ವಾ.ವಿ.ಸಂ.104
ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಭವಿಷ್ಯ ರೂಪಿಸಿ :
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ರೇಖಾ
ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಕಾರ್ಮಿಕರು ಬಡತನವಿದೆ ಎಂದು ನೊಂದುಕೊಳ್ಳಬಾರದು, ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೌರವಾನ್ವಿತ ಶ್ರೀಮತಿ ಬಿ.ಎಸ್ ರೇಖಾ ಅವರು ನಿರ್ದೇಶಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು, ಯೋಜನೆಗಳು ಹಾಗೂ ಬಡತನ ನಿರ್ಮೂಲನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರು ಇಲ್ಲದೇ ಜೀವನವಿಲ್ಲ, ಪ್ರತಿಯೊಂದು ಹಂತದಲ್ಲಿ ಕಾರ್ಮಿಕರ ಅವಶ್ಯಕತೆ ಇರುತ್ತದೆ. ಬಡತನ ಇರುವ ಕಾರಣಕ್ಕೆ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಬದಲು ಕೆಲಸಕ್ಕೆ ಕಳಿಸುವ ಪ್ರಕರಣಗಳನ್ನು ಕಾಣುತ್ತಿದ್ದೇವೆ. ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರೇ ಆಗಬೇಕೆಂದೇನೂ ಇಲ್ಲ. ಸೂಕ್ತ ಶಿಕ್ಷಣ ಕೊಟ್ಟರೆ ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುತ್ತಾರೆ ಎಂದರು.
ಇದೇ ವೇಳೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡುವ ಕುರಿತು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು ನ್ಯಾಯಾಧೀಶರು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಕೆ.ಮರಿಯಪ್ಪ ಅವರು ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾತನಾಡಿದರು.
ಯಾದಗಿರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಹರಿ ಆರ್.ದೇಶಪಾಂಡೆ ಅವರು ಉಪಧನ ಪಾವತಿಕಾಯ್ದೆ, ಹೆರಿಗೆ ಸೌಲಭ್ಯಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಇನ್ನಿತರೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳ ಕುರಿತು ಉಪನ್ಯಾಸ ನಡೆಯಿತು..
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಎಕ್ಸಿಕ್ಯುಟಿವ್ ಆರ್.ಎನ್.ಶಿವರಾಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಕಾರ್ಮಿಕರು ಉಪಸ್ಥಿತರಿದ್ದರ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ