ಮಂಗಳವಾರ, ಸೆಪ್ಟೆಂಬರ್ 24, 2024

                                                              ವಾ.ವಿ.ಸಂ.119

ಸೆ.25 ರಂದು ಅರಕೇರಾ.ಕೆ ಗ್ರಾಮ ಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ 

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್.ಮಧು ಬಂಗಾರಪ್ಪ ಅವರು ಬುಧವಾರ  ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11.30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ.ಕೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 6.30 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.


                                                              ವಾ.ವಿ.ಸಂ.118

ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ನಾಲ್ವರು ಸಾವು : 

ಕುಟುಂಬಸ್ಥರಿಗೆ ಸಚಿವರಾದ ಶರಣಬಸಪ್ಪ ದರ್ಶನಾಪುರ ಸಾಂತ್ವನ

ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಸೋಮವಾರ ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

     ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ.

     ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು. ಸಿಡಿಲು ಬಡಿದು ನೇನು (18), ಚೇನು (22), ಕಿಶನ್ (30) ಮತ್ತು ಸುಮಿ ಬಾಯಿ (30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ನುಡಿದರು. ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ ಸುರೇಶ ಅಂಕಲಗಿ ಸೇರಿದಂತೆ ಹಲವು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.










ಸೋಮವಾರ, ಸೆಪ್ಟೆಂಬರ್ 23, 2024

                                                              ವಾ.ವಿ.ಸಂ.108

 ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2024ರ ಅಕ್ಟೋಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯ ವಿಶ್ವನಾಥರೆಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ  ಸಬಲೀಕರಣ ಇಲಾಖೆ ಸಚಿವರಾದ ಶ್ರೀ ಲಕ್ಷಿö್ಮÃ ಹೆಬ್ಬಾಳಕರ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್, ಸರಕಾರದ ಕಾರ್ಯದರ್ಶಿ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಛ್ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಎಲ್ಲಾ ಸಂಘ ಸಂಸ್ಥೆಗಳು, ಹಿರಿಯ ನಾಗರಿಕರ ಹಾಗೂ ಮಾಧ್ಯಮ ಮಿತ್ರರು ಆಗಮಿಸುವಂತೆ, ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವೀರನಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ಪ್ರಕಟಣೆ ಕೋರಿದೆ.


ಭಾನುವಾರ, ಸೆಪ್ಟೆಂಬರ್ 22, 2024

                                                              ವಾ.ವಿ.ಸಂ.107

ಸೆ.26 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಯಾದಗಿರಿ : ಸೆಪ್ಟೆಂಬರ್ 23, (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 2024ರ ಸೆಪ್ಟೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.


     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಜಿಲ್ಲಾ ಸಮಸ್ತ ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು, ಕ್ರೀಡಾಪಟುಗಳು, ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶ್ರೀ ರಾಜು ಬಾವಿಹಳ್ಳಿ ಅವರು ಪ್ರಕಟಣೆ ಕೋರಿದೆ.  




ಶನಿವಾರ, ಸೆಪ್ಟೆಂಬರ್ 21, 2024

                                                              ವಾ.ವಿ.ಸಂ.106


 ಶ್ರೀ ಸಿದ್ದಲಿಂಗಯ್ಯ ಗದ್ದುಗೆ ಹಿರೇಮಠ ಪ್ರವೇಶ ಮಾಡದಂತೆ ನಿರ್ಬಂಧ ಆದೇಶ ಜಾರಿ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಯಾದಗಿರಿ ಜಿಲ್ಲೆಯಲ್ಲಿ 2024ರ ಸೆಪ್ಟೆಂಬರ್ 20 ರಿಂದ 22ರ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಹಿಂದೂಪರ ಭಾಷಣಕಾರ ರವರನ್ನು ಶಹಾಪೂರ ತಾಲ್ಲೂಕಿನಾದ್ಯಂತ ಪ್ರವೇಶ ಮಾಡದಂತೆ ನಿರ್ಬಂಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಹೊರಡಿಸಿದ್ದಾರೆ.


     2024ರ ಸೆಪ್ಟೆಂಬರ್ 20 ರಂದು ರಾತ್ರಿ 12 ಗಂಟೆಯಿAದ 2024ರ ಸೆಪ್ಟೆಂಬರ್ 22ರ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಇವರಿಗೆ ಶಹಾಪೂರ ತಾಲ್ಲೂಕು ಪ್ರವೇಶ ಮಾಡದಂತೆ ಬಿ.ಎನ್.ಎಸ್.ಎಸ್ ಕಾಯ್ದೆ 2023 ಸೆಕ್ಷನ್ 152, 162, 163 ರನ್ವಯ ನಿರ್ಬಂಧ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


                                                              ವಾ.ವಿ.ಸಂ.104

ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಭವಿಷ್ಯ ರೂಪಿಸಿ :

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ರೇಖಾ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಕಾರ್ಮಿಕರು ಬಡತನವಿದೆ ಎಂದು ನೊಂದುಕೊಳ್ಳಬಾರದು,  ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೌರವಾನ್ವಿತ ಶ್ರೀಮತಿ ಬಿ.ಎಸ್ ರೇಖಾ ಅವರು ನಿರ್ದೇಶಿಸಿದರು.

     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು, ಯೋಜನೆಗಳು ಹಾಗೂ ಬಡತನ ನಿರ್ಮೂಲನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

     ಕಾರ್ಮಿಕರು ಇಲ್ಲದೇ ಜೀವನವಿಲ್ಲ, ಪ್ರತಿಯೊಂದು ಹಂತದಲ್ಲಿ ಕಾರ್ಮಿಕರ ಅವಶ್ಯಕತೆ ಇರುತ್ತದೆ. ಬಡತನ ಇರುವ ಕಾರಣಕ್ಕೆ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಬದಲು ಕೆಲಸಕ್ಕೆ ಕಳಿಸುವ ಪ್ರಕರಣಗಳನ್ನು ಕಾಣುತ್ತಿದ್ದೇವೆ. ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರೇ ಆಗಬೇಕೆಂದೇನೂ ಇಲ್ಲ. ಸೂಕ್ತ ಶಿಕ್ಷಣ ಕೊಟ್ಟರೆ ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುತ್ತಾರೆ ಎಂದರು.

     ಇದೇ ವೇಳೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡುವ ಕುರಿತು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು ನ್ಯಾಯಾಧೀಶರು ವೀಕ್ಷಣೆ ಮಾಡಿದರು.

      ಈ ಸಂದರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಕೆ.ಮರಿಯಪ್ಪ ಅವರು ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾತನಾಡಿದರು.

    ಯಾದಗಿರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಹರಿ ಆರ್.ದೇಶಪಾಂಡೆ ಅವರು ಉಪಧನ ಪಾವತಿಕಾಯ್ದೆ, ಹೆರಿಗೆ ಸೌಲಭ್ಯಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ ಕುರಿತು ಮಾಹಿತಿ ನೀಡಿದರು.

     ಇನ್ನಿತರೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳ ಕುರಿತು ಉಪನ್ಯಾಸ ನಡೆಯಿತು..

     ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಎಕ್ಸಿಕ್ಯುಟಿವ್ ಆರ್.ಎನ್.ಶಿವರಾಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಕಾರ್ಮಿಕರು ಉಪಸ್ಥಿತರಿದ್ದರ






                                                              ವಾ.ವಿ.ಸಂ.103

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಲವೀಶ್ ಒರಡಿಯಾ ಜಿ.ಪಂ.ಸಿಒ

2024 ಸ್ವಚ್ಛತಯಡಿಗೆ ದಿಟ್ಟ ಹೆಜ್ಜೆ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನ






ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ವೈಯಕ್ತಿಕ ಸ್ವಚ್ಛತೆಯ ಜೊತೆ ಪರಿಸರ ಸ್ವಚ್ಛತೆ ಕಾಪಾಡುವುದು ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಅವರು ಹೇಳಿದರು.

    ಸ್ವಚ್ಛ ಭಾರತ ಮಿಷನ್ (ಗ್ರಾ) ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸೆಪ್ಟೆಂಬರ್ 17 ರಿಂದ 2024ರ ಅಕ್ಟೋಬರ್ 2 ವರೆಗೆ ಹಮ್ಮಿಕೊಂಡಿರುವ 15 ದಿನಗಳ ವಿಶೇಷ ಆಂದೋಲನಗಳಾದ ಸ್ವಚ್ಛತೆಯೇ ಸೇವೆ-2024, ಸ್ವಚ್ಛತೆÀಯಡಿಗೆ ದಿಟ್ಟ ಹೆಜ್ಜೆ ಹಾಗೂ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 21 ರಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿ ಮಾತನಾಡಿದರು.

     ಪರಿಸರ ಸ್ನೇಹಿ ಚಟುವಟಿಕೆ ಮೈಗೊಡಿಸಿಕೊಳ್ಳಬೇಕು ಮತ್ತು ಪರಿಸರ ಉಳಿಸ ಬೆಳಸಲು ಅವಶ್ಯವಿರುವ ಅಂಶಗಳನ್ನು, ಅಭ್ಯಾಸಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಂದಿನ ಯುವ ಪೀಳಿಗೆಯಲ್ಲಿ, ಮಕ್ಕಳಲ್ಲಿ ಪರಿಸರದ ಕಾಳಜಿ ಹೆಚ್ಚಿಸಬೇಕಿದೆ. ತಾಯಿಯ ಹೆಸರಲ್ಲಿ ಒಂದು ಗಿಡ ಆಂದೋಲನದಲ್ಲಿ ಸಸಿ ನೆಟ್ಟು ಅದರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂಬುವುದು ನಾವು ಮರೆಯಬಾರದು ಕಿವಿ ಮಾತು ಹೇಳಿದರು.

   ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಯೇ ಸೇವೆ ಪಾಕ್ಷಿಕ ಆಂದೋಲನದ ಅಂಗವಾಗಿ ಗ್ರಾಮ ಪಂಚಾಯತಿ, ಅಂಗನವಾಡಿ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಮಾಡುವುದು, ಬ್ಲಾಕ್ ಸ್ಪಾಟ್ ಕ್ಲೀನಿಂಗ್, ಚರಂಡಿ ಸ್ವಚ್ಚಗೊಳಿಸುವುದು ಮುಂತಾದ ಸ್ವಚ್ಛತೆಯ ಚಟುವಟಿಕೆಗಳನ್ನು  ಹಮ್ಮಿಕೊಳ್ಳಲಾಗುತ್ತಿದೆ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಭೋದಿಸುವುದು ಹಾಗೂ ಸ್ವಚ್ಛತೆಯೇ ಸೇವೆ ಆಂದೋಲನದ ಉದ್ದೇಶ ಪ್ರತಿಯೊಬ್ಬರಿಗೂ ತಲುಪಿಸಿ ಅವರ ಸ್ವಭಾವದಲ್ಲಿಯೇ ಸ್ವಚ್ಛತೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಅವರ ಸಂಸ್ಕಾರದಲ್ಲಿ ಸ್ವಚ್ಛತೆ ತರುವ ಉದ್ದೇಶವಾಗಿದೆ ಎಂದರು.

ಗ್ರಾಮದ ಸ್ವಚ್ಛತೆ ಕಾಪಾಡಲು ಕೆಲಸ ಮಾಡುತ್ತಿರುವ ಸಪಾಯಿಮಿತ್ರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿದೆ. ಸ್ವಚ್ಛತೆಯ ಕೆಲಸ ಮಾಡುತ್ತಿರುವುದರಿಂದ ಅವರ ಆರೋಗದ್ಯ ಕಾಳಜಿ ಮುಖ್ಯ

     ಈ ಸಂದರ್ಭದಲ್ಲಿ ಉಪಕಾರ್ಯದರ್ಶಿಗಳಾದ ವಿಜಯ ಕುಮಾರ ಮಡ್ಡೆ, ಯೋಜನಾ ನಿರ್ದೇಶಕರು ಹಾಗೂ ಸ್ವ.ಭಾ.ಮಿ & ನರೇಗಾ ಯೋಜನೆಯ ನೋಡಲ್ ಅಧಿಕಾರಿಗಲಾದ ಬಿ.ಎಸ್.ರಾಠೋಡ್, ಸಿಪಿಒ ಕೆ.ಕುಮಲಯ್ಯ, ಸಿಇಒ ವೆಂಕಟೇಶ ಚಟ್ನಳ್ಳಿ, ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ ಹಸದ್, ಅರಣ್ಯ ಇಲಾಖೆಯ ಅಧಿಕಾರಿಗಳು, ಅಧಿಕ್ಷರು, ಸ್ವ.ಭಾ.ಮಿ, ನರೇಗಾ, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು. 


                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...