ಶುಕ್ರವಾರ, ಜನವರಿ 3, 2020

ವಸತಿನಿಲಯ ಮೇಲ್ವಿಚಾರಕ ಅನಿಲಕುಮಾರ ಅಮಾನತು
ವಸತಿಶಾಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಾಸ್ತವ್ಯ
ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಯಾದಗಿರಿ ತಾಲ್ಲೂಕಿನ ಬಂದಳ್ಳಿಯ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ (ನವೋದಯ)ಗೆ ಗುರುವಾರ ರಾತ್ರಿ ಅನಿರೀಕ್ಷಿತ ಭೇಟಿ ನೀಡಿ, ವಸತಿ ನಿಲಯದಲ್ಲಿಯೇ ವಾಸ್ತವ್ಯ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ವಸತಿ ಶಾಲೆಗೆ ಭೇಟಿ ನೀಡಿದಾಗ ನಿಲಯದ ಮೇಲ್ವಿಚಾರಕರಾದ ಅನಿಲಕುಮಾರ ಅವರು ಗೈರಾಗಿದ್ದರು. ಅಲ್ಲದೇ, ಅವರು ಮೊಬೈಲ್ ಸಂಪರ್ಕಕ್ಕೂ ಸಿಗಲಿಲ್ಲ. ಹಾಗಾಗಿ, ವಸತಿನಿಲಯದ ಮೇಲ್ವಿಚಾರಕರನ್ನು ಅಮಾನತು ಮಾಡಲು ಸಚಿವರು ಸೂಚಿಸಿದರು. ಅದರಂತೆ ಅನಿಲಕುಮಾರ ಅವರನ್ನು ಅಮಾನತು ಮಾಡಲಾಗಿದೆ.
ವಸತಿ ಶಾಲೆ ಮಕ್ಕಳೊಂದಿಗೆ ರಾತ್ರಿ ಭೋಜನ ಸವಿದ ಸಚಿವರು, ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ವಸತಿ ನಿಲಯದಲ್ಲಿ ಸ್ವಚ್ಛತೆಯ ಕೊರತೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಗ್ರಂಥಾಲಯ ಮತ್ತು ದಿನಪತ್ರಿಕೆಗಳ ವ್ಯವಸ್ಥೆ ಇಲ್ಲದಿರುವುದು, ಬಿಸಿನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ, ವಿದ್ಯುತ್ ಸಮಸ್ಯೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ವ್ಯವಸ್ಥೆ ಇಲ್ಲದಿರುವುದನ್ನು ಕಂಡ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವಸತಿನಿಲಯದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರತಿ ವಾರ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿಗಳು ವಸತಿನಿಲಯಕ್ಕೆ ಭೇಟಿ ನೀಡಬೇಕು. ಹತ್ತಿರದಲ್ಲೆ ಇರುವ ಕೆರೆಯಿಂದ ನೀರು ಸರಬರಾಜು ಮತ್ತು ಪೈಪ್‌ಲೈನ್ ವ್ಯವಸ್ಥೆ ಮಾಡಬೇಕು. ಯಾದಗಿರಿ ನಗರದಿಂದ ವಸತಿನಿಲಯಕ್ಕೆ ನಗರ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆಯ ಜೊತೆಗೆ ಸೋಲಾರ್ ವಾಟರ್ ಹೀಟರ್ ಅಳವಡಿಸುವಂತೆ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಪೂರ್ಣಿಮಾ ಚೂರಿ ಅವರಿಗೆ ಸೂಚಿಸಿದರು.
ವಸತಿನಿಲಯದ ಕಾಂಪೌAಡ್ ನಿರ್ಮಾಣಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಈ ಸಂದರ್ಭದಲ್ಲಿ ನಿರ್ದೇಶಿಸಿದರು. ಶುಕ್ರವಾರ ಬೆಳಿಗ್ಗೆ ಮಕ್ಕಳೊಂದಿಗೆ ಉಪಾಹಾರ ಸೇವಿಸಿದರು.

ಗುರುವಾರ, ಜನವರಿ 2, 2020

ಜಿಲ್ಲೆಯ ವೈದ್ಯಕೀಯ ಕಾಲೇಜು ಕನಸಿಗೆ ರೆಕ್ಕೆ

ಯಾದಗಿರಿ, ಜನವರಿ ೦೩ (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವ ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದು ತಿಳಿದ ವಿಚಾರ. ಈಗ ಉದ್ದೇಶಿತ ಯಾದಗಿರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ರಾಯಚೂರು ವೈದ್ಯಕೀಯ ಕಾಲೇಜು ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಹಾಗೂ ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾ.ಶಂಕರಗೌಡ ಐರೆಡ್ಡಿ ಅವರನ್ನು ನಿಯೋಜಿಸಿರುವುದು ವೈದ್ಯಕೀಯ ಕಾಲೇಜು ಕನಸಿಗೆ ರೆಕ್ಕೆ ಮೂಡಿದಂತಾಗಿದೆ.
ಯಾದಗಿರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ಡಾ.ಶಂಕರಗೌಡ ಐರೆಡ್ಡಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ೩೦೦ ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದ್ದು, ಸದ್ಯಕ್ಕೆ ಇದರಲ್ಲೇ ಮೆಡಿಕಲ್ ಕಾಲೇಜನ್ನು ಶೀಘ್ರದಲ್ಲಿ ಆರಂಭಿಸಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಆಸ್ಪತ್ರೆಗೆ ತೆರಳಲು ರಾಷ್ಟಿçÃಯ ಹೆದ್ದಾರಿ (ಮುಖ್ಯರಸ್ತೆ)ಯಿಂದ ಸಂಪರ್ಕ ಕಲ್ಪಿಸುವ ರಸ್ತೆಯು ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಜಿಲ್ಲಾಸ್ಪತ್ರೆಗೆ ಮಾನವ ಸಂಪನ್ಮೂಲ ವಾರ್ಷಿಕ ವೆಚ್ಚ ೫೦ ಕೋಟಿ ರೂಪಾಯಿ ಆಗಲಿದ್ದು, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ. ಜೊತೆಗೆ ಪೀಠೋಪಕರಣ ಹಾಗೂ ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲು ಟೆಂಡರ್ ಕರೆಯಲಾಗಿದೆ.
“ನೂತನ ಜಿಲ್ಲಾಸ್ಪತ್ರೆ ಕಾರ್ಯರೂಪಕ್ಕೆ ಬಂದಲ್ಲಿ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಕೂಡ ಆರಂಭಿಸಲು ಅನುಕೂಲವಾಗಲಿದೆ” ಎಂಬುದಾಗಿ ಕಳೆದ ತಿಂಗಳು ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ತಿಳಿಸಿದ್ದರು. ಅಲ್ಲದೇ, ರಾಜ್ಯ ಮಟ್ಟದಲ್ಲಿ ಚರ್ಚಿಸಿ ವೈದ್ಯಕೀಯ ಕಾಲೇಜು ಶೀಘ್ರ ಆರಂಭಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರು.
ಈ ಮೂಲಕ ಯಾದಗಿರಿಯಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾಗುವ ಕನಸು ನನಸಾಗುವ ಮೊದಲ ಹಂತದ ಕಾರ್ಯಗಳು ಪ್ರಗತಿಯಲ್ಲಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಜಿಲ್ಲೆಯಲ್ಲಿಯೇ ದೊರಕಲಿವೆ. ವಿಶೇಷ ಅಧಿಕಾರಿಯಾಗಿ ನೇಮಕವಾದ ಡಾ.ಶಂಕರಗೌಡ ಐರೆಡ್ಡಿ ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಡಾ.ಶಂಕರಗೌಡ ಐರೆಡ್ಡಿ ಅವರು ಮೂಲತಃ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆAಬಳಿ ಗ್ರಾಮದವರು.
ಜಿಲ್ಲೆಯಲ್ಲಿ ನೂತನ ಜಿಲ್ಲಾಸ್ಪತ್ರೆ ಜೊತೆಗೆ ಮೆಡಿಕಲ್ ಕಾಲೇಜು ಪ್ರಾರಂಭಿಸುವುದರ ಬಗ್ಗೆ ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರ ಜೊತೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷಾಧಿಕಾರಿ ಡಾ.ಶಂಕರಗೌಡ ಐರೆಡ್ಡಿ ಅವರು ಮಾತುಕತೆ ನಡೆಸಲಿದ್ದು, ಈ ಬಗ್ಗೆ ಸಂಪೂರ್ಣ ವರದಿಯನ್ನು ಕೂಡ ಸಲ್ಲಿಸಲಿದ್ದಾರೆ.
“ವೈದ್ಯಕೀಯ ಕಾಲೇಜಿಗೆ ಸುಮಾರು ೭೫೦ ಹಾಸಿಗೆಗಳ ಆಸ್ಪತ್ರೆ ಅಗತ್ಯವಿದೆ. ಸದ್ಯ ೩೦೦ ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿಯೇ ಮೆಡಿಕಲ್ ಕಾಲೇಜನ್ನು ೨೦೨೦-೨೧ನೇ ಸಾಲಿನಲ್ಲಿ ಕಾರ್ಯಾರಂಭ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಪರಿಶೀಲನೆಗಾಗಿ ಭಾರತೀಯ ವೈದ್ಯಕೀಯ ಸಂಸ್ಥೆಗೆ ಪತ್ರ ಬರೆಯುತ್ತೇನೆ. ನಂತರ ೨ರಿಂದ ೩ ತಿಂಗಳಲ್ಲಿ ಭಾರತೀಯ ವೈದ್ಯಕೀಯ ಸಂಸ್ಥೆಯ ತಂಡ ಆಗಮಿಸಿ ಜಿಲ್ಲಾಸ್ಪತ್ರೆಯನ್ನು ಪರಿವೀಕ್ಷಣೆ ಮಾಡಲಿದೆ. ಮೆಡಿಕಲ್ ಕಾಲೇಜು ಆರಂಭವಾದರೆ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಭಾಗ್ಯದ ಜೊತೆಗೆ ಆಸಕ್ತ ವಿದ್ಯಾರ್ಥಿಗಳಿಗೆ ಉನ್ನತ ವೈದ್ಯಕೀಯ ಶಿಕ್ಷಣ ದೊರಕಿದಂತಾಗುತ್ತದೆ” ಎಂದು ಡಾ.ಶಂಕರಗೌಡ ಐರೆಡ್ಡಿ ಅವರು ತಿಳಿಸುತ್ತಾರೆ.

ವಿವಿಧ ಗ್ರಾಮದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ನಿಷೇಧಿತ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳ ವಶ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ತಾಲ್ಲೂಕಿನ ಹೆಡಗಿಮದ್ರಾ, ಬೊಮ್ಮಚಟ್ನಳ್ಳಿ ಹಾಗೂ ತಳಕ್ ಗ್ರಾಮಗಳ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ ೫೦,೦೦೦ ರೂ. ಗಳ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದು ತಿಳಿಸಿದರು.
ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ದಾಳಿಯಲ್ಲಿ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಸೆಕ್ಷೆನ್ ೫ರಲ್ಲಿ ೬ ನೋಟಿಸು ನೀಡಲಾಗಿರುತ್ತದೆ. ಸೆಕ್ಷೆನ್ ೭ರಲ್ಲಿ ೩ ನೋಟಿಸು ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಸಾಬಯ್ಯ ಮತ್ತು ವೆಂಕಟೇಶ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಜ.೪, ೫ರಂದು ವಿದ್ಯುತ್ ವ್ಯತ್ಯಯ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ೧೧ ಕೆವಿ ವಿದ್ಯುತ್ ಮಾರ್ಗಗಳ ಐ.ಪಿ.ಡಿ.ಎಸ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಯಾದಗಿರಿ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಜನವರಿ ೪ ಮತ್ತು ೫ರಂದು ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಯಾದಗಿರಿ ಪಟ್ಟಣ ಏರಿಯಾ (ಎಫ್-೯) ವ್ಯಾಪ್ತಿಯ ಗಾಂಧಿಚೌಕ್, ಜೈನ್ ಕಾಲೊನಿ, ರಾಜೀವ ಗಾಂಧಿ ನಗರ, ಗಂಜ್ ಸರ್ಕಲ್, ಗಣೇಶ ನಗರ, ಮೈಲಾಪುರ ಬೇಸ್, ದುರ್ಗಾ ನಗರ, ಶಾಂತಿ ನಗರ, ಶಹಪೂರ ಪೇಠ, ಚಕ್ಕರ ಕಟ್ಟಾ, ರಂಗ ಮಹಲ್, ಚಟಾಣ್ ಏರಿಯಾ, ಪಟೇಲ್ ವಾಡಿ, ಹನುಮಾನ್ ನಗರ, ದಭೀರ್ ಕಾಲೊನಿ, ಆಸರ್ ಮೊಹಲ್ಲಾ ಹಾಗೂ ಮಾತಾ ಮಾಣಿಕೇಶ್ವರಿ ನಗರ (ಎಫ್-೧) ವ್ಯಾಪ್ತಿಯ ಶಹಜೀವನ್ ಶಾ ದರ್ಗಾ, ಅನಪೂರ ಮೌಲಾಲಿ ಲೇಔಟ್, ಆದರ್ಶ ನಗರ, ಹೊಸಳ್ಳಿ ಕ್ರಾಸ್ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನ, ಶಶಿಧರ್ ಕಾಲೊನಿ, ನಜರತ್ ಗಾರ್ಡನ್, ಗಿರಿ ನಗರ ಅಪಾರ್ಟ್ಮೆಂಟ್ ಏರಿಯಾ, ಹನುಮಾನ ದೇವಸ್ಥಾನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಜೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಆಕ್ಷೇಪಣೆ ಆಹ್ವಾನ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ತಾಲ್ಲೂಕು, ಜಿಲ್ಲಾ, ಉಪ ಜಿಲ್ಲಾ ಆಯುಷ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುತ್ತಿದ್ದು, ಅಂತಿಮ ಪೂರ್ವ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ ೧೫ ದಿನಗಳ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೭ರಂದು ತಾ.ಪಂ ಕೆಡಿಪಿ ಸಭೆ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಯಾದಗಿರಿ ಮತಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ)ಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ ೭ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಳೆದ ಡಿಸೆಂಬರ್ ೩೧ರಂದು ನಿಗದಿಪಡಿಸಿದ್ದ ಸದರಿ ಸಭೆಯನ್ನು ಕಾರಣಾಂತರಗಳಿAದ ಮುಂದೂಡಲಾಗಿತ್ತು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.೬ರಿಂದ ಉದ್ಯಮಶೀಲತಾ ಉಚಿತ ತರಬೇತಿ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)- ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರದ ವತಿಯಿಂದ ಉದ್ಯಮಶೀಲತಾ ಉಚಿತ ತರಬೇತಿಯನ್ನು ಜನವರಿ ೬ರಿಂದ ೯ರವರೆಗೆ ಹಮ್ಮಿಕೊಳ್ಳಲಾಗಿದ್ದು, ನಿರುದ್ಯೋಗ ಯುವಕ-ಯುವತಿಯರು ಹೆಸರು ನೋಂದಾಯಿಸಲು ತಿಳಿಸಲಾಗಿದೆ.
ಸಿಡಾಕ್-ದಿಶಾ ಉದ್ಯಮಶೀಲತಾ ಅಡಿಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಇಚ್ಛಿಸುವ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯಮಶೀಲತಾ ಕುರಿತು ಉಚಿತ ತರಬೇತಿ ನೀಡಲಾಗುವುದು. ವಿವಿಧ ಯೋಜನೆಗಳ ಮಾಹಿತಿ, ವ್ಯವಹಾರದ ಯೋಜನೆಗಳ ಆಯ್ಕೆ, ಹಣಕಾಸಿನ ಸಾಕ್ಷರತೆ, ಸ್ಥಳೀಯ ಸಂಪನ್ಮೂಲಗಳ ಬಳಕೆ, ನೋಂದಣೆ ಮಾಡುವ ವಿಧಾನಗಳು, ಸಂಭವನೀಯ ವ್ಯವಹಾರದ ಕಲ್ಪನೆಗಳು ಮತ್ತು ಮೌಲ್ಯಮಾಪನ, ಅನುಷ್ಠಾನ, ಸಾಲದ ಅರ್ಜಿ ಸಲ್ಲಿಸುವ ವಿಧಾನ, ತೆರಿಗೆ ನಿಯಮಗಳು, ಯೋಜನಾ ವರದಿ ತಯಾರಿಕೆ, ಜಾಹೀರಾತು ಮತ್ತು ಮಾರುಕಟ್ಟೆಯ ಕುರಿತು ಮತ್ತು ಯಶಸ್ವಿ ಉದ್ಯಮಿಗಳ ಜೊತೆ ಸಂವಾದ ಹೀಗೆ ಹಲವಾರು ರೀತಿಯ ಮಾರ್ಗದರ್ಶನ, ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುವುದು. ತರಬೇತಿ ಪಡೆಯಲು ಇಚ್ಛಿಸುವವರು ಎರಡು ಪಾಸ್‌ಪೋರ್ಟ್ ಫೋಟೋ ಮತ್ತು ಆಧಾರ್‌ಕಾರ್ಡ್ ಝರಾಕ್ಸ್ನೊಂದಿಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಲೋಚಕರಾದ ಪದ್ಮಶ್ರೀ ಪೋತದಾರ ಮೊ:೭೮೪೭೮೭೧೦೬೭ ಅವರನ್ನು ಸಂಪರ್ಕಿಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕ ೧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಅವಧಿಯು ೧ ವರ್ಷದ ಅವಧಿಗೆ ಸೀಮಿತವಾಗಿದ್ದು, ಕಾರ್ಯಕ್ಷಮತೆಯ ಆಧಾರದ ಮೇಲೆ ಗರಿಷ್ಠ ೩ ವರ್ಷಗಳ ಅವಧಿಗೆ ವಿಸ್ತರಿಸಲಾಗುವುದು. ಸಂಬAಧಿಸಿದ ಕ್ಷೇತ್ರದಲ್ಲಿ ಕನಿಷ್ಠ ೩ ವರ್ಷಗಳ ಅನುಭವ ಇರಬೇಕು. ಎಂಬಿಬಿಎಸ್ ವಿದ್ಯಾರ್ಹತೆ (ವೇತನ ೫೦ ಸಾವಿರ ರೂ.) ಹೊಂದಿದವರು ಬರದಿದ್ದಲ್ಲಿ, ಬಿಡಿಎಸ್ ವಿದ್ಯಾರ್ಹತೆ (೪೫ ಸಾವಿರ ರೂ.) ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಬಿಡಿಎಸ್ ವಿದ್ಯಾರ್ಹತೆ ಇರುವವರು ಲಭ್ಯವಿಲ್ಲದಿದ್ದಲ್ಲಿ ಎಂಪಿಎಚ್ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಅರ್ಜಿಯನ್ನು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯದಿಂದ ಪಡೆದು ಜನವರಿ ೧೫ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ:೦೮೪೭೩ ೨೫೩೭೬೫ ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಜನವರಿ ೩ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ೯.೩೦ ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ ೨.೩೦ಕ್ಕೆ ಸ್ಥಳೀಯ ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವರು. ರಾತ್ರಿ ೯ ಗಂಟೆಗೆ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಹೆಸರು ನೋಂದಾಯಿಸಲು ಮನವಿ
ನಾಳೆ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವನ್ನು ಜನವರಿ ೪ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಅವರು ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಪರಮರಡ್ಡಿ ಕಂದಕೂರ, ಕೋಶಾಧ್ಯಕ್ಷರಾದ ಯಾಮರಡ್ಡಿ, ಕಾರ್ಯಾಧ್ಯಕ್ಷರಾದ ಆರ್.ಎಂ.ನಾಟೇಕಾರ, ರಾಜ್ಯ ಪರಿಷತ್ ಸದಸ್ಯರಾದ ಸಂತೋಷ ನೀರಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ರಾಚಣ್ಣಗೌಡ, ಬಸವರಾಜ ಕೆರೂಟಗಿ ಅವರು ಅತಿಥಿಗಳಾಗಿ ಆಗಮಿಸುವರು.
ಹೆಸರು ನೋಂದಾಯಿಸಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ ೪ ಮತ್ತು ೫ರಂದು ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ತಮ್ಮ ಹೆಸರುಗಳನ್ನು ನೋಂದಾಯಿಸಲು ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಾಬರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆನ್ನಬಸಪ್ಪ ಕುಳಗೇರಿ ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಜ.೧೩ರಂದು ಜಿ.ಪಂ ಕೆಡಿಪಿ ಸಭೆ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ)ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ ೧೩ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೨ (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಬರಹಗಾರರಿಗೆ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗಾಗಿ ೨೫,೦೦೦ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್‌ಸಿಂಗ್ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಪ್ಯಾನ್‌ಕಾರ್ಡ್ ಜಿರಾಕ್ಸ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣಪತ್ರದ ಪ್ರತಿಯನ್ನು ಗೆಜೆಡೆಟ್ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕು. ಎ೪ ಸೈಜ್ ಹಾಳೆಯಲ್ಲಿ ಕನಿಷ್ಠ ೧೦೦ ಪುಟಗಳಿರುವ ಡಿಟಿಪಿ ಮಾಡಿದ ಕೃತಿಯನ್ನು ಸಲ್ಲಿಸಬೇಕು. ವಯೋಮಿತಿ ೧೮ ರಿಂದ ೪೦ ವರ್ಷದೊಳಗಿರಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಕನ್ನಡ ಸಾಹಿತ್ಯ ಪ್ರಕಾರಗಳಲ್ಲಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶೆ, ಲೇಖನ, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯ ಮತ್ತು ಪ್ರಬಂಧ (ಜೀವನ ಚರಿತ್ರೆ, ಪ್ರವಾಸ ಕಥನ ಮತ್ತು ಅಂಕಣ ಬರಹ), ಸಾಹಿತ್ಯ ಮಾನವಿಕ, ವಿಜ್ಞಾನ, ವಿಚಾರ ಹಾಗೂ ಇತರೆ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬAಧಿಸಿರಬೇಕು. ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು, ಅಭಿನಂದನಾ ಗ್ರಂಥಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ ಪ್ರಬಂಧಗಳನ್ನು, ಯಾವುದೇ ಧರ್ಮ, ದೇವರು, ಜಾತಿ ಕೋಮು, ವೃತ್ತಿ ಸಮುದಾಯ, ಭಾಷೆ, ಆಚರಣೆ, ಪದ್ಧತಿ, ನಿರ್ದಿಷ್ಟ ಸಂಗತಿ, ರಾಷ್ಟಿçÃಯ ನಾಯಕರು ಮುಂತಾದವುಗಳ ಕುರಿತು ನೇರವಾಗಿಯೇ ಅಥವಾ ಪರೋಕ್ಷಗಾಗಿಯೇ ಆಗಲಿ ಮನನೋಯಿಸುವಂತಹ ಹಾಗೂ ರಾಷ್ಟಿçÃಯ ಭಾವೈಕ್ಯತೆಗಳಿಗೆ ಧಕ್ಕೆ ತರುವಂತಹ ಪ್ರಸ್ತಾಪ ಆಗಿದ್ದಲ್ಲಿ ಅವುಗಳನ್ನು ಪರಿಗಣಿಸುವುದಿಲ್ಲ.
ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಈ ವಿಳಾಸಕ್ಕೆ ಜನವರಿ ೨೫ರೊಳಗಾಗಿ ಸಲ್ಲಿಸಬೇಕು. ಪ್ರಾಧಿಕಾರದ www.kannadapustakapradhikara.com ವೆಬ್‌ಸೈಟ್ ಅಥವಾ ಮೇಲ್ಕಂಡ ಕಚೇರಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ ೦೮೦-೨೨೪೮೪೫೧೬, ೨೨೦೧೭೭೦೪ ಸಂಪರ್ಕಿಸಲು ಕೋರಲಾಗಿದೆ.

ಬುಧವಾರ, ಜನವರಿ 1, 2020

ಜ.೬ರಂದು ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯನ್ನು ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ ಅವರ ಅಧ್ಯಕ್ಷತೆಯಲ್ಲಿ ಜನವರಿ ೬ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರಾಷ್ಟಿçಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ ಅವರು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಯಾದಗಿರಿ ಕಚೇರಿಯಲ್ಲಿ ೧-ಜಿಲ್ಲಾ ಸಂಯೋಜಕರು, ೧-ಜಿಲ್ಲಾ ಕಾರ್ಯಕ್ರಮ ಸಹಾಯಕರು ಹಾಗೂ ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯಗಳಲ್ಲಿ ತಲಾ ೧ ತಾಲ್ಲೂಕು ಸಂಯೋಜಕರು, ೧-ತಾಲ್ಲೂಕು ಕಾರ್ಯಕ್ರಮ ಸಹಾಯಕರು ಸೇರಿ ಒಟ್ಟು ೧೦-ಹುದ್ದೆಗಳನ್ನು ಪೋಷಣ್ ಅಭಿಯಾನ ಯೋಜನೆಯು ಜಾರಿಯಲ್ಲಿರುವವರೆಗೆ ಮಾತ್ರ ಗೌರವಧನ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನಕ್ಕೆ ಆಹ್ವಾನಿಸಿ ಸಂದರ್ಶನ, ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು, ಅನುಭವ, ಕಂಪ್ಯೂಟರ್ ಪರೀಕ್ಷೆಗಳ ಮೂಲಕ ನೇಮಕಾತಿಗೊಳಿಸಲಾಗುವುದು.
ಈ ಹುದ್ದೆಗಳಿಗೆ ಕರ್ತವ್ಯ ನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಯಾದಗಿರಿ ಕಚೇರಿ ಅಥವಾ ಎನ್.ಐ.ಸಿ. ವೆಬ್‌ಸೈಟ್: http://yadgir.nic.in ನಲ್ಲಿ ಪಡೆದು ಜನವರಿ ೨೦ರವರೆಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಚೇರಿಗೆ ಸಲ್ಲಿಸಬೇಕು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ಯಾದಗಿರಿ ನಗರದ ಹೊಸಳ್ಳಿ ಕ್ರಾಸ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್- ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಉಚಿತ ಕುರಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ೧೮ರಿಂದ ೪೫ ವರ್ಷ ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಕನಿಷ್ಠ ೭ನೇ ತರಗತಿ ವ್ಯಾಸಂಗ ಹೊಂದಿದ್ದು, ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಗ್ರಾಮೀಣ ಪ್ರದೇಶದವರಿಗೆ ಆದ್ಯತೆ ನೀಡಲಾಗುವುದು. ಜನವರಿ ೬ರಿಂದ ೧೫ರವರೆಗೆ ನಡೆಯಲಿರುವ ಕುರಿ ಸಾಕಾಣಿಕೆ ತರಬೇತಿಗೆ ಆಸಕ್ತರು ಸಂಸ್ಥೆಯ ಕಚೇರಿಯಲ್ಲಿ ಅಂಕಪಟ್ಟಿ ಅಥವಾ ವರ್ಗಾವಣೆ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಇತ್ತೀಚಿನ ೪ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಉಚಿತವಾಗಿ ವಸತಿ, ಊಟ ಹಾಗೂ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ವ್ಯವಸ್ಥೆ ಮಾಡಲಾಗುತ್ತದೆ. ತರಬೇತಿ ನಂತರ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ನಿರ್ದೇಶಕರಾದ ಎಸ್.ಆರ್.ನಾಡಗೇರಿ ಮೊ:೯೪೪೮೯೯೪೧೬೪, ಉಪನ್ಯಾಸಕರಾದ ಎಲ್.ಎನ್. ಲಕ್ಷö್ಮಣರೆಡ್ಡಿ ಮೊ:೯೮೮೦೯೦೭೧೩೯, ಕಚೇರಿ ಸಹಾಯಕರಾದ ಭೀಮಬಾಯಿ ಮೊ:೯೫೧೩೧೮೩೬೫೧ ಹಾಗೂ ಕಚೇರಿ ದೂ:೦೮೪೭೩೨೫೩೧೭೮ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿವಿಧ ಗ್ರಾಮದ ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ
ನಿಷೇಧಿತ ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳ ವಶ
ಯಾದಗಿರಿ, ಜನವರಿ ೦೧ (ಕರ್ನಾಟಕ ವಾರ್ತೆ): ತಾಲ್ಲೂಕಿನ ಮುದ್ನಾಳ, ಅಬ್ಬೆತುಮಕೂರ, ವಿಶ್ವಾಸಪೂರ, ಠಾಣಗುಂದಿ ಹಾಗೂ ಮುದ್ನಾಳ ತಾಂಡಾಗಳ ಸುಮಾರು ೨೦ಕ್ಕೂ ಹೆಚ್ಚು ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಸೋಮವಾರ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ ೨೫೦೦೦ ರೂ.ಗಳವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.
ಬಾಲಕಾರ್ಮಿಕ ಪದ್ಧತಿ ೧೯೮೬ರ ಕಾಯ್ದೆಯಡಿಯಲ್ಲಿ ೬ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅನಿರೀಕ್ಷಿತ ತಪಾಸಣೆ ವೇಳೆ ಪತ್ತೆಯಾದ ಮಕ್ಕಳ ದಾಖಲೆಗಳನ್ನು ವೀಕ್ಷಿಸಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಸೂಚಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರಿಗೆ ೫೦,೦೦೦ ರೂ. ಗಳ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲು ವಾಸ ಕೂಡ ವಿಧಿಸಬಹುದು ತಿಳಿಸಿದರು.
ಸಾಕಷ್ಟು ಬಾರಿ ಜಾಥಾ ಮೂಲಕ, ಆಟೊ ಪ್ರಚಾರ, ಕರಪತ್ರಗಳ ವಿತರಣೆ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರುಗಳಿಗೆ ಮಾಹಿತಿ ನೀಡಿದರೂ ಸಹ ಹಲವಾರು ಅಂಗಡಿ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ದಾಳಿಯಲ್ಲಿ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಸೆಕ್ಷೆನ್ ೫ರಲ್ಲಿ ೬ ನೋಟಿಸು ನೀಡಲಾಗಿರುತ್ತದೆ. ಸೆಕ್ಷೆನ್ ೭ರಲ್ಲಿ ೩ ನೋಟಿಸು ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಸಾಬಯ್ಯ ಮತ್ತು ವೆಂಕಟೇಶ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...