನಾ ನಿರ್ದೇಶಕರು ಹಾಗೂ ಸ್ವ.ಭಾ.ಮಿ & ನರೇಗಾ ಯೋಜನೆಯ ನೋಡಲ್ ಅಧಿಕಾರಿಗಲಾದ ಬಿ.ಎಸ್.ರಾಠೋಡ್, ಸಿಪಿಒ ಕೆ.ಕುಮಲಯ್ಯ, ಸಿಇಒ ವೆಂಕಟೇಶ ಚಟ್ನಳ್ಳಿ, ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ ಹಸದ್, ಅರಣ್ಯ ಇಲಾಖೆಯ ಅಧಿಕಾರಿಗಳು, ಅಧಿಕ್ಷರು, ಸ್ವ.ಭಾ.ಮಿ, ನರೇಗಾ, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು. 

ಗುರುವಾರ, ಆಗಸ್ಟ್ 29, 2024

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                             ವಾ.ವಿ.ಸಂ.150

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಆಗಸ್ಟ್ 29, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 30, 31 ರಂದು ಹಾಗೂ ಸೆಪ್ಟೆಂಬರ್ 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

     2024ರ ಆಗಸ್ಟ್ 30ರ ಶುಕ್ರವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ  10.30 ಗಂಟೆಗೆ ಆಗಮಿಸಿ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಆಗಸ್ಟ್ 31ರ ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಸೆಪ್ಟೆಂಬರ್ 2ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

      2024ರ ಸೆಪ್ಟೆಂಬರ್ 3ರ ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಕೆಂಭಾವಿ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

                                                              ವಾ.ವಿ.ಸಂ.149

ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಆಯೋಜನೆ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಆಗಸ್ಟ್ 29, (ಕ.ವಾ) : ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಯರಗೋಳ ಗ್ರಾಮದಿಂದ ಕಡೆಚೂರ ಗ್ರಾಮದ ಗಡಿ ರವರೆಗೆ ಬರುವಂತಹ ಸುಮಾರು 27 ಜನ ವಸತಿ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಲು ಮೂಲಕ ಯಶಸ್ವಿಗೊಳಿಸುವಂತೆ  ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

     ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಉದ್ದೇಶ ಹೊಂದಿದ್ದು, ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

     ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸಂವಿಧಾನದ ಗೌರವ, ಘನತೆ ಹೆಚ್ಚಿಸುವ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿ ಹೇಳುವಂತಹ ಮಾನವ ಸರಪಳಿ ರಚಿಸಿ ಯಶಸ್ವಿಯಾಗಿ,  ಯಾವುದೇ ಲೋಪ ಆಗದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

     ಈ ಕಾರ್ಯಕ್ರಮದ ಯಶಸ್ವಿಗಾಗಿ 20 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ.  ಪ್ರತಿ 1 ಕಿ.ಮೀ. ವ್ಯಾಪ್ತಿಗೆ ಏರಿಯಾ ಅಧಿಕಾರಿಗಳು ಮತ್ತು ಪ್ರತಿ 3 ಕಿಲೋಮೀಟರ್ ವ್ಯಾಪ್ತಿಗೆ ತಾಲೂಕ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ ಎಂದು ತಿಳಿಸಿದರು.

     ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ದೇಶಭಕ್ತಿ,ಐಕ್ಯತೆ, ಸಂವಿಧಾನ  ಮತ್ತು  ಪ್ರಜಾಪ್ರಭುತ್ವದ ಮಹತ್ವ  ಸಾರುವಂತಹ ಮಾನವ ಸರ್ಪಳಿಯನ್ನು ನಿರ್ಮಿಸಬೇಕು. ವಿವಿಧ ಸಾಂಸ್ಕೃತಿಕ, ಕಲಾ ತಂಡಗಳ, ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.  ತುರ್ತು ಸೇವೆಗಾಗಿ ಆರೋಗ್ಯ ಇಲಾಖೆಯಿಂದ  ನುರಿತ ಸಿಬ್ಬಂದಿ ಗಳೊಂದಿಗೆ ಚಿಕಿತ್ಸೆ ಸೌಲಭ್ಯ ಇರುವ ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಲಾತಂಡಗಳ ನಿಯೋಜನೆ ಮಾಡುವಂತೆ ಹಾಗೂ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

     ರೂಟ್ ಮ್ಯಾಪ್ ಗ್ರಾಮಗಳು : ಯರಗೋಳ, ಯರಗೋಳ ತಾಂಡ, ಮಲ್ಕಪನಳ್ಳಿ, ಗೇಮುನಾಯಕ ತಾಂಡ, ವೆಂಕಟೇಶ ನಗರ, ಅಲ್ಲಿಪೂರ ತಾಂಡ, ಅಲ್ಲಿಪೂರ, ಕಂಚಗಾರಹಳ್ಳಿ, ಚಾಮನಳ್ಳಿ ತಾಂಡ,  ಆರ್ಯಭಟ ಸ್ಕೂಲ್, ಆದರ್ಶ ಸ್ಕೂಲ್, ಮೆಡಿಕಲ್ ಕಾಲೇಜು, ಮುದ್ನಾಳ ದೊಡ್ಡತಾಂಡ, ಮುಂಡರಗಿ, ಆಶನಾಳ ತಾಂಡ, ರಾಮಸಮುದ್ರ, ಮೈಲಾಪೂರ, ಹಳಿಗೇರಾ, ಆರ್ ಹೊಸಳ್ಳಿ, ನಗಲಾಪೂರ, ಬಳಿಚಕ್ರ, ಕಿಲ್ಲನಕೇರಾ, ಕರಿಬೆಟ್ಟ, ರಾಚನಳ್ಳಿ, ಶೆಟ್ಟಿಹಳ್ಳಿ, ಕಡೆಚೂರ, ಕಡೆಚೂರ ಬಾರ್ಡರ್ ಒಟ್ಟು 68 ಕಿಲೋಮೀಟರ್ ಮಾನವ ಸರಪಳಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಡಿವೈಎಸ್ಪಿ ಅರುಣಕುಮಾರ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕುಮಾರಿ ಸರೋಜಾ, ಡಿಡಿಪಿಐ ಮಂಜುನಾಥ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಹಶೀಲ್ದಾರ ಸುರೇಶ ಅಂಕಲಗಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

                                                              ವಾ.ವಿ.ಸಂ.148

“ಆರೋಗ್ಯ ಮೇಳ” ಕಾರ್ಯಕ್ರಮ

ಒಬ್ಬ ವ್ಯಕ್ತಿ ಅಂಗಾಗ ದಾನವು ಹಲವು ಜನರಿಗೆ ಜೀವವನ್ನು ಉಳಿಸಬಹುದು

ಯಾದಗಿರಿ : ಆಗಸ್ಟ್ 29, (ಕ.ವಾ) : ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ನಿಯಂತ್ರಿಸಲು ಸಾರ್ವಜನಿಕರಿಗೆ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜೀದ್ ಕರೆ ನೀಡಿದರು.

   ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕುರಕುಂದ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುರಕುಂದ ಪ್ರಾ.ಆ.ಕೇಂದ್ರ ಸಹಯೋಗದಲ್ಲಿ “ಆರೋಗ್ಯ ಮೇಳ” ನೇತ್ರದಾನ ಪಾಕ್ಷಿಕ ವiತ್ತು ಅಂಗಾAಗ ದಾನ ಕುರಿತು ಆರೋಗ್ಯದ ಅರಿವು ಆರೋಗ್ಯ ಮೇಳ ಇತ್ತೀಚಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 

     ವಡಗೇರಾ ತಾಲೂಕಿನ ಕುರಕುಂದ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರು ಅಂಗಾAಗದಾನದ ಮಹತ್ವದ ಕುರಿತು ತಿಳಿದುಕೊಂಡು ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದರು.

     ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಲ್ಲಪ್ಪ ಕಣಜಿಕರ್ ಅವರು ಮಾತನಾಡಿ, ರಾಷ್ಟಿçÃಯ 39ನೇ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ ಆಗಸ್ಟ್ 25 ರಿಂದ ಸೆಪ್ಟೆಂಬರ್ 8ರ ವರೆಗೆ ನಡೆಯಲಿದ್ದು, ಕಣ್ಣಿನ ಮಹತ್ವ ಕುರಿತು ವಿವರಿಸಿ ಎಲ್ಲರೂ ನೇತ್ರದಾನ ಮಾಡುವಂತೆ ಆನ್‌ಲೈನ್ ಪೋರ್ಟಲ್‌ನಲ್ಲಿ ಜೀವನ್ ಸಾರ್ಥಕತೆ ಆ್ಯಪ್ ಮೂಲಕ ನೋಂದಾಯಿಸಕೊಳ್ಳಬೇಕು ಇದರಿಂದ ಒಬ್ಬ ವ್ಯಕ್ತಿಯ ನೇತ್ರದಾನವು ಇಬ್ಬರು ಕಾರ್ನಿಯಾ ಅಂಧರಿಗೆ ವರವಾಗುವುದು, ನೇತ್ರದಾನ ಮರಣದ 6 ಗಂಟೆಯೊಳಗೆ ನೇತ್ರಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು. ಶಾಲಾ ಮಕ್ಕಳನ್ನು ಉದ್ದೇಶಿಸಿ ರಕ್ತಹೀನತೆ ತಡೆಗಟ್ಟಲು ಪ್ರತಿವಾರದಲ್ಲಿ ಒಂದು ದಿನ ಕಬ್ಬಿಣಾಂಶ ಮಾತ್ರೆಯನ್ನು ಸೇವಿಸಬೇಕು ಎಂದು ಮತ್ತು ಹೆಣ್ಣುಮಕ್ಕಳು ಮುಟ್ಟಿನ ಶುಚಿತ್ವ ಕಡೆಗಮನ ಹರಿಸಲು ಮತ್ತು ಆರೋಗ್ಯ ಇಲಾಖೆಯಿಂದ ಶುಚಿ ನ್ಯಾಪಕಿನ್ ಉಚಿತವಾಗಿ ಪಡೆದುಕೊಳ್ಳುವಂತೆ ಹೇಳಿದರು.

     ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ರಮೇಶ ಗುತ್ತೇದಾರ ಅವರು ಮಾತನಾಡಿ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಯಾವುದಿಲ್ಲ ಆರೋಗ್ಯವೇ ಮಹಾಭಾಗ್ಯ ಪೌಷ್ಠಿಕ ಆಹಾರ ಸೇವಿಸಿ ಉತ್ತಮ ಆರೋಗ್ಯ ಪಡೆಯಬೇಕೆಂದು ತಿಳಿಸಿದರು.

     ಕುರಕುಂದ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮರಲಿಂಗಪ್ಪ ಅವರು ಮಾತನಾಡಿ, ಆರೋಗ್ಯ ಮೇಳದಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸುವುದು ಉಚಿತ ಆರೋಗ್ಯ ತಪಾಸಣೆ ಮಾಡುವುದು ಹಾಗೂ ಚಿಕಿತ್ಸೆಯನ್ನು ನೀಡುವುದಾಗಿರುತ್ತದೆ, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ರಾಷ್ಟಿçÃಯ 39ನೇ ನೇತ್ರಧಾನ ಪಾಕ್ಷೀಕ ಅಂಗವಾಗಿ ಕರಪತ್ರಗಳ ಬಿಡುಗಡೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

     ಕಾರ್ಯಕ್ರಮದ ನಿರೂಪಣೆ ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ತುಳಸಿರಾಮ ಚವ್ಹಾಣ ನೆರವೇರಿಸಿದರು, ಪ್ರಾರ್ಥನೆ ಗೀತೆ ವಿದ್ಯಾರ್ಥಿನಿ ಕು.ಅಯ್ಯಮ್ಮ ಕು.ಚಾಂದಬೀ, ಸ್ವಾಗತ ಸಿ.ಹೆಚ್.ಒ ಮಹಾದೇವಪ್ಪ, ವಂದನಾರ್ಪಣೆ ಹೆಚ್.ಎಸ್ ಶಾಂತಿಲಾಲ್ ಅವರು ನೇರವೆರಿಸಿದರು.

     ಈ ಸಂದರ್ಭದಲ್ಲಿ ಕುರಕುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮುದ್ದಮ್ಮ ಗುಡುಸಾಬ ಶೇಕ್‌ಸಿಂದಿ, ಜಿಲ್ಲಾ ಆರ್.ಸಿ.ಹೆಚ್ ಆಯುಷ್ ವೈದ್ಯರು ಡಾ.ಶೃತಿ, ಶಂಕರಾನAದ, ಸುದರ್ಶನ, ಹಾಗೂ ಡಾ.ಅಮೀತ, ಮಾಳಪ್ಪ ಪುರ್ಲೇ, ಶ್ರೀಮತಿ ಶೀಭಾರಾಣಿ, ಮಹಿಬೂಬ್, ಬಿಹೆಚ್‌ಇಓ, ಬಸವರಾಜ ಎಸ್‌ಟಿಎಸ್ ಉಮೇಶ, ಹಿ.ಆ.ನೀರಿಕ್ಷಣಾಧಿಕಾರಿ ಸಂಗಣ್ಣ ನುಚ್ಚಿನ್, ಪ್ರಾ.ಆ.ಕೇಂದ್ರದ ರಾಜಶೇಖರ, ಹಿ.ಆ.ನಿ.ಅಧಿಕಾರಿಗಳು, ಹಣಂತ್ರಾಯಗೌಡ, ಪಿ.ಹೆಚ್.ಸಿ.ಒ ಶ್ರೀಮತಿ ಮರೇಮ್ಮ, ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಸೋಮವಾರ, ಆಗಸ್ಟ್ 26, 2024

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

                                                             ವಾ.ವಿ.ಸಂ.131
ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ
ಯಾದಗಿರಿ : ಆಗಸ್ಟ್ 26, (ಕ.ವಾ) : ಯಾದಗಿರಿ ನಗರದ ಅಜೀಜ್ ಕಾಲೋನಿ ನಿವಾಸಿಯಾದ ಶೇಖ ಇರ್ಫಾನ್ 25 ವರ್ಷ ಪುರುಷ ಕಾಣೆಯಾಗಿದ್ದು, ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ನಗರ ಠಾಣಾಧಿಕಾರಿ ತಿಳಿಸಿದ್ದಾರೆ.

     ಕಾಣೆಯಾದ ಪುರುಷ 2024ರ ಆಗಸ್ಟ್ 20 ರಂದು ರಾತ್ರಿ ಸಮಯದಲ್ಲಿ ಅಂದಾಜು 2 ಗಂಟೆಗೆ ಸುಮಾರಿಗೆ ತನ್ನ ಮೊಬೈಲ್ ಮನೆಯಲ್ಲಿ ಬಿಟ್ಟು ಮನೆಯಿಂದ ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಪರಿಚಯವಿರುವ ನಗರದಲ್ಲಿ ಎಲ್ಲಾ ಕಡೆ ಹುಡುಕಾಡಿದ್ದು, ಎಲ್ಲಿಯೂ ಕಂಡು ಬಂದಿರುವುದಿಲ್ಲ. ಪುರುಷ ಕಾಣೆಯಾದ ಬಗ್ಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರುಷನ ಮಾಹಿತಿ ಸಿಕ್ಕರೆ ಯಾದಗಿರಿ ನಗರ ಪೊಲೀಸ್ ಠಾಣೆ  ತಿಳಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಶುಕ್ರವಾರ, ಆಗಸ್ಟ್ 23, 2024

 ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ

ಆಗಸ್ಟ್ 27 ರಂದು ಕರ್ನಾಟಕ ಲೋಕಸಭಾ ಆಯೋಗದ ಪರೀಕ್ಷೆ

ಯಾದಗಿರಿ: ಆಗಸ್ಟ್ , 23 (ಕರ್ನಾಟಕ) : ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಸೂಚನೆ ನೀಡಿದರು.

 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ  ನಡೆದ ಕರ್ನಾಟಕ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯ ಕುರಿತ ಸಭೆ ನಡೆಸಿ ಅವರು ಮಾತನಾಡಿದರು.

ಯಾದಗಿರಿ ನಗರದ ಪದವಿ ಕಾಲೇಜು, ನಗರದ ಸರಕಾರಿ ಪದವಿ ಪೂರ್ವ ಪ್ರೌಢಶಾಲಾ ವಿಭಾಗ, ಸರಕಾರಿ ಮಹಿಳಾ ಪಿಯು ಮತ್ತು ಬಾಲಕರ ಪಿಯು ಕಾಲೇಜು ( ಸ್ವಪ್ನಾ ಗ್ರೌಂಡ್), ಆದರ್ಶ ಮಹಾವಿದ್ಯಾಲಯದ ಒಟ್ಟು  ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 1542 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.

2023ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳು ಆ. 27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ರಿಂದ ಸಾಯಂಕಾಲ 4 ಗಂಟೆಯವರೆಗೆ ಪತ್ರಿಕೆ- 2 ಪರೀಕ್ಷೆಗಳು ಎರಡು ಪಾಳಿಯಲ್ಲಿ ನಡೆಯಲಿದೆ. ಜಿಲ್ಲೆಯ ಮುಖ್ಯ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಯೋಗವು ನೀಡಿರುವ ಮಾರ್ಗಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ತಪಾಸಣಾ ಸಿಬ್ಬಂದಿ ಮೊದಲ ಹಂತದಲ್ಲಿ ಮುಖ್ಯಗೇಟ್ ಬಳಿಯೇ ನಿಲ್ಲಿಸಿ ತಪಾಸಣೆ ಮಾಡಿದ ನಂತರವೇ ಒಳಗೆ ಬಿಡಬೇಕು. ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ಎಲ್ಲಾ ಅಭ್ಯರ್ಥಿಗಳ ಗುರುತಿನ ಚೀಟಿ, ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ, ಅವರುಗಳ ಅಭ್ಯರ್ಥಿತ್ವದ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿಸಬೇಕು ಎಂದರು. ಪರೀಕ್ಷಾ ಕೊಠಡಿಗಳಲ್ಲಿನ ಸಿ.ಸಿ.ಟಿ.ವಿ  ಕ್ಯಾಮೆರಾಗಳು ಪರೀಕ್ಷಾ ಪ್ರಕ್ರಿಯೆ, ಅಭ್ಯರ್ಥಿಗಳ ಹಾಗೂ ಸಂವೀಕ್ಷಕರ ಚಲನವಲನ, ಮುಖಚಹರೆಗಳನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಅಳವಡಿಸಲು ಸೂಕ್ತ ಕ್ರಮ ವಹಿಸಬೇಕು. ಪರೀಕ್ಷಾ ಉಪಕೇಂದ್ರಗಳಿಗೆ ಜಾಮರ್ ಅಳವಡಿಸಬೇಕು ಎಂದರು.

ಪರೀಕ್ಷಾ ಕೊಠಡಿಗಳಲ್ಲಿ ಲೈಟ್ ಹಾಗೂ ಫ್ಯಾನ್ ವ್ಯವಸ್ಥೆ, ಕುಡಿಯುವ ನೀರು, ಗಡಿಯಾರದ ವ್ಯವಸ್ಥೆಯನ್ನು ಕಲ್ಪಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಮಾರ್ಗಾಧಿಕಾರಿಗಳೂ ಪರೀಕ್ಷಾ ಪೂರ್ವ ದಿನದಂದು ಉಪಕೇಂದ್ರಗಳಿಗೆ ಭೇಟಿ ನೀಡಿ, ಪರೀಶಿಲಿಸಿ ವರದಿ ಮಾಡಬೇಕು ಎಂದರು.

ಜಿಲ್ಲಾ ತ್ರಿಸದಸ್ಯರ ಸಮಿತಿಯ ಉಸ್ತುವಾರಿಯಲ್ಲಿ ಪರೀಕ್ಷೆಗೆ ಸಂಬಂಧಪಟ್ಟ ಗೌಪ್ಯ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯ ಸುಪರ್ದಿಯಲ್ಲಿಡಬೇಕು, ಪರೀಕ್ಷಾ ದಿನದಂದು ಸೂಕ್ತ ಬಂದೋಬಸ್ತ್ ನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ರವಾನಿಸಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಮಂಜುನಾಥ, ತಹಶೀಲ್ದಾರ ಸುರೇಶ ಅಂಕಲಗಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ವಿಷಯ ಪರಿವೀಕ್ಷಕ  ಬಸನಗೌಡ ಆಲ್ದಾಳ, ಹಣಮಂತ ಹೆಚ್, ಪ್ರಾಂಶುಪಾಲರಾದ  ನಿರ್ಮಲಾ, ರುದ್ರಗೌಡ, ದೇವಿಂದ್ರಪ್ಪ, ಶರಣಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 ವಾ.ವಿ.ಸಂ.127

“ದೀನ್ ದಯಾಳ್ ಸ್ಪರ್ಶ್ ಯೋಜನೆ” ಅರ್ಜಿ ಆಹ್ವಾನ

ಯಾದಗಿರಿ : ಆಗಸ್ಟ್ 23, (ಕ.ವಾ) : ಅಂಚೆ ಇಲಾಖೆಯು 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ.

     9 ನೇ ತರಗತಿಗೆ ಫಾರ್ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು “ದೀನ್ ದಯಾಳ್ ಸ್ಪರ್ಶ್ ಯೋಜನೆ” ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದು. ಸ್ಪರ್ಶ ಎಂದರೆ ಸ್ಟಾಂಪ್‌ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿವೇತನ.

ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ.   

     ಯೋಜನೆಯಡಿಯಲ್ಲಿ, 2023-24 ಶೈಕ್ಷಣಿಕ ವರ್ಷದಲ್ಲಿ 60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ, ಫಿಲಾಟೆಲಿಕ್ ಕ್ಲಬ್‌ನ ಸದಸ್ಯ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6ನೇ ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ 6000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವರ್ಷ ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ. ಹಂತ-1 ಅಂಚೆ ಚೀಟಿಗಳ ಸಂಗ್ರಹದ ರಸ ಪ್ರಶ್ನೆಯಲ್ಲಿ ಭಾಗವಹಿಸಲು 2024ರ ಸೆಪ್ಟೆಂಬರ್ 3ರ ಒಳಗೆ ಅರ್ಜಿಸಲ್ಲಿಸಬೇಕು. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in, www.karnatakapost.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಪರಿಷ್ಕೃತ  ಪ್ರಕಟಣೆ;

----------------------------

ಮಹಾತ್ಮ ಗಾಂಧೀಜಿ 155ನೇ ಜಯಂತಿ

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ 

ಯಾದಗಿರಿ :ಆಗಸ್ಟ್ :23 (ಕರ್ನಾಟಕ ವಾರ್ತೆ):ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.  

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ.   ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ            21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು. 

ಪ್ರೌಢ ಶಾಲಾ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,  ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ  ಬರೆಯಬೇಕು.  

ಪದವಿ ಪೂರ್ವ ಶಿಕ್ಷಣ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,  ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.  

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.  ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.  

ದಿನಾಂಕ : 10-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : 12-09-2024 ರೊಳಗಾಗಿ  ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ.  ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು. 

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು. 

ನಿಬಂಧನೆಗಳು :-

ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು.  ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.  ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.  ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

 ವಾ.ವಿ.ಸಂ.126

ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ : ಆಗಸ್ಟ್ 23, (ಕ.ವಾ) : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಅವರು ತಿಳಿಸಿದ್ದಾರೆ.

    ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್/ಡಿ.ಎಂ.ಎಸ್), ದಂತವೈದ್ಯಕೀಯ (ಬಿ.ಡಿ.ಎಸ್/ಎಂ.ಡಿ.ಎಸ್)ಆಯುಷ್(ಬಿ.ಆಯುಶ್/ಎಂ.ಆಯುಶ್)ಇಂಜಿನಿಯರಿಂಗ್/ಟೆಕ್ನಾಲಜಿ(ಬಿ.ಇ/ ಬಿ.ಟೆಕ್/ಎಂ.ಇ/ಎಂ.ಟೆಕ್) ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್/ಎಂ.ಆರ್ಕ್), ಬಿ.ಎಸ್.ಇ ಹೊರಟಿಕಲ್ಚರ್ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಫಾರ್ಮಾಸ್ಯುಟಿಕಲ್, ಮುಂತಾದ  ಕೋರ್ಸ್ ಗಳಲ್ಲಿ ಆಯ್ಕೆಯಾಗಿರುವಂತಹ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅಂದರೆ ಮುಸಲ್ಮಾನರು, ಕ್ರೈಸ್ತರು, ಜೈನರು, ಭೌದ್ಧ ಧರ್ಮಿಯರು ಸಿಖ್ಖರು ಮತ್ತು ಪಾರ್ಸಿ, ಸಮುದಾಯದವರಿಗೆ "ಅರಿವು (ರಿನ್ಯೂವಲ್)” ವಿದ್ಯಾಭ್ಯಾಸ ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 

     ಅರ್ಜಿಸಲ್ಲಿಸುವಾಗ ನಿಗಮದಿಂದ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟ ಪಾವತಿಸಬೇಕಾಗಿರುತ್ತದೆ. ಶೇ.12 ರಷ್ಟು ಮೊತ್ತ ಆನ್‌ಲೈನ್ ಮುಖಾಂತರ ಪಾವತಿಸಬೇಕು. ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು, ರಿನ್ಯೂವಲ್ ಮೊತ್ತ ಪಾವತಿಸುವುದು ಅಗತ್ಯವಿರುವುದಿಲ್ಲಾ. ಆನ್‌ಲೈನ್‌ kmdconline.karnataka.gov.inನಲ್ಲಿ 2024ರ ಅಕ್ಟೋಬರ್ 31ರ ಒಳಗೆ ಅರ್ಜಿಸಲ್ಲಿಸಬೇಕು, ನಂತರ ಮೂಲ ದಾಖಲಾತಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ.8277799990 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಾ.ವಿ.ಸಂ.125

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಆಗಸ್ಟ್ 23, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 26 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

     2024ರ ಆಗಸ್ಟ್ 26ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ  10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

 ವಾ.ವಿ.ಸಂ.124

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ : ಆಗಸ್ಟ್ 23, (ಕ.ವಾ) : 2024-25ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಅವರು ತಿಳಿಸಿದ್ದಾರೆ.

     ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನವರ್ವಸತಿ ಯೋಜನೆಗಳ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆಹ್ವಾನಿಸಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ 2024ರ ಸೆಪ್ಟೆಂಬರ್ 21 ರಂದು ಸಂಜೆ 5.30 ಗಂಟೆ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ದೂ.ಸಂ.08473 253739, 8105395485ಗೆ ವೆಬ್‌ಸೈಟ್ sevasindhu.karnataka.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಾ.ವಿ.ಸಂ.122

ಆ.26 ರಂದು ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮ

ಯಾದಗಿರಿ : ಆಗಸ್ಟ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕೃಷ್ಣ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ 2024ರ ಆಗಸ್ಟ್ 26ರ ಸೋಮವಾರ ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಶ್ರೀ ಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಉತ್ತರಾದೇವಿ ಅವರು ಪ್ರಕಟಣೆ ಕೋರಿದೆ.

“ದೀನ್ ದಯಾಳ್ ಸ್ಪರ್ಶ್ ಯೋಜನೆ” ಅರ್ಜಿ ಆಹ್ವಾನ

 ವಾ.ವಿ.ಸಂ.127

“ದೀನ್ ದಯಾಳ್ ಸ್ಪರ್ಶ್ ಯೋಜನೆ” ಅರ್ಜಿ ಆಹ್ವಾನ

ಯಾದಗಿರಿ : ಆಗಸ್ಟ್ 23, (ಕ.ವಾ) : ಅಂಚೆ ಇಲಾಖೆಯು 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ.

     9 ನೇ ತರಗತಿಗೆ ಫಾರ್ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು “ದೀನ್ ದಯಾಳ್ ಸ್ಪರ್ಶ್ ಯೋಜನೆ” ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದು. ಸ್ಪರ್ಶ ಎಂದರೆ ಸ್ಟಾಂಪ್‌ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿವೇತನ.

ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ.   

     ಯೋಜನೆಯಡಿಯಲ್ಲಿ, 2023-24 ಶೈಕ್ಷಣಿಕ ವರ್ಷದಲ್ಲಿ 60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ, ಫಿಲಾಟೆಲಿಕ್ ಕ್ಲಬ್‌ನ ಸದಸ್ಯ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6ನೇ ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ 6000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವರ್ಷ ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ. ಹಂತ-1 ಅಂಚೆ ಚೀಟಿಗಳ ಸಂಗ್ರಹದ ರಸ ಪ್ರಶ್ನೆಯಲ್ಲಿ ಭಾಗವಹಿಸಲು 2024ರ ಸೆಪ್ಟೆಂಬರ್ 3ರ ಒಳಗೆ ಅರ್ಜಿಸಲ್ಲಿಸಬೇಕು. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in, www.karnatakapost.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ

                                                             ವಾ.ವಿ.ಸಂ.128

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ

ಯಾದಗಿರಿ : ಆಗಸ್ಟ್ 23, (ಕ.ವಾ) : ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಂಪಾಡ ತಾಂಡ ಗ್ರಾಮದ ಬಾಲಕಿ ಕುಮಾರಿ ಸೋನಿಬಾಯಿ ತಂದೆ ಪಾಂಡು ರಾಠೋಡ್ ಬಾಲಕಿಯು ಕಾಣೆಯಾಗಿದ್ದು, ಈಕೆಯ ಬಗ್ಗೆ ಮಾಹಿತಿ ಬಂದರೆ ಗುರುಮಿಠಕಲ್ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ.ಗೆ ತಿಳಿಸಲು ಪಿಎಸ್‌ಐ ಭೀಮರಾಯ ಅವರು ಕೋರಿದ್ದಾರೆ.

     ಕಾಣೆಯಾದ ಬಾಲಕಿಯು ಮೇ 17 ರಂದು ಬೆಳಿಗ್ಗೆ 5 ಗಂಟೆಗೆ ಬಯಲು ವಿಸರ್ಜನೆಗೆ ಹೋಗಿ  ಬರುತ್ತೇನೆ ಎಂದು ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯೂ ಕಂಡು ಬಂದಿರುವುದಿಲ್ಲ.

     ಬಾಲಕೀಯು ಕಾಣೆಯಾದ ಬಗ್ಗೆ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಒಂಬತ್ತನೇ ತರಗತಿ ಓದುತ್ತಿದ್ದು, ವಯಸ್ಸು 15 ಇದ್ದು, ಎತ್ತರ 5.2, ಕನ್ನಡ, ತೆಲುಗು, ಹಿಂದಿ, ಲಂಬಾಣಿ ಭಾಷೆ ಮಾತನಾಡುತ್ತಾಳೆ, ದುಂಡನೆ ಮುಖ, ಗೋದಿ ಬಣ್ಣ, ಸದೃಢ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲಿದ್ದು, ಕಪ್ಪು ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಪೈಜಾಮ್ ಬಟ್ಟೆ ಧರಿಸಿದ್ದಳು. ಬಾಲಕಿ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಗುರುಮಿಠಕಲ್ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ 112ಗೆ ಕರೆ ಮಾಡಲು ಕೋರಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ. 9480803581, 08473 225054, 9480803543, 08473 225153, 9480803526, 08473 252301, 9980803600 ಎಂದು ಅವರು ತಿಳಿಸಿದ್ದಾರೆ.

ಗುರುವಾರ, ಆಗಸ್ಟ್ 22, 2024

         ವಾ.ವಿ.ಸಂ.121

ಜಿಲ್ಲೆಯಾದ್ಯಂತ ಶಾಂತಿ ಸೌಹಾರ್ದಯುತವಾಗಿ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬ  ಆಚರಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ : ಆಗಸ್ಟ್ 22, (ಕ.ವಾ) : ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ  ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.

     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆದ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆ ಕುರಿತ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಈ ಹಬ್ಬದ ಅಂಗವಾಗಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಶ್ರೀ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.

     ಶ್ರೀ ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸಂಭ್ರಮದಿAದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

     ಸಮಾಜದ ಎಲ್ಲಾ ಭಾಂದವರು ಭಾವೈಕ್ಯತೆಯಿಂದ ಮತ್ತು ಸಂತಸದಿAದ ಈ ಹಬ್ಬ ಆಚರಿಸಬೇಕು. ಇತರರಿಗೆ ನೋವಾಗದ ರೀತಿಯಲ್ಲಿ ಡಿಜೆ ಧ್ವನಿವರ್ಧಕಗಳನ್ನು ಬಳಸದೇ ಭಕ್ತಿ ಭಾವದಿಂದ ಆಚರಿಸಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸದೇ, ಸಾಂಸ್ಕೃತಿಕ ಮತ್ತು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದAತೆ ಶ್ರೀ ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಅವರು ಸಲಹೆ ನೀಡಿದರು.

     ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಕೂಡಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತು ಪಡಿಸಿ, ಉಳಿದ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬAಧಿಸಿದ ಇಲಾಖೆಗಳಾದ ತಹಸೀಲ್ದಾರರ ನೇತೃತ್ವದಲ್ಲಿ  ಪೊಲೀಸ್ ಇಲಾಖೆ, ಜೆಸ್ಕಾಂ

     ಇಲಾಖೆ, ನಗರ ಸಭೆ, ಅಗ್ನಿ ಶಾಮಕ ದಳ ಇಲಾಖೆಯವರಿಂದ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರತಿಷ್ಠಾಪಿಸಬೇಕು. ಪರವಾನಿಗೆ ಕುರಿತು ಏಕಗವಾಕ್ಷಿ ವ್ಯವಸ್ಥೆಯನ್ನು ನಗರ ಪೊಲೀಸ್ ಠಾಣೆ, ಯಾದಗಿರಿ, ಆಯಾ ತಾಲೂಕು ಕೇಂದ್ರಗಳು ಮತ್ತು ಗ್ರಾಮಗಳಲ್ಲಿ ಅರ್ಜಿಸಲ್ಲಿಸಿದ ಪೊಲೀಸ್ ಇಲಾಖೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲು ಎಲ್ಲಾ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

     ಶ್ರೀ ಗಣೇಶ ಪ್ರತಿಷ್ಠಾಪಿಸುವ ಪ್ರತಿಯೊಂದು ಸ್ಥಳದಲ್ಲಿ 10 ಜನ ಸ್ವಯಂ ಸೇವಕರು ನೇಮಕ ಮಾಡಲು ಹಾಗೂ ಕಮಿಟಿಯಲ್ಲಿಯ ಸದಸ್ಯರ ಕುರಿತಾದ ವರದಿಯನ್ನು ಸಂಬAಧಿಸಿದ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಸಂಬAಧಪಟ್ಟ ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ಪ್ರತಿಯೊಂದು ಗಣೇಶ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಸೂಕ್ತ ಪೋಲೀಸ್ ಮತ್ತು ಹೋಮ್‌ಗಾರ್ಡ ಸಿಬ್ಬಂದಿಯವರನ್ನು ಬಂದೋಬಸ್ತಗಾಗಿ ನಿಯೋಜಿಸಿ, ನಿಯಂತ್ರಿಸಿಕೊAಡು ಹೋಗಲು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಗಣೇಶ ಪ್ರತಿಮೆಯ ವಿಸರ್ಜನೆಯನ್ನು ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ವಿಸರ್ಜಿಸತಕ್ಕದೆಂದು ಹಾಗೂ ಸಣ್ಣ ಕೆರೆಯ ಸುತ್ತಮುತ್ತ ಇರುವ ಮುಳ್ಳುಕಂಟಿಗಳನ್ನು ತೆಗೆದು ಹಾಗೂ ರಸ್ತೆ ದುರಸ್ತಿ ಮಾಡಿ ರಸ್ತೆಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ಹಾಗೂ ಸ್ಥಳದಲ್ಲಿ ಜೆ.ಸಿ.ಬಿ. ಮತ್ತು ಜನರೇಟರ್‌ಗಳ ವ್ಯವಸ್ಥೆಯನ್ನು ಮಾಡಲು ನಗರಸಭೆ ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಕಡೆಯಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಮಾರ್ಗದ ಮಧ್ಯದ ವಿದ್ಯುತ್ ತಂತಿ ಸರಿಪಡಿಸಬೇಕು. ಗಿಡ ಗಂಟಿಗಳನ್ನು ತೆರವುಗೊಳಿಸಲು ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿವಸಗಳಂದು ವಿಸರ್ಜನೆಯ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ಹಾಗೂ ಫೈರ್ ಇಂಜೀನ್‌ನ ವ್ಯವಸ್ಥೆಯನ್ನು ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಾದಗಿರಿ ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.

     ಯಾವುದೇ ಕಾರಣಕ್ಕೂ ಗಣೇಶ ಮೂರ್ತಿ ವಿಸರ್ಜನೆಯನ್ನು ಭೀಮಾ ಮತ್ತು ಕೃಷ್ಣಾ ನದಿಯಲ್ಲಿ ಅಥವಾ ಯಾವುದೇ ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಕೂಡದು. ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿನಗಳಂದು ವಿದ್ಯುತ್ ವ್ಯತಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಇಲಾಖೆಗೆ ಹಾಗೂ ಸೂಕ್ತ ಪೊಲೀಸ್ ಬಂದೊಬಸ್ತಗೆ ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನದಂದು ಸಂಚಾರ ವ್ಯವಸ್ಥೆಗೆ ಅಡೆ ತಡೆಯಾಗದಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದAತೆ ಸಹಕರಿಸಲು ತಿಳಿಸಲಾಯಿತು.

     ಯಾದಗಿರಿ ಸಮಾಜದ ಮುಖಂಡರ ಕೋರಿಕೆಯಂತೆ, ಗಣೇಶ ವಿಸರ್ಜನಾ ಹೊಂಡದ ಪಕ್ಕದಲ್ಲಿ ಪರಿಣಿತ ಈಜುಗಾರರನ್ನು ಹಾಗೂ ಅಗ್ನಿಶಾಮಕ ಇಲಾಖೆಯವರು ಸದರಿ ಸಮಯದಲ್ಲಿ ಇರುವ ಹಾಜರಿರುವ ಕುರಿತು ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

     ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಯ ಹೊಗೆಯು ಮಾಲಿನ್ಯಕಾರಕ ಹಾಗೂ ಕಿವಿಗೆ ಹಾನಿಕಾರಕವಾದ್ದರಿಂದ, ಪಟಾಕಿಗಳನ್ನು ಸಿಡಿಸಬಾರದು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಉಪಯೋಗಿಸಬಾರದು. ಯಾದಗಿರಿ ಜಿಲ್ಲೆಯಾದ್ಯಂತ ಗಣೇಶ ವಿಗ್ರಹವನ್ನು ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಕೊಂಡೊಯ್ಯುವ ಪ್ರತಿಯೊಂದು ವಾಹನದ ಚಾಲಕರು ಸುಸ್ಥಿತಿಯಲ್ಲಿರುವಂತೆ (ಮದ್ಯಪಾನ ಮಾಡದೇ) ಹಾಗೂ ಗಣೇಶ ವಿಗ್ರಹವನ್ನು ಹಿಡಿಯುವ ವ್ಯಕ್ತಿಗಳೂ ಸಹ ಎಚ್ಚರಿಕೆ ವಹಿಸಲು ಎಲ್ಲಾ ಸಮಿತಿಯವರಿಗೆ ವಿಶೇಷವಾಗಿ ಗಣೇಶ ಉತ್ಸವದ ಮೇಲ್ವಿಚಾರಣೆಗಾಗಿ ನೇಮಕ ಮಾಡಲಾದ ಸಮಿತಿಯವರಿಗೆ ಸೂಚಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷಿö್ಮÃಕಾಂತ, ಸಿಪಿಐ ಸುನಿಲ್ ಮೂಲಿಮನಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಮುಖಂಡರಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಬಾಬು ದೋಖಾ, ಮರೆಪ್ಪ ಚಟ್ಟೆರಕರ್ ಇನ್ನಿತರ ಯುವ ಮುಖಂಡರು ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...