ವಾ.ವಿ.ಸಂ.126
ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಯಾದಗಿರಿ : ಆಗಸ್ಟ್ 23, (ಕ.ವಾ) : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಅವರು ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್/ಡಿ.ಎಂ.ಎಸ್), ದಂತವೈದ್ಯಕೀಯ (ಬಿ.ಡಿ.ಎಸ್/ಎಂ.ಡಿ.ಎಸ್)ಆಯುಷ್(ಬಿ.ಆಯುಶ್/ಎಂ.ಆಯುಶ್)ಇಂಜಿನಿಯರಿಂಗ್/ಟೆಕ್ನಾಲಜಿ(ಬಿ.ಇ/ ಬಿ.ಟೆಕ್/ಎಂ.ಇ/ಎಂ.ಟೆಕ್) ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್/ಎಂ.ಆರ್ಕ್), ಬಿ.ಎಸ್.ಇ ಹೊರಟಿಕಲ್ಚರ್ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಫಾರ್ಮಾಸ್ಯುಟಿಕಲ್, ಮುಂತಾದ ಕೋರ್ಸ್ ಗಳಲ್ಲಿ ಆಯ್ಕೆಯಾಗಿರುವಂತಹ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅಂದರೆ ಮುಸಲ್ಮಾನರು, ಕ್ರೈಸ್ತರು, ಜೈನರು, ಭೌದ್ಧ ಧರ್ಮಿಯರು ಸಿಖ್ಖರು ಮತ್ತು ಪಾರ್ಸಿ, ಸಮುದಾಯದವರಿಗೆ "ಅರಿವು (ರಿನ್ಯೂವಲ್)” ವಿದ್ಯಾಭ್ಯಾಸ ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿಸಲ್ಲಿಸುವಾಗ ನಿಗಮದಿಂದ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟ ಪಾವತಿಸಬೇಕಾಗಿರುತ್ತದೆ. ಶೇ.12 ರಷ್ಟು ಮೊತ್ತ ಆನ್‌ಲೈನ್ ಮುಖಾಂತರ ಪಾವತಿಸಬೇಕು. ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು, ರಿನ್ಯೂವಲ್ ಮೊತ್ತ ಪಾವತಿಸುವುದು ಅಗತ್ಯವಿರುವುದಿಲ್ಲಾ. ಆನ್‌ಲೈನ್ kmdconline.karnataka.gov.inನಲ್ಲಿ 2024ರ ಅಕ್ಟೋಬರ್ 31ರ ಒಳಗೆ ಅರ್ಜಿಸಲ್ಲಿಸಬೇಕು, ನಂತರ ಮೂಲ ದಾಖಲಾತಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ.8277799990 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ