ಶುಕ್ರವಾರ, ಫೆಬ್ರವರಿ 14, 2020

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.21ರಂದು ಕಾಯಕ ಶರಣರ ಜಯಂತಿ 

ಯಾದಗಿರಿ, ಫೆಬ್ರುವರಿ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಕಾಯಕ ಶರಣರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ 21ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಯಕ ಶರಣರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಕಾಯಕ ಶರಣರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲ್ಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.


ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ನಗರದಲ್ಲಿ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ಮಾಡಿದರೆ, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಗೌರಮ್ಮ ದೊಂತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಫೆ.20ರಂದು ಸಂತ ಕವಿ ಸರ್ವಜ್ಞ ಜಯಂತ್ಯೋತ್ಸವ
ಯಾದಗಿರಿ, ಫೆಬ್ರುವರಿ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ವತಿಯಿಂದ ಸಂತ ಕವಿ ಸರ್ವಜ್ಞ ರವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಫೆಬ್ರುವರಿ 20ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂತ ಕವಿ ಸರ್ವಜ್ಞ ರವರ ಜಯಂತ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಿಗ್ಗೆ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಕವಿ ಸರ್ವಜ್ಞ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಮಕ್ಕಳಿಗೆ ಕವಿ ಸರ್ವಜ್ಞರ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕೂಡ ಸದರಿ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ತಹಶೀಲ್ದಾರರು ಕೈಗೊಳ್ಳುವಂತೆ ಅವರು ಕಟ್ಟುನಿಟ್ಟಾಗಿ ಸೂಚಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಬೆಳಿಗ್ಗೆ 9ರಿಂದ ಬೆಳಿಗ್ಗೆ 11 ಗಂಟೆಯವರೆಗೆ ನಗರದಲ್ಲಿ ಸಂತ ಕವಿ ಸರ್ವಜ್ಞರವರ ಭಾವಚಿತ್ರದ ಮೆರವಣಿಗೆ ನಡೆಸುವ ಬಗ್ಗೆ ಸಮಾಜದ ಮುಖಂಡರು ತಿಳಿಸಿದರು. ಮೆರವಣಿಗೆ ನಡೆಸಲು ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು, ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್ ನೀಡಬೇಕು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡಲು ನಿರ್ದೇಶಿಸಿದರು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ವಹಿಸಲಾಯಿತು. ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ ಅವರನ್ನು ನೇಮಕ ಮಾಡಲಾಯಿತು. ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಗೌರಮ್ಮ ದೊಂತಾ ಅವರು ಉಪಸ್ಥಿತರಿದ್ದರು. ಕುಂಬಾರ ಸಮಾಜದ ಜಿಲ್ಲಾಧ್ಯಕ್ಷರಾದ ದೇವಿಂದ್ರಪ್ಪ ದರ್ಶನಾಪೂರ, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಕುಂಬಾರ ಯರಗೋಳ, ಹಣಮಂತಪ್ಪ ಮಿನಾಸಪುರ, ರಾಜೇಂದ್ರ ಮುದ್ನಾಳ, ರಮೇಶ ಬದ್ದೆಪ್ಪಲ್ಲಿ, ನರಸಪ್ಪ ಮಾಧ್ವಾರ, ಗುರುಬಸವ ಹಾಲಗೇರಾ, ಭೀಮರಾಯ ಮುಂಡರಗಿ, ಶಿವರಾಜ ಹಾಲಗೇರಾ, ಬಸವರಾಜ ಅಜಲಾಪುರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.



ಇಂದು ಸಂತ ಸೇವಾಲಾಲ ಜಯಂತಿ

ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸಂತ ಸೇವಾಲಾಲ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಸಂತ ಸೇವಾಲಾಲ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ ೧೫ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಮುಂಡರಗಿ ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ ಕೀಸನ್ ಪವಾರ್ ಕುರಕುಂಬಳ ಅವರು ವಿಶೇಷ ಉಪನ್ಯಾಸ ನೀಡುವರು.

ಗ್ರಾಹಕರ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮನವಿ

ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಗ್ರಾಹಕರ ದಿನಾಚರಣೆಯನ್ನು ಫೆಬ್ರುವರಿ ೧೭ರಂದು ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದು, ಗ್ರಾಹಕರ ಜಾಗೃತಿ ಕುರಿತಂತೆ ಪರಿಣಿತರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಹಕರ ಹಕ್ಕು ಮತ್ತು ಜವಾಬ್ದಾರಿಗಳನ್ನು ತಿಳಿದುಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ದತ್ತಪ್ಪ ಕಲ್ಲೂರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಫೆ.೧೯ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ

ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಫೆಬ್ರುವರಿ ೧೯ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೋಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸರ್ವೋದಯ ಅವರು ವಿಶೇಷ ಉಪನ್ಯಾಸ ನೀಡುವರು.

ರಾಷ್ಟಿçಯ ವಿಚಾರ ಸಂಕಿರಣಕ್ಕೆ ಆಹ್ವಾನ

ಯಾದಗಿರಿ, ಫೆಬ್ರುವರಿ ೧೪ (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮಾರ್ಚ್ ೧೯ ಮತ್ತು ೨೦ರಂದು  ಬೆಂಗಳೂರಿನ ನಯನ ಸಭಾಂಗಣದಲ್ಲಿ ಎಂ.ಗೋಪಾಲಕೃಷ್ಣ ಅಡಿಗರ ಜನ ಶತಮಾನೋತ್ಸವ ನೆನಪಿಗಾಗಿ ‘ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ’ ಎಂಬ ವಿಷಯದಡಿ ರಾಷ್ಟಿçÃಯ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಈ ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿದ್ದು, ಪರ್ಯಾಯ ಗೋಷ್ಠಿಯಲ್ಲಿ ಅಡಿಗರ ಸಾಹಿತ್ಯ ಕುರಿತಾಗಿ ಪ್ರಬಂಧ ಮಂಡಿಸುವವರು ಫೆಬ್ರುವರಿ ೨೫ರೊಳಗೆ ಅಕಾಡೆಮಿಯ ಇ-ಮೇಲ್ sahithya.academy@gmail.com ಗೆ ಪ್ರಬಂಧಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್: www.karnatakasahithyaacademy.org ದೂ: 080-22211730, 22106460   ಸಂಪರ್ಕಿಸಬಹುದು ಎಂದು ರಿಜಿಸ್ಟಾçರ್ ಎನ್.ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುವಾರ, ಫೆಬ್ರವರಿ 13, 2020

ಪರಿಹಾರ ಧನದ ಚೆಕ್ ವಿತರಣೆ
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಚಪೆಟ್ಲಾ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟ ನರಸಿಂಹಲು ತಂದೆ ನರಸಯ್ಯ ಕಲಾಲ್ ಅವರ ಕುಟುಂಬದವರಿಗೆ ೫ ಲಕ್ಷ ರೂ. ಪರಿಹಾರದ ಚೆಕ್ ಅನ್ನು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾದ ನಾಗನಗೌಡ ಕಂದಕೂರ ಅವರು ಗುರುವಾರ ವಿತರಿಸಿದರು.
ನರಸಿಂಹಲು ಕಲಾಲ್ ಅವರ ಪತ್ನಿ ಆನಂದಮ್ಮ ಕಲಾಲ್ ಅವರು ಪರಿಹಾರ ಧನದ ಚೆಕ್ ಅನ್ನು ಸ್ವೀಕರಿಸಿದರು. ಜೆಸ್ಕಾಂನ ಗಾಜರಕೋಟ ಶಾಖಾಧಿಕಾರಿ ಸಂದೀಪ್ ಹಜಾರೆ, ಮುಖಂಡರಾದ ಜಿ.ತಮ್ಮಣ್ಣ, ಚಪೆಟ್ಲಾ ಗ್ರಾಮಸ್ಥರಾದ ಗುರುರಾಜ, ಅನಂತಯ್ಯ ಕಲಾಲ್ ಹಾಗೂ ವೆಂಕಟೇಶ ಕಲಾಲ್ ಅವರು ಉಪಸ್ಥಿತರಿದ್ದರು.

ವರ್ಕನಳ್ಳಿ ಗ್ರಾಮಕ್ಕೆ ಡಿಎಚ್‍ಒ ಭೇಟಿ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಂ.ಎಸ್. ಪಾಟೀಲ್ ಅವರು ವರ್ಕನಳ್ಳಿ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆ ಕುರಿತಂತೆ ಪರಿಶೀಲನೆ ಮಾಡಿದರು. ಗ್ರಾಮದಲ್ಲಿ ಕರುಳುಬೇನೆ ಕಾಯಿಲೆ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಖ್ಯವಾಗಿ ಕುಡಿಯುವ ನೀರಿನ ಎಲ್ಲಾ ತಾಣಗಳಲ್ಲಿ ಕ್ಲೋರಿನೇಷನ್ ಮಾಡಿಸಿ. ಚರಂಡಿಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಬೇಕು. ಊರಿನ ಪ್ರಮುಖ ಬೀದಿಗಳಲ್ಲಿ ಪರಿಶೀಲನೆ ಮಾಡಿದ ಅವರು, ಗ್ರಾಮದಲ್ಲಿ ಆರೋಗ್ಯದ ಜಾಗೃತಿ ಕುರಿತು ಡಂಗೂರ ಸಾರಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಅವರಿಗೆ ತಿಳಿಸಿದರು. ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು ಮನೆ ಮನೆ ಭೇಟಿ ನೀಡಿ, ಹಲೋಜನ್ ಮಾತ್ರೆ ಮತ್ತು ಓ.ಆರ್.ಎಸ್ ಪಾಕೀಟ್ ಕೊಡಲು ಸೂಚಿಸಿದರು. ಸಾರ್ವಜನಿಕರು ನೀರನ್ನು ಕಾಯಿಸಿ, ಆರಿಸಿ ಕುಡಿಯಬೇಕು. ಆರ್.ಓ ಪ್ಲಾಂಟ್‍ನ ಶುದ್ಧ ನೀರು ಕುಡಿಯಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಡಾ.ಪಲ್ಲವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಪಂಚಾಯಿತಿ ಸದಸ್ಯ ಹಣಮಂತ ಹಾಗೂ  ಹಿರಿಯ / ಕಿರಿಯ ಆರೋಗ್ಯ ಸಹಾಯಕರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸೂಚನೆ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಯಾವುದೇ ಧಾರ್ಮಿಕ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದರೆ  ಮತ್ತು ಆಸ್ತಿದಾರರು ತಮ್ಮ ನಿವೇಶನ (ಜಾಗ) ಹೊರತುಪಡಿಸಿ ರಸ್ತೆ ಮತ್ತು ಚರಂಡಿ ಮೇಲೆ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿದ್ದರೆ ಸ್ವಯಂ ಪ್ರೇರಿತವಾಗಿ 7 ದಿನಗಳ ಒಳಗಾಗಿ ತೆರವುಗೊಳಿಸಬೇಕು ಎಂದು ಪೌರಾಯುಕ್ತರು ಸೂಚಿಸಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ವಿಶೇಷ ರಜಾ ಅರ್ಜಿ (ಎಸ್‍ಎಲ್ಪಿ(ಸಿ)) ಸಿವಿಲ್ ಸಂಖ್ಯೆ:27551/2009ರ ನಿರ್ದೇಶನದಂತೆ ಸಾರ್ವಜನಿಕ ರಸ್ತೆ, ಸಾರ್ವಜನಿಕ ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಿಗದಿಪಡಿಸಿದ ಅವಧಿಯಲ್ಲಿ ಒಂದು ವೇಳೆ ತೆರವುಗೊಳಿಸದಿದ್ದಲ್ಲಿ ಸರ್ವೋಚ್ಛ ನ್ಯಾಯಾಲಯದ ಮತ್ತು ಸರ್ಕಾರದ ಆದೇಶದಂತೆ ಅಂಥಹ ಆಸ್ತಿಗಳನ್ನು ನಗರಸಭೆಯಿಂದ ತೆರುವುಗೊಳಿಸಲು ಕ್ರಮ ಜರುಗಿಸಲಾಗುವುದು. ತೆರವುಗೊಳಿಸುವ ಸಮಯದಲ್ಲಿ ತಮ್ಮ ಇತರ ಆಸ್ತಿಗಳಿಗೆ ಯಾವುದೇ ಹಾನಿಯಾದರೆ ಅದಕ್ಕೆ ನಗರಸಭೆ ಜವಬ್ದಾರರಾಗುವುದಿಲ್ಲ. ಕಾರಣ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಲು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಅಲ್ಪಾವಧಿ ಟೆಂಡರ್ ಆಹ್ವಾನ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಕಚೇರಿಯ ದೈನಂದಿನ ಕೆಲಸಕ್ಕಾಗಿ ಸ್ಟೇಶನರಿ ಸಾಮಗ್ರಿಗಳನ್ನು ಸರಬರಾಜು ಮಾಡಲು ದ್ವಿಲಕೋಟೆ ಪದ್ಧತಿಯಲ್ಲಿ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.
ಅರ್ಜಿದಾರರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ಯಾದಗಿರಿ ಇವರ ಹೆಸರಿಗೆ ಸಂದಾಯವಾಗುವಂತೆ 1000 ರೂ. ಬೇಡಿಕೆ ಹುಂಡಿ ಪಡೆದು ಟೆಂಡರ್ ಬುಕ್‍ಲೆಟ್ ಅನ್ನು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿಗಳ ಕಚೇರಿಯಿಂದ ಫೆಬ್ರುವರಿ 20ರೊಳಗೆ ಪಡೆದುಕೊಳ್ಳಬೇಕು. ಫೆಬ್ರುವರಿ 24ರೊಳಗೆ ಟೆಂಡರ್ ಅರ್ಜಿಗಳನ್ನು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಫೆ.25ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ತಾಂತ್ರಿಕ ಬಿಡ್ ತೆರೆಯಲಾಗುವುದು. ಫೆ.25ರಂದು ಮಧ್ಯಾಹ್ನ 3.30 ಗಂಟೆಗೆ ಆರ್ಥಿಕ ಬಿಡ್ ತೆರೆಯಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೆಕ್ಕಪರಿಶೋಧಕರನ್ನು ನೇಮಿಸಿಕೊಳ್ಳಲು ಸೂಚನೆ
ಯಾದಗಿರಿ, ಫೆಬ್ರುವರಿ 13 (ಕರ್ನಾಟಕ  ವಾರ್ತೆ): ಜಿಲ್ಲೆಯ ಸಹಕಾರ ಸಂಘಗಳ/ ಸೌಹಾರ್ದ ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳನ್ವಯ 2018-19ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು (2019-20ನೇ ಸಾಲಿನ ಲೆಕ್ಕ ಪರಿಶೋಧನೆಗಾಗಿ) ನೇಮಕ ಮಾಡಿಕೊಂಡು ವಾರ್ಷಿಕ ಮಹಾಸಭೆಯ ನಡವಳಿಯ ಪ್ರತಿಯನ್ನು ಕಾರ್ಯದರ್ಶಿ ಹಾಗೂ ಅಧ್ಯಕ್ಷರ ಸಹಿಯೊಂದಿಗೆ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರ ಕಚೇರಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ತಾವು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡಿರುವುದಿಲ್ಲವೆಂದು ಪರಿಭಾವಿಸಿ, ಇಲಾಖಾ ವತಿಯಿಂದ ತಮ್ಮ ಸಂಸ್ಥೆಯ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಸೇವಿಸಿ
-ಡಾ.ಎಂ.ಎಸ್. ಪಾಟೀಲ್
ಯಾದಗಿರಿ, ಫೆಬ್ರುವರಿ ೧೩ (ಕರ್ನಾಟಕ ವಾರ್ತೆ): ಮನುಷ್ಯನಿಗೆ ಆರೋಗ್ಯ ಮುಖ್ಯ. ಆದ್ದರಿಂದ ಪ್ರತಿಯೊಬ್ಬರು ಪೌಷ್ಟಿಕ ಆಹಾರ ಸೇವಿಸಬೇಕು. ಮನೆ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್. ಪಾಟೀಲ್ ಅವರು ಸಲಹೆ ನೀಡಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮ ಕುರಿತು ಪ್ರಮುಖ ಪ್ರೇರಣಾದಾರರಿಗೆ ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಈಗ ಪರೀಕ್ಷೆ ಸಮಯ ಇರುವುದರಿಂದ ವಿದ್ಯಾರ್ಥಿಗಳು ತಪ್ಪದೇ ಓದಬೇಕು. ಹದಿಹರಿಯದವರಲ್ಲಿ ಆಗುವಂತಹ ಸಮಸ್ಯೆಗಳು, ಮದುವೆಯಾಗಲು ಹೆಣ್ಣು ಮಕ್ಕಳಿಗೆ ೧೮ ವರ್ಷ, ಗಂಡು ಮಕ್ಕಳಿಗೆ ೨೧ ವರ್ಷ ವಯಸ್ಸು ಏಕೆ ಇರುಬೇಕು ಎಂದು ತಿಳಿಸಿಕೊಟ್ಟರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಮಾನಸಿಕ ಒತ್ತಡಗಳಿಗೆ ಒಳಗಾಗಬಾರದು. ಖಿನ್ನತೆಯ ಕುರಿತು ಆಪ್ತ ಸಮಾಲೋಚನೆ ಮೂಲಕ ತಿಳಿದುಕೊಳ್ಳಬೇಕು. ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ನೋಂದಾಯಿಸಿ ೫ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಲು ತಿಳಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಲಕ್ಷಿö್ಮÃಕಾಂತ ಅವರು ಮಾತನಾಡಿ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ೧೦ ಮಾರಕ ರೋಗಗಳ ತಡೆಗೆ ಲಸಿಕೆ ಮಹತ್ವದ್ದಾಗಿದೆ. ೦ ರಿಂದ ೫ ವರ್ಷದ ಎಲ್ಲಾ ಮಕ್ಕಳಿಗೆ ಚುಚ್ಚುಮದ್ದು ಹಾಕಿಸಬೇಕು. ಎಲ್ಲರಿಗೂ ಆರೋಗ್ಯ, ಎಲ್ಲೆಡೆಗೂ ಆರೋಗ್ಯ ಕುರಿತು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸುವಂತೆ ಅವರು ಹೇಳಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ ಅವರು ಮಾತನಾಡಿದರು. ಹಿರಿಯ ಆರೋಗ್ಯ ಸಹಾಯಕ ಪರಮರೆಡ್ಡಿ ಅವರು ಮಲೇರಿಯಾ ಮತ್ತು ಪೈಲೇರಿಯಾ ಕಾರ್ಯಕ್ರಮ ಕುರಿತು ತಿಳಿಸಿದರು. ತುಳಸಿರಾಮ, ಸುದರ್ಶನ, ಸತ್ಯನಾರಾಯಣ, ಗಂಗಾಧರ, ನೀಲಮ್ಮ, ವಿದ್ಯಾ, ಭಾಗಪ್ಪ, ನಾಗಣ್ಣ, ಸ್ವಾಮಿ, ರೇಖಾ ಹಾಗೂ ಇತರೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಧಾರ್ಮಿಕ ಮುಖಂಡರು, ಎನ್.ಸಿ.ಸಿ., ಎನ್.ಎಸ್.ಎಸ್., ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು, ಸ್ತಿçÃಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ನಿರೂಪಿಸಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್ ಅವರು ವಂದಿಸಿದರು.

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...