ವಾ.ವಿ.ಸಂ.125
ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ
ಯಾದಗಿರಿ : ಆಗಸ್ಟ್ 23, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 26 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.
2024ರ ಆಗಸ್ಟ್ 26ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ