ವಾ.ವಿ.ಸಂ.119
ಸೆ.25 ರಂದು ಅರಕೇರಾ.ಕೆ ಗ್ರಾಮ ಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ
ಯಾದಗಿರಿ : ಸೆಪ್ಟೆಂಬರ್ 24, (ಕ.ವಾ) : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್.ಮಧು ಬಂಗಾರಪ್ಪ ಅವರು ಬುಧವಾರ ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11.30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ.ಕೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ 2024-25ನೇ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು. ಅಂದು ಮಧ್ಯಾಹ್ನ 2.30 ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 6.30 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ