ಸಂಗೀತ ಅಕಾಡೆಮಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಗುರುವಾರ, ಆಗಸ್ಟ್ 19, 2021
ಬುಧವಾರ, ಆಗಸ್ಟ್ 4, 2021
ಕೋವಿಡ್-19 ಕುರಿತು ಇಂಟರ್ನ್ಶಿಪ್: ಅರ್ಜಿ ಆಹ್ವಾನ
ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): ಲಸಿಕೆ ಆಡಳಿತದಲ್ಲಿ ನೆರೆಯ ಕುಟುಂಬಗಳನ್ನು ಬೆಂಬಲಿಸುವ ಮೂಲಕ ಸಮುದಾಯಕ್ಕೆ ವ್ಯಾಕ್ಸಿನ್ ರಾಯಬಾರಿಯಾಗಿ ಕೆಲಸ ನಿರ್ವಹಿಸುವುದಕ್ಕಾಗಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗಗಳ ನಿರ್ಮೂಲನೆ ಅಧಿಕಾರಿಗಳ ಕಚೇರಿ ವತಿಯಿಂದ ಇಂಟರ್ನ್ಶಿಪ್ (ಕಲಿಕೆ) ಹಮ್ಮಿಕೊಂಡಿದ್ದು, ಇದಕ್ಕಾಗಿ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಸಲ್ಲಿಸಲು ಆಸಕ್ತರು ಸೇವಾ ಮನೋಭಾವನೆ ಹೊಂದಿರುವ 12 ನೇ ತರಗತಿ ಉತ್ತೀರ್ಣರಾಗಿರುವ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷಣ ಹೊಂದಿರುವ, ಕನ್ನಡ ಭಾಷೆ ಬಲ್ಲವರು ಹಾಗೂ ಜಿಲ್ಲೆಯ ನಿವಾಸಿಯಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ ಥಿಚಿಜgiಡಿ.ಟಿiಛಿ.iಟಿ
ನ ಮೂಲಕ ಸಲ್ಲಿಸಬಹುದಾಗಿದೆ.
ಈ ಇಂಟರ್ನ್ಶಿಪ್ ಅವಧಿ 6 ವಾರಗಳ ಕಾಲ ದಿನಕ್ಕೆ 2 ರಿಂದ 3ಗಂಟೆಗಳವರೆಗೆ ನಡೆಯಲಿದೆ. ಇಲ್ಲಿ ಇಂಟರ್ನ್ಶಿಪ್ ಪಡೆದವರು ಸರ್ಕಾರಿ ಅಧಿಕಾರಿಗಳ ನಾಯಕತ್ವದಲ್ಲಿ ಕೆಲಸ ಮಾಡಲು ವೃತ್ತಿಪರ ಮಾನ್ಯತೆ, ಅಭಿವೃದ್ಧಿ ಕ್ಷೇತ್ರದ ತಜ್ಞರಿಂದ ಕಲಿಯುವ ಅವಕಾಶ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣಪತ್ರ ಸಹ ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯಕ್ಕೆ ಸಂಪಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕೃತಕ ಅಂಗಾಗಳ ಜೋಡಣೆಗೆ ಅರ್ಜಿ ಆಹ್ವಾನ
ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): ಯಾದಗಿರಿ ನಗರ ಸಭೆ ವ್ಯಾಪ್ತಿಯಲ್ಲಿ 2019-20ನೇ ಸಾಲಿನ ಶೇ.5% ಯೋಜನೆಯಡಿಯಲ್ಲಿ ಎಸ್.ಎಫ್.ಸಿ ಅನುದಾನದ ಅಡಿಯಲ್ಲಿ ವಿಕಲಚೇತನ ಹೊಂದಿರುವ ಫಲಾನುಭವಿಗಳಿಗೆ ಕೃತಕ ಅಂಗಾಗಳ ಜೋಡಣೆ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಸಲಾಗಿದೆ.
ಅರ್ಜಿ ಸಲ್ಲಿಸುವ ಫಲಾನುಭವಿಗಳು ಸ್ಥಳೀಯ ನಿವಾಸಿಯಾಗಿರಬೇಕು, ಅಂಗವಿಕಲರ ಪ್ರಮಾಣ ಪತ್ರ, ಜಾತಿ & ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಬಿ.ಪಿ.ಎಲ್ ಕಾರ್ಡ & ಐಡಿ ಕಾರ್ಡ, 2 ಫೋಟೋ ಅರ್ಜಿಯನ್ನು ಆಗಸ್ಟ್ 2 ರಿಂದ ಆಗಸ್ಟ್ 16ರೊಳಗೆ ನಗರಸಭೆ ಕಾರ್ಯಲಯಕ್ಕೆ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಗರ ಸಭೆ ಕಾರ್ಯಾಲಯದ ದೂ.ಸಂ: 08473-252312 ಗೆ ಸಂಪರ್ಕಿಸಲು ಕೋರಿದಾರೆ.
ಯಾದಗಿರಿ ನಗರಸಭೆ; ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಯಾದಗಿರಿ: ಆಗಸ್ಟ್.4 (ಕರ್ನಾಟಕ ವಾರ್ತಾ): 2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿಯಲ್ಲಿ ವೈಯಕ್ತಿಕ ಬ್ಯಾಂಕ್ ಸಾಲಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲಸೌಲಭ್ಯ, ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಲಿಂಕೆಜ್ ಸಾಲಸೌಲಭ್ಯ ಮತ್ತು ಸ್ವಸಹಾಯ ಸಂಘಗಳ ರಚನೆ ವಿವಿಧ ಕಾರ್ಯಕ್ರಮಗಳ ಸೌಲಭ್ಯಗಳನ್ನು ಯಾದಗಿರಿ ನಗರಸಭೆ ವತಿಯಿಂದ ಕಲ್ಪಿಸಿಕೊಡಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಮತ್ತು ಆಸ್ತಕಿ ಇರುವ ಅರ್ಜಿದಾರರು ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಕನಿಷ್ಟ ಮೂರು ವರ್ಷ ವಾಸವಾಗಿರಬೇಕು, ಬಡತನ ರೇಖೆಗಿಂತ ಕೆಳಗಿನವರಾಗಿರಬೇಕು, ಅರ್ಜಿದಾರರು ವಿವಿಧ ಕಾರ್ಯಾಕ್ತಮಗಳಿಗೆ ಪ್ರತ್ಯೇಕ ಅರ್ಜಿಗಳು ಸಲ್ಲಿಸಬೇಕು, ಅರ್ಜಿದಾರರು ಇತರೆ ದಾಖಲೆಗಳೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಚುನಾವಣೆ ಗುರುತಿನ ಪತ್ರ ಹಾಗೂ ಆಧಾರ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಬೇಕು ಇವೆಲ್ಲಾ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿ ಆಗಸ್ಟ್ 17 ರೊಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತ/ಸಮುದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಆಗಸ್ಟ್ 12 ರಂದು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ
ಯಾದಗಿರಿ,ಆಗಸ್ಟ್04,(ಕರ್ನಾಟಕ.ವಾರ್ತಾ): ಗುರುಮಿಠಕಲ್ ತಾಲೂಕ ಪಂಚಾಯತಿಯ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಶಾಸಕ ನಾಗನಗೌಡ ಕಂದಕೂರ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 12 ರಂದು ಬೆಳಗ್ಗೆ 11.ಗಂಟೆಗೆ ಗುರುಮಿಠಕಲ್‌ನ ಪುರಸಭೆ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ 2021 ಜುಲೈ 31 ರ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಕುರಿತು ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಿಷಯುಕ್ತ ತ್ಯಾಜ್ಯವನ್ನು ಹಳ್ಳ- ಕೊಳ್ಳಗಳಿಗೆ ಹರಿಬಿಡುವ ಕೆಮಿಕಲ್ ಕಾರ್ಖಾನೆಗಳ ವಿರುದ್ದ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ*
ಮಂಗಳವಾರ, ಆಗಸ್ಟ್ 3, 2021
ಅಲ್ಪಸಂಖ್ಯಾತರಿAದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ವಿಕಲಚೇತನ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ
ಯಾದಗಿರಿ.ಆಗಸ್ಟ್.3(ಕ.ವಾ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸ್ಪರ್ಧಾಚೇತನ ಯೋಜನೆಯಡಿ ಪಿ.ಯು.ಸಿ ಮೇಲ್ಪಟ್ಟು ವ್ಯಾಸಂಗ ಮಾಡುವ ಅರ್ಹ ಎಲ್ಲ ವಿಕಲಚೇತನ ವಿದ್ಯಾರ್ಥಿಗಳು ಐ.ಎ.ಎಸ್. ಕೆ.ಎ.ಎಸ್, ಎಸ್.ಡಿ.ಎ, ಎಫ್.ಡಿ.ಎ, ಹಾಗೂ ಇನ್ನಿತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಎ1 ಕೆರಿಯರ್ ಅಕಾಡೆಮಿಯು ಉಚಿತ ತರಬೇತಿ ನೀಡುತ್ತಿದೆ. ಆಸ್ತಕ ಅರ್ಹ ಎಲ್ಲಾ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿ ಪಡೆಯಲು ಬೇಕಾಗಿರುವ ದಾಖಲಾತಿಗಳು ಅಂಗವಿಕಲತೆ ಗುರುತಿನ ಚೀಟಿ ಶೇ40% ಮೇಲ್ಪಟ್ಟು, ಆಧಾರ ಕಾರ್ಡ್, ವಾಸಸ್ಥಳ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಕಲತೆ ತೋರುವ ಭಾವಚಿತ್ರ 2 ಮತ್ತು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಸೂಕ್ತ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08473-253740 ಸಂಪರ್ಕಿಸಲು ಕೋರಿದೆ..
ತೋಟಗಾರಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಯಾದಗಿರಿ.ಆಗಸ್ಟ್.3(ಕ.ವಾ): 2021-22ನೇ ಸಾಲಿನ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿರುವ ರಾಷ್ಟಿçÃಯ ತೋಟಗಾರಿಕೆ ಮೀಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಹೊಸ ಕೃಷಿ ಪ್ರದೇಶ ವಿಸ್ತರಣೆಯಲ್ಲಿ ಬರುವ ಬಾಳೆ, ದಾಳಿಂಬೆ, ನೇರಳೆ, ಅಂಜೂರ, ಡ್ರಾö್ಯಗನ್ ಫ್ರೊಟ್, ಸೀಬೆ ಹಾಗೂ ಕೀಟ ಮತ್ತು ರೋಗ ನಿಯಂತ್ರಣ, ನೀರು ಸಂಗ್ರಹಣಾ ಘಟಕ, ಯಾಂತ್ರೀಕರಣ, ಕೋಯ್ಲೋತ್ತರ ನಿರ್ವಹಣೆ ಘಟಕಗಳಿಗೆ ಸಹಾಯಧನವನ್ನು ತೋಟಗಾರಿಕೆ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಆಗಸ್ಟ 16 ರೊಳಗೆ ಅರ್ಜಿಯನ್ನು ದಾಖಲಾತಿಗಳೊಂದಿಗೆ ಸಂಬAಧಪಟ್ಟ ತಾಲ್ಲೂಕ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಲಭ್ಯವಿರುವ ಅನುದಾನದ ಮೇರೆಗೆ, ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತೋಟಗಾರಿಕೆಯ ಉಪ ನಿರ್ದೇಶಕರು (ಜಿಪಂ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆ: ರೈತ ಬಂಧು ಅಭಿಯಾನ
ಯಾದಗಿರಿ.ಆಗಸ್ಟ್.3(ಕ.ವಾ): ಮಹಾತ್ಮ ಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆಯಡಿ ರೈತ ಬಂಧು ಅಭಿಯಾನ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರವರೆಗೆ 2 ತಿಂಗಳ ಕಾಲ ರೈತರ ಎರೆಹುಳ ಗೊಬ್ಬರ ತಯಾರಿಕೆ ಮತ್ತು ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ25 ಎರೆಹುಳ ತೊಟ್ಟಿಗಳನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದೇಶಗಳು: ಆರ್ಥಿಕ ಸ್ಥಿರತೆ,ತ್ಯಾಜ್ಯ ವಸ್ತುಗಳ ಸದ್ಭಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಿ ಸ್ವಚ್ಛ ಪರಿಸರ ಸೃಷ್ಠಿಸಲು ಅನುಕೂಲ,ರೈತರಲ್ಲಿ ಎರೆಹುಳ ಗೊಬ್ಬರ ಉತ್ಪಾದನೆ,ಅದರ ಉಪಯುಕ್ತತತೆ ಹಾಗೂ ಸಾವಯವ ಕೃಷಿ ಉತ್ತೇಜಿಸುವ ಬಗ್ಗೆ ಜಾಗೃತಿ,ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಹಾಗೂ ರೈತರಿಗೆ ಎರೆಹುಳ ಗೊಬ್ಬರದ ಉತ್ಪಾದನೆ ಹಾಗೂ ಉದ್ಯಮಶೀಲತೆ ಅವಕಾಶಗಳ ಬಗ್ಗೆ ಪೂರಕ ಮಾಹಿತಿ ನೀಡಿ ಪ್ರೋತ್ಸಾಹಿಸುವುದು.
ಫಲಾನುಭವಿಗಳ ವರ್ಗ: ವೈಯಕ್ತಿಕ ಫಲಾನುಭವಿಗಳು,ಸ್ವಸಹಾಯ ಗುಂಪು,ರೈತ ಉತ್ಪಾದಕ ಸಂಸ್ಥೆಗಳು,ಸಮುದಾಯ ಘಟಕ ನರೇಗಾ ಯೋಜನೆಯಡಿ ಜಾನುವಾರು ಶೆಡ್ ನಿರ್ಮಿಸಿಕೊಂಡಿರುವ ಹಾಗೂ ಬಯೋಗ್ಯಾಸ ಘಟಕಗಳ ಫಲಾನುಭವಿಗಳಿಗೆ ಕಡ್ಡಾಯವಾಗಿ ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು..
ಅರ್ಹ ಫಲಾನುಭವಿಗಳು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ,ಅಲೆಮಾರಿ ಜನಗಳು, ಬುಡಕಟ್ಟು ಜನಾಂಗ,ಬಡತನರೇಖೆ ಕೆಳಮಟ್ಟದಲ್ಲಿ ಇರುವ ಇತರೆ ಕುಟುಂಬಗಳು,ಸ್ರಿö್ತÃ ಪ್ರಧಾನ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆಯ ಫಲಾನುಭವಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮ 2006(2007 ರ2)ರಡಿಯ ಫಲಾನುಭವಿಗಳು
ಅನುಮೋದಿತ ಎರೆಹುಳು ಗೊಬ್ಬರ ತಯಾರಿಕೆ ಮಾದರಿಗಳು: ಎರೆಹುಳು ಗೊಬ್ಬರ ತಯಾರಿಕೆ ತೊಟ್ಟಿ ವಿಧಾನವು ಹೆಚ್ಚು ಬಳಕೆಯಲ್ಲಿರುವುದರಿಂದ,ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2 ಎರೆಹುಳು ಘಟಕದ ತೊಟ್ಟಿಯನ್ನು ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...
-
ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ ಯಾದಗಿರಿ ಜೂನ್15(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ...
-
ಮೊಬೈಲ್, ವಾಹನ ಹರಾಜು ಮುಂದೂಡಿಕೆ ಯಾದಗಿರಿ, ಮಾರ್ಚ್ 19 (ಕರ್ನಾಟಕ ವಾರ್ತೆ): ಸುರಪುರದ ಸಿವಿಲ್ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳವರ ನ್ಯ...
-
ಕೊರೋನಾ ವೈರಸ್ ಭಯ ಬೇಡ; ಮುನ್ನೆಚ್ಚರಿಕೆ ಇರಲಿ ಜಿಲ್ಲೆಯಲ್ಲಿ 27 ಐಸೊಲೇಷÀನ್ ಬೆಡ್ ವ್ಯವಸ್ಥೆ - ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಯಾದಗಿರಿ, ಮಾರ್ಚ್ 16 (ಕರ್...
