ಗುರುವಾರ, ಆಗಸ್ಟ್ 22, 2024

 ಅಲ್ಲಿಪೂರ ಮುಖ್ಯ ರಸ್ತೆಯಿಂದ ಹೋರುಂಚಾ ವರೆಗೆ ರಸ್ತೆ ನಿರ್ಮಾಣ ಅಂದಾಜು ಮೊತ್ತ 300 ಲಕ್ಷ ರೂ.ಗಳ ಕಾಮಗಾರಿಯ ಅಡಿಗಲ್ಲು ಉದ್ಘಾಟನೆ ಕಾರ್ಯಕ್ರಮ


ಯಾದಗಿರಿ : ಆಗಸ್ಟ್ 22, (ಕ.ವಾ) : ಲೋಕೋಪಯೋಗಿ ಇಲಾಖೆವತಿಯಿಂದ 2023-24ನೇ ಸಾಲಿನ ಲೆಕ್ಕ ಶೀರ್ಷಿಕೆ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ (ನಾನ್ ಸೋಶಿಯಲ್) ಅನುದಾನದ ಅಡಿಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದಲ್ಲಿ ಅಲ್ಲಿಪೂರ ಮುಖ್ಯ ರಸ್ತೆಯಿಂದ ಹೋರುಂಚಾ ವರೆಗೆ ರಸ್ತೆ ನಿರ್ಮಾಣ ಅಂದಾಜು ಮೊತ್ತ 300 ಲಕ್ಷ ರೂ.ಗಳ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು 2024ರ ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ಹೋರುಂಚಾ ನಡುವಿನ ತಾಂಡಾದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
 
     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಮತ್ತು ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಲಬುರಗಿ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಶ್ರೀ ಡಾ.ಅಜಯಸಿಂಗ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.

     ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ ಅವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿ ಉದ್ಘಾಟಿಸುವರು. ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಅಲ್ಲಿಪೂರ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ವಿಠ್ಠಲ ರಾಠೋಡ  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

     ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಯಾದಗಿರಿ ವಿಭಾಗ ಲೋಕೋಪಯೋಗಿ ಕಾರ್ಯಪಾಲಕ ಇಂಜಿನೀಯರರು ಶ್ರೀ ಅಭಿಮನ್ಯ ಕೆ.ಎಸ್, ಯಾದಗಿರಿ ಉಪ ವಿಭಾಗ ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು ಶ್ರೀ ಶ್ರೀಧರ್ ಅವರು ಪ್ರಕಟಣೆ ಕೋರಿದೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...