ವಾ.ವಿ.ಸಂ.149
ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಆಯೋಜನೆ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಆಗಸ್ಟ್ 29, (ಕ.ವಾ) : ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಯರಗೋಳ ಗ್ರಾಮದಿಂದ ಕಡೆಚೂರ ಗ್ರಾಮದ ಗಡಿ ರವರೆಗೆ ಬರುವಂತಹ ಸುಮಾರು 27 ಜನ ವಸತಿ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಲು ಮೂಲಕ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.
ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಉದ್ದೇಶ ಹೊಂದಿದ್ದು, ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸಂವಿಧಾನದ ಗೌರವ, ಘನತೆ ಹೆಚ್ಚಿಸುವ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿ ಹೇಳುವಂತಹ ಮಾನವ ಸರಪಳಿ ರಚಿಸಿ ಯಶಸ್ವಿಯಾಗಿ, ಯಾವುದೇ ಲೋಪ ಆಗದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮದ ಯಶಸ್ವಿಗಾಗಿ 20 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ. ಪ್ರತಿ 1 ಕಿ.ಮೀ. ವ್ಯಾಪ್ತಿಗೆ ಏರಿಯಾ ಅಧಿಕಾರಿಗಳು ಮತ್ತು ಪ್ರತಿ 3 ಕಿಲೋಮೀಟರ್ ವ್ಯಾಪ್ತಿಗೆ ತಾಲೂಕ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ದೇಶಭಕ್ತಿ,ಐಕ್ಯತೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಸಾರುವಂತಹ ಮಾನವ ಸರ್ಪಳಿಯನ್ನು ನಿರ್ಮಿಸಬೇಕು. ವಿವಿಧ ಸಾಂಸ್ಕೃತಿಕ, ಕಲಾ ತಂಡಗಳ, ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ತುರ್ತು ಸೇವೆಗಾಗಿ ಆರೋಗ್ಯ ಇಲಾಖೆಯಿಂದ ನುರಿತ ಸಿಬ್ಬಂದಿ ಗಳೊಂದಿಗೆ ಚಿಕಿತ್ಸೆ ಸೌಲಭ್ಯ ಇರುವ ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಲಾತಂಡಗಳ ನಿಯೋಜನೆ ಮಾಡುವಂತೆ ಹಾಗೂ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ರೂಟ್ ಮ್ಯಾಪ್ ಗ್ರಾಮಗಳು : ಯರಗೋಳ, ಯರಗೋಳ ತಾಂಡ, ಮಲ್ಕಪನಳ್ಳಿ, ಗೇಮುನಾಯಕ ತಾಂಡ, ವೆಂಕಟೇಶ ನಗರ, ಅಲ್ಲಿಪೂರ ತಾಂಡ, ಅಲ್ಲಿಪೂರ, ಕಂಚಗಾರಹಳ್ಳಿ, ಚಾಮನಳ್ಳಿ ತಾಂಡ, ಆರ್ಯಭಟ ಸ್ಕೂಲ್, ಆದರ್ಶ ಸ್ಕೂಲ್, ಮೆಡಿಕಲ್ ಕಾಲೇಜು, ಮುದ್ನಾಳ ದೊಡ್ಡತಾಂಡ, ಮುಂಡರಗಿ, ಆಶನಾಳ ತಾಂಡ, ರಾಮಸಮುದ್ರ, ಮೈಲಾಪೂರ, ಹಳಿಗೇರಾ, ಆರ್ ಹೊಸಳ್ಳಿ, ನಗಲಾಪೂರ, ಬಳಿಚಕ್ರ, ಕಿಲ್ಲನಕೇರಾ, ಕರಿಬೆಟ್ಟ, ರಾಚನಳ್ಳಿ, ಶೆಟ್ಟಿಹಳ್ಳಿ, ಕಡೆಚೂರ, ಕಡೆಚೂರ ಬಾರ್ಡರ್ ಒಟ್ಟು 68 ಕಿಲೋಮೀಟರ್ ಮಾನವ ಸರಪಳಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಡಿವೈಎಸ್ಪಿ ಅರುಣಕುಮಾರ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕುಮಾರಿ ಸರೋಜಾ, ಡಿಡಿಪಿಐ ಮಂಜುನಾಥ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಹಶೀಲ್ದಾರ ಸುರೇಶ ಅಂಕಲಗಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ