ಮಂಗಳವಾರ, ಜನವರಿ 5, 2021

 ಇಂದು ಮುಖ್ಯಮಂತ್ರಿಗಳಿAದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ 

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭವನ್ನು ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ. 

ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. 

ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು, ಐಟಿ-ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ಅಶ್ವಥ್ ನಾರಾಯಣ್ ಸಿ.ಎನ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. 

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು. 


ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಇಂದು  

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮದ ವಿವರಗಳು ಇಂತಿವೆ: 

 ಜ.6ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 2.45ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವರು. ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತೆ ಆವರಣದಲ್ಲಿ ಆಯೋಜಿಸಲಾಗಿರುವ ಯಾದಗಿರಿ ವಿಧಾನಸಭ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು. 

 ಸಂಜೆ 5 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ ಮೂಲಕ ಬೀದರ್ ಏರ್‌ವೇಸ್‌ಗೆ ಸಂಜೆ 5.45ಕ್ಕೆ ತೆರಳಿ, ಸಂಜೆ 6 ಗಂಟೆಗೆ ಬೀದರ್ ಏರ್‌ಬೇಸ್‌ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



ಕೆಕೆಆರ್‌ಡಿಬಿ ಅಧ್ಯಕ್ಷರ ಜಿಲ್ಲಾಪ್ರವಾಸ ಇಂದು   

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

 ಅವರು ಜ.6ರ ಬುಧವಾರ ಮಧ್ಯಾಹ್ನ 2.30ಕ್ಕೆ ಆಗಮಿಸಿ, ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕೆಕೆಆರ್‌ಡಿಬಿ ಅಧ್ಯಕ್ಷರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. 

7ರಂದು ಶಿಬಿರ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ  ಜಿಲ್ಲೆಯ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ 17 ವರ್ಷದೊಳಗಿನ ಬಾಲಕ/ ಬಾಲಕಿಯರಿಗಾಗಿ  ಜಿಲ್ಲಾ, ರಾಜ್ಯ ಮತ್ತು ರಾಷ್ಟç ಮಟ್ಟದ ಕೀಡ್ರಾಪಟುಗಳಿಗೆ ಜ.7 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರತಿಭಾನ್ವೇಷಣಾ ಆಯ್ಕೆ ಶಿಬಿರ ಆಯೋಜಿಸಲಾಗಿದೆ.

ಈ ಆಯ್ಕೆ ಶಿಬಿರವು ಜ.7 ರ ಬೆಳಿಗ್ಗೆ 10 ಗಂಟೆಯಿAದ ಪ್ರಾರಂಭವಾಗಲಿದೆ. ಆಸಕ್ತರು ಜಾತಿ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಬ್ಯಾಂಕ್ ಖಾತೆಯ ಪುಸ್ತಕದ ಪ್ರತಿಯೊಂದಿಗೆ ಕಡ್ಡಾಯವಾಗಿ ಯಾವುದಾದರು ಒಂದು ಗುರುತಿನ ಚೀಟಿ ತರುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿಂಗಳು ಪೂರ್ತಿ ಶೇ. 50 ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಮಾರಾಟ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):-  ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇಕಡಾ 50 ರಷ್ಟು ರಿಯಾಯಿತಿ ದರದಲ್ಲಿ ಜನವರಿ ತಿಂಗಳು ಪೂರ್ತಿ ಮಾರಾಟ ಮಾಡಲಾಗುತ್ತಿದೆ.

ಈ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿನ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸೇರಿದಂತೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಕನ್ನಡ ಸಿರಿಗನ್ನಡ ಪುಸ್ತಕ ಮಳಿಗೆಗಳಲ್ಲಿ ಲಭ್ಯವಿದೆ. ಅಲ್ಲದೆ ಆನ್‌ಲೈನ್ ಮೂಲಕ ಖರಿದಿಸುವರಿಗೂ ಸಹ ರಿಯಾಯಿತಿ ಪಡೆಯಬಹುದಾಗಿದೆ.  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಅಂತಿಮ ಆಯ್ಕೆ ಪ್ರಕಟ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಸ್ಥಳೀಯ ವೃಂದದ 12 ಮತ್ತು ಪರಸ್ಥಳೀಯ ವೃಂದದ 09 ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಕಳೆದ ಸೆ.28 ರಂದು ನಡೆದ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡಿರುವ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಯನ್ನು ಈಗಾಗಲೇ ನಗರದಲ್ಲಿ ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿರುವ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿನ ಸೂಚನಾ ಪಲಕದಲ್ಲಿ ಮತ್ತು ತಿತಿತಿ.ಥಿಚಿಜgiಡಿಠಿoಟiಛಿe.iಟಿ ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾದಗಿರಿಯಿಂದ ಬೆಂಗಳೂರಿಗೆ ನಾನ್ ಎಸಿ ಬಸ್ ಪ್ರಾರಂಭ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಯಾದಗಿರಿ-ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಜ.1 ರಿಂದ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಿಳಿಸಿದ್ದಾರೆ.

ಈ ನಾನ್ ಎಸಿ ಸ್ಲೀಪರ್ ಸಾರಿಗೆ ಯಾದಗಿರಿಯಿಂದ ಸಂಜೆ 7 ಗಂಟೆಗೆ ಹೊರಡಲಿದ್ದು ಸೈದಾಪೂರ, ರಾಯಚೂರು, ಮಂತ್ರಾಲಯ ಮಾರ್ಗವಾಗಿ ಮರುದಿನ ಬೆಳಿಗ್ಗೆ 06 ಗಂಟೆಗೆ ಬೆಂಗಳೂರು ತಲುಪುತ್ತದೆ, ಮತ್ತೇ ಅದೇ ದಿನ ಸಾಯಂಕಾಲ 9 ಗಂಟೆಗೆ ಬೆಂಗಳೂರಿನಿAದ ಅನಂತಪೂರ ಮಾರ್ಗವಾಗಿ ಮಾರನೆ ದಿನ ಬೆಳಿಗ್ಗೆ 07.15 ಗಂಟೆಗೆ ಆಗಮಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಮೀನು ನೀಡಲು ಅರ್ಜಿ ಆಹ್ವಾನ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆ ಅಡಿ ನಿವೇಶನ ನಿರ್ಮಾಸಿಸುವ ಉದ್ದೇಶಕ್ಕಾಗಿ ಪಟ್ಟಣದ 5 ಕೀ.ಮೀ ಒಳಗಡೆ ನಗರ ಯೋಜನೆ ಪ್ರಾಧಿಕಾರ ಅಡಿಯಲ್ಲಿ ಬರುವ ಖಾಸಗಿ ಜಮೀನು ಬೇಕಾಗಿದು ಆಸಕ್ತಿಯುಳ್ಳ ಜಮೀನು ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. 

ಆಸಕ್ತ ಭೂ ಮಾಲಿಕರ ಒಪ್ಪಿಗೆ ಪತ್ರ, ಉದ್ದೇಶಿಸಿರುವ ಜಮೀನು ವಸತಿಗೆ ಯೋಗ್ಯವಾಗಿರುವ ಬಗ್ಗೆ ತಹಸೀಲ್ದಾರರಿಂದ ದೃಢೀಕರಣ, ನಮೂನೆ (ಜಿಲ್ಲಾಧಿಕಾರಿಗಳ ಸಹಿಯೊಂದಿಗೆ), ಭೂ ಮಾಲೀಕರ ಕುಟುಂಬಗಳ ವಂಶವೃಕ್ಷ ದಾಖಲೆಗಳೊಂದಿಗೆ ಜ.19ರೊಳಗೆ ಕೆಂಭಾವಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಪುರಸಭೆ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ. 

ಜಿಲ್ಲಾ ಉಸ್ತುವಾರಿ ಸಚಿವರಿಂದ ನಂದಿನಿ ಪಾರ್ಲರ್ ಉದ್ಘಾಟನೆ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ನಂದಿನಿ ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ, ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ಮೂಲಕ ಹಾಲು ಹಾಗೂ ಹಾಲಿನ ಉತ್ಪನ್ನಗಳು ತಯಾರಿಸಿ ಮಾರಾಟ ಮಾಡಲಾಗುತ್ತಿದೆ, ಜನರು ಇದರ ಸದುಪಯೋಗ ಪಡೆಯುವಂತೆ ಪಶುಸಂಗೋಪನೆ, ಹಜ್ ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ಕರೆ ನೀಡಿದರು. 

 ಅವರು ಜ.5ರ ಮಂಗಳವಾರ ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ನಂದಿನಿ ಪಾರ್ಲರ್ ಉದ್ಘಾಟಿಸಿ ಮಾತನಾಡಿದರು. 

ಈ ವೇಳೆ ಖುದ್ದು ಸಚಿವರೇ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು ವಿಶೇಷವಾಗಿತ್ತು. 

ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ನಂದಿನಿ ಸಿಹಿ ಉತ್ಸವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಹಕರು 


 ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ

ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜ.6ರ ಬುಧವಾರ ಜಿಲ್ಲೆಗೆ ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವ ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ನೂತನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕೈಗೊಂಡಿದ್ದ ಸಿದ್ದತೆಗಳನ್ನು ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಜ.5ರ ಮಂಗಳವಾರ ಭೇಟಿ ನೀಡಿದರು.
ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವ ಸ್ಥಳವನ್ನು ಸಂಪೂರ್ಣವಾಗಿ ಪರಿಶೀಲಿಸಿದ ಸಚಿವರು, ನಿಗದಿತ ಅವಧಿಯೊಳಗೆ ಪೆಂಡಾಲ್ ಕಾರ್ಯಗಳು ಪೂರ್ಣಗೊಳ್ಳಬೇಕು, ವೇದಿಕೆ ನಿರ್ಮಾಣ ಸೂಕ್ತವಾಗಿ ಆಗಬೇಕು, ವಿದ್ಯುತ್ ಸಂಪರ್ಕ, ಆಸನಗಳು, ಧ್ವನಿವರ್ಧಕಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ವಾಹನ ನಿಲ್ದಾಣಕ್ಕೆ ಸೂಕ್ತ ಸ್ಥಳವನ್ನು ಕಾಯ್ದಿರಿಸಬೇಕು, ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರನ್ನೂ ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಬೇಕು, ಕಡ್ಡಾವಾಗಿ ಮಾಸ್ಕ್ ಧರಿಸಬೇಕು, ಕುಡಿಯುವ ನೀರು ಪೂರೈಕೆ, ಮಧ್ಯಾಹ್ನದ ಭೋಜನ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್, ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ, ಯಾದಗಿರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್ ಸೇರಿದಂತೆ ಜನಪತ್ರಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಅಯ್ಯಪ್ಪ ಕ.ರ.ವೇ, Vishwanath Reddy Allur and 6 others

ಸೋಮವಾರ, ಜನವರಿ 4, 2021

 ಮುಖ್ಯಮಂತ್ರಿಗಳಿAದ ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾನ ಸಮಾರಂಭವನ್ನು ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ. 

ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. 

ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. 

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು. 


ಇಂದಿನಿAದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ 

ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಇದೇ ಜ.5 ಹಾಗೂ 6 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅವರು ಕೈಗೊಂಡಿರುವ ಪ್ರವಾಸದ ವಿವರ ಇಂತಿದೆ. 

 ಇದೇ ಜ.6ರಂದು ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಯ ಪ್ರವಾಸ ಕೈಗೊಳ್ಳುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಮತ್ತು ಅಧಿಕಾರಿ ಹಾಗೂ ಶಾಸಕರು ಹಾಗೂ ಸ್ಥಳೀಯ ಮುಖಂಡರೊAದಿಗೆ ಚರ್ಚಿಸುವರು ಹಾಗೂ ಸ್ಥಳ ಪರಿಶೀಲನೆ ನಡೆಸುವರು. 

ಬೆಳಿಗ್ಗೆ 11 ಗಂಟೆಗೆ ಯಾದಗಿರಿಯಿಂದ ಬಸವ ಕಲ್ಯಾಣಕ್ಕೆ ಪ್ರಯಾಣಿಸುವರು. 

ಜ.6ರ ಮಧ್ಯಾಹ್ನ ಬಸವಕಲ್ಯಾಣದಿಂದ ಯಾದಗಿರಿಗೆ ಆಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

 ಸಂಜೆ 5 ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 6ರಂದು ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಸಚಿವರ ಭೇಟಿ

ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

 ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು.  ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

 ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್‌ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  6ರಂದು ಉಪ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ 

ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 

 ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು.  ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು. 

 ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್‌ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಗುರುಮಿಠಕಲ್‌ನಲ್ಲಿಂದು ಟೌನ್‌ಹಾಲ್, ಆಡಿಟೋರಿಯಂ ಕಟ್ಟಡ ನಿರ್ಮಾಣಕ್ಕೆ ಚಾಲನೆ 

ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಟೌನ್ ಹಾಲ್ ಕಟ್ಟಡದ ನಿರ್ಮಾಣ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಡಿಟೋರಿಯಂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇದೇ ಜ.5ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ. 

 ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಪೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಿಳಿ ಅಧ್ಯಕ್ಷರೂ ಹಾಗೂ ಸುರುಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಮುಖ್ಯ ಅತಿ


 ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

6 ರಂದು ಜಿಲ್ಲೆಗೆ ಮುಖ್ಯಮಂತ್ರಿಗಳ ಆಗಮನ: ಅಗತ್ಯ ಸಿದ್ದತೆಗೆ 

ಜಿಲ್ಲಾಧಿಕಾರಿಯವರ ಸೂಚನೆ

ಯಾದಗಿರಿ,ಜ 04, (ಕ.ವಾ)- ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜನವರಿ 06ರ ಬುಧವಾರ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲು ಆಗಮಿಸುತ್ತಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ  ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯ ಆರ್ ಅವರು ನಿರ್ದೇಶನ ನೀಡಿದ್ದರು.


 ಅವರು ಜ.4ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


 ಜನವರಿ 06 ರ ಬುಧವಾರ ಮಧ್ಯಾಹ್ನ 2.30ಕ್ಕೆ ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಯವರು 56 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ, 17.66 ಕೋಟಿ ರೂ.ಗಳ ವೆಚ್ಚದಲ್ಲಿ ವರ್ಕನಳ್ಳಿಯಲ್ಲಿ ನಿರ್ಮಾಣಗೊಂಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, 3.80ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಯಾದಗಿರಿ ನಗರದಲ್ಲಿ ನೂತನ ನಗರ ಸಾರಿಗೆ ಬಸ್ ನಿಲ್ದಾಣ್ ಹಾಗೂ ವಿಭಾಗೀಯ ಕಚೇರಿ, 1.35 ಕೋಟಿ ರೂ.ಗಳ ವೆಚ್ಚದ ಶಹಾಪುರ ತಾಲ್ಲೂಕಿನ ಬೆಂಡೆಬೆAಬಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, 1.25 ಕೋಟಿ ರೂ.ಗಳ ವೆಚ್ಚದಲ್ಲಿ ವಡಗೇರಾ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಗೆ ಹೆಚ್ಚವರಿ 10 ಕೋಣೆಗಳ ನಿರ್ಮಾಣ, 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಯಾದಗಿರಿ ತಾಲ್ಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ, 50 ಲಕ್ಷ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಮುರುಘೇಂದ್ರ ಮಠದ ಹತ್ತಿರ ಯಾತ್ರಿಕ ನಿವಾಸ ಕಟ್ಟಡ ಹಾಗೂ 50ಲಕ್ಷ ರೂ ಗಳ ವಡಗೇರಾ ತಾಲ್ಲೂಕಿನ ಸಂಗಮನಾಥ ದೇವಸ್ಥಾನದ ಹತ್ತಿರ ಯಾತ್ರಿ ನಿವಾಸ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸುವರು ಎಂದು ಹೇಳಿದರು. 

 ಅದರಂತೆ 325 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಯಾದಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ, 63.31 ಕೋಟಿ ರೂ.ಗಳ ವೆಚ್ಚದಲ್ಲಿ ರಾಮಸಮುದ್ರದಲ್ಲಿ 220/110/11 ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರದ ಸ್ಥಾಪನೆ, 24.75 ಕೋಟಿ ರೂ.ಗಳ ವೆಚ್ಚದಲ್ಲಿ ಕಾಡಂಗೇರಾದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಪರಿಶಿಷ್ಟ ಜಾತಿ), 19.90 ಕೋಟಿ ರೂ.ಗಳ ವೆಚ್ಚದಲ್ಲಿ ಯದಗಿರಿ ನಗರದಲ್ಲಿ ಭೀಮಾ ನದಿ ಹತ್ತಿರ ಜ್ಯಾಕ್‌ವೆಲ್ ನಿರ್ಮಾಣ, 6 ಕೋಟಿ ರೂ.ಗಳ ವೆಚ್ಚದಲ್ಲಿ  ಕೊಳ್ಳರು (ಎಮ್) ಗ್ರಾಮದಲ್ಲಿ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ 4.80 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆಯ ಅಭಿವೃದ್ಧಿ (ಕಿ.ಮೀ27ರಿಂದ 33ರವರೆಗೆ), 4 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ವಿವಿಧ ವಾರ್ಡ್ಗಳಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, 2.08 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಶಾಸ್ತಿç ವೃತ್ತದ ಸೌಂದರೀಕರಣ ಮತ್ತು ಶಾಸ್ತಿç ವೃತ್ತದಿಂದ ದೊಡ್ಡ ಹಳ್ಳದವರೆಗೆ ಚರಂಡಿ ನಿರ್ಮಾಣ, 2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 18.80 ರಿಂದ 21.30 ರವರೆಗೆ ಸುಧಾರಣೆ),  2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 21.30 ರಿಂದ 23.80 ರವರೆಗೆ ಸುಧಾರಣೆ) ಹಾಗೂ 1 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಸೇರಿದಂತೆ ಒಟ್ಟಾರೆ ಅಂದಾಜು 536.91 ರೂ.ಗಳ ವೆಚ್ಚದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸುವರು ಎಂದು ಹೇಳಿದರು.

 ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಯಾವುದೇ ಲೋಪದೋಷಗಳಾಂಗದAತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ತಿಳಿಸಿದರು.


 ಕಾರ್ಯಕ್ರಮ ನಡೆಯಲಿರುವ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಿಕೆ ತಯಾರಿ, ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಉತ್ತಮ ಆಸನಗಳ ವ್ಯವಸ್ಥೆ ಕಲ್ಪಿಸಬೇಕು, ಪೊಲೀಸ್ ಕಾನ್ವಾಯ್, ಬಂದೋಬಸ್ತ್, ಜಿಲ್ಲಾ ಕ್ರೀಡಾಗಂಣದಲ್ಲಿ ಹೆಲಿಪ್ಯಾಡ್ ನಿರ್ಮಾಣ, ಆಹಾರ ಮತ್ತು ಉಪಹಾರ ಪೂರೈಕೆ, ಕುಡಿಯುವ ನೀರು, ಸ್ಯಾನಿಟೈಜರ್, ಶೌಚಾಲಯ, ಆಂಬುಲೆನ್ಸ್, ವೈದ್ಯರು ಹಾಗೂ ಅಗ್ನಿ ಶಾಮಕ ವಾಹನಗಳ ವ್ಯವಸ್ಥೆಗಳನ್ನು ಸಂಬAಧಿಸಿದ ಇಲಾಖೆ ಮುಖ್ಯಸ್ಥರು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.


 ಕಾರ್ಯಕ್ರಮ ನಡೆಯವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು, ಮುಖ್ಯವಾಗಿ ಕಾರ್ಯಕ್ರಮ ನಡೆಯುವ ದಿನದಂದು ಆಗಮಿಸುವರನ್ನು ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಬೇಕು, ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು, ಅದರಂತೆ ಪರಸ್ಪರ ಸಾಮಜಿಕ ಅಂತರ ಕಾಯ್ದುಕೊಳ್ಳಲು ಸಲಹೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.


 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಪಾಟೀಲ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳು ಸಭೆಯಲಿದ್ದರು. 




ಶನಿವಾರ, ಜನವರಿ 2, 2021

 ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

***********************************
ಯಾದಗಿರಿ, ಜ.2 (ಕರ್ನಾಟಕ ವಾರ್ತೆ):- ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗಾಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2020-21ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳು ನಿಗದಿಪಡಿಸಿದ ನಮೂನೆಗಳನ್ನು ಪಡೆದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ಜ.20 ರ ರೊಳಗಾಗಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಪ್ರಶಸ್ತಿಗೆ ಆಯ್ಕೆಯಾದವರಿಗೆ ಅಂತರಾಷ್ಟೀಯ ಮಹಿಳಾ ದಿನಾಚರಣೆಯೆಂದು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
**************************************************
ಯಾದಗಿರಿ, ಜ.2 (ಕರ್ನಾಟಕ ವಾರ್ತೆ):- ಜಿಲ್ಲೆಯ ಸುರಪುರ ನಗರಸಭೆಯ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆಯಡಿಯಲ್ಲಿ ನಿವೇಶನ ನಿರ್ಮಿಸುವ ಉದ್ದೇಶಕ್ಕಾಗಿ ಸುರಪುರ ಪಟ್ಟಣದ 5 ಕಿ.ಮೀ ಒಳಗಡೆ ನಗರ ಯೋಜನೆ ಪ್ರಾಧಿಕಾರ ಅಡಿಯಲ್ಲಿ ಬರುವ ಖಾಸಗಿ ಜಮೀನು ಬೇಕಾಗಿದ್ದು, ಆಸಕ್ತಿಯುಳ್ಳ ಜಮೀನು ಮಾಲೀಕರು ಅರ್ಜಿ ಸಲ್ಲಿಸುವಂತೆ ನಗರಸಭೆ ವತಿಯಿಂದ ಕೋರಲಾಗಿದೆ.
ಅರ್ಜಿ ಸಲ್ಲಿಸಲು 15 ದಿನಗಳ ಕಾಲವಕಾಶ ನೀಡಿದ್ದು, ಭೂ ಮಾಲೀಕರ ಒಪ್ಪಿಗೆ ಪತ್ರ , 15 ವರ್ಷಗಳ ಇಸಿ, ನಮೂನೆ 11ಎ, ಕುಟುಂಬ ವಂಶ ವೃಕ್ಷ, 200.ರೂ, ಮಾಲ್ಯದ ಛಾಪಾ ಕಾಗದ, ಟೊಂಚ್ ಮ್ಯಾಪ್, ಆಕಾರ ಬಂದ ಸೇರಿದಂತೆ ಇತರ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯವನ್ನು ಸಂಪರ್ಕ ಮಾಡಬಹುದು ಎಂದು ಸುರಪುರ ನಗರಸಭೆ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ, ಅಕ್ಟೋಬರ್ 23, 2020

 ಆಸ್ಪತ್ರೆಗಳಲ್ಲಿಯೇ ಅರ್ಹರಿಗೆ ಆಯುಷ್ಮಾನ್ ಕಾರ್ಡ್ ಒದಗಿಸಲು ಜಿಲ್ಲಾಧಿಕಾರಿ ಸೂಚನೆ 

ಯಾದಗಿರಿ, ಅಕ್ಟೋಬರ್.23 (ಕರ್ನಾಟಕ ವಾರ್ತೆ):- ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ಬರುವ ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಒದಗಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್ ಅವರು ನಿರ್ದೇಶನ ನೀಡಿದರು. 

ಅವರು ಅ.23ರ ಶುಕ್ರವಾರ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಇ-ಆಸ್ಪತ್ರೆ ಹಾಗೂ ಇ-ಸಂಜೀವಿನಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಪ್ರತಿದಿನ ಸಾಕಷ್ಟು ಸಂಖ್ಯೆಯ ರೋಗಿಗಳು ಚಿಕಿತ್ಸೆಗೆಂದು ಬರುತ್ತಾರೆ, ಅವರಲ್ಲಿ ಅರ್ಹರಿಗೆ ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ಮುದ್ರಿಸಿ ನೀಡುವ ವ್ಯವಸ್ಥೆ ಮಾಡಬೇಕು, ಸಂಬಂಧಿಸಿದ ಆಸ್ಪತ್ರೆಗಳಲ್ಲಿಯೇ ಆಯುಷ್ಮಾನ್ ಕಾರ್ಡ್ ನೀಡಿದ್ದಲ್ಲೀ, ಮುಂಬರುವ ಎರಡು ತಿಂಗಳಲ್ಲಿ ಅರ್ಹರೆಲ್ಲರಿಗೂ ಆಯುಷ್ಮಾನ್ ಕಾರ್ಡ್ ತಲುಪಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಅಧಿಕಾರಿಗಳಿಗೆ ಸೂಚಿಸಿದರು. 

 ಜಿಲ್ಲೆಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತಗಳಲ್ಲಿ ಹಾಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ  ಬರುವ ಅರ್ಹರಿಗೆ ಈ ಕಾರ್ಡ್ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಭಗವಂತ ಅನ್ವರ್, ಡಾ. ಸಂಜೀವ ಕುಮಾರ್ ಸೇರಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಅಧಿಕಾರಿಗಳು ಉಪಸ್ಥಿತರಿದ್ದರು. 


ಗುರುವಾರ, ಅಕ್ಟೋಬರ್ 22, 2020

ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಶ್ಲಾಘನೆ
 ಕೋವಿಡ್ ಸಂದರ್ಭದಲ್ಲಿ ಪೊಲೀಸರ ಕರ್ತವ್ಯ ಸ್ಮರಣಿಯ

ಯಾದಗಿರಿ, ಅಕ್ಟೋಬರ್ 21 (ಕರ್ನಾಟಕ ವಾರ್ತೆ): ಕೋವಿಡ್, ಪ್ರವಾಹ ಸಂದರ್ಭಲ್ಲಿ ಪೊಲೀಸರು ಸಲ್ಲಿಸಿದ ಕರ್ತವ್ಯ ಸೇವೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್ ಅವರು ಪೊಲೀಸರ ಕಾರ್ಯವನ್ನು ಶ್ಲಾಘನೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಅಕ್ಟೋಬರ್ 21ರಂದು ಬುಧವಾರ ಪೊಲೀಸ್ ಇಲಾಖೆ ವತಿಯಿಂದ ಕರ್ತವ್ಯದ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್ ಹಾಗೂ ನೆರೆÀ ಪ್ರವಾಹ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಯಾವ ರೀತಿಯಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು? ಯಾವ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚನೆ ಮಾಡುತ್ತಾರೆ. ಆದ್ದರಿಂದ ಸಾರ್ವಜನಿಕರು ಕೂಡ ಕಾನೂನು ಪಾಲನೆ ಮಾಡುತ್ತಾ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
1959ರ ಅಕ್ಟೋಬರ್ 21ರಂದು ಲಡಾಕ್‍ನಲ್ಲಿ ಕರ್ತವ್ಯ ಪಾಲನೆಯ ಸಂದರ್ಭದಲ್ಲಿ 10ಜನ ಪೊಲೀಸ್‍ರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದಲ್ಲಿ ಒಟ್ಟು 264 ಹಾಗೂ ಕರ್ನಾಟಕದಲ್ಲಿ 17 ಜನ ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಹೇಳಿದ ಅವರು, ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, 1959ರ ಅಕ್ಟೋಬರ್ 21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೋಸ್ಟ್ ಹತ್ತಿರ ಸಿಆರ್‍ಪಿಎಫ್ ಡಿಎಸ್‍ಪಿ ಕರಣಸಿಂಗ್ ಅವರ ನೇತೃತ್ವದಲ್ಲಿ ಪೊಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಲಾಗುತ್ತದೆ. ಆ ಸಂದರ್ಭದಲ್ಲಿ ವೈರಿಗಳ ದಾಳಿಗೆ ವಿಚಲಿತರಾಗದೆ ತಮ್ಮ ಪ್ರಾಣದ ಹಂಗನ್ನು ತೊರೆದು ಕೊನೆಯುಸಿರಿನವರೆಗೂ ಧೈರ್ಯದಿಂದ ಹೋರಾಡಿ ಪ್ರಾಣ ತೆತ್ತ 10 ಜನ ಭಾರತೀಯ ಪೊಲೀಸ್ ಯೋಧರ ಬಲಿದಾನದ ಸ್ಮರಣೆಯ ಪ್ರತೀಕವಾಗಿ ಪ್ರತಿ ವರ್ಷ ಅಕ್ಟೋಬರ್ 21ರಂದು ದೇಶದಾದ್ಯಂತ ಎಲ್ಲಾ ಜಿಲ್ಲಾ ಪೊಲೀಸ್ ಕೇಂದ್ರ ಸ್ಥಾನಗಳಲ್ಲಿ ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ದೇಶದಲ್ಲಿ ಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣವನ್ನು ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ ಒಟ್ಟು 264 ಜನ ಪೊಲೀಸರು ಸೇವೆಯಲ್ಲಿ ಪ್ರಾಣಾರ್ಪಣೆ ಮಾಡಿದ್ದಾರೆ. ಇವರಲ್ಲಿ ಕರ್ನಾಟಕದ 17 ಜನ ಧೀರ ಪೊಲೀಸ್ ಯೋಧರಾದ ಮನೋಹರ ಎಸ್. ಗಣಾಚಾರಿ, ಚನ್ನಕೇಶವ ಬಿ.ಸಿ, ಸಿ ಮಲ್ಲೇಶಾಹ, ಚಂದ್ರಹಾಸ, ಯಲ್ಲಪ್ಪ ರಾಮಪ್ಪ ತಳವಾರ, ಶ್ರೀನಿವಾಸ ಎಂ, ಮಂಜುನಾಥ ಕೆ, ಕುಮಾರ ಕೆ.ಆರ್, ಧನಂಜಯ ವಾಯ್, ಮರಿಸ್ವಾಮಿ, ವೆಂಕಟೆ ಗೌಡ ಬಿ.ಎನ್, ಕೇಶವ್, ಚನ್ನಗಂಗಯ್ಯ, ರಾಮನಾಯ್ಕ ದುಂಡಪ್ಪ ನಾಯ್ಕ, ಮೋಹನ್ ಟಿ.ಪಿ, ಕರಿಯಪ್ಪ ಎಸ್. ಕರಿಗಾರ, ಎಸ್.ಎನ್ ಕೊಲಿ ಅವರು ಸೇರಿದ್ದಾರೆ ಎಂದು ವಿವರಿಸಿದರು.
ಪುಷ್ಪಗುಚ್ಛ ಅರ್ಪಣೆ: ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಪುಷ್ಪಗುಚ್ಛ ಅರ್ಪಿಸಿದರು.ಯಾದಗಿರಿ ಸುರಪುರ ವಿಭಾಗದ ಡಿವೈಎಸ್‍ಪಿ ವೆಂಕಟೆಶ ಉಗಿಬಂಡಿ,ಯವರು ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಇಂದುಧರ ಸಿನ್ನೂರ, ಟಿ.ವಿ 9 ಜಿಲ್ಲಾ ವರದಿಗಾರರಾದ ಅಮೀನ್ ಹೊಸೂರು, ಪ್ರಜಾವಾಣಿ ಜಿಲ್ಲಾ ವರದಿಗಾರ ಬಿ.ಜಿ ಪ್ರವೀಣಕುಮಾರ, ಕ್ರಾಂತಿ ಕನ್ನಡ ದಿನ ಪತ್ರಕೆಯ ಜಿಲ್ಲಾ ವರದಿಗಾರರಾದ ಸಾಗರಕುಮಾರ ದೇಸಾಯಿ, ಸಗರನಾಡು ಪತ್ರಿಕೆಯ ಸಂಪಾದಕರಾದ ಸಿದ್ದಪ್ಪ ಲಿಂಗೇರಿ ಸೇರಿದಂತೆ ಮಾಧ್ಯಮ ಮಿತ್ರರು, ಹುತಾತ್ಮ ಪೊಲೀಸರ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೊಲೀಸ್ ಹುತಾತ್ಮರ ಗೌರವ ಸೂಚಕವಾಗಿ ಪರೇಡ್ ಕಮಾಂಡರ್ ಆರ್‍ಎಸ್‍ಐ ಚಂದ್ರಶೇಖರ ಅವರ ನೇತೃತ್ವದಲ್ಲಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದ ನಂತರ ಮೌನಾಚರಣೆ ಮಾಡಲಾಯಿತು. ಕಾನ್‍ಸ್ಟೆಬಲ್ ಸಂತೋಷ ಎಂ. ಜಯಕರ್ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...