ಶುಕ್ರವಾರ, ಮಾರ್ಚ್ 12, 2021



 ಕೋವಿಡ್ ಸುರಕ್ಷತಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ

                                             ಶಾಸಕ; ವೆಂಕಟರಡ್ಡಿ ಗೌಡ ಮುದ್ನಾಳ                      

ಯಾದಗಿರಿ,ಮಾ. 12 (ಕ.ವಾ):- ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಸಂಪೂರ್ಣವಾಗಿ ಕೋವಿಡ್ ಮುಕ್ತವಾಗುವವರೆಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರಡ್ಡಿ ಗೌಡ ಮುದ್ನಾಳ ಅವರು ಹೇಳಿದರು.


ನಗರಕ್ಕೆ  ಸಮೀಪವಿರುವ ಮುದ್ನಾಳ ಗ್ರಾಮದಲ್ಲಿ ಶುಕ್ರವಾರ ಪಂಚಾಯತ್ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್- 19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕೊರೊನಾ ಲಸಿಕೆ ಪಡೆಯುವ ಸಂದರ್ಭದಲ್ಲಿ ಯಾವುದೇ ತಪ್ಪು ಗ್ರಹಿಕೆ ಬೇಡ, ಎಲ್ಲಾ ಹಿರಿಯ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆಯಬೇಕೆಂದು ಹೇಳಿದರು.


ಮಹಾಮರಿ ಕೊರೊನಾ ಲಸಿಕೆಯನ್ನು ಸರ್ಕಾರವು ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಎಲ್ಲಾ ಹಿರಿಯ ನಾಗರಿಕರು ಕೊರೊನಾ ಲಸಿಕೆಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭಿಸಿರುವ ಲಸಿಕಾ ಕೇಂದ್ರ ಹಾಗೂ ನಿಗಾ ಘಟಕದ ಪ್ರಯೋಜನ ಪಡೆಯುವಂತೆ ತಿಳಿಸಿದರು. 


ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ,  ಜಿಲ್ಲೆಯಲ್ಲಿ ಎಂಬತ್ತೆöÊದು ಸಾವಿರ ಮಂದಿ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.


ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಅಭಿಯಾನ ಮೊದಲ ಹಂತದಲ್ಲಿ ಶೇ.90ರಷ್ಟು ಹಾಗೂ ಎರಡನೇ ಹಂತದಲ್ಲಿ ಶೇ.57.97 ರಷ್ಟು ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತಯರಿಗೆ ಲಸಿಕೆ ನೀಡಲಾಗಿದೆ ಎಂದರು.


ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ.  ಮೊದಲ ಲಸಿಕೆ ಪಡೆದ 28 ದಿನಗಳ ಬಳಿಕ 2ನೇ ಲಸಿಕೆಯನ್ನು ತಪ್ಪದೇ ಪಡೆಯಬೇಕು.  ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯದವರು ಈಗ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ನೋಂದಾಯಿತ 56 ಆಸ್ಪತ್ರೆಗಳಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಬಹುದು. ಇಲ್ಲವೇ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಫೋಟೋ ಐಡಿಯೊಂದಿಗೆ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಯಲ್ಲಿ ಒಂದು ಡೋಸ್‌ಗೆ 250 ರೂ. ಹಣ ನೀಡಿ ಲಸಿಕೆ ತೆಗೆದುಕೊಳ್ಳಬಹುದು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಮುದ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷಿö್ಮÃ ಗಂ/ ಶರಣಪ್ಪ, ತಾ.ಪಂ ಸದಸ್ಯೆ ಗೊರಿಬಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಆರ್.ಸಿ.ಎಚ್ ಅಧಿಕಾರಿ ಡಾ.ಸೂರ್ಯಪ್ರಕಾಶ ಕಂದಕೂರ, ಟಿ.ಎಚ್.ಒ ಡಾ.ಹಣಮಂತ, ಡಾ.ನಾಗೇಶ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.  


ಮಂಗಳವಾರ, ಮಾರ್ಚ್ 9, 2021

 ಹನಿ ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ 

ಯಾದಗಿರಿ.ಮಾ.09 (ಕ.ವಾ):- 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಮತ್ತು ಹನಿ ನೀರಾವರಿ ಘಟಕ ಅಳವಡಿಕೆಗೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ ರೈತರು ಸಂಬAಧಿಸಿದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಎಸ್‌ಸಿಪಿ ಮತ್ತು ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಅನುದಾನ ಬಳಸಿ ನಿಗದಿತ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

                                              :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.  




ಯಾದಗಿರಿ.ಮಾ.09 (ಕ.ವಾ):- ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನ ಬಳಕೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು. ಅನುದಾನ ಬಳಸಲು ಮಾರ್ಚ್ 31 ರವರೆಗೆ ಕಾಯದೇ ಕೂಡಲೇ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಮಾಸಿಕ, ದೌರ್ಜನ್ಯ ನಿಯಂತ್ರಣ, ಅಲೆಮಾರಿ ಕೋಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ಸಿದ್ಧವಿರುವುದರಿಂದ ಅನುದಾನ ಬಳಸಬೇಕು. ಅಡಚಣೆ ಇದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕು. ಸಂಬAಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಇಲಾಖೆಯವರು ಕಟ್ಟುನಿಟ್ಟಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುದಾನ ಕೈತಪ್ಪಿ ಹೋಗಬಾರದು. ವರ್ಷದ ಕೊನೆಯವರೆಗೆ ಅನುದಾನ ವೆಚ್ಚ ಮಾಡಲು ಕಾಯದೆ ಅನುದಾನ ಬಂದ ನಂತರ ಅಥವಾ ಆಡಳಿತಾತ್ಮಕ ಮಂಜೂರಾತಿ ಸಿಕ್ಕ ತಕ್ಷಣ ಅನುಷ್ಠಾನಕ್ಕಾಗಿ ಕ್ರಮ ಕೈಗೊಂಡು ಸರ್ಕಾರದ ಆಶಯದಂತೆ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿಯ ಯೋಜನೆಯಡಿ ನೀಡಲಾದ ಕ್ರಿಯಾ ಯೋಜನೆಯಂತೆ ಆಯಾ ಇಲಾಖೆಯವರು ಅನುಷ್ಟಾನಕ್ಕೆ ಕ್ರಮ ಕೈಗೊಂಡು ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಮಾಜಕಲ್ಯಾಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ

ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ನಡೆಸಲಾಯಿತು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂತ್ರಸ್ತರ ಸಮಸ್ಯೆ, ಅವರಿಗೆ ನೀಡಿರುವ ಪರಿಹಾರ, ನ್ಯಾಯಾಲಯ ಪ್ರಕರಣಗಳ ಕುರಿತಂತೆ ಅವರಿಗಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. 

ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ಸಂತ್ರಸ್ತರು ಕೋರ್ಟಿಗೆ ಬಂದಿದ್ದಾಗ ಸರ್ಕಾರಿ ಅಭಿಯೋಜಕರು ನೀಡುವ ಹಾಜರಾತಿ ಪ್ರತಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ವಾರಕ್ಕೊಮ್ಮೆ ಸಂಗ್ರಹಿಸಿ ಸಂಬAಧಿತರಿಗೆ ಪ್ರಯಾಣಭತ್ಯೆ  ಮೊತ್ತವನ್ನು ವಿತರಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಅಲೆಮಾರಿ ಕೋಶ ಸಭೆ:ಜಿಲ್ಲೆಯಲ್ಲಿ ಒಟ್ಟು 42,581 ಜನ ಅಲೆಮಾರಿ ಜನಸಂಖ್ಯೆ ಇದ್ದು, ಇವರಿಗೆ ನಿವೇಶನ ಹಂಚಿಕೆಗಾಗಿ ಜಿಲ್ಲೆಯ ಹಂಚಿನಾಳ, ಮುಡಬೂಳ, ಖಾನಪೂರ ಹಾಗೂ ಬೇವಿನಹಳ್ಳಿ ಗ್ರಾಮಗಳಲ್ಲಿ ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನಕ್ಕಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗೊಲ್ಲ, ಹೆಳವ, ಜೋಗಿ, ಬೈಲತರ್, ಶಿಕ್ಕಲಿಗರ್, ಘಿಸಾಡಿ, ಗೊಂದಳಿ, ದುರ್ಗಮುರ್ಗ, ಕಟಬು, ದರ್ವೆಶ್, ಬುಡ್ಬುಕಿ ಜನಾಂಗದವರು ವಾಸವಾಗಿದ್ದಾರೆ ಎಂದು ಅವರು ವಿವರಿಸಿದರು. 

ಅಲೆಮಾರಿ ವಿದ್ಯಾರ್ಥಿಗಳಿಗಾಗಿ 2 ರಿಂದ 10 ನೇ ತರಗತಿ ವರೆಗಿನ ಸುಮಾರು 1,563 ವಿದ್ಯಾರ್ಥಿಗಳಿಗೆ 33.26 ಲಕ್ಷ ರೂ. ಪ್ರೋತ್ಸಾಹಧನ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಸಮಾಜದ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭು ದೊರೆ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಶ್ವೇತಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್. ಸೇರಿದಂತೆ ದೌರ್ಜನ್ಯ ಸಮಿತಿಯ ನಾಮನಿರ್ದೇಶನ ಸದಸ್ಯರಾದ ಖಂಡಪ್ಪ ದಾಸನ್, ನಾಗಣ್ಣ ಬಡಿಗೇರ, ರಮೇಶ ದೊರೆ, ರಮಾದೇವಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.    

ಸೋಮವಾರ, ಮಾರ್ಚ್ 8, 2021



ಚಂದನ ವಾಹಿನಿಯಲ್ಲಿ ಸರಕಾರದ ವಿವಿಧ ಕಾರ್ಯಕ್ರಮಗಳ ಪ್ರಸಾರ

ಯಾದಗಿರಿ,ಮಾ8 (ಕ.ವಾ):- ಸಮಾಜ ಕಲ್ಯಾಣ ಇಲಾಖೆ ಮತ್ತು ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಕುರಿತು ಕಾರ್ಯಕ್ರಮಗಳ ದೂರದರ್ಶನ ಚಂದನವಾಹಿನಿಯಲ್ಲಿ ಮಾರ್ಚ್ 8 ರಿಂದ ಆರಂಭವಾಗಲಿದ್ದು,  ಸಂಜೆ 7.30 ರಿಂದ 8.30 ವರೆಗೆ ಪ್ರತಿ ಸೋಮವಾರ ದಿಂದ ಗುರುವಾರದ ವರೆಗೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶ ಹೊಂದಿದು. ಸಮಾಜ ಕಲ್ಯಾಣ ಇಲಾಖೆಯ ನಿಗಮಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ನಡೆಸಿಕೊಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಾಳೆ ವಾಲ್ಮೀಕಿ ಮುಖಂಡರ ಸಭೆ

ಯಾದಗಿರಿ,ಮಾ8 (ಕ.ವಾ):- ಜಿಲ್ಲಾ  ಮಟ್ಟದ ವಾಲ್ಮೀಕಿ ಭವನ ನಿರ್ವಹಣೆಗೆ ಮತ್ತು ಜಿಲ್ಲಾ ಮಟ್ಟದ ನಾಮನಿರ್ದೇಶಿತ ಸದಸ್ಯರ ಆಯ್ಕೆಗಾಗಿ ಇದೇ ಮಾರ್ಚ್ ರಂದು 9 ರಂದು ಬೆಳ್ಳಿಗೆ: 10.30 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು ವಾಲ್ಮೀಕಿ ಸಮಾಜ ಮತ್ತು ಸಂಘಟನೆಯ ಮುಖಂಡರು ಜಿಲ್ಲಾ ಮಟ್ಟದ ಸಭೆಗೆ ಹಾಜರಾಗಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಭು ದೊರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ ಸಚಿವ ಪ್ರಭು ಚವ್ಹಾಣ್

 

ಯಾದಗಿರಿ,ಮಾ8 (ಕ.ವಾ):- ಕೋವಿಡ್ ಸಂಕಷ್ಟದ ಸಮಯದಲ್ಲೂ ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷವ್ಯಕ್ತಪಡಿಸಿದ್ದಾರೆ. ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರು ಉದ್ಯೋಗ ಅರಸಿ ದೂರದ ಬೆಂಗಳೂರು, ಮುಂಬೈ, ಹೈದ್ರಾಬಾದಗೆ ತೆರಳುತ್ತಿದ್ದರು. ಬೀದರ್ ನಲ್ಲಿ ಕೃಷಿ ಉಪಕರಣಗಳ ತಯಾರಿಕಾ ಕ್ಲಸ್ಟರ್ ನಲ್ಲಿ ಬರುವ ಕೈಗಾರಿಕೆಗಳಿಗೆ ಪ್ರೋತ್ಸಾಹ ಪ್ಯಾಕೇಜ್ ಘೋಷಣೆ ಮಾಡಿದ್ದು ಬೀದರ್ ಜಿಲ್ಲೆಯ ಅಭಿವೃದ್ಧಿಗೆ ನಾಂದಿ ಹಾಡಿದಂತಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

 

ನಮ್ಮ ಜನರು ನಮ್ಮಲ್ಲಿಯೇ ಉದ್ಯೋಗ ಕಂಡುಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಹಾಗೂ ಕೈಗಾರಿಕಾ ಸಚಿವರಾದ ಜಗದಿಶ್ ಶೆಟ್ಟರ್ ಅವರೊಂದಿಗೆ ಹಲವುಬಾರಿ ಚರ್ಚೆ ನಡೆಸಿದ್ದೆ.  ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ ರೂ.1,478 ಕೋಟಿ ವೆಚ್ಚದಲ್ಲಿ "ಬಲ್ಕ್ ಡ್ರಗ್ ಪಾರ್ಕ" ಅಭಿವೃಧಿ ಆಗುತ್ತಿದ್ದು ಈ ಭಾಗದ ಸಾವಿರಾರು ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಬದುಕು ಕಟ್ಟಿಕೊಳ್ಳಲು ನಮ್ಮ ಭಾಗದ ಯುವಜನೆತೆ ಸಾಕಷ್ಟು ಶ್ರಮ ಪಡುತ್ತಿದ್ದರು. ಈ ಹೊಸ ಯೋಜನೆಗಳ ಅನುಷ್ಟಾನದಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

 

ನಂಜುಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಿಸಲು 2021-22 ಸಾಲಿಗೆ ರೂ. 3000 ಕೋಟಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರೂ.1,500 ಕೋಟಿಗಳನ್ನು ನೀಡಿದ್ದು ಈ ಭಾಗಕ್ಕೆ ಅಭಿವೃದ್ಧಿಯ ಹೊಸ ಪರ್ವ ಆರಂಭವಾದAತಾಗಿದೆ. ಅಲ್ಲದೇ ಕಲಬುರಗಿ ಜಿಲ್ಲೆಯ ಫಿರೋಜಾಬಾದನಲ್ಲಿ 500 ಮೆಗಾವ್ಯಾಟ್ ಸಾಮರ್ಥದ ಸೌರಶಕ್ತಿ ಪಾರ್ಕ್ ಸ್ಥಾಪನೆ ಆಗಲಿದ್ದು ಕಲ್ಯಾಣ ಕರ್ನಾಟಕ ಮತ್ತಷ್ಟು ಬೆಳಗಲಿದೆ.

 

ಬಸವ ಕಲ್ಯಾಣದಲ್ಲಿ ರೂ.500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪದ ಕೆಲಸಕ್ಕೆ ಈಗಾಗಲೇ ರೂ.200 ಕೋಟಿ ಬಿಡುಗಡೆ ಮಾಡಿದ್ದು ಅನುಭವ ಮಂಟಪದ ಕಾಮಗಾರಿಗೆ ವೇಗ ದೊರೆಯಲಿದೆ. ಇದೇ ಸಂದರ್ಭದಲ್ಲಿ ಜಗಜ್ಯೋತಿ ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗೆ ವಿಶೇಷವಾಗಿ ರೂ.5 ಕೋಟಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

 

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಲ್ಯಾಣ ಕರ್ನಾಟಕದ ಜನತೆಯ ಪರವಾಗಿ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

 

 





ವಿಶ್ವ ಗ್ಲಾಕೋಮಾ ಸಪ್ತಾಹ

ದೃಷ್ಠಿ ಬಗ್ಗೆ ಕಾಳಜಿ ವಹಿಸಲು ಡಾ.ಇಂದುಮತಿ ಸಲಹೆ

ಯಾದಗಿರಿ,ಮಾ8 (ಕ.ವಾ):- ಜಗತ್ತು ಪ್ರಕಾಶಿಸುತ್ತಿದೆ ಅದನ್ನು ನೋಡುವ ನಮ್ಮ ಕಣ್ಣುಗಳ ಬಗ್ಗೆ ಕಾಳಜಿ ವಹಿಸಿವುದು ಅತಿ ಮಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಸಲಹೆ ನೀಡಿದರು.  

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಕಚೇರಿಯಲ್ಲಿ ಸೋಮವಾರ ನಡೆದ ರಾಷ್ಟಿçÃಯ ಅಂಧತ್ವ ಕಾರ್ಯಕ್ರಮದಡಿಯಲ್ಲಿ  ಮಾರ್ಚ್ 7 ರಿಂದ 13 ರವರೆಗೆ ನಡೆಯುತ್ತಿರುವ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಪ್ತಾಹದ ಘೋಷ ವಾಕ್ಯವಾದ ಜಗತ್ತು ಪ್ರಕಾಶಿಸುತ್ತಿದೆ ನಿಮ್ಮ ದೃಷ್ಟಿಯನ್ನು ಉಳಿಸಿ ಎಂಬAತೆ ನಡೆದುಕೊಳ್ಳಬೇಕಾದರೆ ಕಲಿಕೆ ಬಹಳ ಮುಖ್ಯ. ಕಣ್ಣು ನೋಡಲು ಅಷ್ಟೇ ಆದರೆ ನೋಡುವಂತೆ ಪ್ರೇರೆಪಿಸುವುದು ಬುದ್ಧಿ ಹಾಗಾಗಿ ಸಮಾಜದ ಪ್ರತಿಯೋಬ್ಬರು ಶಿಕ್ಷಿತರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಭಗವಂತ ಅನ್ವರ, ಅಂಧತ್ವ ನಿಯಂತ್ರಣಕ್ಕೆ ಸರಕಾರ ದೃಷ್ಠಿ ದಿನಾಚರಣೆ, ನೇತ್ರದಾನ ಕುರಿತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ  ಎಂದು ತಿಳಿಸಿದರು.

ಗ್ಲಾಕೋಮಾ ಎಂಬುವುದು ನಮ್ಮ ಕಣ್ಣುಗಳನ್ನು ನಮ್ಮಗೆ ಗೊತ್ತಾಗದಂತೆ ಕದಿಯುತ್ತದೆ. ಇದಕ್ಕೆ ನಾವು ನಮ್ಮ ಕಣ್ಣಗಳ ಕುರಿತು ಸಂರಕ್ಷಸಿವುದು ಅತಿ ಅಗತ್ಯವಾಗಿದೆ ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತçಚಿಕಿತ್ಸಕರು ಡಾ.ಬಸವಸ್ವಾಮಿ ಹಿರೇಮಠ, ರಘು ಮಮೋರಿಯಲ್ ಆಸ್ಪತ್ರೆಯ ನೇತ್ರ  ತಜ್ಞರಾದ ಡಾ.ಅಪರ್ಣಾ ರಾಜೇಂದ್ರ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಲಕ್ಷಿö್ಮÃಕಾಂತ, ಜಿಲ್ಲಾ ಆರ್.ಸಿ.ಹೆಚ್‌ಅಧಿಕಾರಿ ಡಾ. ಸೂರ್ಯಪ್ರಕಾಶ.ಎಮ್.ಕಂದಕೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುಬಷಿರ ಅಹ್ಮದ ಸಾಜೀದ, ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ರಾಧಿಕಾ ಬೂಬ್, ಯಾದಗಿರಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ. ಹಣಮಂತ ರಡ್ಡಿ,ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿ ಉಪನ್ಯಾಸಕರಾದ ರೆಹಿತಾ ಉನ್ನಿಸ್,ಅಶೋಕ ಮಡಿವಾಳ ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.





ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರ                                                

                                             ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.08 (ಕ.ವಾ):- ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರು ಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು. 

ನಗರದ ಬಾಲಾಜಿ ಕಲ್ಯಾಣ ಮಂಟದಲ್ಲಿ ಸೋಮವಾರ ತೋಟಗಾರಿಕೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಹಾಗೂ ಅಂತರ ರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮತನಾಡಿದರು.


ಇಂದಿನ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ ಎಂದರು. 


ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಕುಟುಂಬಗಳ ನಿರ್ವಹಣೆಯನ್ನು ಸಮರ್ಥವಾಗಿ ಮಾಡುವವರಾಗಬೇಕು ಹಾಗೂ ಮಹಿಳೆಯರು ವೃತ್ತಿ- ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಆಗ ಯಾವುದೇ ಉದ್ಯಮ ಆರಂಭಿಸಿದರೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳೆಯರಿಗೆ ಕಿವಿ ಮಾತು ಹೇಳಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು ಹಾಗೂ ಮಹಿಳೆಯರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು.


ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್ ಪಾಟೀಲ್ ಯಡಿಯಾಪೂರ ಅವರು ಮಾತನಾಡಿ, ಕೊರೋನಾ ಸಮಯದಲ್ಲಿ ಜಿಲ್ಲೆಯ ವೈದ್ಯರು, ನರ್ಸ ಹಾಗೂ ಆಶಾ ಕಾರ್ಯಕರ್ತೆಯ, ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಜಿಲ್ಲೆಯ ಜನರು ಮರೆಯುವಂತಿಲ್ಲ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ನಗರದ ಕನಕದಾಸ ವೃತ್ತದಿಂದ ಬಾಲಾಜಿ ಕಲ್ಯಾಣ ಮಂಟಪದವರೆಗೆ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಜಾಥವನ್ನು ನಡೆಸಲಾಯಿತು. 

ಈ ಸಂದರ್ಭದಲ್ಲಿ ಕರಕುಶಲ  ಮತ್ತು ಸಾವಯವ ಸಿರಿಧಾನ್ಯಗಳ ಮೇಳಗಳನ್ನು ಸಹ ಆಯೋಜಿಸಲಾಗಿತ್ತು.


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ:

ರಾಧ ಮುಣ್ಣೂರ, ಶಹಾಪುರ ಅಂಗನವಾಡಿ ಮೇಲ್ವಿಚಾರಕಿ ಮುತ್ತವ್ವ, ಗುರುದೇವಿ ಹಿರೇಮಠ, ಅನಿತಾ, ರೇಣುಕಾ, ದೀಲಿಪ್ ಕುಮಾರ್ ತಂ/ ರವಿ ಕುಮಾರ್, ವಿವೇಕನಂದ ತಂ/ ವಿಜಯಕುಮಾರ್, ಪ್ರೇರಣ ತಂ/ ಶಿವಾನಂದ ಬಸವೇಶ್ವರ, ಪ್ರದೀಪ್ ತಂ/ ರವಿಕುಮಾರ್, ಅಮರನಾಥ ತಂ/ ದುರ್ಗಾಪ್ಪ, ಮನೀಷ್ ತಂ/ ಅಶೋಕ, ಸುವರ್ಣ ತಂ/ ಜುಮ್ಮಣ್ಣ, ಪಲ್ಲವಿ ತಂ/ಶಿವಲಿAಗಪ್ಪ  ಸೇರಿದಂತೆ ಇತರರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.


ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ರೋಟ್ನಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮರದೀಪ್ ಎಮ್, ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಬಾಯಿ ರಾಠೋಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ್ ಕವಿತಾಳ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ದತ್ತಾತ್ರೇಯ ಪಾಟೀಲ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ತಾಳೆಮರದ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 


                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...