ಗುರುವಾರ, ಜನವರಿ 23, 2020


ವೃತ್ತಿ ಬುನಾದಿ ತರಬೇತಿ ಶಿಬಿರದಲ್ಲಿ ಉಪನ್ಯಾಸ
ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ
- ರಘುವೀರ ಸಿಂಗ್ ಠಾಕೂರ್

ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಬಾಲಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) 1986ರ ಕಾಯ್ದೆಯಡಿಯಲ್ಲಿ 6ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ಮತ್ತು ಇತರೆ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು. ನಗರದ ತಹಸೀಲ್ ಕಾರ್ಯಾಲಯದಲ್ಲಿ ಬುಧವಾರ ಜಿಲ್ಲಾ ತರಬೇತಿ ಸಂಸ್ಥೆ ವತಿಯಿಂದ 2ನೇ ತಂಡದ ಲಿಪಿಕ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ವೃತ್ತಿ ಬುನಾದಿ ತರಬೇತಿ ಶಿಬಿರದಲ್ಲಿ “ಬಾಲಕಾರ್ಮಿಕ ಪದ್ಧತಿ” ಕುರಿತು ಅವರು ಮಾತನಾಡಿದರು. ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ 1986ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ 17 ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಮತ್ತು 1961ರ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಕಲಂ 26 (2)ರಡಿ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ಬಾಲಕಾರ್ಮಿಕರ ಪತ್ತೆಗೆ ದಾಳಿ ನಡೆಸಲಾಗುತ್ತಿದೆ. 6 ರಿಂದ 18 ವರ್ಷದೊಳಗೆ ಬರುವ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ, ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್ ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಅಪಾಯಕಾರಿ, ಅಪಾಯಕಾರಿ ಅಲ್ಲದ ಬಾಲಕಾರ್ಮಿಕ ಮಕ್ಕಳು ಮತ್ತು ಶಾಲೆಬಿಟ್ಟ ಮಕ್ಕಳನ್ನು ರಕ್ಷಿಸಿ ಹತ್ತಿರದ ಸರ್ಕಾರಿ, ಖಾಸಗಿ ಶಾಲೆಗಳಿಗೆ ದಾಖಲಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಕೇಂದ್ರ ಪುರಸ್ಕøತ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳಿಗೆ ಗುಣಮಟ್ಟದ ವ್ಯವಸ್ಥಿತ ಸೇವೆಗಳ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ಸುರಕ್ಷಿತ ಜಾಲ ನಿರ್ಮಾಣ ಮಾಡುವುದು ಈ ಯೋಜನೆಯ ಮುಖ್ಯಗುರಿ. ಕೇಂದ್ರ ಸರ್ಕಾರವು ಈ ಯೋಜನೆಯನ್ನು 26ನೇ ಫೆಬ್ರುವರಿ 2009ರಂದು ಭಾರತದಾದ್ಯಂತ ಜಾರಿಗೆ ತಂದಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಕ್ಕಳಿಗೂ ರಕ್ಷಣಾ ವಾತಾವರಣ ಕಲ್ಪಿಸಲು ಮೂಲಕ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2000ರ ಅಡಿಯಲ್ಲಿ ಮಕ್ಕಳ ಹಕ್ಕುಗಳನ್ನು ಖಾತ್ರಿಪಡಿಸುವುದರ ಮುಖಾಂತರ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು. ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿ ಸೆಕ್ಷನ್-4, 5, 6ಎ, 6ಬಿ ಮತ್ತು ಸೆಕ್ಷನ್-7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಪಾನ್‍ಶಾಪ್, ಧಾಬಾ ಹಾಗೂ ಶಾಲಾ- ಕಾಲೇಜು ಪ್ರದೇಶದ 100 ಮೀಟರ್ ಅಂತರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದಿಸುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧವಿದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿಸಿದರು. ಎಲ್‍ಪಿಒ ಅಧಿಕಾರಿ ರಾಜೇಂದ್ರ ಯಾದವ್, ಸಂಸ್ಥೆಯ ಸಿಬ್ಬಂದಿ ರಾಧಾಮಣಿ ಅವರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.1ರಂದು ಮಡಿವಾಳ ಮಾಚಿದೇವರ ಜಯಂತ್ಯೋತ್ಸವ

ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ 1ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಮಡಿವಾಳ ಮಾಚಿದೇವರ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಅಂದು ಬೆಳಿಗ್ಗೆ 9 ಗಂಟೆಗೆ ಯಾದಗಿರಿ ನಗರದಿಂದ ಜಿಲ್ಲಾಡಳಿತ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಮಡಿವಾಳ ಮಾಚಿದೇವ ಜಯಂತ್ಯೋತ್ಸವ ಸಂಘದವರು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು, ಮೆರವಣಿಗಾಗಿ ಸಂಘಕ್ಕೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಸ್ಥಳೀಯ ನುರಿತ ಕಲಾತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಟೀ, ಟಿಫಿನ್ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.
ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ದತ್ತಪ್ಪ ಕಲ್ಲೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಸಮಾಜದ ಮುಖಂಡರಾದ ಮಹಾದೇವಪ್ಪ ಯಲಸತ್ತಿ, ಮಡಿವಾಳಪ್ಪ ಬಿಜಾಸ್ಪೂರ, ಶ್ರೀಶೈಲ ಮಡಿವಾಳ, ನಾಗಪ್ಪ ಮೊಗದಂಪುರ, ನಾಗಪ್ಪ ಸೂಗೂರ, ಮರಗಪ್ಪ ಸಾಲಿಕೇರಿ, ಮಲ್ಲಿಕಾರ್ಜುನ ಮಡಿವಾಳ, ರಮೇಶ ಮಡಿವಾಳ, ಚನ್ನಪ್ಪ ಮಡಿವಾಳ, ಮಾರೇಣ್ಣ ಮಡಿವಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹಕ್ಕು ಮತ್ತು ಆಕ್ಷೇಪಣೆಗಳ ಪ್ರಗತಿ ಪರಿಶೀಲನಾ ಸಭೆ
ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಶ್ರಮಿಸಿ
-ಡಾ.ಜೆ.ರವಿಶಂಕರ್
ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯ ಬಗ್ಗೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಶೀಲಿಸಿ, ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಡಾ. ಜೆ.ರವಿಶಂಕರ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಮತದಾರರ ಪಟ್ಟಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಡಿಸೆಂಬರ್ 16ರಿಂದ ಜನವರಿ 15ರವರೆಗೆ ಬಂದಿರುವ ಹಕ್ಕು ಮತ್ತು ಆಕ್ಷೇಪಣೆಗಳ ಬಗ್ಗೆ ಮೊದಲು ವಿಧಾನಸಭಾ ಕ್ಷೇತ್ರವಾರು ವೀಕ್ಷಿಸಿದ ಡಾ. ಜೆ.ರವಿಶಂಕರ್ ಅವರು, ನಂತರ ರ್ಯಾಂಡಮ್ ಆಗಿ ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರಮಿಠಕಲ್ ಕ್ಷೇತ್ರಗಳ ಕೆಲ ಮತಗಟ್ಟೆಗಳ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲಿಸಿದರು. ಅಲ್ಲದೇ, ನಮೂನೆ 6 (ಸೇರ್ಪಡೆ), 7(ಆಕ್ಷೇಪಣೆ), 8 (ತಿದ್ದುಪಡಿ), 8ಎ (ವರ್ಗಾವಣೆ) ಅರ್ಜಿಗಳನ್ನು ಆಯ್ಕೆ ಮಾಡಿಕೊಂಡು ಕ್ರಮಬದ್ಧವಾಗಿ ವಿಲೆವಾರಿಗೊಳಿಸಲಾಗಿದೆಯೇ ಎಂಬುದನ್ನು ಕೂಡ ಅವರು ಈ ಸಂದರ್ಭದಲ್ಲಿ ಪರಿಶೀಲನೆ ನಡೆಸಿದರು.
ಮತಗಟ್ಟೆಗಳ ಕೆಲವು ಆಯ್ದ ಅರ್ಜಿ ನಮೂನೆಗಳನ್ನು ಆಯ್ದುಕೊಂಡು ಮತದಾರರ ಮನೆಗಳಿಗೆ ಭೇಟಿ ನೀಡಿ, ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಇದಲ್ಲದೇ ರಾಜ್ಯ ಮತ್ತು ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಕೂಡ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಸಿದ್ಧತೆಗೆ ನೇಮಕವಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಕೆಗೆ ನಿಗದಿಪಡಿಸಿದ ವಧಿಯಲ್ಲಿ ಅರ್ಜಿ ನಮೂನೆ 6ರಲ್ಲಿ 8389, ಅರ್ಜಿ ನಮೂನೆ 7ರಲ್ಲಿ 2793, ಅರ್ಜಿ ನಮೂನೆ 8ರಲ್ಲಿ 1727 ಹಾಗೂ ಅರ್ಜಿ ನಮೂನೆ 8ಎರಲ್ಲಿ 834 ಅರ್ಜಿಗಳು ಬಂದಿವೆ. ಈ ಪೈಕಿ ಬಿಎಲ್‍ಒಗಳ ಮೂಲಕ ಬಂದ ಅರ್ಜಿಗಳು ಸರಿಯಾಗಿ ಪರಿಶೀಲನೆ ಆಗಿರುತ್ತವೆ. ಆನ್‍ಲೈನ್ ಮೂಲಕ ಬಂದಿರುವ ಅರ್ಜಿಗಳ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕಿದೆ ಎಂದು ಹೇಳಿದರು. ಜನವರಿ 25ರಂದು 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ಸುರೇಶ ಅಂಕಲಗಿ, ಜಗನ್ನಾಥರೆಡ್ಡಿ, ನಿಂಗಣ್ಣ ಎಸ್.ಬಿರಾದಾರ, ವಿನಯಕುಮಾರ, ಚುನಾವಣೆ ಶಾಖೆಯ ಶಿರಸ್ತೇದಾರ್ ಪರಶುರಾಮ, ಖಲೀಲ್‍ಸಾಬ್, ಶಿಲ್ಪಾ ಪಾಟೀಲ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಯುಷ್ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ
ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾ ಆಯುಷ್ ಇಲಾಖೆಯ 2020ರ ಕ್ಯಾಲೆಂಡರನ್ನು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಬಿಡುಗಡೆ ಮಾಡಿದರು.
ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಪ್ರಕಾಶ ರಾಜಾಪುರ, ಹೊನಗೇರಾ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ರಮೇಶ ಸಜ್ಜನ್ ಅವರು ಉಪಸ್ಥಿತರಿದ್ದರು.]

ಪೌರಕಾರ್ಮಿಕರಿಗೆ ಉಪಾಹಾರ ನೀಡಲು ದರಪಟ್ಟಿ ಆಹ್ವಾನ
ಯಾದಗಿರಿ, ಜನವರಿ 23 (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆ ಆರೋಗ್ಯ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ದಿನನಿತ್ಯ ಬೆಳಗಿನ ಜಾವದಲ್ಲಿ ಉಪಾಹಾರ ನೀಡಲು ಹೋಟೆಲ್ ಅಥವಾ ಏಜೆನ್ಸಿಯವರಿಂದ ಸೀಲಬಂದ್ ಲಕೋಟೆ ಮುಖಾಂತರ ದರಪಟ್ಟಿ ಆಹ್ವಾನಿಸಲಾಗಿದೆ.
ಒಟ್ಟು 100 ಜನ ಪೌರಕಾರ್ಮಿಕರಿದ್ದು, ಪ್ರತಿಯೊಬ್ಬ ಪೌರಕಾರ್ಮಿಕರಿಗೆ ಉಪಾಹಾರ ದರ 20 ರೂ. ನಿಗದಿಪಡಿಸಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಆರೋಗ್ಯ ಶಾಖೆಯ ಪರಿಸರ ಇಂಜಿನೀಯರರನ್ನು ಸಂಪರ್ಕಿಸಬಹುದು. ದರಪಟ್ಟಿಗಳನ್ನು ಜನವರಿ 30ರಂದು ಸಂಜೆ 4 ಗಂಟೆಗೆ ಕೊನೆಯ ದಿನವಾಗಿದ್ದು, ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ಕೊಟೇಶನ ತೆರೆಯಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ನಾಲ್ಕನೇ ದಿನದ ಕಾರ್ಯಕ್ರಮ
ವಿವಿಧ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಸಂಚಾರ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯಾದಗಿರಿ/ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಗಳ ಸಂಯುಕ್ತಾಶ್ರಯದಲ್ಲಿ ಜನವರಿ ೨೧ರಿಂದ ೨೪ರವರೆಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ನಾಲ್ಕನೇ ದಿನದ ಅಭಿಯಾನವು ಜನವರಿ ೨೪ರಂದು ಯಾದಗಿರಿ ತಾಲ್ಲೂಕಿನ ಮೂರು ಗ್ರಾಮಗಳಲ್ಲಿ ಸಂಚರಿಸಲಿದೆ.
ಎಲ್ಹೇರಿ: ಬೆಳಿಗ್ಗೆ ೧೦ ಗಂಟೆಗೆ ಎಲ್ಹೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಾ ಅವರು ಅಧ್ಯಕ್ಷತೆ ವಹಿಸುವರು. ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಅಬ್ದುಲ್ ರಜಾಕ್ ಅವರು “ಮಹಿಳೆಯರ ಆಸ್ತಿ ಹಕ್ಕುಗಳು” ಕುರಿತು ಮತ್ತು ಸುಷ್ಮಾ ಜಾಧವ್ ಅವರು “ನಾಗರಿಕರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು” ಕುರಿತು ಉಪನ್ಯಾಸ ನೀಡುವರು.
ಕೊಂಕಲ್: ಮಧ್ಯಾಹ್ನ ೨ ಗಂಟೆಗೆ ಕೊಂಕಲ್ ಸರಕಾರಿ ಪ್ರೌಢ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಾರಾಭಾಯ್ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷö್ಮಮ್ಮ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಕೀಲರಾದ ಗೋವಿಂದ ಜಾಧವ್ ಅವರು “ಬಾಲಕಾರ್ಮಿಕ ನಿಷೇಧ ಕಾಯ್ದೆ” ಕುರಿತು ಮತ್ತು ರಾಜಕುಮಾರ ದೊಡ್ಡಮನಿ ಅವರು “ವರದಕ್ಷಣೆ ನಿಷೇಧ ಕಾಯ್ದೆ” ಕುರಿತು ಉಪನ್ಯಾಸ ನೀಡುವರು.
ಅನಪೂರ: ಸಂಜೆ ೫ ಗಂಟೆಗೆ ಅನಪೂರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಭಿಯಾನದ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಅವರು ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೋವರ್ಧನರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್ ಅವರು “ಆಸ್ತಿ ವರ್ಗಾವಣೆ”ಯ ಬಗ್ಗೆ ಮತ್ತು ವಕೀಲರಾದ ಭೀಮರಾಯ ಕಿಲ್ಲನಕೇರಾ ಅವರು “ಕಂದಾಯ ಗ್ರಾಮ” ಕುರಿತು ಉಪನ್ಯಾಸ ನೀಡುವರು.

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗದ ಜನರಿಗೆ ಶೌಚಾಲಯ ನಿರ್ಮಾಣಕ್ಕಾಗಿ ಸಹಾಯಧನ ೧೩*೧೫೦೦೦ ಒಟ್ಟು ೧.೯೧ ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣ ಸಹಾಯಧನ ೫೨*೧೫೦೦೦ ಒಟ್ಟು ೭.೮೦ ಲಕ್ಷ ರೂ. ನಿಗದಿಪಡಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿಕಲಚೇತನರಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿ ವಾಹನ ಸೌಲಭ್ಯ ಕಲ್ಪಿಸಲು ಬಡ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ವಾಸಿಸುವ ವಿಕಲಚೇತನ ಜನರಿಗೆ ವಾಹನ ಖರೀದಿಗಾಗಿ ೧೨* ೩.೩೦ ಲಕ್ಷ ರೂ. ನಿಗದಿಪಡಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಯಾದಗಿರಿ, ಜನವರಿ ೨೩ (ಕರ್ನಾಟಕ ವಾರ್ತೆ): ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಅಧಿಸೂಚಿತ ಪ್ರದೇಶ ಸಮಿತಿ ವ್ಯಾಪ್ತಿಯಲ್ಲಿ ೨೦೧೯-೨೦ನೇ ಸಾಲಿನ ಎಸ್.ಎಫ್.ಸಿ ಅನುದಾನ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಕ್ರಿಯಾ ಯೋಜನೆ ಮಂಜೂರಿಯಾದAತೆ ವ್ಯಕ್ತಿ ಸಂಬAಧಿತ ವಿವಿಧ ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾಥಿಗಳಿಗೆ ತಲಾ ೩೦೦೦ ರೂ.ನಂತೆ ಸಹಾಯಧನ, ಪಿ.ಯು.ಸಿ/ ಉದ್ಯೋಗ ಆಧಾರಿತ/ ಡಿಪ್ಲೊಮಾ ತಲಾ ೪೫೦೦ ರೂ.ನಂತೆ ಸಹಾಯಧನ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿ ತಲಾ ೩೦೦೦ ರೂ.ನಂತೆ, ಪ್ಯಾರಾ ಮೆಡಿಕಲ್ ಕೋರ್ಸ್ ಡಿಪ್ಲೊಮಾ/ ಡಿ.ಇಡಿ/ ಸಿ.ಪಿ.ಇಡಿ/ ಇತರೆ ತಾಂತ್ರಿಕ ತರಗತಿಗಳಿಗಾಗಿ ತಲಾ ೪೫೦೦೦ ರೂ.ನಂತೆ, ಬಿ.ಎ/ಬಿ.ಎಸ್‌ಸಿ/ಬಿ.ಕಾಂ ಇತರೆ ಪದವಿ ವಿದ್ಯಾರ್ಥಿಗಳಿಗೆ ತಲಾ ೬೦೦೦ ರೂ.ನಂತೆ, ಬಿ.ಇಡಿ/ಬಿ.ಪಿ.ಇಡಿ/ಇತರೆ ಡಿಪ್ಲೊಮಾ ತಲಾ ೬೦೦೦ ರೂ.ನಂತೆ ಹಾಗೂ ಎಂ.ಎ/ ಎಂ.ಎಸ್‌ಸಿ/ ಎಂ.ಕಾಮ್/ ಎಂ.ಎಸ್.ಡಬ್ಲೂö್ಯ/ ಎಂ.ಸಿ.ಎ/ ಬಿ.ಇ ತಲಾ ೧೫,೦೦೦ ರೂ.ನಂತೆ ಸಹಾಯಧನ ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆಬ್ರುವರಿ ೮ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ಷರತ್ತುಗಳಿಗೆ ಅಧಿಸೂಚಿತ ಪ್ರದೇಶ ಸಮಿತಿ ಮುಖ್ಯಾಧಿಕಾರಿಗಳ ಕಚೇರಿ ಅಥವಾ ಮೊ:೮೮೬೧೧೨೯೧೫೯, ೯೭೪೩೬೭೨೧೧೬ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಬುಧವಾರ, ಜನವರಿ 22, 2020

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯ ಅಗತ್ಯ ಸಿದ್ಧತೆಗೆ ಸೂಚನೆ

ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಜಿಲ್ಲೆಯ ಸುರಪುರ ತಾಲ್ಲೂಕಿನ ತಿಂಥಣಿ ಗ್ರಾಮದಲ್ಲಿ ಫೆಬ್ರುವರಿ ೩ರಿಂದ ೮ರವರೆಗೆ ಜರುಗಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಾತ್ರೆಗೆ ರಾಜ್ಯದ ಹಲವು ಜಿಲ್ಲೆಗಳು ಹಾಗೂ ಅಂತರರಾಜ್ಯಗಳಿAದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಚರಂಡಿ ಮತ್ತು ಇನ್ನಿತರ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಾಪಾಡಬೇಕು. ಸಾರಿಗೆ ಬಸ್‌ಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ, ವಿದ್ಯುತ್, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಕರೆದು ನಿರ್ಣಯ ಕೈಗೊಳ್ಳಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಎನ್.ಹಳ್ಳಿ ಅವರಿಗೆ ನಿರ್ದೇಶಿಸಿದರು.
ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾತ್ರೆಯಲ್ಲಿ ಸ್ಥಾಪಿಸುವ ವಿವಿಧ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳ ಪಕ್ಕದಲ್ಲಿ ಕಸದ ಬುಟ್ಟಿಗಳನ್ನು ಇಟ್ಟುಕೊಳ್ಳಬೇಕು. ಯಾವುದೇ ತರಹದ ತ್ಯಾಜ್ಯಗಳನ್ನು ಅದರಲ್ಲಿ ಹಾಕಿಸುವ ವ್ಯವಸ್ಥೆ ಮಾಡಬೇಕು. ಅಂಗಡಿಗಳ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಜಾತ್ರೆ ಸಮಯದಲ್ಲಿ ದೇವಸ್ಥಾನದ ಆವರಣದಲ್ಲಿ ಕೌಂಟರ್ ನಿರ್ಮಿಸಿ, ಗಣಕಯಂತ್ರದ ಮೂಲಕ ಭಕ್ತರಿಗೆ ರಸೀದಿ ನೀಡಲು ಒಬ್ಬ ಸಿಬ್ಬಂದಿಯನ್ನು ನೇಮಿಸಲಾಗುವುದು. ಇದಕ್ಕಾಗಿ ದೇವಸ್ಥಾನದ ನಿಧಿಯಿಂದ ಗೌರವ ಧನ ಪಾವತಿಸಲು ಕ್ರಮ ಕೈಗೊಳ್ಳಬೇಕು. ಭಕ್ತರು ಹೊಸದಾಗಿ ವಸತಿಗೃಹಗಳನ್ನು ಕಟ್ಟಿಸಲು ಮುಂದೆ ಬರುತ್ತಿರುವುದಾಗಿ ದೇವಸ್ಥಾನ ಸಮಿತಿಯವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಒಂದು ಕೋಣೆ ನಿರ್ಮಾಣಕ್ಕೆ ತಗುಲುವ ವೆಚ್ಚವನ್ನು ವಿವಿಧ ತಾಂತ್ರಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ೨ ಲಕ್ಷ ರೂ. ನಿಗದಿಪಡಿಸಿದರು.
ಜಾತ್ರೆಯ ಸಮಯದಲ್ಲಿ ಮಾಂಸ, ಮದ್ಯ ಮಾರಾಟ ನಿಷೇಧಿಸಬೇಕು. ದೇವಸ್ಥಾನ ಮತ್ತು ಭಕ್ತರ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಅಳವಡಿಸಿರುವ ಸಿ.ಸಿ ಟಿವಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿ. ಜಾತ್ರೆ ನಿಮಿತ್ತ ಅಗತ್ಯ ಸ್ಥಳಗಳಲ್ಲಿ ಹೆಚ್ಚಿನ ಸಿ.ಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ದೇವಸ್ಥಾನದಲ್ಲಿ ಜರುಗುವ ಪೂಜೆಯನ್ನು ಭಕ್ತಾದಿಗಳಿಗೆ ವೀಕ್ಷಿಸುವಂತಾಗಲು ದೇವಸ್ಥಾನದ ಹೊರಗಡೆ ಎರಡು ಎಲ್‌ಇಡಿ ಸ್ಕಿçÃನ್‌ಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು.
ಯಾವುದೇ ಅಹಿತಕರ ಘಟನೆ ಸಂಭವಿಸದAತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತೆ ವಹಿಸಬೇಕು. ದೇವಸ್ಥಾನ ಆವರಣ, ನದಿಯ ದಂಡೆ ಹಾಗೂ ಬಸ್ ನಿಲುಗಡೆ ಸ್ಥಳದಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಜನದಟ್ಟಣೆಯನ್ನು ನಿಯಂತ್ರಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಜಾತ್ರೆಯಲ್ಲಿ ಮಕ್ಕಳು ತಪ್ಪಿಸಿಕೊಂಡಲ್ಲಿ ಅವರನ್ನು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿ, ಪೋಷಕರಿಗೆ ಒಪ್ಪಿಸುವ ಜವಾಬ್ದಾರಿಯನ್ನು ಪೊಲೀಸ್ ಮತ್ತು ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ವಹಿಸಿದರು.
ಜಾತ್ರೆ ಮುಗಿಯುವವರೆಗೆ ತುರ್ತು ಆರೋಗ್ಯ ಸೇವೆಗಳಿಗಾಗಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಆಯೋಜಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು, ೧೦೮ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನ ಸ್ಥಳದಲ್ಲಿರಬೇಕು ಎಂದು ಸೂಚಿಸಿದರು.
ದೇವಸ್ಥಾನದ ನದಿ ತೀರದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ನಿರ್ಮಿಸಿದ ಸ್ನಾನ ಘಟ್ಟ ಉತ್ತಮವಾಗಿದೆ. ಇದು ಶಾಶ್ವತವಾಗಿ ಉಳಿಯುವಂತೆ ನೋಡಿಕೊಳ್ಳಲು ಇದರ ಮೇಲೆ ಕಾಂಕ್ರೀಟ್ ಮಾಡಿಸಲು ಟೆಂಡರ್ ಕರೆಯಲಾಗಿದೆ. ಭಕ್ತರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಲ್ಲಿಸಿ, ಭಕ್ತರಿಗೆ ಕುಡಿಯುವ ನೀರು ಕಲ್ಪಿಸಬೇಕು. ಜೊತೆಗೆ ನಾರಾಯಣಪುರ ಜಲಾಶಯದ ಮೂಲಕ ನದಿಗೆ ೧೦೦ ಕ್ಯೂಸೆಕ್ ನೀರು ಬಿಡುಗಡೆಗೆ ಕೃಷ್ಣ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆಯಬೇಕು. ಜಾತ್ರೆಯ ಸಮಯ ನದಿಯಲ್ಲಿ ನೀರಿನ ರಭಸ ಹೆಚ್ಚಾಗಿರುವುದರಿಂದ ತೆಪ್ಪಗಳ ಮೂಲಕ ನದಿ ದಾಟಿಸುವುದನ್ನು ನಿಷೇಧಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಅಶ್ಲೀಲ ನೃತ್ಯ ಪ್ರದರ್ಶಿಸಿದರೆ ಕ್ರಮ: ಜಾತ್ರೆಯ ಸಮಯದಲ್ಲಿ ನಡೆಯುವ ನಾಟಕ ಮತ್ತು ಇತರೆ ಪ್ರದರ್ಶನದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ ಮಾಡತಕ್ಕದಲ್ಲ. ಒಂದು ವೇಳೆ ಅಶ್ಲೀಲ ಪ್ರದರ್ಶನ ಕಂಡುಬAದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಪ್ರದರ್ಶನಕ್ಕೆ ಪರವಾನಗಿ ನೀಡುವ ಪೂರ್ವದಲ್ಲಿ ಷರತ್ತು ವಿಧಿಸುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಮಾತನಾಡಿ, ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಜಾತ್ರೆ ನಡೆಯುವ ಸ್ಥಳ, ದೇವಸ್ಥಾನ ಆವರಣ, ಬಸ್ ನಿಲುಗಡೆ ಸ್ಥಳ, ನದಿ ದಂಡೆ ಹಾಗೂ ಇತರೆ ಪ್ರದೇಶಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಜಾತ್ರೆಯ ಆವರಣದವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರೆ ಭಕ್ತರಿಗೆ ತೊಂದರೆಯುAಟಾಗುತ್ತದೆ. ಹಾಗಾಗಿ, ದೇವಸ್ಥಾನದಿಂದ ೧ ಕಿ.ಮೀ ದೂರದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ್‌ಸಿಂಗ್ ಠಾಕೂರ್ ಅವರು ಸಭೆಯ ನಡಾವಳಿಗಳನ್ನು ಓದಿದರು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ, ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಹಣಮಂತಪ್ಪ, ಜೆಸ್ಕಾಂ ಎಇಇ ಈರಣ್ಣ, ದೇವಸ್ಥಾನ ಸಮಿತಿ ಸದಸ್ಯರಾದ ಸಣ್ಣಮಾನಯ್ಯ ಬಂಡೊಳ್ಳಿ, ಗಂಗಾಧರ ನಾಯಕ, ಹಣಮಂತ ತಿಂಥಣಿ, ಬಸವರಾಜ ದೊಡ್ಡಮನಿ, ಚಿನ್ನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾಜೆಕ್ಟ್ಗಳ ಸ್ಪರ್ಧೆಗೆ ಚಾಲನೆ 
ಮಕ್ಕಳು ವೈಜ್ಞಾನಿಕ ಕ್ಷೇತ್ರದತ್ತ ಮುಖ ಮಾಡಲು ಪ್ರೋತ್ಸಾಹಿಸಿ
-ಶಿವಲಿಂಗಪ್ಪ ಪುಟಗಿ

ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ವೈಜ್ಞಾನಿಕ ಪ್ರತಿಭೆಯನ್ನು ಗುರುತಿಸಿ ಅವರ ಆವಿಷ್ಕಾರ, ಪ್ರಯೋಗಗಳಿಗೆ ಪ್ರೋತ್ಸಾಹ ನೀಡಬೇಕು. ವೈಜ್ಞಾನಿಕ ಕ್ಷೇತ್ರದತ್ತ ಮುಖ ಮಾಡುವ ನಿಟ್ಟಿನಲ್ಲಿ ಬೋಧನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ ಅವರು ಸಲಹೆ ನೀಡಿದರು.

ನಗರದ ಚಿತ್ತಾಪುರ ರಸ್ತೆ ಮಾರ್ಗದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ ಬುಧವಾರ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ಇನ್‌ಸ್ಪೆöÊರ್ ಅವಾರ್ಡ್ (ಮಾನಕ್) ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರಾಜೆಕ್ಟ್ಗಳ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಉನ್ನತ ಸ್ಥಾನ ಹೊಂದಿದೆ. ದಿನನಿತ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಆವಿಷ್ಕಾರಗಳು ನಡೆಯುತ್ತಿವೆ. ಭಾರತದ ಕ್ಷಿಪಣಿತಜ್ಞ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಜೀವನ ಸಾಧನೆಗಳನ್ನು ತಿಳಿದುಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಅವಶ್ಯವಾಗಿವೆ. ಮಕ್ಕಳು ಡಾಕ್ಟರ್, ಇಂಜಿನೀಯರ್, ನ್ಯಾಯಾಧೀಶರಂತಹ ಉನ್ನತ ಹುದ್ದೆಗಳನ್ನು ಪಡೆಯಲು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಅಲ್ಲದೆ, ಪ್ರತಿ ವಿದ್ಯಾರ್ಥಿಯು ಜೀವನದಲ್ಲಿ ಗುರಿ ಇಟ್ಟುಕೊಂಡು ಆ ಗುರಿ ಸಾಧಿಸುವ ಛಲವಿರಬೇಕು ಎಂದು ಅವರು ತಿಳಿಸಿದರು. ರಾಯಚೂರು ಎಲ್‌ವಿಡಿ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಎಸ್.ಎಮ್. ಕೇಡದ್ ಅವರು ಮಾತನಾಡಿ, ಪ್ರತಿ ಮಗುವಿನಲ್ಲಿ ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರಿಂದ ಹೊಸ ಆವಿಷ್ಕಾರ, ಪ್ರಯೋಗಗಳನ್ನು ಕಂಡುಕೊಳ್ಳಲು ಸಾಧ್ಯ. ವಿಜ್ಞಾನ ಕ್ಷೇತ್ರಕ್ಕೆ ಸಂಬAಧಿಸಿದAತೆ ಮಕ್ಕಳಲ್ಲಿ ಚೈತನ್ಯ ತುಂಬಲು ಇಂತಹ ಕಾರ್ಯಕ್ರಮಗಳು ಸ್ಫೂರ್ತಿಯಾಗುತ್ತವೆ. ಮಕ್ಕಳು ಆವಿಷ್ಕರಿಸಿದ ವೈಜ್ಞಾನಿಕ ಪ್ರಯೋಗಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಹೇಳಿದರು.
ಡಯಟ್ ಪ್ರಾಂಶುಪಾಲರಾದ ಶಿಭಾ ಅವರು ಮಾತನಾಡಿ, ಶಿಕ್ಷಕರು ಮಕ್ಕಳು ಯಾವ ವಿಷಯದಲ್ಲಿ ಆಸಕ್ತನಾಗಿದ್ದಾರೆ ಎಂದು ತಿಳಿದು ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪ್ರತಿ ವಿದ್ಯಾರ್ಥಿಯು ಪ್ರಶ್ನೆ ಮಾಡುವ ಮೂಲಕ ವಿಷಯವನ್ನು ಚರ್ಚಿಸಿ, ಮನನ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ನವದೆಹಲಿಯ ಎನ್‌ಐಎಸ್‌ಎಫ್‌ಟಿಯ ಪ್ರತಿನಿಧಿ ಮಧುರಾ ಪಾಟೀಲ್, ಜಿಲ್ಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷರಾದ ವೆಂಕೋಬ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಅಶೋಕ ಕೆಂಭಾವಿ, ಶಹಾಪುರ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಭೀಮಣ್ಣಗೌಡ, ಡಯಟ್ ಉಪನ್ಯಾಸಕರಾದ ಶಿವಪ್ಪ, ಚನ್ನಪ್ಪ, ಬಸ್ಸಣ್ಣಗೌಡ, ಎಂ.ಎಸ್.ಪಾಟೀಲ್, ಆದರ್ಶ ಶಾಲೆಯ ಮುಖ್ಯಗುರುಗಳಾದ ಭಗವಂತ, ಲಕ್ಷö್ಮಣ, ಕರ್ನಾಟಕ ರಾಜ್ಯ ನೌಕರರ ಸಂಘದ ಕಾರ್ಯದರ್ಶಿ ಮಹೇಶ್ ಪಾಟೀಲ್, ತಾಯಪ್ಪ, ಅಕ್ಕಮ್ಮ, ಮೌನೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು. ಸಂಗೀತ ಶಿಕ್ಷಕರಾದ ಶರಣಬಸವ ವಠಾರ್ ಹಾಗೂ ತಂಡದವರು ನಾಡಗೀತೆ ಹಾಡಿದರು. ಸಿಆರ್‌ಪಿ ಹಫೀಜ್ ಪಟೇಲ್ ಅವರು ನಿರೂಪಿಸಿದರು. ಬಿಆರ್‌ಪಿ ಬಸವರಾಜ ವಂದಿಸಿದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...