ವಾ.ವಿ.ಸಂ.124
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ : ಆಗಸ್ಟ್ 23, (ಕ.ವಾ) : 2024-25ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನವರ್ವಸತಿ ಯೋಜನೆಗಳ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆಹ್ವಾನಿಸಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ 2024ರ ಸೆಪ್ಟೆಂಬರ್ 21 ರಂದು ಸಂಜೆ 5.30 ಗಂಟೆ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ ದೂ.ಸಂ.08473 253739, 8105395485ಗೆ ವೆಬ್‌ಸೈಟ್ sevasindhu.karnataka.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ