ಕೋವಿಡ್ ಲಸಿಕೆ ಅಣಕು ಪ್ರಯೋಗಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಶುಕ್ರವಾರ, ಜನವರಿ 8, 2021
ಮಂಗಳವಾರ, ಜನವರಿ 5, 2021
56 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ * ಗುಣಮಟ್ಟದ ಚಿಕಿತ್ಸೆ ಲಭ್ಯ
300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ: ಸಕಲ ಸೌಕರ್ಯ!
ಯಾದಗಿರಿ,ಜ.5(ಕರ್ನಾಟಕ ವಾರ್ತೆ):- 56 ಕೋಟಿ ರೂ.ವೆಚ್ಚದಲ್ಲಿ ಯಾದಗಿರಿ ಸಮೀಪದ ಮುದ್ನಾಳ ಬಳಿ ನಿರ್ಮಾಣಗೊಂಡಿರುವ 300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆಯಲ್ಲಿ ಸಕಲ ಸೌಕರ್ಯ ಒಳಗೊಂಡಿದ್ದು, ಜ.6ರಂದು ಮುಖ್ಯಮಂತ್ರಿಗಳಿAದ ನಾಡಿಗೆ ಲೋಕಾರ್ಪಣೆಗೊಳ್ಳಲಿದೆ.
ಇನ್ಮುಂದೆ ಗಿರಿನಾಡಿನ ಜನರು ಚಿಕಿತ್ಸೆಗಾಗಿ ಕಲಬುರಗಿ,ರಾಯಚೂರು,ಸೋಲಾಪುರ ಸೇರಿದಂತೆ ಇತರೆಡೆ ಮುಖಮಾಡದೇ ತಮ್ಮ ಜಿಲ್ಲಾಕೇಂದ್ರದಲ್ಲಿ ಸಕಲ ಸೌಕರ್ಯ ಒಳಗೊಂಡು ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
ನೂತನ ಜಿಲ್ಲಾಸ್ಪತ್ರೆಯು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಿಂದ 3 ಕಿ.ಮೀ ಅಂತರವಿದೆ.ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯಲ್ಲಿ ನೆಲ ಮಹಡಿಯಲ್ಲಿ ಸ್ವಾಗತ ಕೌಂಟರ್, ಹೊರ ರೋಗಿ ವಿಭಾಗ (ಓ.ಪಿ.ಡಿ), ತಪಾಸಣೆ ಕೊಠಡಿ, ಮೈನರ್ ಶಸ್ತç ಕೊಠಡಿ ರೋಗ ತಪಾಸಣೆ ಹಾಗೂ ಇನ್ನೀತರ ಪ್ರಮುಖವುಗಳು ಇರಲಿವೆ.
ಜಿಲ್ಲಾಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಮೈನರ್ ಶಸ್ತç ಕೊಠಡಿ, ಐ.ಸಿ.ಯು, ಯುರೋಲಜಿ, ಡರ್ಮಾಟಾಲಾಜಿ, ಇ.ಎನ್.ಟಿ ಸೆೆಂಟರ್, ಡಯಾಲೈಸಿಸ್, ಸಭಾಂಗಣ ಇನ್ನೀತರ ಪ್ರಮುಖವುಗಳು ಒಳಗೊಂಡಿದೆ.
ಎರಡನೇ ಮಹಡಿಯಲ್ಲಿ ಮೇಜರ್ ಶಸ್ತç ಕೊಠಡಿ -2 , ಮಾಡುಲರ್ ಶಸ್ತç ಕೊಠಡಿ, ರಕ್ತ ನಿಧಿ, ಗ್ರಂಥಾಲಯ , ಸ್ಪೇಷಲ್ ವಾರ್ಡ್, ಮೂರನೇ ಮಹಡಿಯಲ್ಲಿ ಮೇಜರ್ ಓಟಿ , ಪುನರ್ವಸತಿ ಸೆಂಟರ್ ಲ್ಯಾಬ್, ಸ್ಪೆಷಲ್ ವಾರ್ಡಗಳು, ಪ್ಯಾಂಟಿ ಸ್ಟೋರ್ ಇವೆ.
ಟೆರಸ್ ಮಹಡಿಯಲ್ಲಿ ಎ.ಹೆಚ್.ಯು ಕೊಠಡಿ, ಲಿಫ್ಟ್ ಮಶೀನ್ ಕೋಣೆ, ಸಿಂಟೆಕ್ಸ್ ಟ್ಯಾಂಕ್ಗಳು, ಸೋಲಾರ್ ವಾಟರ್ ಹೀಟರ್ಸ್ ಇವೆ.
ನೂತನ ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗಾಗಿಯೇ ವಸತಿ ಗೃಹಗಳನ್ನು ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿದ್ದು ನೆಲಮಹಡಿ ಹಾಗೂ ಮೊದಲ ಮಹಡಿ ಸೇರಿದಂತೆ 8 ಯೂನಿಟ್ ಹೊಂದಿದೆ. ಶುಶ್ರೂಕಿಯರಿಗಾಗಿ ಮೂರು ಮಹಡಿಯಲ್ಲಿ 12ಯೂನಿಟ್ಗಳಲ್ಲಿ ವಸತಿಗೃಹ ನಿರ್ಮಿಸಲಾಗಿದೆ. ಗ್ರೂಪ್ ಡಿ ಸಿಬ್ಬಂದಿಗಾಗಿ 8 ಯೂನಿಟ್ಗಳಲ್ಲಿ ವಸತಿಗೃಹ ನಿರ್ಮಿಸಲಾಗಿದೆ.
ವಿದ್ಯುತ್ಚ್ಛಕ್ತಿ ಕೊಣೆ,ಗ್ಯಾಸ್ ಮನಿಪೋಲ್ಡ್ ಕೋಣೆ, ಶವಗಾರ ಕೋಣೆ ಸೇರಿದಂತೆ ಜಿಲ್ಲಾಸ್ಪತ್ರೆಗೆ ಬೇಕಾಗುವ ಎಲ್ಲ ಸೌಕರ್ಯಗಳನ್ನು ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾಸ್ಪತ್ರೆಯಲ್ಲಿವೆ.
ಯೋಜನೆಯ ಅಂದಾಜು ವೆಚ್ಚ 325 ಕೋಟಿ ರೂ.*ಗಿರಿನಾಡಿನ ಬಹುದಿನಗಳ ಕನಸಿಗೆ ಸ್ಪಂದನೆ
ಯಾದಗಿರಿಯಲ್ಲಿ ಸಿಎಂ ಅವರಿಂದ ಯಿಮ್ಸ್ಗೆ ಶಂಕುಸ್ಥಾಪನೆ ಜ.6ರಂದು
ಯಾದಗಿರಿ,ಜ.5(ಕರ್ನಾಟಕ ವಾರ್ತೆ):- ಕಲ್ಯಾಣ ಕರ್ನಾಟಕ ಭಾಗದ ಗಿರಿನಾಡು ಖ್ಯಾತಿಯ ಯಾದಗಿರಿ ಜಿಲ್ಲೆಯ ಜನರ ಬಹುದಿನಗಳ ಕನಸಿನ ಕೂಸಾದ ಯಿಮ್ಸ್ (ಯಾದಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್)ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸ್ಪಂದಿಸಿದೆ. ಸಿಎಂ ಯಡಿಯೂರಪ್ಪ ಅವರು 325 ಕೋಟಿ ರೂ.ವೆಚ್ಚದಲ್ಲಿ ಯಾದಗಿರಿ ಸಮೀಪದ ಮುದ್ನಾಳ ಗ್ರಾಮದ ಹತ್ತಿರ ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಸಂಸ್ಥೆಯ ಕಾಮಗಾರಿಗೆ ಜ.6ರಂದು ಮಧ್ಯಾಹ್ನ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಯೋಜನೆಯ ಒಟ್ಟು ಅಂದಾಜು ಮೊತ್ತ 438.75 ಕೋಟಿ ರೂ.ಗಳಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಸ್ಥಾಪಿಸಲಾಗುತ್ತಿದೆ. ಈ ಯಿಮ್ಸ್ ಸ್ಥಾಪನೆಯಾಗುವುದರಿಂದ ಜಿಲ್ಲೆ ಸೇರಿದಂತೆ ರಾಜ್ಯದ ಪ್ರತಿಭಾವಂತರಿಗೆ ವೈದ್ಯರಾಗುವ ಅವಕಾಶ ಕಲ್ಪಿಸಿಕೊಡುತ್ತಿದೆ ಮತ್ತು ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಇದರ ಜೊತೆಗೆ ಗುಣಮಟ್ಟದ ಚಿಕಿತ್ಸಯೂ ಈ ಭಾಗದ ಜನರಿಗೆ ಲಭ್ಯವಾಗುವ ಆಶಾವಾದ ಮೂಡಿದೆ.
ಈ ಯಿಮ್ಸ್ ಸಂಸ್ಥೆಯು 70 ಎಕರೆ ಜಾಗದಲ್ಲಿ ಸಾಕಾರಗೊಳ್ಳುತ್ತಿದೆ. ಶೈಕ್ಷಣಿಕ ವಿಭಾಗದ ನಾಲ್ಕು ಅಂತಸ್ತಿನ ಕಟ್ಟಡ, ಆರು ಅಂತಸ್ತಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ನಿಲಯಗಳು, ಬೋಧಕ ಸಿಬ್ಬಂದಿಯ 5 ಅಂತಸ್ತಿನ ವಸತಿ ಕಟ್ಟಡ, ಬೋಧಕೇತರ ಸಿಬ್ಬಂದಿಯ 7 ಅಂತಸ್ತಿನ ಕಟ್ಟಡ, 7 ಅಂತಸ್ತಿನ ನರ್ಸ್ ವಸತಿ ಗೃಹ, ಡೀನ್ ಮತ್ತು ಪ್ರಾಂಶುಪಾಲರಿಗೆ ವಸತಿ ಗೃಹಗಳು ಈ ಆವರಣದಲ್ಲಿ ತಲೆ ಎತ್ತಲಿವೆ.
ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹೆಸರಿನಲ್ಲಿ 150 ಎಂ.ಬಿ.ಬಿ.ಎಸ್. ಸೀಟುಗಳ ಹೊಸ ವೈದ್ಯಕೀಯ ಕಾಲೇಜ್ನ್ನು ಸ್ವಾಯತ್ತ ಸಂಸ್ಥೆಯ ಸ್ಥಾನಮಾನದೊಂದಿಗೆ ಸ್ಥಾಪಿತವಾಗಲಿದೆ. ಯಿಮ್ಸ್ ಕಟ್ಟಡದ ಕಾಮಗಾರಿಯನ್ನು 24 ತಿಂಗಳೊಳಗೆ ಮುಗಿಸಲು ಸರಕಾರವು ಗುತ್ತಿಗೆ ಪಡೆದಿರುವ ಹೈದರಾಬಾದ್ನ ಕೆಎಂವಿ ಪ್ರೆöÊವೆಟ್ ಪ್ರೊಜೆಕ್ಟ್ ಲಿಮಿಟೆಡ್ಗೆ ಸೂಚಿಸಿದೆ.
*ಯಿಮ್ಸ್ ಕಟ್ಟಡದಲ್ಲೇನಿರಲಿದೆ..?: ಯಿಮ್ಸ್ನಲ್ಲಿ 37117.50 ಚದರ ಮೀಟರ್ ವಿಸ್ತೀರ್ಣದಲ್ಲಿ ಅಕಾಡೆಮಿಕ್ ಬ್ಲಾಕ್ ನಿರ್ಮಾಣವಾಗಲಿದ್ದು, 4 ಅಂತಸ್ತಿನ ಕಟ್ಟಡ, ಆಡಳಿತ ಕಛೇರಿ, ಭೋಧಕ ಕೊಠಡಿಗಳು, ಕೇಂದ್ರ ಗ್ರಂಥಾಲಯ, ಪರೀಕ್ಷಾ ಕೊಠಡಿಗಳು, ಸೆಮಿನಾರ್ ಹಾಲ್, ಪ್ರಯೋಗಾಲಯಗಳು ಇನ್ನೀತರ ಪ್ರಮುಖವುಗಳು ಒಳಗೊಂಡಿರಲಿದೆ.
11571.00ಚದರ ಮೀಟರ್ ವಿಸ್ತೀರ್ಣದಲ್ಲಿ 6 ಅಂತಸ್ತಿನ ಕಟ್ಟಡ ಬಾಲಕರ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದ್ದು, 187 ಕೊಠಡಿಗಳಿರಲಿದ್ದು, 374 ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.
11571.00ಚದರ ಮೀಟರ್ ವಿಸ್ತೀರ್ಣದಲ್ಲಿ 6 ಅಂತಸ್ತಿನ ಕಟ್ಟಡ ಬಾಲಕೀಯರ ವಿದ್ಯಾರ್ಥಿನಿಲಯ ನಿರ್ಮಾಣವಾಗಲಿದ್ದು, 187 ಕೊಠಡಿಗಳಿರಲಿದ್ದು, 374 ವಿದ್ಯಾರ್ಥಿನಿಯರಿಗೆ ಸ್ಥಳಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.
9509.00 ಚದರ ಮೀಟರ್ ವಿಸ್ತೀರ್ಣದಲ್ಲಿ 5 ಅಂತಸ್ತಿನ ಬೋಧಕ ಸಿಬ್ಬಂದಿ ವಸತಿ ಗೃಹ ನಿರ್ಮಾಣವಾಗಲಿದ್ದು, 32 ವಸತಿಗೃಹಗಳಿರಲಿವೆ.
ಬೋಧಕೇತರ ಸಿಬ್ಬಂದಿಗೂ 3422 ಚದರ ಮೀಟರ್ ವಿಸ್ತೀರ್ಣದಲ್ಲಿ 7 ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದ್ದು, 24 ವಸತಿ ಗೃಹಗಳಿರಲಿವೆ.3422 ಚದರ್ ಮೀಟರ್ ವಿಸ್ತೀರ್ಣದಲ್ಲಿ ಶೂಶ್ರುಷಕರಿಗಾಗಿ 7 ಅಂತಸ್ತಿನ ಕಟ್ಟಡ ವಸತಿ ಗೃಹ ನಿರ್ಮಿಸಲಾಗುತ್ತಿದ್ದು, 24 ವಸತಿಗೃಹಗಳಿರಲಿವೆ.
ಡೀನ್ ಹಾಗೂ ಪ್ರಾಂಶುಪಾಲರುಗಳಿಗೆ ವಸತಿ ಗೃಹ, 330.00 ಚ.ಮೀ ವಿಸ್ತೀರ್ಣದಲ್ಲಿ ವಾಣಿಜ್ಯ ಕಟ್ಟಡ, ಸರ್ವಿಸ್ ಬ್ಲಾಕ್ ಕಟ್ಟಡ ನಿರ್ಮಾಣ ಒಳಗೊಂಡಿರುತ್ತದೆ.
ಈ ಯಿಮ್ಸ್ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರು ಕಟ್ಟಡಗಳ ಒಟ್ಟಾರೆ ವಿಸ್ತೀರ್ಣ: 78072.50 ಚದರ ಮೀಟರ್ (839935.18 ಚದರ ಅಡಿಗಳು) ಇರಲಿದೆ.
ಇಂದು ಮುಖ್ಯಮಂತ್ರಿಗಳಿAದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭವನ್ನು ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು, ಐಟಿ-ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ಅಶ್ವಥ್ ನಾರಾಯಣ್ ಸಿ.ಎನ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು.
ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಇಂದು
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಕೈಗೊಂಡಿರುವ ಪ್ರವಾಸ ಕಾರ್ಯಕ್ರಮದ ವಿವರಗಳು ಇಂತಿವೆ:
ಜ.6ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 2.45ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವರು. ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತೆ ಆವರಣದಲ್ಲಿ ಆಯೋಜಿಸಲಾಗಿರುವ ಯಾದಗಿರಿ ವಿಧಾನಸಭ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್ ಮೂಲಕ ಬೀದರ್ ಏರ್ವೇಸ್ಗೆ ಸಂಜೆ 5.45ಕ್ಕೆ ತೆರಳಿ, ಸಂಜೆ 6 ಗಂಟೆಗೆ ಬೀದರ್ ಏರ್ಬೇಸ್ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಕೆಆರ್ಡಿಬಿ ಅಧ್ಯಕ್ಷರ ಜಿಲ್ಲಾಪ್ರವಾಸ ಇಂದು
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಅವರು ಇದೇ ಜ.6ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.6ರ ಬುಧವಾರ ಮಧ್ಯಾಹ್ನ 2.30ಕ್ಕೆ ಆಗಮಿಸಿ, ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕೆಕೆಆರ್ಡಿಬಿ ಅಧ್ಯಕ್ಷರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
7ರಂದು ಶಿಬಿರ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ 17 ವರ್ಷದೊಳಗಿನ ಬಾಲಕ/ ಬಾಲಕಿಯರಿಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟç ಮಟ್ಟದ ಕೀಡ್ರಾಪಟುಗಳಿಗೆ ಜ.7 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಪ್ರತಿಭಾನ್ವೇಷಣಾ ಆಯ್ಕೆ ಶಿಬಿರ ಆಯೋಜಿಸಲಾಗಿದೆ.
ಈ ಆಯ್ಕೆ ಶಿಬಿರವು ಜ.7 ರ ಬೆಳಿಗ್ಗೆ 10 ಗಂಟೆಯಿAದ ಪ್ರಾರಂಭವಾಗಲಿದೆ. ಆಸಕ್ತರು ಜಾತಿ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಬ್ಯಾಂಕ್ ಖಾತೆಯ ಪುಸ್ತಕದ ಪ್ರತಿಯೊಂದಿಗೆ ಕಡ್ಡಾಯವಾಗಿ ಯಾವುದಾದರು ಒಂದು ಗುರುತಿನ ಚೀಟಿ ತರುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿಂಗಳು ಪೂರ್ತಿ ಶೇ. 50 ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಮಾರಾಟ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇಕಡಾ 50 ರಷ್ಟು ರಿಯಾಯಿತಿ ದರದಲ್ಲಿ ಜನವರಿ ತಿಂಗಳು ಪೂರ್ತಿ ಮಾರಾಟ ಮಾಡಲಾಗುತ್ತಿದೆ.
ಈ ಸೌಲಭ್ಯವು ಬೆಂಗಳೂರಿನ ಕನ್ನಡ ಭವನದಲ್ಲಿನ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕçತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸೇರಿದಂತೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಕನ್ನಡ ಸಿರಿಗನ್ನಡ ಪುಸ್ತಕ ಮಳಿಗೆಗಳಲ್ಲಿ ಲಭ್ಯವಿದೆ. ಅಲ್ಲದೆ ಆನ್ಲೈನ್ ಮೂಲಕ ಖರಿದಿಸುವರಿಗೂ ಸಹ ರಿಯಾಯಿತಿ ಪಡೆಯಬಹುದಾಗಿದೆ. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಅಂತಿಮ ಆಯ್ಕೆ ಪ್ರಕಟ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಸ್ಥಳೀಯ ವೃಂದದ 12 ಮತ್ತು ಪರಸ್ಥಳೀಯ ವೃಂದದ 09 ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಕಳೆದ ಸೆ.28 ರಂದು ನಡೆದ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡಿರುವ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲೆಯಲ್ಲಿ ಖಾಲಿ ಉಳಿದಿರುವ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಪಿಎಸ್ಟಿ ಮತ್ತು ಇಟಿ ಪರೀಕ್ಷೆಯನ್ನು ಈಗಾಗಲೇ ನಗರದಲ್ಲಿ ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡಿರುವ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯಲ್ಲಿನ ಸೂಚನಾ ಪಲಕದಲ್ಲಿ ಮತ್ತು ತಿತಿತಿ.ಥಿಚಿಜgiಡಿಠಿoಟiಛಿe.iಟಿ ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿಯಿಂದ ಬೆಂಗಳೂರಿಗೆ ನಾನ್ ಎಸಿ ಬಸ್ ಪ್ರಾರಂಭ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿAದ ಯಾದಗಿರಿ-ಮಂತ್ರಾಲಯ ಮಾರ್ಗವಾಗಿ ಬೆಂಗಳೂರಿಗೆ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಜ.1 ರಿಂದ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯವರು ತಿಳಿಸಿದ್ದಾರೆ.
ಈ ನಾನ್ ಎಸಿ ಸ್ಲೀಪರ್ ಸಾರಿಗೆ ಯಾದಗಿರಿಯಿಂದ ಸಂಜೆ 7 ಗಂಟೆಗೆ ಹೊರಡಲಿದ್ದು ಸೈದಾಪೂರ, ರಾಯಚೂರು, ಮಂತ್ರಾಲಯ ಮಾರ್ಗವಾಗಿ ಮರುದಿನ ಬೆಳಿಗ್ಗೆ 06 ಗಂಟೆಗೆ ಬೆಂಗಳೂರು ತಲುಪುತ್ತದೆ, ಮತ್ತೇ ಅದೇ ದಿನ ಸಾಯಂಕಾಲ 9 ಗಂಟೆಗೆ ಬೆಂಗಳೂರಿನಿAದ ಅನಂತಪೂರ ಮಾರ್ಗವಾಗಿ ಮಾರನೆ ದಿನ ಬೆಳಿಗ್ಗೆ 07.15 ಗಂಟೆಗೆ ಆಗಮಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮೀನು ನೀಡಲು ಅರ್ಜಿ ಆಹ್ವಾನ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ಜಿಲ್ಲೆಯ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ನಿವೇಶನ ಯೋಜನೆ ಅಡಿ ನಿವೇಶನ ನಿರ್ಮಾಸಿಸುವ ಉದ್ದೇಶಕ್ಕಾಗಿ ಪಟ್ಟಣದ 5 ಕೀ.ಮೀ ಒಳಗಡೆ ನಗರ ಯೋಜನೆ ಪ್ರಾಧಿಕಾರ ಅಡಿಯಲ್ಲಿ ಬರುವ ಖಾಸಗಿ ಜಮೀನು ಬೇಕಾಗಿದು ಆಸಕ್ತಿಯುಳ್ಳ ಜಮೀನು ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಭೂ ಮಾಲಿಕರ ಒಪ್ಪಿಗೆ ಪತ್ರ, ಉದ್ದೇಶಿಸಿರುವ ಜಮೀನು ವಸತಿಗೆ ಯೋಗ್ಯವಾಗಿರುವ ಬಗ್ಗೆ ತಹಸೀಲ್ದಾರರಿಂದ ದೃಢೀಕರಣ, ನಮೂನೆ (ಜಿಲ್ಲಾಧಿಕಾರಿಗಳ ಸಹಿಯೊಂದಿಗೆ), ಭೂ ಮಾಲೀಕರ ಕುಟುಂಬಗಳ ವಂಶವೃಕ್ಷ ದಾಖಲೆಗಳೊಂದಿಗೆ ಜ.19ರೊಳಗೆ ಕೆಂಭಾವಿ ಪುರಸಭೆ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಪುರಸಭೆ ಕಾರ್ಯಾಲಯದಲ್ಲಿ ಪಡೆಯಬಹುದಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಿಂದ ನಂದಿನಿ ಪಾರ್ಲರ್ ಉದ್ಘಾಟನೆ
ಯಾದಗಿರಿ, ಜ.05 (ಕರ್ನಾಟಕ ವಾರ್ತೆ):- ನಂದಿನಿ ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ್ದಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ, ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ಮೂಲಕ ಹಾಲು ಹಾಗೂ ಹಾಲಿನ ಉತ್ಪನ್ನಗಳು ತಯಾರಿಸಿ ಮಾರಾಟ ಮಾಡಲಾಗುತ್ತಿದೆ, ಜನರು ಇದರ ಸದುಪಯೋಗ ಪಡೆಯುವಂತೆ ಪಶುಸಂಗೋಪನೆ, ಹಜ್ ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ಕರೆ ನೀಡಿದರು.
ಅವರು ಜ.5ರ ಮಂಗಳವಾರ ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ನಂದಿನಿ ಪಾರ್ಲರ್ ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಖುದ್ದು ಸಚಿವರೇ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು ವಿಶೇಷವಾಗಿತ್ತು.
ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ನಂದಿನಿ ಸಿಹಿ ಉತ್ಸವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಹಕರು
ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ
ಸೋಮವಾರ, ಜನವರಿ 4, 2021
ಮುಖ್ಯಮಂತ್ರಿಗಳಿAದ ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾನ ಸಮಾರಂಭವನ್ನು ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ಇದೇ ಜ.6ರ ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಹರ್ಷವರ್ಧನ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್, ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು, ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ್, ಮೀನುಗಾರಿಕೆ, ಬಂದರು ಮತ್ತು ಒಳನಾಡಿನ ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಮತ್ತು ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್, ಕರ್ನಾಟಕ ನೀರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವಗೌಡ ಪಾಟೀಲ್ ಯಡಿಯಾಪುರ, ಕಲಬುರಗಿ ಕ್ಷೇತ್ರದ ಸಂಸದ ಡಾ. ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ್, ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೂಶಿ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು.
ಇಂದಿನಿAದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಇದೇ ಜ.5 ಹಾಗೂ 6 ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಕೈಗೊಂಡಿರುವ ಪ್ರವಾಸದ ವಿವರ ಇಂತಿದೆ.
ಇದೇ ಜ.6ರಂದು ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಯ ಪ್ರವಾಸ ಕೈಗೊಳ್ಳುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಮತ್ತು ಅಧಿಕಾರಿ ಹಾಗೂ ಶಾಸಕರು ಹಾಗೂ ಸ್ಥಳೀಯ ಮುಖಂಡರೊAದಿಗೆ ಚರ್ಚಿಸುವರು ಹಾಗೂ ಸ್ಥಳ ಪರಿಶೀಲನೆ ನಡೆಸುವರು.
ಬೆಳಿಗ್ಗೆ 11 ಗಂಟೆಗೆ ಯಾದಗಿರಿಯಿಂದ ಬಸವ ಕಲ್ಯಾಣಕ್ಕೆ ಪ್ರಯಾಣಿಸುವರು.
ಜ.6ರ ಮಧ್ಯಾಹ್ನ ಬಸವಕಲ್ಯಾಣದಿಂದ ಯಾದಗಿರಿಗೆ ಆಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5 ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ರಂದು ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಸಚಿವರ ಭೇಟಿ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6ರಂದು ಉಪ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಇದೇ ಜ.6ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅವರು ಜ.6ರಂದು ಬಸವಕಲ್ಯಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಧ್ಯಾಹ್ನ 2.45ಕ್ಕೆ ಯಾದಗಿರಿಗೆ ಆಗಮಿಸುವರು. ಮುಖ್ಯಮಂತ್ರಿಗಳು ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರವೇರಿಸಲಿರುವ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ದಿ ಕಾರ್ಯಕ್ರಮ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಿAದ ಬೀದರ್ಗೆ ಹೆಲಿಕ್ಯಾಪ್ಟರ್ ಮೂಲಕ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಮಿಠಕಲ್ನಲ್ಲಿಂದು ಟೌನ್ಹಾಲ್, ಆಡಿಟೋರಿಯಂ ಕಟ್ಟಡ ನಿರ್ಮಾಣಕ್ಕೆ ಚಾಲನೆ
ಯಾದಗಿರಿ, ಜ.04 (ಕರ್ನಾಟಕ ವಾರ್ತೆ):- ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಟೌನ್ ಹಾಲ್ ಕಟ್ಟಡದ ನಿರ್ಮಾಣ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಡಿಟೋರಿಯಂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇದೇ ಜ.5ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚೌವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಪೂರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಿಳಿ ಅಧ್ಯಕ್ಷರೂ ಹಾಗೂ ಸುರುಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರು ಮುಖ್ಯ ಅತಿ
ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ
6 ರಂದು ಜಿಲ್ಲೆಗೆ ಮುಖ್ಯಮಂತ್ರಿಗಳ ಆಗಮನ: ಅಗತ್ಯ ಸಿದ್ದತೆಗೆ
ಜಿಲ್ಲಾಧಿಕಾರಿಯವರ ಸೂಚನೆ
ಯಾದಗಿರಿ,ಜ 04, (ಕ.ವಾ)- ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜನವರಿ 06ರ ಬುಧವಾರ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲು ಆಗಮಿಸುತ್ತಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯ ಆರ್ ಅವರು ನಿರ್ದೇಶನ ನೀಡಿದ್ದರು.
ಅವರು ಜ.4ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ 06 ರ ಬುಧವಾರ ಮಧ್ಯಾಹ್ನ 2.30ಕ್ಕೆ ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಯವರು 56 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ, 17.66 ಕೋಟಿ ರೂ.ಗಳ ವೆಚ್ಚದಲ್ಲಿ ವರ್ಕನಳ್ಳಿಯಲ್ಲಿ ನಿರ್ಮಾಣಗೊಂಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, 3.80ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಯಾದಗಿರಿ ನಗರದಲ್ಲಿ ನೂತನ ನಗರ ಸಾರಿಗೆ ಬಸ್ ನಿಲ್ದಾಣ್ ಹಾಗೂ ವಿಭಾಗೀಯ ಕಚೇರಿ, 1.35 ಕೋಟಿ ರೂ.ಗಳ ವೆಚ್ಚದ ಶಹಾಪುರ ತಾಲ್ಲೂಕಿನ ಬೆಂಡೆಬೆAಬಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, 1.25 ಕೋಟಿ ರೂ.ಗಳ ವೆಚ್ಚದಲ್ಲಿ ವಡಗೇರಾ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಗೆ ಹೆಚ್ಚವರಿ 10 ಕೋಣೆಗಳ ನಿರ್ಮಾಣ, 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಯಾದಗಿರಿ ತಾಲ್ಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ, 50 ಲಕ್ಷ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಮುರುಘೇಂದ್ರ ಮಠದ ಹತ್ತಿರ ಯಾತ್ರಿಕ ನಿವಾಸ ಕಟ್ಟಡ ಹಾಗೂ 50ಲಕ್ಷ ರೂ ಗಳ ವಡಗೇರಾ ತಾಲ್ಲೂಕಿನ ಸಂಗಮನಾಥ ದೇವಸ್ಥಾನದ ಹತ್ತಿರ ಯಾತ್ರಿ ನಿವಾಸ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸುವರು ಎಂದು ಹೇಳಿದರು.
ಅದರಂತೆ 325 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಯಾದಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ, 63.31 ಕೋಟಿ ರೂ.ಗಳ ವೆಚ್ಚದಲ್ಲಿ ರಾಮಸಮುದ್ರದಲ್ಲಿ 220/110/11 ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರದ ಸ್ಥಾಪನೆ, 24.75 ಕೋಟಿ ರೂ.ಗಳ ವೆಚ್ಚದಲ್ಲಿ ಕಾಡಂಗೇರಾದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಪರಿಶಿಷ್ಟ ಜಾತಿ), 19.90 ಕೋಟಿ ರೂ.ಗಳ ವೆಚ್ಚದಲ್ಲಿ ಯದಗಿರಿ ನಗರದಲ್ಲಿ ಭೀಮಾ ನದಿ ಹತ್ತಿರ ಜ್ಯಾಕ್ವೆಲ್ ನಿರ್ಮಾಣ, 6 ಕೋಟಿ ರೂ.ಗಳ ವೆಚ್ಚದಲ್ಲಿ ಕೊಳ್ಳರು (ಎಮ್) ಗ್ರಾಮದಲ್ಲಿ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ 4.80 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆಯ ಅಭಿವೃದ್ಧಿ (ಕಿ.ಮೀ27ರಿಂದ 33ರವರೆಗೆ), 4 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ವಿವಿಧ ವಾರ್ಡ್ಗಳಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, 2.08 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಶಾಸ್ತಿç ವೃತ್ತದ ಸೌಂದರೀಕರಣ ಮತ್ತು ಶಾಸ್ತಿç ವೃತ್ತದಿಂದ ದೊಡ್ಡ ಹಳ್ಳದವರೆಗೆ ಚರಂಡಿ ನಿರ್ಮಾಣ, 2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 18.80 ರಿಂದ 21.30 ರವರೆಗೆ ಸುಧಾರಣೆ), 2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 21.30 ರಿಂದ 23.80 ರವರೆಗೆ ಸುಧಾರಣೆ) ಹಾಗೂ 1 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಸೇರಿದಂತೆ ಒಟ್ಟಾರೆ ಅಂದಾಜು 536.91 ರೂ.ಗಳ ವೆಚ್ಚದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸುವರು ಎಂದು ಹೇಳಿದರು.
ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಯಾವುದೇ ಲೋಪದೋಷಗಳಾಂಗದAತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ತಿಳಿಸಿದರು.
ಕಾರ್ಯಕ್ರಮ ನಡೆಯಲಿರುವ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಿಕೆ ತಯಾರಿ, ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಉತ್ತಮ ಆಸನಗಳ ವ್ಯವಸ್ಥೆ ಕಲ್ಪಿಸಬೇಕು, ಪೊಲೀಸ್ ಕಾನ್ವಾಯ್, ಬಂದೋಬಸ್ತ್, ಜಿಲ್ಲಾ ಕ್ರೀಡಾಗಂಣದಲ್ಲಿ ಹೆಲಿಪ್ಯಾಡ್ ನಿರ್ಮಾಣ, ಆಹಾರ ಮತ್ತು ಉಪಹಾರ ಪೂರೈಕೆ, ಕುಡಿಯುವ ನೀರು, ಸ್ಯಾನಿಟೈಜರ್, ಶೌಚಾಲಯ, ಆಂಬುಲೆನ್ಸ್, ವೈದ್ಯರು ಹಾಗೂ ಅಗ್ನಿ ಶಾಮಕ ವಾಹನಗಳ ವ್ಯವಸ್ಥೆಗಳನ್ನು ಸಂಬAಧಿಸಿದ ಇಲಾಖೆ ಮುಖ್ಯಸ್ಥರು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಕಾರ್ಯಕ್ರಮ ನಡೆಯವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು, ಮುಖ್ಯವಾಗಿ ಕಾರ್ಯಕ್ರಮ ನಡೆಯುವ ದಿನದಂದು ಆಗಮಿಸುವರನ್ನು ಥರ್ಮಲ್ ಸ್ಕಿçÃನಿಂಗ್ಗೆ ಒಳಪಡಿಸಬೇಕು, ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು, ಅದರಂತೆ ಪರಸ್ಪರ ಸಾಮಜಿಕ ಅಂತರ ಕಾಯ್ದುಕೊಳ್ಳಲು ಸಲಹೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಪಾಟೀಲ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳು ಸಭೆಯಲಿದ್ದರು.
ಶನಿವಾರ, ಜನವರಿ 2, 2021
ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...
-
ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ ಯಾದಗಿರಿ ಜೂನ್15(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ...
-
ಮೊಬೈಲ್, ವಾಹನ ಹರಾಜು ಮುಂದೂಡಿಕೆ ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸುರಪುರದ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳವರ ನ್ಯ...
-
ಕೊರೋನಾ ವೈರಸ್ ಭಯ ಬೇಡ; ಮುನ್ನೆಚ್ಚರಿಕೆ ಇರಲಿ ಜಿಲ್ಲೆಯಲ್ಲಿ 27 ಐಸೊಲೇಷÀನ್ ಬೆಡ್ ವ್ಯವಸ್ಥೆ - ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಯಾದಗಿರಿ, ಮಾರ್ಚ್ 16 (ಕರ್...



